ಮಡಿಕೇರಿ ಆ.25 : ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅವರು ಆ.26 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಬೆಳಗ್ಗೆ 11.30 ಗಂಟೆಗೆ ತಿತಿಮತಿ ಬಂಬು ಕಾಡಿನಲ್ಲಿ ಆನೆ ದಾಳಿಯಿಂದ ಒಳಗಾದ ಸಂತ್ರಸ್ತರ ಮನೆಗೆ ಭೇಟಿ ನೀಡಲಿದ್ದಾರೆ.
ನಂತರ ಮಧ್ಯಾಹ್ನ 12.30 ಗಂಟೆಗೆ ಮಾಲ್ದಾರೆ ಗ್ರಾಮ ಪಂಚಾಯಿತಿಯಲ್ಲಿ ಸ್ಥಳ ವೀಕ್ಷಣೆ ಮಾಡಲಿದ್ದಾರೆ. ಬಳಿಕ ಮಧ್ಯಾಹ್ನ 1.30 ಗಂಟೆಗೆ ಅರೆಕಾಡು ಪೈಸಾರಿಗೆ ಭೇಟಿ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 3.30 ಗಂಟೆಗೆ ನಗರದ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಅರಣ್ಯ ಅಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎ.ಆರ್.ರವಿ ತಿಳಿಸಿದ್ದಾರೆ.







