Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ ಮಾನವ ಸಂಘರ್ಷ ನಿವಾರಣೆಗೆ ಅಗತ್ಯ ಕ್ರಮ : ಕೇಂದ್ರ ಸರಕಾರ ಭರವಸೆ : ಸಂಸದ ಯದುವೀರ್ ಮನವಿಗೆ ಸ್ಪಂದನೆ*
  • *ಮಂಗಳೂರಿನ ಸೆಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದಲ್ಲಿ ಎಂ.ಎ ಬಿಸಿನೆಸ್ ಎಕನಾಮಿಕ್ಸ್ ಸ್ನಾತಕೋತ್ತರ ಕೋರ್ಸ್ ಗೆ ಪ್ರವೇಶಾತಿ ಆರಂಭ*
  • *ವಿರಾಜಪೇಟೆ : ವಿದ್ಯಾರ್ಥಿಗಳಿಂದ ಎಸ್.ಐ.ಆರ್ ಜಾಗೃತಿ ಜಾಥಾ*
  • *ವಚನ ಸಾಹಿತ್ಯಕ್ಕೆ ಡಾ.ಫ.ಗು.ಹಳಕಟ್ಟಿ ಅವರ ಕಾರ್ಯ ಅವಿಸ್ಮರಣೀಯ : ಕೆ.ಎಸ್.ಮೂರ್ತಿ*
  • *ಕೊಡಗು : ರಸಗೊಬ್ಬರ ಮಾರಾಟದಲ್ಲಿ ರೈತರಿಗೆ ಮೋಸವಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸುಂಟಿಕೊಪ್ಪ : ರಸ್ತೆಗುರುಳಿದ ಬೃಹತ್ ಮರ*
  • *ರಸ ಗೊಬ್ಬರ ಪೂರೈಕೆಯಲ್ಲಿ ರಾಜ್ಯದ ರೈತರಿಗೆ ಅನ್ಯಾಯ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಆರೋಪ*
  • *ಯುನೈಟೆಡ್ ಅರಬ್ ನಲ್ಲಿ ಕೊಡಗಿನ ರಿಯಾಝ್ “ಇತ್ತಿಹಾದ್” ರೈಲು ಸೇವೆಯ ಲೋಕೋ ಪೈಲಟ್*
  • *ಬಾಡಗರಕೇರಿ ಶ್ರೀ ಮೃತ್ಯುಂಜಯ ಕ್ಷೇತ್ರದಲ್ಲಿ ಜು.6 ರಿಂದ 9 ರವರೆಗೆ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ*
  • ಬೈಲುಕುಪ್ಪೆಯಲ್ಲಿ ನಟ, ನಟಿಯರ ಆಯ್ಕೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನುಡಿದಂತೆ ನಡೆದ ಸರ್ಕಾರ : ನೂರು ದಿನದಲ್ಲಿ 4 ಗ್ಯಾರಂಟಿ ಜಾರಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನುಡಿದಂತೆ ನಡೆದ ಸರ್ಕಾರ : ನೂರು ದಿನದಲ್ಲಿ 4 ಗ್ಯಾರಂಟಿ ಜಾರಿ*

ಆಗಷ್ಟ್ 29, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.29 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವ ಸರ್ಕಾರವು 100 ದಿನ ಪೂರೈಸಿ, ನುಡಿದಂತೆ ನಡೆದಿದೆ. ಸಾರ್ವಜನಿಕರಿಗೆ ಹಲವು ಉಪಯುಕ್ತ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಬಹುಜನರ ಹಿತ ಕಾಪಾಡುವಲ್ಲಿ ಸರ್ಕಾರ ಯಶಸ್ಸಿನತ್ತ ಸಾಗಿದೆ.
ಇದೇ ಮೇ,20 ರಂದು ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು ಹಲವು ‘ಗ್ಯಾರಂಟಿ’ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಎಲ್ಲರ ಮನಃ ಗೆದ್ದಿದೆ.
ಶಕ್ತಿ ಯೋಜನೆ: ಗ್ಯಾರಂಟಿ ಯೋಜನೆಗಳಲ್ಲಿ ‘ಶಕ್ತಿ’ ಯೋಜನೆಯು ಜೂನ್, 11 ರಂದು ಪ್ರಥಮ ಯೋಜನೆಯಾಗಿ ಜಾರಿಗೊಂಡಿದೆ. ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಒದಗಿಸಿರುವುದು ವಿಶೇಷವಾಗಿದೆ. ಕೊಡಗು ಜಿಲ್ಲೆಯಲ್ಲಿ ಆಗಸ್ಟ್, 27 ರವರೆಗೆ 11,10,983 ಮಂದಿ ಮಹಿಳೆಯರು ಬಸ್‍ನಲ್ಲಿ ಪ್ರಯಾಣ ಬೆಳೆಸಿದ್ದು, 4,10,54,728 ರೂ. ವೆಚ್ಚವನ್ನು ಸರ್ಕಾರ ಭರಿಸಿದೆ.
‘ಅನ್ನಭಾಗ್ಯ ಯೋಜನೆ’ : ಸರ್ಕಾರ ಬಿಪಿಎಲ್, ಎಎವೈ ಫಲಾನುಭವಿಗಳಿಗೆ ಈಗಾಗಲೆ ವಿತರಿಸುತ್ತಿರುವ 05 ಕೆ.ಜಿ ಅಕ್ಕಿಯೊಂದಿಗೆ ಹೆಚ್ಚುವರಿ 5 ಕೆ.ಜಿ ಅಕ್ಕಿಯನ್ನು ವಿತರಣೆ ಮಾಡಲು ಉದ್ದೇಶಿಸಿತ್ತು, ಆದರೆ ಅಕ್ಕಿಯ ಕೊರತೆ ಇರುವ ಕಾರಣ ಹೆಚ್ಚುವರಿ 05 ಕೆ.ಜಿ ಅಕ್ಕಿಯ ಬದಲಾಗಿ ಪ್ರತಿ ಕೆ.ಜಿಗೆ 34 ರೂ. ನಂತೆ ಪ್ರತೀ ಫಲಾನುಭವಿಗೆ ಮಾಹೆಗೆ 170 ರೂ ನಂತೆ ಡಿ.ಬಿ.ಟಿ ಮೂಲಕ ಫಲಾನುಭವಿಗಳಿಗೆ ಜುಲೈ ತಿಂಗಳಲ್ಲಿ 4.24 ಕೋಟಿ ರೂ. ನಗದನ್ನು ವರ್ಗಾವಣೆ ಮಾಡಲಾಗಿದೆ. ಆಗಸ್ಟ್ ತಿಂಗಳಲ್ಲಿನ ನಗದು ವರ್ಗಾವಣೆ ಪ್ರಕ್ರಿಯೆ ಪ್ರಗತಿಯಲ್ಲಿದೆ.
ಗೃಹಜ್ಯೋತಿ: ಪ್ರತೀ ಮನೆಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಕಲ್ಪಿಸುವ ‘ಗೃಹಜ್ಯೋತಿ’ ಯೋಜನೆ ಇದೇ ಆಗಸ್ಟ್, 05 ರಂದು ಚಾಲನೆಗೊಂಡಿದೆ. ಸರ್ವರನ್ನು ಒಳಗೊಂಡ ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಪರ ಅಭಿವೃದ್ಧಿ ನಮ್ಮ ಸರ್ಕಾರದ ಧ್ಯೇಯವಾಗಿದ್ದು, ನುಡಿದಂತೆ ನಡೆಯುತ್ತಿರುವುದು ವಿಶೇಷವಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 1.30 ಲಕ್ಷ ಕ್ಕೂ ಹೆಚ್ಚು ಮಂದಿ ಗೃಹಜ್ಯೋತಿ ಯೋಜನೆಗೆ ಹೆಸರು ನೋಂದಾಯಿಸಿದ್ದು, ಈ ಯೋಜನೆಯಡಿ ರೂ 3 ಕೋಟಿಗೂ ಹೆಚ್ಚು ಹಣವನ್ನು ಸರ್ಕಾರ ಭರಿಸಿದೆ.
ಗೃಹಲಕ್ಷ್ಮಿ: ಪ್ರತಿ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತೀ ತಿಂಗಳು 2 ಸಾವಿರ ರೂ. ನೀಡುವ ‘ಗೃಹ ಲಕ್ಷ್ಮಿ’ ಯೋಜನೆ ಇದೇ ಆಗಸ್ಟ್ 30 ರಿಂದ ಅಧಿಕೃತವಾಗಿ ಚಾಲನೆ ದೊರೆಯಲಿದೆ.
ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆಗೆ ಸಹಕಾರಿಯಾಗಲಿದೆ.
ಆ ದಿಸೆಯಲ್ಲಿ ಸರ್ಕಾರ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿದ್ದು, ನೋಂದಣಿ ಕಾರ್ಯ ಮುಂದುವರಿದಿದೆ. ಕೊಡಗು ಜಿಲ್ಲೆಯಲ್ಲಿ 1,31,863 ಗುರಿಯಲ್ಲಿ ಆಗಸ್ಟ್, 28 ರವರೆಗೆ 1,05122 ಮಂದಿ ಹೆಸರು ನೋಂದಾಯಿಸಿದ್ದು, ಶೇ.81.14 ರಷ್ಟು ಪ್ರಗತಿ ಸಾಧಿಸಲಾಗಿದೆ.
ಹಾಗೆಯೇ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ರಾಜ್ಯದ ಮುಂಗಡ ಪತ್ರದಲ್ಲಿ ಹಣವನ್ನು ಕಾಯ್ದಿರಿಸಿದೆ. 5 ಗ್ಯಾರಂಟಿಗಳ ಅನುಷ್ಠಾನ ಇಡೀ ರಾಷ್ಟ್ರದಲ್ಲಿಯೇ ಹೆಸರು ಗಳಿಸಿ, ರಾಜ್ಯದ ಎಲ್ಲಾ ಬಡ ಜನರ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಹಾಗೆಯೇ ಸರ್ಕಾರ ಬಜೆಟ್‍ನಲ್ಲಿ ಪರಿಶಿಷ್ಟ ಪಂಗಡದ ಸೋಲಿಗ, ಜೇನುಕುರುಬ, ಕಾಡುಕುರುಬ, ಬೆಟ್ಟಕುರುಬ, ಕೊರಗ, ಇರುಳಿಗ ಮೊದಲಾದ ಆದಿವಾಸಿಗಳು ಮತ್ತು ಅಲೆಮಾರಿ ಜನಾಂಗದವರ ಅಭಿವೃದ್ಧಿಗೆ 50 ಕೋಟಿ ರೂ. ವನ್ನು ಸರ್ಕಾರ ಮುಂಗಡ ಪತ್ರದಲ್ಲಿ ಪ್ರಕಟಿಸಿದೆ.
‘ಬುಡಕಟ್ಟು ಆದಿವಾಸಿ ಪಂಗಡದವರಿಗೆ ನೀಡಲಾಗುತ್ತಿದ್ದ ಪೌಷ್ಠಿಕ ಆಹಾರ ಯೋಜನೆಯನ್ನು 6 ತಿಂಗಳಿನಿಂದ 12 ತಿಂಗಳವರೆಗೆ ವಿಸ್ತರಿಸಿರುವುದು ವಿಶೇಷವಾಗಿದೆ. ಇದರಿಂದ ಕೊಡಗಿನ ಆದಿವಾಸಿ ಜನರಿಗೆ ಬಹು ಉಪಯುಕ್ತವಾಗಲಿದೆ.’ ಅಮೃತ್ 2.0 ಯೋಜನೆಯಡಿ ನಗರ ನೀರು ಸರಬರಾಜು ಯೋಜನೆಗೆ ಹೆಚ್ಚಿನ ಹಣ ಕಾಯ್ದಿರಿಸಲಾಗಿದೆ.
ಹೀಗೆ ಐದು ಗ್ಯಾರಂಟಿ ಯೋಜನೆಗಳ ಜೊತೆಗೆ ಸರ್ಕಾರ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆಯುತ್ತಿರುವುದು ವಿಶೇಷವಾಗಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ ಮಾನವ ಸಂಘರ್ಷ ನಿವಾರಣೆಗೆ ಅಗತ್ಯ ಕ್ರಮ : ಕೇಂದ್ರ ಸರಕಾರ ಭರವಸೆ : ಸಂಸದ ಯದುವೀರ್ ಮನವಿಗೆ ಸ್ಪಂದನೆ*

ಜುಲೈ 3, 2026

*ಮಂಗಳೂರಿನ ಸೆಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದಲ್ಲಿ ಎಂ.ಎ ಬಿಸಿನೆಸ್ ಎಕನಾಮಿಕ್ಸ್ ಸ್ನಾತಕೋತ್ತರ ಕೋರ್ಸ್ ಗೆ ಪ್ರವೇಶಾತಿ ಆರಂಭ*

ಜುಲೈ 3, 2026

*ವಿರಾಜಪೇಟೆ : ವಿದ್ಯಾರ್ಥಿಗಳಿಂದ ಎಸ್.ಐ.ಆರ್ ಜಾಗೃತಿ ಜಾಥಾ*

ಜುಲೈ 2, 2026

*ಮಂಗಳೂರಿನ ಸೆಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದಲ್ಲಿ ಎಂ.ಎ ಬಿಸಿನೆಸ್ ಎಕನಾಮಿಕ್ಸ್ ಸ್ನಾತಕೋತ್ತರ ಕೋರ್ಸ್ ಗೆ ಪ್ರವೇಶಾತಿ ಆರಂಭ*

ಜುಲೈ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಂಗಳೂರು NEWS DESK ಜು.3 : ಮಂಗಳೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸೆಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದಲ್ಲಿ ಎಂ.…

*ವಿರಾಜಪೇಟೆ : ವಿದ್ಯಾರ್ಥಿಗಳಿಂದ ಎಸ್.ಐ.ಆರ್ ಜಾಗೃತಿ ಜಾಥಾ*

ಜುಲೈ 2, 2026

*ವಚನ ಸಾಹಿತ್ಯಕ್ಕೆ ಡಾ.ಫ.ಗು.ಹಳಕಟ್ಟಿ ಅವರ ಕಾರ್ಯ ಅವಿಸ್ಮರಣೀಯ : ಕೆ.ಎಸ್.ಮೂರ್ತಿ*

ಜುಲೈ 2, 2026

*ಕೊಡಗು : ರಸಗೊಬ್ಬರ ಮಾರಾಟದಲ್ಲಿ ರೈತರಿಗೆ ಮೋಸವಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 2, 2026

*ಸುಂಟಿಕೊಪ್ಪ : ರಸ್ತೆಗುರುಳಿದ ಬೃಹತ್ ಮರ*

ಜುಲೈ 2, 2026

*ರಸ ಗೊಬ್ಬರ ಪೂರೈಕೆಯಲ್ಲಿ ರಾಜ್ಯದ ರೈತರಿಗೆ ಅನ್ಯಾಯ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಆರೋಪ*

ಜುಲೈ 2, 2026

*ಯುನೈಟೆಡ್ ಅರಬ್ ನಲ್ಲಿ ಕೊಡಗಿನ ರಿಯಾಝ್ “ಇತ್ತಿಹಾದ್” ರೈಲು ಸೇವೆಯ ಲೋಕೋ ಪೈಲಟ್*

ಜುಲೈ 2, 2026

*ಬಾಡಗರಕೇರಿ ಶ್ರೀ ಮೃತ್ಯುಂಜಯ ಕ್ಷೇತ್ರದಲ್ಲಿ ಜು.6 ರಿಂದ 9 ರವರೆಗೆ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ*

ಜುಲೈ 2, 2026

ಬೈಲುಕುಪ್ಪೆಯಲ್ಲಿ ನಟ, ನಟಿಯರ ಆಯ್ಕೆ

ಜುಲೈ 2, 2026

*ಜು.6 ರಂದು ಮಡಿಕೇರಿಯಲ್ಲಿ ಬಿಜೆಪಿಯಿಂದ ಬೃಹತ್ ವಾಹನ ಜಾಥಾ ಹಾಗೂ ಪ್ರತಿಭಟನಾ ಸಭೆ*

ಜುಲೈ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.