Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
  • *ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*
  • *ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*
  • *ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಮ ಸಮಾಜ ನಿರ್ಮಾಣಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಮತ್ತು ನುಲಿಯ ಚಂದಯ್ಯರ ಕೊಡುಗೆ ಅಪಾರ : ಟಿ.ಪಿ.ರಮೇಶ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಮ ಸಮಾಜ ನಿರ್ಮಾಣಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಮತ್ತು ನುಲಿಯ ಚಂದಯ್ಯರ ಕೊಡುಗೆ ಅಪಾರ : ಟಿ.ಪಿ.ರಮೇಶ್*

ಆಗಷ್ಟ್ 31, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.31 : ಮಾನವ ಕುಲದ ಏಕತೆಗಾಗಿ ಮತ್ತು ಸಮ ಸಮಾಜ ನಿರ್ಮಾಣಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಮತ್ತು ನುಲಿಯ ಚಂದಯ್ಯ ಅವರು ಶ್ರಮಿಸಿದ್ದಾರೆ ಎಂದು ಚಿಂತಕ ಟಿ.ಪಿ.ರಮೇಶ್ ತಿಳಿಸಿದ್ದಾರೆ.
ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣಗುರು ಮತ್ತು ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ನಾರಾಯಣಗುರು ಅವರು ಶೋಷಿತ ಸಮಾಜಕ್ಕೆ ಅರಿವಿನ ಬೆಳಕನ್ನು ನೀಡಿದ್ದಾರೆ. ಒಂದೇ ಧರ್ಮ, ಒಂದೇ ದೇವರು ಎಂದು ಸಾರಿದ್ದಾರೆ. ಎಲ್ಲರೂ ಸಮಾಜ ಮುಖಿಯಾಗಿ ಬದುಕಬೇಕು ಎಂಬುದು ನಾರಾಯಣ ಗುರು ಮತ್ತು ನುಲಿಯ ಚಂದಯ್ಯ ಅವರ ಆಶಯವಾಗಿತ್ತು ಎಂದು ಟಿ.ಪಿ.ರಮೇಶ್ ನುಡಿದರು.
ಮೂಢನಂಬಿಕೆ, ಅಜ್ಞಾನ ವಿರುದ್ಧ ಹೆಚ್ಚಿನ ಜಾಗೃತಿ ಮೂಡಿಸಿದರು. ತತ್ವ ನಿಷ್ಠೆ, ಸತ್ಯನಿಷ್ಠೆ ಮೂಲಕ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ ಎಂಬುದನ್ನು ನಾರಾಯಣ ಗುರು ಮತ್ತು ನುಲಿಯ ಚಂದಯ್ಯ ಅವರು ಸಾರಿದ್ದಾರೆ ಎಂದು ಹೇಳಿದರು.
ಬ್ರಹ್ಮಶ್ರೀ ನಾರಾಯಣಗುರು ಅವರು 1854 ರಲ್ಲಿ ತಿರುವನಂತಪುರ ಬಳಿಯ ಚಂಬಾಳತಿ ಎಂಬಲ್ಲಿ ಜನಿಸಿದ ಅವರು ಆಧ್ಯಾತ್ಮಕದ ಮೂಲಕ ಸಮಾಜ ಸುಧಾರಣೆ ಮಾಡಲು ಪ್ರಯತ್ನಿಸಿದರು ಎಂದು ವಿವರಿಸಿದರು.
ನಾರಾಯಣಗುರು ಅವರು 1888 ರಲ್ಲಿ ತಿರುವಂತಪುರದ ಅರವಿಪುರಂನಿಂದ ಜಾಗೃತಿ ಆಂದೋಲನವನ್ನು ಹಮ್ಮಿಕೊಂಡು ದೇವಾಲಯಗಳಿಗೆ ಎಲ್ಲರ ಪ್ರವೇಶಕ್ಕೆ ಅವಕಾಶ ನೀಡಿದರು.
ಕೇರಳ, ತಮಿಳುನಾಡು, ಕರ್ನಾಟಕದಲ್ಲಿ ಹತ್ತಾರು ದೇವಾಲಯಗಳನ್ನು ನಿರ್ಮಿಸಿ ದೇವಾಲಯ ಪ್ರವೇಶಕ್ಕೆ ಎಲ್ಲರಿಗೂ ಅವಕಾಶ ಮಾಡಿದರು ಎಂದರು.
ಮತ ಸುಧಾರಣೆ ಮತ್ತು ಸಮಾಜ ಸುಧಾರಣೆಯ ಯೋಜಿತ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಮಾಡುವುದು ನಾರಾಯಣಗುರು ಅವರ ಉದ್ದೇಶವಾಗಿತ್ತು. ಆ ನಿಟ್ಟಿನಲ್ಲಿ 1903 ರಲ್ಲಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ (ಎಸ್‍ಎನ್‍ಡಿಪಿ) ಅಸ್ತಿತ್ವಕ್ಕೆ ತಂದರು ಎಂದು ಹೇಳಿದರು.
ಮತ ಯಾವುದಾದರೂ ಏನು ಮನುಷ್ಯ ಒಳ್ಳೆಯವನಾದರೆ ಸಾಕು ಎಂದು ಪ್ರತಿಪಾದಿಸಿದರು. ಶ್ರೀ ನಾರಾಯಣಗುರು ಅವರು ಒಬ್ಬ ಧೀಮಂತ ಚಿಂತಕರಾಗಿ, ಸಮಾಜ ಸುಧಾರಕರಾಗಿ ಗಟ್ಟಿ ಮನಸ್ಸಿನ ಕ್ರೀಯಾಶೀಲ ವ್ಯಕ್ತಿತ್ವದಿಂದ ಮಾನವ ಸಮಾಜದ ಏರು ಪೇರುಗಳನ್ನು ಸರಿದಾರಿಗೆ ತರಲು ಶ್ರಮಿಸಿದರು ಎಂದು ಟಿ.ಪಿ.ರಮೇಶ್ ಅವರು ಹೇಳಿದರು.
ನುಲಿಯ ಚಂದಯ್ಯ ಅವರು ಬಿಜಾಪುರ ಜಿಲ್ಲೆಯ ಶಿವಣಗಿಯಲ್ಲಿ 1160 ರಲ್ಲಿ ಜನಿಸಿದರು. ಇವರ ಅಂಕಿತ ನಾಮ ಚಂದೇಶ್ವರಲಿಂಗ. ಹಗ್ಗ ಹೊಸೆದು ಮಾರುವುದು ಇವರ ಕಾಯಕ. ಇವರು 48 ಕ್ಕೂ ಹೆಚ್ಚು ವಚನಗಳನ್ನು ಬರೆದಿದ್ದಾರೆ. ಕಾಯಕ ನಿಷ್ಠೆ ಮತ್ತು ಜಂಗಮ ದಾಸೋಹ ಗಮರ್ನಾಹವಾಗಿದೆ. ನುಲಿಯ ಚಂದಯ್ಯ ಬಸವಣ್ಣನವರ ಸಮಕಾಲೀನರು ಮತ್ತು ಅವರ ಜೊತೆ ಕೈ ಜೋಡಿಸಿದ ಪ್ರಮುಖ ಶರಣರಲ್ಲಿ ಒಬ್ಬರು ಎಂದು ಟಿ.ಪಿ.ರಮೇಶ್ ತಿಳಿಸಿದರು.
ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ. ಇವರ ನಡೆ ನುಡಿ ಕಾಯಕನಿಷ್ಠೆ ಪುರಾಣ ಕಥೆಗಳಲ್ಲಿ ವರ್ಣಿತವಾಗಿವೆ. ಹುಲ್ಲನ್ನು ಕೊಯ್ದು, ಅದರಿಂದ ನಾರು ತೆಗೆದು, ನಾರನ್ನು ನುಲಿದು, ಹಗ್ಗಮಾಡಿ ಅದನ್ನು ಮಾರಿ ಬಂದ ಹಣದಲ್ಲಿ ಜೀವನ ನಡೆಸುತ್ತಿದ್ದರು ಎಂದು ನುಡಿದರು.
ಮಡಿಕೇರಿ ತಾಲ್ಲೂಕು ಬಿಲ್ಲವ ಸಮಾಜದ ಅಧ್ಯಕ್ಷರಾದ ಲೀಲಾವತಿ ಮಾತನಾಡಿ, ವಿದ್ಯೆಯಿಂದ ಸ್ವತಂತ್ರವಾಗಿ ಬದುಕಲು ಸಾಧ್ಯ ಎಂಬುದನ್ನು ನಾರಾಯಣಗುರು ಸಾರಿದ್ದಾರೆ ಎಂದರು.
ಕುಳುವ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಪಿ.ಮಹೇಶ್ ಮಾತನಾಡಿ, ನುಲಿಯ ಚಂದಯ್ಯ ಅವರ ಆದರ್ಶಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ ಬ್ರಹ್ಮಶ್ರೀ ನಾರಾಯಣಗುರು ಮತ್ತು ನುಲಿಯ ಚಂದಯ್ಯ ಅವರ ಆದರ್ಶ ಮತ್ತು ಜೀವನದ ಬಗ್ಗೆ ತಿಳಿದುಕೊಳ್ಳುವಂತಾಗಬೇಕು. ನಾರಾಯಣ ಗುರು ಮತ್ತು ನುಲಿಯ ಚಂದಯ್ಯ ಅವರಂತೆ ನಡೆದುಕೊಳ್ಳಬೇಕು. ಅವರ ಆದರ್ಶಗಳನ್ನು ಪಾಲಿಸುವಂತಾಗಬೇಕು ಎಂದರು.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಜವರಪ್ಪ ಅವರು ಮಾತನಾಡಿ ಶರಣರು ಹಾಗೂ ದಾಸರ ಪರಂಪರೆಯನ್ನು ತಿಳಿದುಕೊಂಡು ಮುನ್ನಡೆಯುವಂತಾಗಬೇಕು ಎಂದು ಹೇಳಿದರು.

ಸರ್ವೋದಯ ಸಮಿತಿ ಜಿಲ್ಲಾ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್, ತಹಶೀಲ್ದಾರ್ ಪ್ರವೀಣ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತರಾದ ಕೆ.ಟಿ.ಬೇಬಿಮ್ಯಾಥ್ಯೂ, ಜಿಲ್ಲಾ ಸಹ ಕಾರ್ಯದರ್ಶಿ ಬೊಳ್ಳಜ್ಜೀರ ಬಿ.ಅಯ್ಯಪ್ಪ, ಇತರರು ಇದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ  ಚಿನ್ನಸ್ವಾಮಿ ಸ್ವಾಗತಿಸಿದರು. ಕಲಾವಿದರಾದ ಬಿ.ಸಿ.ಶಂಕರಯ್ಯ ಅವರು ನಾಡಗೀತೆ ಹಾಡಿದರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.೬ : ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ, ವಿರಾಜಪೇಟೆ ತಾಲ್ಲೂಕು, ಅಮ್ಮತ್ತಿ ಹೋಬಳಿ ಘಟಕ…

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026

*ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*

ಮಾರ್ಚ್ 6, 2026

*ಕರ್ನಾಟಕದಲ್ಲಿ 16 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣ ನಿಷೇಧ*

ಮಾರ್ಚ್ 6, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾಧ೯  ಸಹಕಾರಿ ಸಂಘದ ಅಧ್ಯಕ್ಷರಾಗಿ ಹೆಚ್.ಎಸ್.ಚೇತನ್, ಉಪಾಧ್ಯಕ್ಷರಾಗಿ ಬಿ.ಬಿ.ಸ್ವಾತಿ ಅವಿರೋಧ ಆಯ್ಕೆ*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.