ಮಡಿಕೇರಿ ಸೆ.6 : ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ನ 50ನೇ ವರ್ಷದ ಸ್ವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ತುಳು ಸಾಹಿತ್ಯ ಅಕಾಡೆಮಿಯ ನಿಕಟ ಪೂರ್ವ ಸದಸ್ಯ ಮಡಿಕೇರಿಯ ಪಿ.ಎಂ.ರವಿ ಅವರನ್ನು ಸನ್ಮಾನಿಸಲಾಯಿತು.
ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ , ಲಿಪಿ, ಆಚಾರ ವಿಚಾರಗಳ ಬೆಳವಣಿಗೆಗೆ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ತಮ್ಮದೇ ಆದ ಕೊಡುಗೆ ನೀಡಿರುವ ಪಿ.ಎಂ.ರವಿ ಅವರ ಸಾಧನೆಯನ್ನು ಗುರುತಿಸಿ ಮಂಗಳೂರಿನ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ದಕ್ಷಿಣ ಕನ್ನಡ ಭಾಗದ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರು, ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ನ ಪದಾಧಿಕಾರಿಗಳು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.







