Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»90 ದಿನಗಳ ಒಳಗೆ ಆರೋಪ ಪಟ್ಟಿ ಸಲ್ಲಿಸದಿದ್ದರೆ ಆರೋಪಿಗಳಿಗೆ ಜಾಮೀನು ಸಿಗತ್ತೆ : ಜಾಮೀನು ಪಡೆದವರಿಗೆ ಕಾನೂನಿನ ಭಯ ಇರತ್ತಾ?
ಇತ್ತೀಚಿನ ಸುದ್ದಿಗಳು ಕರ್ನಾಟಕ

90 ದಿನಗಳ ಒಳಗೆ ಆರೋಪ ಪಟ್ಟಿ ಸಲ್ಲಿಸದಿದ್ದರೆ ಆರೋಪಿಗಳಿಗೆ ಜಾಮೀನು ಸಿಗತ್ತೆ : ಜಾಮೀನು ಪಡೆದವರಿಗೆ ಕಾನೂನಿನ ಭಯ ಇರತ್ತಾ?

ಸೆಪ್ಟೆಂಬರ್ 7, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಬೆಂಗಳೂರು ಸೆ 7: ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಮತ್ತು ಜಾತಿ ದೌರ್ಜನ್ಯದ ಕೊಲೆ ಪ್ರಕರಣಗಳಲ್ಲಿ 120 ದಿನ ಕಳೆದರೂ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಏಕೆ ದಾಖಲಾಗಿಲ್ಲ ಎಂದು ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೀಗೇ ಆದರೆ ಎಸ್.ಪಿ, ಡಿಸಿಪಿ ಗಳನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಂಕಿ ಅಂಶಗಳನ್ನು ಮುಂದಿಟ್ಟು ಅಧಿಕಾರಿಗಳನ್ನು ತೀವ್ರವಾಗಿ ಪ್ರಶ್ನಿಸಿದರು.
ಕಳೆದ ಐದು ವರ್ಷಗಳಲ್ಲಿ ದಾಖಲಾದ 10893 ಪ್ರಕರಣಗಳಲ್ಲಿ 1100 ಪ್ರಕರಣಗಳಲ್ಲಿ 120 ದಿನಗಳಲ್ಲಿಯೂ ಚಾರ್ಜ್‌ ಶೀಟ್‌ ಹಾಕಿಲ್ಲ. ಇದು ಪರಿಶಿಷ್ಟ ಜಾತಿ, ಪಂಗಡದವರ ಬಗ್ಗೆ ಅಧಿಕಾರಿಗಳ ಅಸಡ್ಡೆಯನ್ನು ತೋರಿಸುತ್ತದೆ. ಇದರಿಂದ ಸಂತ್ರಸ್ತರಿಗೆ ನ್ಯಾಯ ಕೊಡಿಸಿದಂತಾಗುವುದಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.
ಅಪರಾಧ ಪ್ರಕ್ರಿಯಾ ಸಂಹಿತೆ (CRPC) ಅಡಿಯಲ್ಲಿ 90 ದಿನಗಳೊಳಗೆ ಚಾರ್ಜ್‌ ಶೀಟ್‌ ಹಾಕದಿದ್ದರೆ, ಎಸ್ ಸಿ /ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ 60 ದಿನಗಳೊಳಗೆ ಆರೋಪ ಪಟ್ಟಿ ದಾಖಲಾಗದಿದ್ದರೆ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಗುತ್ತದೆ. ಹೀಗೆ ಜಾಮೀನು ಪಡೆದವರಿಗೆ ಕಾನೂನಿನ ಭಯ ಇರುತ್ತದಾ ಎಂದು ಖಾರವಾಗಿ ಪ್ರಶ್ನಿಸಿದರು.
ಕರ್ನಾಟಕ ಪೊಲೀಸ್ ದೇಶದಲ್ಲೇ ನಂಬರ್ ಒನ್ ಎನ್ನುವ ಅಭಿಪ್ರಾಯ ಇದೆ. ಆದರೆ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಶಿಕ್ಷೆ ಪ್ರಮಾಣ ಕೇವಲ 3.44 ಇದೆ. ಅಂದರೆ ಪೊಲೀಸ್ ಇಲಾಖೆ ಕಳೆದ ಐದು ವರ್ಷಗಳಲ್ಲಿ ಎಸ್ ಸಿ/ಎಸ್ ಟಿ ದೌರ್ಜನ್ಯ ಪ್ರಕರಣಗಳ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿತ್ತಾ ಎಂದು ಪ್ರಶ್ನಿಸಿ ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇದಕ್ಕೆ ಎಸ್.ಪಿ. ಹಾಗೂ ಡಿಸಿಪಿಗಳನ್ನು ನೇರವಾಗಿ ಹೊಣೆ ಮಾಡಿ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ವರಿಸಿ ಪ್ರಕರಣಗಳ ತನಿಖಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿ&ಐಜಿಗೆ ಸೂಚಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ರಜನಿ ರೈ ಅವರಿಗೆ ಡಾಕ್ಟರೇಟ್ ಪದವಿ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರು ಪತ್ತೆ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾಹಿತಿ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಅ.16 ಮತ್ತು 17ರಂದು ಸೂರ್ಯ ಘರ್ ಯೋಜನೆಯ ವಿಶೇಷ ಅಭಿಯಾನ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರು ಪತ್ತೆ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾಹಿತಿ

ಅಕ್ಟೋಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 14: ಕೊಡಗು ಜಿಲ್ಲೆಯ ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರನ್ನು ಪತ್ತೆಹಚ್ಚಲಾಗಿದೆ ಎಂದು ಕೊಡಗು…

ಮಡಿಕೇರಿಯಲ್ಲಿ ಅ.16 ಮತ್ತು 17ರಂದು ಸೂರ್ಯ ಘರ್ ಯೋಜನೆಯ ವಿಶೇಷ ಅಭಿಯಾನ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ನಾಲ್ವರು ಬಾಂಗ್ಲಾದೇಶಿ ವಲಸಿಗರು ಪತ್ತೆ; ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಹಿಂದೂ ಜಾಗರಣಾ ವೇದಿಕೆ ಆಗ್ರಹ

ಅಕ್ಟೋಬರ್ 14, 2026

ಮಡಿಕೇರಿ : ಅ.15 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಕಾಫಿ ದಸರಾ : ಕಾಫಿ ಕೃಷಿಗೆ ಹೆಚ್ಚಿನ ಉತ್ತೇಜನ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 14, 2026

ಕುಶಾಲನಗರದ ಬಸವೇಶ್ವರ ಬಡಾವಣೆಯಲ್ಲಿ ನವರಾತ್ರಿ ಹಬ್ಬದ ಸಂಭ್ರಮ

ಅಕ್ಟೋಬರ್ 14, 2026

ಶಾಸಕ ಎ.ಎಸ್.ಪೊನ್ನಣ್ಣ ಅವರ ವಿಶೇಷ ಕಾಳಜಿ : ದಬ್ಬಡ್ಕದಲ್ಲಿ ವಿದ್ಯುತ್ ವಂಚಿತ ಮನೆಗಳಿಗೆ ಸೌರ ವಿದ್ಯುತ್ ಅಳವಡಿಕೆ ಆರಂಭ

ಅಕ್ಟೋಬರ್ 14, 2026

ಭಾರತದ ಆರ್ಥಿಕತೆಯಲ್ಲಿ ಬ್ಯಾಂಕ್ ಹಾಗೂ ವಿಮೆ ಪ್ರಮುಖ ಪಾತ್ರ ವಹಿಸುತ್ತವೆ: ಡಾ. ಕೆ.ಸಿ. ದಯಾನಂದ

ಅಕ್ಟೋಬರ್ 14, 2026

ದುಬೈ ಕೊಡಗು ಹಳೆ ವಿದ್ಯಾರ್ಥಿಗಳ ಸಂಘದಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಬ್ಬರು ವಿದ್ಯಾರ್ಥಿನಿಯರಿಗೆ ಸನ್ಮಾನ

ಅಕ್ಟೋಬರ್ 14, 2026

ಸರ್ಫೇಸಿ ಕಾಯ್ದೆ ವಿರುದ್ಧ ಕಾನೂನು ಹೋರಾಟ ಅಗತ್ಯ: ಡಾ. ಕಾವೇರಪ್ಪ; ಕರ್ನಾಟಕ ಹೈಕೋರ್ಟ್‌ನಲ್ಲಿ ಹೋರಾಟ ನಡೆಸಲು ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷರ ಆಗ್ರಹ

ಅಕ್ಟೋಬರ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.