ಮಡಿಕೇರಿ ಸೆ.8 : ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಾನಿಗೆ ಒಳಗಾಗಿದ್ದ ವೀರ ಯೋಧ ಜನರಲ್ ಕೊಡಂದೇರ ಎಸ್.ತಿಮ್ಮಯ್ಯ ಅವರ ಕಂಚಿನ ಪ್ರತಿಮೆಯ ದುರಸ್ತಿ ಕಾರ್ಯ ನಡೆಯುತ್ತಿದ್ದು, ಸಂಸದ ಪ್ರತಾಪ್ ಸಿಂಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಜನರಲ್ ತಿಮ್ಮಯ್ಯ ಅವರ ಪ್ರತಿಮೆಯ ದುರಸ್ತಿ ಕಾರ್ಯ ನಡೆಸುತ್ತಿದ್ದಾರೆ.








