Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅರಣ್ಯ ಅಧಿಕಾರಿಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅರಣ್ಯ ಅಧಿಕಾರಿಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು*

ಆಗಷ್ಟ್ 27, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ ಆ.27:  ಅರಣ್ಯ, ಪ್ರಕೃತಿ, ಪರಿಸರ ಉಳಿಯಬೇಕು. ಜೊತೆಗೆ ಜೀವನ, ಜೀವನೋಪಾಯವೂ ಇರಬೇಕು. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಜನಸ್ನೇಹಿಯಾಗಿ ಮತ್ತು ಜನ ಪರವಾಗಿ ಕಾರ್ಯ ನಿರ್ವಹಿಸಬೇಕು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಮಡಿಕೇರಿಯ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿಂದು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಕಳೆದ 15 ದಿನಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಆನೆಗಳ ದಾಳಿಯಿಂದ ಮೂರು ಅಮೂಲ್ಯ ಜೀವಗಳು ಹೋಗಿವೆ. ಇದು ಅತ್ಯಂತ ನೋವಿನ ಸಂಗತಿ. ಈ ಹಿನ್ನೆಲೆಯಲ್ಲಿ ಇಲ್ಲಿನ ವಾಸ್ತವ ಪರಿಸ್ಥಿತಿಯನ್ನು  ಖುದ್ದು ತಿಳಿಯಲು ಜಿಲ್ಲೆಗೆ ಬಂದಿರುವುದಾಗಿ ತಿಳಿಸಿದರು.
ಇಂದು ತಾವು ಹಿರಿಯ ಅಧಿಕಾರಿಗಳೊಂದಿಗೆ ಆನೆ ದಾಳಿಯಿಂದ ಸಾವುಗಳು ಸಂಭವಿಸಿದ ಪ್ರದೇಶಗಳಿಗೆ ಭೇಟಿ ನೀಡಿ, ಆನೆ ದಾಳಿಯಿಂದ ಮೃತಪಟ್ಟ ಇಬ್ಬರ ಮನೆಗೆ ತೆರಳಿ ಸಾಂತ್ವನ ಹೇಳಿ, ಪರಿಹಾರದ ಚೆಕ್ ವಿತರಿಸಿರುವುದಾಗಿ  ತಿಳಿಸಿದ ಅವರು, ನಾವು ಮೃತರ ಕುಟುಂಬಕ್ಕೆ ಪರಿಹಾರದ ಹಣ ಕೊಡಬಹುದು, ಆದರೆ ಅಮೂಲ್ಯ ಜೀವ ಮರಳಿ ತಂದುಕೊಡಲು ಸಾಧ್ಯವಿಲ್ಲ. ಹೀಗಾಗಿ ಆನೆಗಳು ನಾಡಿಗೆ ಬಂದ ಕೂಡಲೇ ಅವುಗಳನ್ನು ಕಾಡಿಗೆ ಮರಳಿಸಲು ಮತ್ತು ತೋಟಗಳಲ್ಲೇ ಬೀಡು ಬಿಡುವ ಆನೆಗಳನ್ನು ಹಿಡಿದು ಕಾಡಿಗೆ ಕಳುಹಿಸಲು ಕ್ರಮ ಜರುಗಿಸಬೇಕು. ಆನೆಗಳನ್ನು ಹಿಡಿಯಲು ಅನುಮತಿಗೆ ಕಾಯುತ್ತಾ ಸಮಯ ವ್ಯರ್ಥ ಮಾಡದಂತೆ ಸೂಚಿಸಿದ ಸಚಿವರು ಜನರ ಮೇಲೆ ದಾಳಿ ಮಾಡುವ ಆನೆಗಳನ್ನು ಗುರುತಿಸಿ ತಕ್ಷಣ ಕಾರ್ಯೋನ್ಮುಖವಾಗುವಂತೆ ಸೂಚಿಸಿದರು.
ಅರಣ್ಯ ಇಲಾಖೆ ರೇಡಿಯೋ ಕಾಲರ್ ಅಳವಡಿಸಿರುವ ಆನೆಗಳ ಬಗ್ಗೆ ದಿನದ 24 ಗಂಟೆಯೂ ನಿಗಾ ಇಡಬೇಕು. ಆನೆ ಹಿಡಿದ ತರುವಾಯ ಅವುಗಳಿಗೆ ರೇಡಿಯೋ ಕಾಲರ್ ಹಾಕಬೇಕು ಇದರಿಂದ ಪ್ರಾಣ ಹಾನಿ ಮತ್ತು ಬೆಳೆ ಹಾನಿ ತಡೆಯಬಹುದು ಎಂದರು.
ಅರಣ್ಯದೊಳಗೆ ನೀಲಗಿರಿ, ತೇಗದ ಮರ ಹೆಚ್ಚಾಗಿವೆ. ಆನೆಗಳಿಗೆ ಸೊಪ್ಪು ಆಹಾರ ಸಿಗುತ್ತಿಲ್ಲ.  ಹೀಗಾಗಿ ಅವು ಕಾಡಿನಿಂದ ನಾಡಿಗೆ ಬರುತ್ತಿವೆ ಎಂದು ಗ್ರಾಮಸ್ಥರು ದೂರುತ್ತಿದ್ದಾರೆ. ಹೀಗಾಗಿ  ಅರಣ್ಯದೊಳಗೆ ಆನೆಗಳಿಗೆ ಆಹಾರ ಸಿಗುವಂತಹ ಗಿಡ ನೆಡುವ ಬಗ್ಗೆ ಚಿಂತಿಸಿ ಎಂದು ನಿರ್ದೇಶನ ನೀಡಿದರು.
ಸೋಲಾರ್ ತಂತಿ ಬೇಲಿ ಎಷ್ಟು ಪರಿಣಾಮಕಾರಿ ಎಂದು ಪ್ರಶ್ನಿಸಿದ ಸಚಿವರು, ಸೌರ ತಂತಿಬೇಲಿಗಳ ನಿರ್ವಹಣೆಯ ಹೇಗಿದೆ.  ಅಳವಡಿಸಿರುವ ಎಷ್ಟು ಸೌರ ತಂತಿ ಬೇಲಿ ಕಾರ್ಯ  ನಿರ್ವಹಿಸುತ್ತಿದೆ. ಎಷ್ಟು ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಬಗ್ಗೆ ನಿಖರ ಮಾಹಿತಿ  ಇಡಬೇಕು.  ಸೌರ ತಂತಿ ಬೇಲಿ ಸೂಕ್ತವಾಗಿ ಕಾರ್ಯ ನಿರ್ವಹಿಸುವುದಿಲ್ಲ ಎಂದು ಗ್ರಾಮಸ್ಥರು ದೂರುತ್ತಾರೆ. ನಿರ್ವಹಣೆ ಸಮರ್ಪಕವಾಗಿ  ಮಾಡಿ. ವಾರ್ಷಿಕ ನಿರ್ವಹಣೆಯ  ಪರಿಶೀಲನೆ ಮಾಡಿ ಎಂದು ಸೂಚನೆ ನೀಡಿದರು.
ಸೂಕ್ತವಾಗಿ ಸೌರ ತಂತಿ ಬೇಲಿ  ನಿರ್ವಹಣೆ ಮಾಡದಿದ್ದರೆ, ಸರ್ಕಾರ  ಮಾಡಿದ ವೆಚ್ಚವೆಲ್ಲ ವ್ಯರ್ಥವಾಗುತ್ತದೆ. ಆನೆಗಳ  ಸಮಸ್ಯೆಯೂ ಪರಿಹಾರ ಆಗುವುದಿಲ್ಲ.  ಹೀಗಾಗಿ ಸಂಬಂಧಿತ  ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ ಎಂದು  ಎಚ್ಚರಿಸಿದರು.
ಆನೆಗಳ  ಹಾವಳಿ ತಡೆಯಲು ಶಾಶ್ವತವಾದ ಏನೆಲ್ಲಾ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಸಿದ್ಧಪಡಿಸಿ ನೀಡುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು.
ಕೊಡಗು ಜಿಲ್ಲೆಯಲ್ಲಿ ಎಲ್ಲೆಲ್ಲಿ ರೈಲ್ವೆ ಬ್ಯಾರಿಕೇಡ್ ಅಗತ್ಯ ಇದೆ ಗುರುತಿಸಿ, ಜಿಲ್ಲೆಯಲ್ಲಿ ಎಷ್ಟು ಕಿಲೋ ಮೀಟರ್ ರೈಲ್ವೆ ಬ್ಯಾರಿಕೇಡ್ ಹಾಕಬೇಕು ಎಂಬ ಬಗ್ಗೆ ತತ್ ಕ್ಷಣವೇ ಪ್ರಸ್ತಾವನೆ ಸಲ್ಲಿಸಿ ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಶಾಸಕರಾದ ಡಾ.ಮಂತರ್ ಗೌಡ, ಎ.ಎಸ್. ಪೊನ್ನಣ್ಣ, ಅಪರ ಮುಖ್ಯ ಕಾರ್ಯದರ್ಶಿ ಜಾವೆದ್ ಅಖ್ತರ್ ಮತ್ತಿತರ ಅಧಿಕಾರಿಗಳು ಭಾಗಿಯಾಗಿದ್ದರು.
Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.