Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆ.30 ರಂದು ‘ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ : ಕಾರ್ಯಕ್ರಮದ ಯಶಸ್ಸಿಗೆ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆ.30 ರಂದು ‘ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ : ಕಾರ್ಯಕ್ರಮದ ಯಶಸ್ಸಿಗೆ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಮನವಿ*

ಆಗಷ್ಟ್ 28, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.28 : ಇದೇ ಆ.30 ರಂದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ‘ಗೃಹಲಕ್ಷ್ಮಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ಈ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಮುಂದಾಗುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೃಹಲಕ್ಷ್ಮಿ ಯೋಜನೆ ಚಾಲನೆಗೆ ಅಗತ್ಯ ಸಿದ್ಧತೆ ಸಂಬಂಧ ಮಾಹಿತಿ ಪಡೆದು ಸಚಿವರು ಮಾತನಾಡಿದರು.
ಗೃಹಲಕ್ಷ್ಮಿ ಯೋಜನೆಯಡಿ ಪ್ರತೀ ಕುಟುಂಬದ ಯಜಮಾನಿ ಮಹಿಳೆಗೆ 2 ಸಾವಿರ ರೂ. ವನ್ನು ನೇರ ನಗದು ಮೂಲಕ ತಲುಪಿಸುವ ಯೋಜನೆಗೆ ವಿದ್ಯುಕ್ತವಾಗಿ ಚಾಲನೆ ದೊರೆಯಲಿದೆ. ಇದೊಂದು ರಾಜ್ಯ ಮಟ್ಟದ ಸರ್ಕಾರಿ ಕಾರ್ಯಕ್ರಮವಾಗಿದ್ದು, ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ ಈ ಐದು ಜಿಲ್ಲೆಯ ಫಲಾನುಭವಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರು ತಿಳಿಸಿದರು.
ಸ್ತ್ರೀ ಸ್ವಾವಲಂಬನೆಯತ್ತ ಒಂದು ದಿಟ್ಟ ಹೆಜ್ಜೆ ‘ಗೃಹಲಕ್ಷ್ಮಿ’ ಪ್ರತಿ ಮನೆ ಯಜಮಾನಿಗೆ 2 ಸಾವಿರ ರೂ. ನೀಡುವ ‘ಯೋಜನೆ ಜಾರಿಯು ಇದೇ ಆಗಸ್ಟ್, 30 ರಂದು ಮೈಸೂರಿನಲ್ಲಿ ಚಾಲನೆಗೊಳ್ಳಲಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲೆಯ 103 ಗ್ರಾ.ಪಂ. ಹಾಗೂ ಸ್ಥಳೀಯ ಸಂಸ್ಥೆಗಳಿಂದ ಫಲಾನುಭವಿಗಳನ್ನು ಸುರಕ್ಷಿತವಾಗಿ ಕರೆದುಕೊಂಡುಹೋಗುವುದು ಮತ್ತು ಬರುವಂತಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸೂಚಿಸಿದರು.
ನೋಡಲ್ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿ ವಹಿಸಿಕೊಂಡು ‘ಗೃಹಲಕ್ಷ್ಮಿ ಯೋಜನೆ’ ಕಾರ್ಯಕ್ರಮವನ್ನು ಯಶಸ್ಸುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಆ.30 ರಂದು ಬೆಳಗ್ಗೆ 10 ಗಂಟೆಗೆ ಮೈಸೂರಿನಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಫಲಾನುಭವಿಗಳು ಇರಬೇಕು. ಆ ನಿಟ್ಟಿನಲ್ಲಿ ಪ್ರತೀ ಗ್ರಾ.ಪಂ.ನಿಂದ ಆಗಮಿಸುವ ಫಲಾನುಭವಿಗಳ ಪಟ್ಟಿಯನ್ನು ಖಾತರಿಪಡಿಸಿಕೊಳ್ಳುವಂತೆ ಸಚಿವರಾದ ಎನ್.ಎಸ್.ಭೋಸರಾಜು ಹೇಳಿದರು.
ಈಗಾಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಪ್ರತೀ ಗ್ರಾ.ಪಂ.ಹಂತದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ಪಿಡಿಒಗಳು, ತಾ.ಪಂ.ಇಒಗಳು, ತಹಶೀಲ್ದಾರರು, ಸಿಡಿಪಿಒ ಹೀಗೆ ಎಲ್ಲಾ ಹಂತದ ಅಧಿಕಾರಿಗಳು ಗೃಹಲಕ್ಷ್ಮಿ ಯೋಜನಾ ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಕೈಜೋಡಿಸುವಂತೆ ಸಚಿವರು ಹೇಳಿದರು.
ಕಾರ್ಯಕ್ರಮಕ್ಕೆ ಹೋಗುವ ಸಂದರ್ಭದಲ್ಲಿ ಬೆಳಗ್ಗಿನ ಉಪಾಹಾರ, ಮಧ್ಯಾಹ್ನದ ಊಟ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು ಕಲ್ಪಿಸುವಂತೆ ಸಚಿವರು ನಿರ್ದೇಶನ ನೀಡಿದರು.
ಯಾವುದೇ ರೀತಿ ತೊಂದರೆಯಾಗದಂತೆ ಸುರಕ್ಷಿತವಾಗಿ ಕರೆದುಕೊಂಡು ಹೋಗಿ ಬರಬೇಕು. ಪ್ರತೀ ಬಸ್‍ನಲ್ಲಿ 50 ಮಂದಿಯ ವಾಟ್ಸ್‍ಅಪ್ ಗ್ರೂಪ್‍ನ್ನು ಮಾಡಿಕೊಂಡು ಸಮನ್ವಯತೆ ಸಾಧಿಸಿ ಸುರಕ್ಷಿತವಾಗಿ ವಾಪಸ್ಸು ಬರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.
‘ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ‘ಗೃಹಲಕ್ಷ್ಮಿ’ ಯೋಜನೆಯು ಸರ್ಕಾರದ ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಸರ್ಕಾರದ ಯೋಜನೆ ಪ್ರತೀ ಬಡವರಿಗೂ ತಲುಪಬೇಕು. ಆ ನಿಟ್ಟಿನಲ್ಲಿ ಬಡವರವನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಬರುವಂತಾಗಬೇಕು ಎಂದು ಸಲಹೆ ನೀಡಿದರು.
ಗ್ರಾ.ಪಂ.ಜೊತೆಗೆ ಮಡಿಕೇರಿ ನಗರ, ಕುಶಾಲನಗರ ಮತ್ತು ಸೋಮವಾರಪೇಟೆ ಪಟ್ಟಣಗಳಿಂದಲೂ ಬಸ್ ವ್ಯವಸ್ಥೆ ಮಾಡುವಂತೆ ಶಾಸಕರು ಸಲಹೆ ಮಾಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ನೋಡಲ್ ಅಧಿಕಾರಿಗಳಾಗಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಕಾರ್ಯದರ್ಶಿ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಕೆಎಸ್‍ಆರ್‍ಟಿಸಿ ಬಸ್‍ಗಳು ಆಯಾಯ ಗ್ರಾ.ಪಂ. ಕಾರ್ಯಾಲಯದಿಂದ ಹೊರಡಲಿದೆ. ಪ್ರತೀ ಬಸ್‍ಗೆ ಕನಿಷ್ಠ 50 ರಂತೆ ಫಲಾನುಭವಿಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಜಿಲ್ಲೆಯಿಂದ 5,150 ಮಂದಿ ಫಲಾನುಭವಿಗಳನ್ನು ಸಿದ್ಧಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ 1,31,863 ಗುರಿಯಲ್ಲಿ 1,05,122 ಮಂದಿ ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಯಾಗಿದ್ದು, ಶೇ.81.14 ರಷ್ಟು ಸಾಧನೆ ಮಾಡಲಾಗಿದೆ ಎಂದರು.

ಮಡಿಕೇರಿ ತಾಲ್ಲೂಕಿನಿಂದ 1,300 ಮಂದಿ, ಸೋಮವಾರಪೇಟೆ ತಾಲ್ಲೂಕಿನಿಂದ 1,150, ಕುಶಾಲನಗರ ತಾಲ್ಲೂಕಿನಿಂದ 800, ಪೊನ್ನಂಪೇಟೆ ತಾಲ್ಲೂಕಿನಿಂದ 1,050, ವಿರಾಜಪೇಟೆ ತಾಲ್ಲೂಕಿನಿಂದ 850 ಒಟ್ಟು 5,150 ಮಂದಿ ಗೃಹಲಕ್ಷ್ಮಿ ಯೋಜನಾ ಫಲಾನುಭವಿಗಳನ್ನು ಕರೆದುಕೊಂಡು ಹೋಗಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ನಿಯೋಜಿಸಲ್ಪಟ್ಟ ಫಲಾನುಭವಿಗಳಿಗೆ ಬೆಳಗ್ಗಿನ ಉಪಾಹಾರ ಮತ್ತು ಮಧ್ಯಾಹ್ನದ ಊಟ, ಕಾಫಿ, ಬಿಸ್ಕೇಟ್, ವಾಟರ್ ಬಾಟಲ್‍ನ್ನು ನೋಡಲ್ ಅಧಿಕಾರಿಗಳು ಒದಗಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಕೆಎಸ್‍ಆರ್‍ಟಿಸಿ ಪುತ್ತೂರು ಘಟಕದ ಜಯಕರಶೆಟ್ಟಿ ಅವರು ಮಾಹಿತಿ ನೀಡಿ ಮಡಿಕೇರಿ ಕೆಎಸ್‍ಆರ್‍ಟಿಸಿ ಘಟಕದಲ್ಲಿ 60 ಬಸ್‍ಗಳಿದ್ದು, ಜೊತೆಗೆ ಪುತ್ತೂರು ಮತ್ತಿತರ ಡಿಪೋಗಳಿಂದ 40 ಕ್ಕೂ ಹೆಚ್ಚು ಬಸ್‍ಗಳು ಒಟ್ಟು 103 ಗ್ರಾ.ಪಂ.ಗಳಿಗೆ ಬಸ್‍ನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತೀ ಗ್ರಾ.ಪಂ.ನಿಂದ 50 ಮಂದಿ ಫಲಾನುಭವಿಗಳನ್ನು ಕಳುಹಿಸಲಾಗುತ್ತದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಗೃಹಲಕ್ಷ್ಮಿ ಯೋಜನೆ ಸಂಬಂಧ ಹಲವು ಮಾಹಿತಿ ನೀಡಿದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 7, 2026: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ಈಗ ಮಾಹಿತಿ ತಂತ್ರಜ್ಞಾನದ (IT) ಹೊಸ ಕೇಂದ್ರವಾಗಿ ಹೊರಹೊಮ್ಮಲು…

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.