Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾರ್ಯಾಚರಣೆ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ : ಕಾಡಿಗಟ್ಟುವವರನ್ನೇ ಅಟ್ಟಾಡಿಸುತ್ತಿರುವ ಕಾಡಾನೆಗಳು : ಈ ಸಾವು ನ್ಯಾಯವೇ ?*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾರ್ಯಾಚರಣೆ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ : ಕಾಡಿಗಟ್ಟುವವರನ್ನೇ ಅಟ್ಟಾಡಿಸುತ್ತಿರುವ ಕಾಡಾನೆಗಳು : ಈ ಸಾವು ನ್ಯಾಯವೇ ?*

ಸೆಪ್ಟೆಂಬರ್ 4, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಸೆ.4 : ಕಾಡಾನೆಯ ದಾಳಿಯಿಂದ ಎರಡು ಜೀವಗಳು ಪಾರಾದ ಬೆನ್ನಲ್ಲೇ ಗ್ರಾಮಸ್ಥರ ಪ್ರಾಣ ಉಳಿಸಲು ಬಂದ ಅರಣ್ಯ ಸಿಬ್ಬಂದಿಯ ಪ್ರಾಣ ಪಕ್ಷಿಯೇ ಹಾರಿ ಹೋಗಿರುವುದು ವಿಪರ್ಯಾಸ. ವನ್ಯಜೀವಿ ಹಾಗೂ ಮಾನವನ ನಡುವಿನ ಸಂಘರ್ಷವನ್ನು ಹತ್ತಿಕ್ಕುವ ಯುದ್ಧದಲ್ಲಿ ಸದಾ ಸೋಲುತ್ತಿರುವ ಆಡಳಿತ ವ್ಯವಸ್ಥೆ ತಲೆ ತಗ್ಗಿಸಿ ಸೋಲು ಒಪ್ಪಿಕೊಳ್ಳಲೇಬೇಕಾದ ಅನಿವಾರ್ಯ ಪರಿಸ್ಥಿತಿ ಇದು.
ಸುಂಟಿಕೊಪ್ಪ ಹೋಬಳಿಯ ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಿ.ಬ್ಲಾಕ್ ಬಳಿಯಲ್ಲಿ ಒಂಟಿ ಸಲಗ ಇಂದು 2 ಬೈಕ್‌ಗಳ ಮೇಲೆ ದಾಳಿ ಮಾಡಿತು. ಬೈಕ್ ಸವಾರರಾದ ಸುಂಟಿಕೊಪ್ಪದ ನಿವಾಸಿ ಮುರುಗೇಶ್ ಹಾಗೂ ಜಗದಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದರು.
ಇವರ ಚೀರಾಟ ಮತ್ತು ಜನರು ದೊಡ್ಡ ಮಟ್ಟದಲ್ಲಿ ಕೂಗು ಎಬ್ಬಿಸಿದ್ದರಿಂದ ಅಲ್ಲಿಂದ ಪಲಾಯನ ಮಾಡಿದ ಕಾಡಾನೆ ಕಾಡಿನೊಳಗೆ ಓಡಿಹೋಗಿದೆ. ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಬಂದ ಕಾಡಾನೆ ಓಡಿಸುವ ಆರ್‌ಆರ್‌ಟಿ ತಂಡದ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿ ಗಿರೀಶ್(35) ಕಾಡಾನೆ ದಾಳಿಗೆ ಸಿಲುಕಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಗಿರೀಶ್ ಕೊನೆಯುಸಿರೆಳೆದಿದ್ದಾರೆ.
ಕೆದಕಲ್ ವ್ಯಾಪ್ತಿಯ ಮಿಡ್ ಲ್ಯಾಂಡ್ ಎಸ್ಟೇಟ್, ಕೆದಕಲ್ ಎಸ್ಟೇಟ್, ವಿಂದ್ಯಾ ಎಸ್ಟೇಟ್, ತ್ರಿಪುರ ಎಸ್ಟೇಟ್, ದೇವಗಿರಿ ಎಸ್ಟೇಟ್, ಗ್ರೀನ್ ಧಾರೆ ಎಸ್ಟೇಟ್, ಸುನ್ನಿಗ್ ಧಾರೆ ಎಸ್ಟೇಟ್ ಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಆನೆಯು ಕೆದಕಲ್ ಎಸ್ಟೇಟ್ ಮತ್ತು ಮಿಡ್ ಲ್ಯಾಂಡ್ ಎಸ್ಟೇಟ್ ನಡುವೆ ಓಡಾಡುತ್ತಿದೆ ಎಂದು ತಿಳಿದು ಬಂದಿದೆ.
::: ಈ ಸಾವು ನ್ಯಾಯವೇ ?
ಸೋಮವಾರದ ಘಟನೆ ದುರಾದೃಷ್ಟಕರವಾಗಿದ್ದು, ಅರಣ್ಯ ಇಲಾಖೆಯ ಕಾಡಾನೆ ಓಡಿಸುವ ಕಾರ್ಯಾಚರಣೆ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಯಾವುದೇ ವೈಜ್ಞಾನಿಕ ಸ್ಪರ್ಷವಿಲ್ಲದೆ, ನವೀನ ತಂತ್ರಜ್ಞಾನದ ಬಳಕೆ ಇಲ್ಲದೆ, ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳದೆ ಕೇವಲ ಪಟಾಕಿ ಮತ್ತು ಬೆದರು ಗುಂಡಿನ ಕಾರ್ಯಾಚರಣೆ ಇನ್ನೆಷ್ಟು ದಿನ ಮುಂದುವರೆಯಬೇಕು, ಇನ್ನೆಷ್ಟು ಜೀವಗಳು ಬಲಿಯಾಗಬೇಕು ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಟಾಕಿ ಸಿಡಿಸಿ, ಬೆದರು ಗುಂಡು ಹಾರಿಸುವ ಪ್ರಯೋಗವನ್ನು ಕಳೆದ ಅನೇಕ ವರ್ಷಗಳಿಂದ ಮಾಡಿಕೊಂಡು ಬರಲಾಗಿದೆ. ಈ ಪ್ರಯೋಗದಿಂದ ಕಾಡಾನೆಗಳು ತೋಟದಿಂದ ತೋಟಕ್ಕೆ ಓಡುತ್ತವೆಯೇ ಹೊರತು ಯಾವುದೇ ಪರಿಣಾಮ ಬೀರುತ್ತಿಲ್ಲ, ಬದಲಿಗೆ ಈ ರೀತಿಯ ಬೆದರಿಕೆಗಳಿಗೆ ಅಂಜದ ಕಾಡಾನೆಗಳು ಪ್ರತಿದಾಳಿ ಮಾಡುತ್ತಿವೆ.
ಕಾಡಾನೆಗಳು ಸಿಬ್ಬಂದಿಗಳ ಮೇಲೆ ದಿಢೀರ್ ದಾಳಿ ಮಾಡಿದಾಗ ಪ್ರಥಮ ಚಿಕಿತ್ಸೆ ನೀಡುವ ವ್ಯವಸ್ಥೆಯಾಗಲಿ, ಕನಿಷ್ಠ ಕಾರ್ಯಾಚರಣೆ ನಡೆಸುವ ವ್ಯಾಪ್ತಿಯಲ್ಲೇ ವೈದ್ಯರ ಸಹಿತ ಆಂಬ್ಯುಲೆನ್ಸ್ ಆಗಲಿ ಇಲ್ಲ. ಕಾಡಾನೆಗಳ ಸಂಚಾರದ ಬಗ್ಗೆ ಮಾಹಿತಿ ಸಂಗ್ರಹವಿಲ್ಲ. ಹಲವು ವೈಫಲ್ಯಗಳ ಕಾರ್ಯಾಚರಣೆಯಿಂದ ಇಂದು ಅಮಾಯಕ ಸಿಬ್ಬಂದಿಗಳು ಪ್ರಾಣತ್ಯಾಗ ಮಾಡಬೇಕಾಗಿದೆ. ಇವರನ್ನೇ ನಂಬಿಕೊoಡಿರುವ ಕುಟುಂಬದ ಸದಸ್ಯರು ನಿತ್ಯ ಕಣ್ಣೀರು ಹಾಕುವ ಪರಿಸ್ಥಿತಿ ಉದ್ಭವಿಸಿದೆ.
ಒಬ್ಬ ವ್ಯಕ್ತಿಯ ಜೀವ ಹೋದರೆ 15 ಲಕ್ಷ ರೂ. ಪರಿಹಾರ ನೀಡುವುದು, ಸಮಾಧಾನಕ್ಕಾಗಿ ಪರಿಹಾರದ ಮೊತ್ತ ಹೆಚ್ಚಿಸುವ ಮಾತನಾಡುವುದು, ಇಷ್ಟಿದ್ದರೆ ಸಾಕೇ?. ಪಟಾಕಿ ಸಿಡಿಸಿ, ಬೆದರು ಗುಂಡು ಹಾರಿಸುವ ಹಳೆಯ ಪ್ರಯೋಗಗಳಿಗೆ ಇತಿಶ್ರೀ ಹಾಡಿ ನವೀನ ತಂತ್ರಜ್ಞಾನ ಬಳಕೆ ಮಾಡುವುದು, ಪರಿಹಾರೋಪಾಯಗಳಿಗೆ ತಜ್ಞರ ಸಲಹೆ ಪಡೆಯುವುದು ಬೇಡವೇ ಎನ್ನುವ ಪ್ರಶ್ನೆಗಳು ಜನರನ್ನು ಕಾಡುತ್ತಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.