Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ವಿದ್ಯಾರ್ಥಿಗಳನ್ನು ಸತ್ಪ್ರಜೆಯಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ವಿದ್ಯಾರ್ಥಿಗಳನ್ನು ಸತ್ಪ್ರಜೆಯಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರ : ಶಾಸಕ ಡಾ.ಮಂತರ್ ಗೌಡ*

ಸೆಪ್ಟೆಂಬರ್ 5, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.5 : ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ನೀಡಿ ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಆ ನಿಟ್ಟಿನಲ್ಲಿ ಶಿಕ್ಷಕ ವೃತ್ತಿಗೆ ತನ್ನದೇ ಆದ ಗೌರವ ಸ್ಥಾನವಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹೇಳಿದರು.
ನಗರದ ಕೊಡಗು ಗೌಡ ಸಮಾಜದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಶಿಕ್ಷಕರ ಸೇವೆಯನ್ನು ಯಾರೂ ಸಹ ಮರೆಯುವುದಿಲ್ಲ. ಪುಸ್ತಕ ಮೂಲಕ ಪಾಠ ಮಾಡುವುದಕ್ಕೂ, ಮನಸ್ಸಿನ ಮೂಲಕ ಪಾಠ ಮಾಡುವುದಕ್ಕೂ ಬಹಳ ವ್ಯತ್ಯಾಸವಿದೆ. ಆ ನಿಟ್ಟಿನಲ್ಲಿ ಮಕ್ಕಳ ಜ್ಞಾನಾರ್ಜನೆ ಹೆಚ್ಚಿಸುವಲ್ಲಿ ಶಿಕ್ಷಕರ ಸೇವೆ ಮಹತ್ವದ್ದಾಗಿದೆ ಎಂದರು.
ಶಿಕ್ಷಕರು ಹಲವು ಮೂಲ ಸೌಲಭ್ಯಗಳ ಕೊರತೆಯ ನಡುವೆಯೂ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕಲಿಸಲು ಪ್ರಯತ್ನಿಸುತ್ತಾರೆ. ಮಕ್ಕಳನ್ನು ಸರಿದಾರಿಗೆ ತರಲು ಸದಾ ಯೋಚಿಸುತ್ತಾರೆ ಎಂದರು.
ವೈದ್ಯಕೀಯ ವಿಭಾಗದಲ್ಲಿ ನಾನು ಸಹ ಪ್ರಾಧ್ಯಾಪಕನಾಗಿ ಸೇವೆ ಸಲ್ಲಿಸಿದ್ದೇನೆ. ಆ ನಿಟ್ಟಿನಲ್ಲಿ ಶಿಕ್ಷಕರ ಜವಾಬ್ದಾರಿ ಮತ್ತು ಹೊಣೆಗಾರಿಕೆ ಹೆಚ್ಚಿನದ್ದಾಗಿದೆ. ಎಲ್ಲಾ ರೀತಿಯಲ್ಲಿ ಶಾಲೆಯ ಅಭಿವೃದ್ಧಿಗೆ ಸಹಕರಿಸಲಾಗುವುದು ಎಂದು ಶಾಸಕರು ಹೇಳಿದರು.
ಸರ್ಕಾರಿ ಶಾಲೆಯಲ್ಲಿ ಓದಿದವರು ಒಳ್ಳೆಯ ವಿದ್ಯಾರ್ಥಿಗಳಾಗಿ ಹೊರಹೊಮ್ಮಿ ವಿಜ್ಞಾನ, ತಂತ್ರಜ್ಞಾನ ಹೀಗೆ ವಿವಿಧ ಕ್ಷೇತ್ರದಲ್ಲಿ ತಮ್ಮದೇ ಆದ ಹೆಸರು ಮಾಡಿದ್ದಾರೆ ಎಂದು ಶಾಸಕರು ಹೇಳಿದರು.
ಕೊಡಗು ಜಿಲ್ಲೆ ಶೈಕ್ಷಣಿಕವಾಗಿ ಮುಂದೆ ಇದೆ. ಆ ನಿಟ್ಟಿನಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿಯೂ ಸಹ ಇನ್ನಷ್ಟು ಉನ್ನತ ಸ್ಥಾನ ಪಡೆಯುವಂತಾಗಬೇಕು ಎಂದು ಮಂತರ್ ಗೌಡ ಅವರು ಹೇಳಿದರು.
ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಮಾತನಾಡಿ ಶಿಕ್ಷಕರು ಮಕ್ಕಳಿಗೆ ದಾರಿದೀಪವಾಗಿದ್ದಾರೆ. ಮಕ್ಕಳಿಗೆ ತಾಳ್ಮೆ, ಸಹನೆ ಕಲಿಸಿ, ಅಕ್ಷರ ಅಭ್ಯಾಸ ಮಾಡಿಸುತ್ತಾರೆ ಎಂದು ಹೇಳಿದರು.
ಮಕ್ಕಳ ಪ್ರತಿಭೆಯನ್ನು ಗುರುತಿಸಿ ಉತ್ತಮ ಪ್ರಜೆಗಳನ್ನಾಗಿ ಮಾಡುವಲ್ಲಿ ಶಿಕ್ಷಕರು ಶ್ರಮಿಸುತ್ತಾರೆ ಎಂದು ನಗರಸಭೆ ಅಧ್ಯಕ್ಷರು ಹೇಳಿದರು.
ಶಿಕ್ಷಕರ ವೃತ್ತಿಯನ್ನು ಸದಾ ಸ್ಮರಿಸುತ್ತಾರೆ. ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವಲ್ಲಿ ಶಿಕ್ಷಕರು ತಮ್ಮದೇ ಆದ ಪಾತ್ರ ವಹಿಸುತ್ತಾರೆ ಎಂದು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಹೇಳಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಮಾತನಾಡಿ ಶಿಕ್ಷಕರೇ ದೇವರಾಗಿದ್ದು, ಶಿಕ್ಷಕರನ್ನು ಸದಾ ಗೌರವಿಸುತ್ತೇವೆ. ಎಲ್ಲಾ ಮಕ್ಕಳನ್ನು ಪ್ರೀತಿ, ಗೌರವದಿಂದ ಕಾಣುತ್ತಾರೆ ಎಂದರು.
ಮಕ್ಕಳ ವಿದ್ಯಾರ್ಜನೆಯ ಜೊತೆಗೆ ಅವರ ಅಭಿರುಚಿಯನ್ನು ಗುರುತಿಸಿ ಕಲೆ, ಸಾಹಿತ್ಯ, ಸಂಸ್ಕøತಿ, ನಾಟಕ, ಹೀಗೆ ಹಲವು ಕ್ಷೇತ್ರಗಳಿಗೂ ಶಿಕ್ಷಕರು ಪ್ರೋತ್ಸಾಹಿಸುತ್ತಾರೆ ಎಂದು ವರ್ಣಿತ್ ನೇಗಿ ಅವರು ಹೇಳಿದರು.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹಕಾರ್ಯದರ್ಶಿ ಎಚ್.ಎಸ್.ಚೇತನ್ ಅವರು ಮಾತನಾಡಿ ಶಿಕ್ಷಕರ ದಿನಾಚರಣೆ ಸಂಘಟನೆಗೆ ಮುಂದಿನ ದಿನಗಳಲ್ಲಿ ಧತ್ತಿನಿಧಿ ಸ್ಥಾಪಿಸಲಾಗುವುದು ಎಂದರು.
ಹೊಸ ಪಿಂಚಣಿ ಯೋಜನೆ(ಎನ್‍ಪಿಎಸ್) ಶಿಕ್ಷಕರ ಸಮಸ್ಯೆಯನ್ನು ಪರಿಹರಿಸಲು ಶಿಕ್ಷಕರ ಸಂಘವು ನಿರಂತರ ಪ್ರಯತ್ನ ನಡೆಸುತ್ತಿದೆ ಎಂದು ಹೇಳಿದರು.
ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಹಾಗೆಯೇ ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಸ್.ಎ.ಯೋಗೇಶ್, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ವಿಭಾಗೀಯ ಉಪಾಧ್ಯಕ್ಷರಾದ ಪಿ.ನವೀನ್ ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸೌಮ್ಯ ಪೊನ್ನಪ್ಪ, ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ನಿರ್ದೇಶಕರಾದ ಎಂ.ಚಂದ್ರಕಾಂತ್, ಪ್ರಮುಖರಾದ ಕೆ.ಕೆ.ಮಂಜುನಾಥ್ ಕುಮಾರ್, ಡಿವೈಪಿಸಿ ಎಂ.ಕೃಷ್ಣಪ್ಪ, ಜಿಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಕೆ.ಪಿ.ಗುರುರಾಜ್, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಸೋಮಶೇಖರ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಎಚ್.ಎನ್.ಮಂಜುನಾಥ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಸದಾಶಿವ ಪಲ್ಲೇದ್, ಜಿಲ್ಲಾ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರಭುಕುಮಾರ್, ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಎಚ್.ಕೆ.ಕುಮಾರ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರವೀಣ್ ಪಿ.ಎ., ಜಿಲ್ಲಾ ವೃತ್ತಿ ಶಿಕ್ಷಕರ ಸಂಘದ ಅಧ್ಯಕ್ಷರಾದ ಸೋಮಯ್ಯ, ಎಸ್‍ಸಿಎಸ್‍ಟಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಪಾರ್ವತಿ, ತಾಲ್ಲೂಕು ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಸುಕ್ರುದೇವುಗೌಡ, ಜಿ.ಎಂ.ಹೇಮಂತ್, ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷರಾದ ರವಿಕೃಷ್ಣ ಪಿ.ಎಸ್., ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಮೋಹನ್ ಪೆರಾಜೆ, ಅನುದಾನಿತ ಪ್ರೌಢಶಾಲಾ ಮತ್ತು ಕಾಲೇಜು ನೌಕರರ ಸಂಘದ ಅಧ್ಯಕ್ಷರಾದ ಶಿವಪ್ರಸಾದ್, ದೈಹಿಕ ಶಿಕ್ಷಕ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷರಾದ ಕಿರಣ್ ಪಿ.ಎಂ., ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ತಾಲ್ಲೂಕು ಅಧ್ಯಕ್ಷರಾದ ಅಶೋಕ್ ಕೆ.ಜಿ. ಇತರರು ಇದ್ದರು. ಎಚ್.ಜಿ.ಕುಮಾರ್ ನಿರೂಪಿಸಿದರು. ಸೌಮ್ಯ ಪೊನ್ನಪ್ಪ ಸ್ವಾಗತಿಸಿದರು.  

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.