Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೆ.11 ರಿಂದ ಮಿಷನ್ ಇಂದ್ರಧನುಷ್ 5.0 ಅಭಿಯಾನ : 5 ವರ್ಷದೊಳಿಗಿನ ಮಕ್ಕಳು ಮತ್ತು ಗರ್ಭಿಣಿಯರಿಗೆ ಲಸಿಕಾ ಡೋಸ್ ತಲುಪಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೆ.11 ರಿಂದ ಮಿಷನ್ ಇಂದ್ರಧನುಷ್ 5.0 ಅಭಿಯಾನ : 5 ವರ್ಷದೊಳಿಗಿನ ಮಕ್ಕಳು ಮತ್ತು ಗರ್ಭಿಣಿಯರಿಗೆ ಲಸಿಕಾ ಡೋಸ್ ತಲುಪಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ*

ಸೆಪ್ಟೆಂಬರ್ 6, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.06 : ತೀವ್ರತರವಾದ ಮತ್ತು ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಅಭಿಯಾನದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಮತ್ತು ಗರ್ಭಿಣೀಯರಿಗೆ ಲಸಿಕಾ ಡೋಸ್‍ಗಳನ್ನು ತಲುಪಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತೀವ್ರತರವಾದ ಮಿಷನ್ ಇಂದ್ರಧನುಷ್ 5.0-ದಡಾರ-ರುಬೆಲ್ಲಾ ನಿರ್ಮೂಲನೆ ಸಂಬಂಧಿಸಿದಂತೆ 2 ಸುತ್ತಿನ ಕಾರ್ಯಕ್ರಮ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.
ವಿವಿಧ ಕಾರಣಗಳಿಂದ ಬಿಟ್ಟು ಹೋಗಿರುವ 5 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣೀಯರಿಗೆ ಮಿಷನ್ ಇಂದ್ರಧನುಷ್ 5.0 ದಡಾರ-ರುಬೆಲ್ಲಾ ನಿರ್ಮೂಲನೆ ಮಾಡಲು ಸರ್ಕಾರ ದೊಡ್ಡ ಹೆಜ್ಜೆ ಇಟ್ಟಿದ್ದು, ಆ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಪ್ರಗತಿ ಸಾಧಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಮಿಷನ್ ಇಂದ್ರಧನುಷ್ ಕಾರ್ಯಕ್ರಮ ಸಂಬಂಧಿಸಿದಂತೆ ವಿಶೇಷವಾಗಿ ದಡಾರ ಮತ್ತು ರುಬೆಲ್ಲಾ ರೋಗ ನಿರೋಧಕತೆಯ ಅಂತರ ಕಡಿಮೆ ಮಾಡುವುದು, ಇದುವರೆಗೆ ಲಸಿಕೆ ಡೋಸ್ ಪಡೆಯದಿದ್ದಲ್ಲಿ ಲಸಿಕೆಯನ್ನು ತಲುಪಿಸುವುದು, ಲಸಿಕೆ ಪಡೆದಿರುವ ಬಗ್ಗೆ ಖಾತರಿ ಪಡಿಸಿಕೊಳ್ಳುವುದು. ಹಾಗೆಯೇ ಹೊಸ ಲಸಿಕೆಗಳ ಲಸಿಕಾ ಪ್ರಗತಿಯನ್ನು ಹೆಚ್ಚಿಸುವುದು ಪ್ರಮುಖ ಉದ್ದೇಶವಾಗಿದ್ದು, ಆ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದಂತೆ ಕಾರ್ಯಕ್ರಮ ಅನುಷ್ಠಾನಕ್ಕೆ ಮುಂದಾಗುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ವಲಸಿಗ 5 ವರ್ಷದೊಳಗಿನ ಮಕ್ಕಳು, ಗರ್ಭಿಣೀಯರನ್ನು ಪತ್ತೆ ಹಚ್ಚಿ ಅರ್ಹರಿಗೆ ಲಸಿಕೆ ನೀಡುವಂತಾಗಬೇಕು. ತಾಲ್ಲೂಕುವಾರು ಮಾಹಿತಿಯನ್ನು ನಿಖರವಾಗಿ ಒದಗಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಅವರು ಮಾಹಿತಿ ನೀಡಿ ಮಿಷನ್ ಇಂದ್ರಧನುಷ್ ಅನುಷ್ಠಾನ ಸಂಬಂಧಿಸಿದಂತೆ ಮೊದಲ ಸುತ್ತಿನಲ್ಲಿ ಶೇಕಡವಾರು ಪ್ರಗತಿ ಸಾಧಿಸಲಾಗಿದೆ. ಸೆಪ್ಟೆಂಬರ್, 11 ರಿಂದ 16 ರವರೆಗೆ ಎರಡನೇ ಸುತ್ತಿನಲ್ಲಿ ಮಿಷನ್ ಇಂದ್ರಧನುಷ್ ಲಸಿಕಾಕರಣ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗರ್ಭಿಣೀಯರು ಮತ್ತು 5 ವರ್ಷದೊಳಗಿನ ಮಕ್ಕಳ ಮಾಹಿತಿಯನ್ನು ಪ್ರಾಥಮಿಕ ಆರೋಗ್ಯ ಅಧಿಕಾರಿ ಮತ್ತು ಆಶಾ ಕಾರ್ಯಕರ್ತರಿಗೆ ನೀಡುವಂತಾಗಬೇಕು. ಮನೆ ಮನೆಗೆ ಭೇಟಿ ಮಾಡಿ ಲಸಿಕೆ ಪಡೆಯಬೇಕಿರುವ, ಇದುವರೆಗೆ ಪಡೆಯದಿರುವ ಬಗ್ಗೆ ಖಾತರಿಪಡಿಸಿಕೊಳ್ಳುವಂತೆ ಕೋರಿದರು.
ವಿಶೇಷವಾಗಿ 2 ರಿಂದ 5 ವರ್ಷದೊಳಗಿನ ಮಕ್ಕಳು ದಡಾರ, ರುಬೆಲ್ಲಾ-2, ಡಿಬಿಟಿ ಬೂಸ್ಟರ್, ಒಪಿವಿ ಬೂಸ್ಟರ್ ಪಡೆದಿದ್ದಾರೆ ಎಂಬುದನ್ನು ಪರಿಶೀಲಿಸಬೇಕಿದೆ ಎಂದು ತಿಳಿಸಿದರು.
ಗರ್ಭಿಣಿ ಮಹಿಳೆಯರ ಟಿಡಿ ಲಸಿಕಾಕರಣ ಮತ್ತು ಮಕ್ಕಳ ಲಸಿಕಾಕರಣದ ಕುರಿತು ಮಾಹಿತಿ ನೀಡುವುದು. ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರು, ತೋಟದ ಮನೆಗಳು, ವಲಸಿಗರು, ಹೀಗೆ ಹಲವು ಅರ್ಹರು ಲಸಿಕಾಕರಣದಿಂದ ಬಿಟ್ಟು ಹೋಗಿದ್ದರೆ ಮಾಹಿತಿ ನೀಡುವುದು. ಅಭಿಯಾನದ ಸಮಯದಲ್ಲಿ ಅಂಗನವಾಡಿ ಕೇಂದ್ರ ತೆರೆಯಬೇಕು ಎಂದು ಡಾ.ಆನಂದ್ ಅವರು ಹೇಳಿದರು.
ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಿಂದ ತೀವ್ರತರವಾದ ಇಂದ್ರಧನುಷ್ 5.0 ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸುವುದು, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳನ್ನು ಗುರುತಿಸಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತಾಗಬೇಕು. ಜೊತೆಗೆ ಸ್ಥಳೀಯವಾಗಿ ಟಾಮ್ ಟಾಮ್ ಮೂಲಕ ಮಾಹಿತಿ ನೀಡುವಂತಾಗಬೇಕು ಎಂದರು.
ಲಸಿಕೆ ನಿರಾಕರಿಸುವ ಕುಟುಂಬಗಳನ್ನು ಮನವೊಲಿಸಿ ಲಸಿಕಾಕರಣಕ್ಕೆ ಕೋರುವುದು. ಅಗತ್ಯ ಜಾಗೃತಿ ಮೂಡಿಸುವುದು. ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ವ್ಯಾಪ್ತಿಯಲ್ಲಿ ಲಸಿಕಾ ಕಾರ್ಯಪಡೆ ಸಮಿತಿ ರಚಿಸಿ ಲಸಿಕಾಕರಣಕ್ಕೆ ಹೆಚ್ಚಿನ ಜಾಗೃತಿ ಮೂಡಿಸುವುದು, ಶಿಕ್ಷಣ ಇಲಾಖೆ ವತಿಯಿಂದ ಶಾಲೆಗಳಲ್ಲಿ 5 ವರ್ಷದೊಳಗಿನ ಮಕ್ಕಳನ್ನು ಲಸಿಕೆ ಪಡೆಯಲು ಪೋಷಕರಿಗೆ ಮಾಹಿತಿ ನೀಡುವುದು. ವೈದ್ಯಕೀಯ ಇಲಾಖೆಯಿಂದ ಇಂದ್ರಧನುಷ್ ಕಾರ್ಯಕ್ರಮಕ್ಕೆ ಅಗತ್ಯ ಸಹಕಾರ ನೀಡುವುದು, ಕಾರ್ಮಿಕ ಇಲಾಖೆ, ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳ ಮೂಲಕ ಲಸಿಕಾಕರಣದ ಕುರಿತು ಜಾಗೃತಿ ಮೂಡಿಸುವುದು ಹೀಗೆ ಎಲ್ಲಾ ಇಲಾಖೆಗಳ ಸಹಕಾರ ಪಡೆದು ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮ ಪ್ರಗತಿಗೆ ಶ್ರಮಿಸಲಾಗುವುದು ಎಂದು ಡಾ.ಆನಂದ್ ಅವರು ಮಾಹಿತಿ ನೀಡಿದರು.
‘ಮಿಷನ್ ಇಂದ್ರಧನುಷ್ ಐಎಂಐ ಕಾರ್ಯಕ್ರಮದಿಂದ ಸರ್ಕಾರ ಹೊಸ ಆ್ಯಪ್ ಯು-ವಿನ್  (U-WIN )  ಬಿಡುಗಡೆ ಮಾಡಿದ್ದು, ಇದರಲ್ಲಿ ನೋಂದಾಯಿಸಿಕೊಂಡು ಲಸಿಕೆ ಪಡೆದ ನಂತರ ಪ್ರಮಾಣ ಪತ್ರ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದರು.’

ಕೊಡಗು ಜಿಲ್ಲೆಯಲ್ಲಿ 8 ದಡಾರ ಮತ್ತು 1 ರುಬೆಲ್ಲಾ ಪ್ರಕರಣ ವರದಿಯಾಗಿದ್ದು, ಎಲ್ಲರೂ ಗುಣಮುಖರಾಗಿದ್ದಾರೆ ಎಂದು ಡಾ.ಆನಂದ್ ಅವರು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಅವರು ದಡಾರ ಮತ್ತು ರುಬೆಲ್ಲಾ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಲವು ಆರೋಗ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಡಾ.ಸುದೀರ್ ನಾಯಕ್, ಐಟಿಡಿಪಿ ಅಧಿಕಾರಿ ಹೊನ್ನೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜು, ಡಾ.ಚೇತನ್, ಡಾ.ಶ್ರೀನಿವಾಸ್, ಡಾ.ಪುರುಷೋತ್ತಮ, ನಗರಸಭೆ ಎಂಜಿನಿಯರ್ ಸೌಮ್ಯ, ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.