Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ : ನದಿಮೂಲದ ರಕ್ಷಣೆಗೆ ಸರ್ಕಾರ ಒತ್ತು ನೀಡಬೇಕು : ಪತ್ರಕರ್ತೆ ಉಷಾ ಪ್ರೀತಮ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ : ನದಿಮೂಲದ ರಕ್ಷಣೆಗೆ ಸರ್ಕಾರ ಒತ್ತು ನೀಡಬೇಕು : ಪತ್ರಕರ್ತೆ ಉಷಾ ಪ್ರೀತಮ್*

ಸೆಪ್ಟೆಂಬರ್ 6, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಸೆ.6 :  ಪರಿಸರದಲ್ಲಿ ನದಿಗಳು ಬಹುಮುಖ್ಯ ಪಾತ್ರವಹಿಸುತ್ತವೆ. ನದಿಗಳ ಹಂಗಿಲ್ಲದೆ ಮನುಷ್ಯರು ಬದುಕುವುದು ಸಾಧ್ಯವಿಲ್ಲ. ಅರ್ಧ ದಕ್ಷಿಣ ಭಾರತವನ್ನು ಸಲಹುವ ಕಾವೇರಿ ನದಿಯ ಹರಿವು ಶೇ.40 ರಷ್ಟು ಕಡಿಮೆಯಾಗಿದೆ ಎಂದು ವರದಿಗಳು ಹೇಳುತ್ತಿವೆ. ಹಾಗಾಗೀ ನದಿಮೂಲದ ರಕ್ಷಣೆಗೆ ಸರ್ಕಾರ ಒತ್ತು ನೀಡಬೇಕು ಎಂದು ಪತ್ರಕರ್ತೆ ಉಷಾಪ್ರೀತಮ್ ಹೇಳಿದರು.

ವಿರಾಜಪೇಟೆಯ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿರಾಜಪೇಟೆ ಕಾವೇರಿ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಿದ್ದ ಕೊಡಗು ಜಿಲ್ಲೆಗೆ ಸಂಬಂಧಿಸಿದ ಪರಿಸರದ ಕುರಿತಾದ ಸುಲೋಚನಾ ಡಾ.ಎಂ.ಜಿ ನಾಗರಾಜ್ ಅವರು ಸ್ಥಾಪಿಸಿರುವ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕರಾಗಿ ಮಾತನಾಡಿದರು.

ಕಾವೇರಿ ನದಿಯ ಹರಿವು ಯಾಕಾಗೀ ಕಡಿಮೆಯಾಗಿದೆ ಎನ್ನುವ ನಿಟ್ಟಿನಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರಗಳು ವೈಜ್ಞಾನಿಕ ಅಧ್ಯಯನಕ್ಕೆ ಮುಂದಾಗಬೇಕು. ನದಿಯ ಹರಿವನ್ನು ಕಡಿಮೆಯಾಗಲು ಏನೇನು ಅಡೆತಡೆಗಳಾಗಿವೆ ಎಂಬುದನ್ನು ವೈಜ್ಞಾನಿಕವಾಗಿ ಪತ್ತೆಹಚ್ಚುವ ಮೂಲಕ ಕಾವೇರಿ ಎಂದಿನಂತೆ ಮೈದುಂಬಿ ಹರಿಯುವಂತೆ ಮಾಡಿದರೆ ಪರಿಸರದಲ್ಲಿ ಸಾಕಷ್ಟು ಸಮಸ್ಯೆಗಳು ತನ್ನಿಂದಾತಾನೇ ಸರಿಹೋಗುತ್ತವೆ.

ಆನೆ-ಮಾನವ ಸಂಘರ್ಷದ ಹಿಂದೆ ಇರುವ ನಿಜವಾದ ಕಾರಣವನ್ನು ಅರಣ್ಯ ಇಲಾಖೆಗಳು ಸರ್ಕಾರಕ್ಕೆ ಸರಿಯಾದ ವರದಿ ಸಲ್ಲಿಸಬೇಕು. ಬರೇ ತೇಗದ ಮರದ ಪಾರ್ಕು ಬೆಳೆಸಿಕೊಂಡು ಅದಕ್ಕೆ ಅಭಯಾರಣ್ಯ, ರಕ್ಷಿತಾರಣ್ಯ ಅಂಥ ಹೆಸರು ಕೊಟ್ಟರೇ ಅರಣ್ಯೀಕರಣ ಮಾಡಿದಂತಾಗುವುದಿಲ್ಲ. ನೈಜವಾದ, ವೈವಿಧ್ಯತೆಗಳಿಂದ ಕೂಡಿದ ಮರಗಳನ್ನು ಕಾಡಿನಲ್ಲಿ ಬೆಳೆಸುವ ಪ್ರಯತ್ನಗಳು ಅರಣ್ಯ ಇಲಾಖೆಯಿಂದ ಆಗಬೇಕು ಎಂದು ಅಭಿಪ್ರಾಯಪಟ್ಟರು.

ವಿರಾಜಪೇಟೆ ತಾಲ್ಲೂಕು ಕ.ಸಾ.ಪ ಅಧ್ಯಕ್ಷ ರಾಜೇಶ್ ಪದ್ಮನಾಭ ಮಾತನಾಡಿ, ಈ ರೀತಿಯ ದತ್ತಿನಿಧಿ ಉಪನ್ಯಾಸಗಳನ್ನು ಕನ್ನಡ ಸಾಹಿತ್ಯ ಪರಿಷತ್ ಶಿಕ್ಷಣ ಸಂಸ್ಥೆಗಳಲ್ಲಿ ಆಯೋಜಿಸುವ ಮುಖ್ಯ ಉದ್ದೇಶವೆಂದರೆ ವಿದ್ಯಾರ್ಥಿಗಳು ಸಮಾಜದ ನಾನಾ ವಿಚಾರಗಳ ಬಗ್ಗೆ  ಜ್ಞಾನ ಹೊಂದುವಂತಾಗಲಿ. ಆ ಮೂಲಕ ಆ ಜ್ಞಾನವನ್ನು ನಿಮ್ಮ ಬದುಕಿನ್ನಲ್ಲಿ ಉಪಯೋಗಿಸಿಕೊಳ್ಳುವಂತಾಗಲಿ ಎಂದು. ವಿದ್ಯಾರ್ಥಿಗಳು ಮೊಬೈಲ್ ಆಚೆಗೀನ ಜಗತ್ತನ್ನು ನೋಡಬೇಕು. ಪರಿಸರ ಸಂಬಂಧಿತ ಪುಸ್ತಕಗಳನ್ನು ಓದುವುದನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.
ಕಾವೇರಿ ಕಾಲೇಜಿನ ಪ್ರಾಂಶುಪಾಲ ಡಾ.ಆನಂದ್ ಕಾರ್ಲ ಮಾತನಾಡಿ, ಪರಿಸರದ ಸಮತೋಲನ ಬಹಳ ಮುಖ್ಯ. ಪ್ರಕೃತಿಗೆ ಯಾವುದು ಮುಖ್ಯ ಮತ್ತು ಅಮುಖ್ಯ ಎಂದು ಇರುವುದಿಲ್ಲ. ವಿದ್ಯಾರ್ಥಿಗಳು ಗಿಡಗಳನ್ನು ನೆಡಬೇಕು ಮತ್ತು ನೆ್ಟ್ಟ ಗಿಡಕ್ಕೆ ನಿಮ್ಮ ಹೆಸರನ್ನೇ ಇಟ್ಟು ಪೋಷಣೆ ಮಾಡಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲ್ಲೂಕು ಕಸಾಪ ಗೌರವ ಕೋಶಾಧಿಕಾರಿ ಶಬರೀಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಕಸಾಪದ ಗೌರವ ಕಾರ್ಯದರ್ಶಿ ಸಾವಿತ್ರಿ ಹೆಚ್.ಜಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಾವೇರಿ ಕಾಲೇಜಿನ ವಿದ್ಯಾರ್ಥಿನಿ ಧನ್ಯಾಶ್ರೀ ಗೌರಮ್ಮ, ಉಪನ್ಯಾಸಕಿ ಅಂಬಿಕಾ ಕಾರ್ಯಕ್ರಮ ನಿರೂಪಿಸಿದರು. ಕಸಾಪದ ಗೌರವ ಕಾರ್ಯದರ್ಶಿ ಸಾವಿತ್ರಿ ಹೆಚ್.ಜಿ ಸ್ವಾಗತಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.