Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
  • *ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*
  • *ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*
  • *ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸ್ವಉದ್ಯೋಗ ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸ್ವಉದ್ಯೋಗ ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ*

ಆಗಷ್ಟ್ 30, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.30 : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನಲ್ಲಿ ಸ್ವಯಂ-ಉದ್ಯೋಗ ನೇರ ಸಾಲ ಯೋಜನೆ, ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.
ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್ ವಿಳಾಸ: kacdc.karnataka.gov.in ರ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 18 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು, ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯಲಿಂಗಿಗಳಿಗೆ ಶೇ.5 ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿದೆ).
ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಗೆ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.3 ಲಕ್ಷಗಳ ಮಿತಿಯೊಳಗಿರಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಲ್ಲಿ ಕನಿಷ್ಠ ರೂ.50 ಸಾವಿರಗಳಿಂದ ಗರಿಷ್ಠ ರೂ.1 ಲಕ್ಷಗಳ ಸಾಲ ಒದಗಿಸಲಾಗುವುದು.
ಈ ಮೊತ್ತದಲ್ಲಿ ಶೇ.20 ರಷ್ಟು ಸಹಾಯಧನ ಹಾಗೂ ಶೇ.80ರಷ್ಟು ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು, 2 ತಿಂಗಳ ವಿರಾಮ ಅವಧಿ ಇರುತ್ತದೆ. ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.
ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆಗೆ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6 ಲಕ್ಷಗಳ ಮಿತಿಯೊಳಗಿರಬೇಕು. ಅರ್ಜಿದಾರರು 21 ವರ್ಷ ಮೇಲ್ಪಟ್ಟು 55 ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಡಿ ಆಹಾರ ವಾಹಿನಿ ಪ್ರಾರಂಭಿಸಲು ಬ್ಯಾಂಕ್, ಸಹಕಾರಿ ಸಂಘಗಳಿಂದ ಸಾಲ ಪಡೆಯಬೇಕು ಹಾಗೂ ನಿಗಮದಿಂದ ಗರಿಷ್ಠ ರೂ.2 ಲಕ್ಷಗಳ ಸಹಾಯಧನ ನೀಡಲಾಗುತ್ತದೆ.
ವಾಸವಿ ಜಲಶಕ್ತಿ ಯೋಜನೆಯಡಿ 2 ರಿಂದ 05 ಎಕರೆ ಕೃಷಿ ಭೂಮಿ ಹೊಂದಿರುವವರಿಗೆ ನೀರಾವರಿ ಸೌಲಭ್ಯ ಒದಗಿಸಲು ಸಾಲ-ಸಹಾಯಧನ ನೀಡಲಾಗುತ್ತದೆ. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6 ಲಕ್ಷ ಗಳ ಮಿತಿಯೊಳಗಿರಬೇಕು. ಅರ್ಜಿದಾರರು 21 ವರ್ಷ ಮೇಲ್ಪಟ್ಟು 50 ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಡಿ ಗರಿಷ್ಠ ರೂ.2 ಲಕ್ಷಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಒದಗಿಸಲಾಗುವುದು ಹಾಗೂ ವಿದ್ಯುದೀಕರಣಕ್ಕಾಗಿ ರೂ.50 ಸಾವಿರಗಳ ಸಹಾಯಧನ ನೀಡಲಾಗುವುದು. 6 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.
ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಸಿಇಟಿ, ಎನ್‍ಇಇಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1 ಲಕ್ಷಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6 ಲಕ್ಷಗಳ ಮಿತಿಯೊಳಗಿರಬೇಕು. (ಈ ಯೋಜನೆಗೆ ಸಂಬಂಧಪಟ್ಟಂತೆ ಸಿ.ಇ.ಟಿ ಪರೀಕ್ಷೆಯ ಕೌನ್ಸೆಲಿಂಗ್ ಮುಗಿದ ನಂತರ ಅರ್ಜಿಗಳನ್ನು ಸ್ವೀಕರಿಸಲಾಗುವುದು).
ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ, ಮಡಿಕೇರಿ ದೂರವಾಣಿ: 08272-221656 ಮೂಲಕ ಸಂಪರ್ಕಿಸಬಹುದು ಎಂದು ನಿಗಮದ ವ್ಯವಸ್ಥಾಪಕರಾದ ಮಹದೇವಿ  ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.೬ : ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ, ವಿರಾಜಪೇಟೆ ತಾಲ್ಲೂಕು, ಅಮ್ಮತ್ತಿ ಹೋಬಳಿ ಘಟಕ…

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026

*ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*

ಮಾರ್ಚ್ 6, 2026

*ಕರ್ನಾಟಕದಲ್ಲಿ 16 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣ ನಿಷೇಧ*

ಮಾರ್ಚ್ 6, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾಧ೯  ಸಹಕಾರಿ ಸಂಘದ ಅಧ್ಯಕ್ಷರಾಗಿ ಹೆಚ್.ಎಸ್.ಚೇತನ್, ಉಪಾಧ್ಯಕ್ಷರಾಗಿ ಬಿ.ಬಿ.ಸ್ವಾತಿ ಅವಿರೋಧ ಆಯ್ಕೆ*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.