ಮಡಿಕೇರಿ ಆ.28 : ಕೊಡಗರಹಳ್ಳಿಯ ಶಾಂತಿನಿಕೇತನ ಶಾಲೆಯ ಪ್ರಾಂಶುಪಾಲರಾದ ಮೇರಿ ಫಾತಿಮಾ ಅವರಿಗೆ ಬೆಂಗಳೂರಿನ ಕರ್ನಾಟಕ ಪ್ರತಿಭಾ ಅಕಾಡೆಮಿ ನೀಡುವ “ಬೆಸ್ಟ್ ಪ್ರಿನ್ಸಿಪಾಲ್” ಪ್ರಶಸ್ತಿ ಲಭಿಸಿದೆ.
ಶಿಕ್ಷಕರ ದಿನಾಚರಣೆ ಪ್ರಯುಕ್ತ ಸೆ.2 ರಂದು ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಮೇರಿ ಫಾತಿಮಾ ಅವರು ಆದರ್ಶ ಶಿಕ್ಷಕಿಯರಾಗಿ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಅಪಾರವಾದ ಸೇವೆಯನ್ನು ಪರಿಗಣಿಸಲಾಗಿದೆ. ಪ್ರತಿಭಾ ಪರೀಕ್ಷೆಗಳನ್ನು ಅತ್ಯುತ್ತಮವಾಗಿ ಸಂಘಟಿಸುವ ಮೂಲಕ ನೂರಾರು ವಿದ್ಯಾರ್ಥಿಗಳಿಗೆ ಸ್ಫೂರ್ತಿ, ಪ್ರೇರಣೆ ಮತ್ತು ಮಾರ್ಗದರ್ಶನ ನೀಡಿದ್ದಾರೆ. ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದು, ಇವರ ವಿಶಿಷ್ಟ ಸಾಧನೆಯನ್ನು ರಾಜ್ಯ ಮಟ್ಟದಲ್ಲಿ ಗುರುತಿಸಿ ಗೌರವಿಸಲಾಗುತ್ತಿದೆ.








