Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಸೆ.15 ರಂದು*ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ : ಹೆಸರು ನೋಂದಾಯಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೆ.15 ರಂದು*ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ : ಹೆಸರು ನೋಂದಾಯಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮನವಿ*

ಸೆಪ್ಟೆಂಬರ್ 8, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.8 : ಭಾರತ ದೇಶದ ಪ್ರಜೆಯಾಗಿ ಹೆಮ್ಮೆಪಡಲು ಸರ್ಕಾರ ಪ್ರತಿಯೊಬ್ಬರಿಗೂ ಸುವರ್ಣಾವಕಾಶ ಕಲ್ಪಿಸಿದ್ದು, ಸೆ.15 ರಂದು ಭಾರತ ಸಂವಿಧಾನದ ಪೀಠಿಕೆ ಓದಲು ಹೆಚ್ಚು ಜನರು, ಶಾಲಾ ಕಾಲೇಜುಗಳು, ಸರ್ಕಾರಿ ಕಚೇರಿ, ಸ್ವಯಂ ಸೇವಾ ಸಂಸ್ಥೆಗಳು, ಸಾರ್ವಜನಿಕರು ಆನ್‍ಲೈನ್ ಮೂಲಕ ಸೆ.14 ರೊಳಗೆ ಹೆಸರು ನೋಂದಣಿ ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಕೋರಿದ್ದಾರೆ.
ಇದೇ ಸೆ.15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸುವ ನಿಟ್ಟಿನಲ್ಲಿ, ಸಂವಿಧಾನದ ಪೀಠಿಕೆಯನ್ನು ಓದುವ ಕಾರ್ಯಕ್ಕೆ ನೋಂದಣಿ ಮಾಡಿಕೊಳ್ಳುವ ಕುರಿತು ವಿಡಿಯೊ ಸಂವಾದ ಮೂಲಕ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ನೀಡಿದರು.
ಭಾರತ ಸಂವಿಧಾನದ ಪೀಠಿಕೆಯನ್ನು ಸೆ.15 ರಂದು ಬೆಳಗ್ಗೆ 10 ಗಂಟೆಗೆ ಪ್ರತಿಯೊಬ್ಬರೂ ಓದುವ ಮೂಲಕ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಆ ದಿಸೆಯಲ್ಲಿ ಪ್ರತಿಯೊಬ್ಬರೂ ಕೈಜೋಡಿಸುವಂತೆ ಮನವಿ ಮಾಡಿದರು.
ಈ ಅವಕಾಶವನ್ನು ಎಲ್ಲರೂ ಉಪಯೋಗಿಸಿಕೊಳ್ಳಬೇಕು. ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳಬೇಕು, ಅಲ್ಲದೆ ಸೆ.15 ರಂದು ಬೆಳಗ್ಗೆ 10 ಗಂಟೆಗೆ ಸಂವಿಧಾನದ ಪೀಠಿಕೆಯನ್ನು ಓದಿ, ಅದನ್ನು ಪ್ರತಿಜ್ಞಾ ವಿಧಿಯಂತೆ ಸ್ವೀಕರಿಸಬೇಕು. ಅದರ ಫೋಟೋವನ್ನು ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡಿಕೊಂಡಲ್ಲಿ, ಎಲ್ಲರಿಗೂ ಸೆ.15 ರ ಬಳಿಕ ಆನ್‍ಲೈನ್‍ನಲ್ಲಿ ಅದೇ ವೆಬ್‍ಸೈಟ್ ಮೂಲಕವೇ ಪ್ರಮಾಣಪತ್ರ ದೊರೆಯಲಿದೆ. ಕಾರ್ಯಕ್ರಮದ ಯಶಸ್ವಿಗೆ ರಾಜ್ಯದ ಮುಖ್ಯಮಂತ್ರಿಯವರು, ಉಪ ಮುಖ್ಯಮಂತ್ರಿಯವರು, ಸಮಾಜ ಕಲ್ಯಾಣ ಸಚಿವರು ವಿಶೇಷ ಆಸಕ್ತಿ ಹೊಂದಿದ್ದು, ಕಾರ್ಯಕ್ರಮದ ಯಶಸ್ವಿಗೆ ಸಲಹೆ, ಸೂಚನೆಗಳನ್ನು ನೀಡಿದ್ದಾರೆ ಎಂದರು.
ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಣಿ ಮಾಡಿಸಿ: ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು, ಸಾರ್ವಜನಿಕರು, ವಿದ್ಯಾರ್ಥಿ ನಿಲಯಗಳು, ಅನುದಾನಿತ, ಖಾಸಗಿ, ಸರ್ಕಾರಿ ಶಾಲಾ ಕಾಲೇಜುಗಳು, ಸಾರ್ವಜನಿಕ ವಲಯದ ಉದ್ಯಮಗಳು, ಏಜೆನ್ಸಿಗಳು, ಸಂಸ್ಥೆಗಳು, ಕೈಗಾರಿಕಾ ಸಂಸ್ಥೆಗಳು, ಪೆÇಲೀಸ್ ಇಲಾಖೆ, ಸೇರಿದಂತೆ ಎಲ್ಲರೂ ಹೆಸರು ನೋಂದಣಿ ಮಾಡಿಸಬೇಕು. ಸ್ವಸಹಾಯ ಗುಂಪುಗಳು, ನ್ಯಾಯಬೆಲೆ ಅಂಗಡಿಗಳ ಮೂಲಕ ಫಲಾನುಭವಿಗಳು, ನಗರ, ಸ್ಥಳೀಯ ಸಂಸ್ಥೆಗಳು, ಪ್ರತಿಯೊಂದು ಇಲಾಖೆಗಳು ಆಯಾಯ ವ್ಯಾಪ್ತಿಯ ಫಲಾನುಭವಿಗಳ ಹೆಸರು ನೋಂದಣಿ ಮಾಡಿಸಬೇಕು, ಶಿಕ್ಷಣ ಇಲಾಖೆಯವರು ಶಾಲಾ ಕಾಲೇಜುಗಳ ಸಭೆ ನಡೆಸಿ, ನಿರ್ದೇಶನ ನೀಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ನೋಂದಣಿ ಹೇಗೆ: ಸಂವಿಧಾನದ ಪೀಠಿಕೆ ಓದಲು ಆನ್‍ಲೈನ್ ನೋಂದಣಿ ಪ್ರಕ್ರಿಯೆ ಅತ್ಯಂತ ಸರಳವಾಗಿದೆ. ಸಮಾಜ ಕಲ್ಯಾಣ ಇಲಾಖೆ ರೂಪಿಸಿರುವ ವೆಬ್‍ಸೈಟ್ https://thepreamble-swdkar.in ನಲ್ಲಿ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ, ಮುಂತಾದ ವಿವರ ನೀಡಿ ನೋಂದಣಿ ಮಾಡಿಕೊಳ್ಳಬೇಕು. ಇದಕ್ಕಾಗಿ ಒಟ್ಟು 10 ವಿಭಾಗಗಳನ್ನು ವೆಬ್‍ಸೈಟ್‍ನಲ್ಲಿ ಮಾಡಿದ್ದು, ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯ ಶಾಲೆಗಳು, ಶಿಕ್ಷಣ, ಉನ್ನತ ಶಿಕ್ಷಣ, ವೈದ್ಯಕೀಯ ಶಿಕ್ಷಣ ಇಲಾಖೆಗಳ ಶಾಲೆ, ಕಾಲೇಜುಗಳು. ಎಲ್ಲ ರೀತಿಯ ಖಾಸಗಿ ಶಾಲೆ, ಕಾಲೇಜುಗಳು, ಹೀಗೆ ಕನಿಷ್ಟ 10 ಸದಸ್ಯರ ಗುಂಪು ಒಳಗೊಂಡು ನೋಂದಣಿ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಮಾಹಿತಿ ನೀಡಿದರು.
ಸೆ.15 ರಂದು ಓದಬೇಕಾದ ಸಂವಿಧಾನದ ಪೀಠಿಕೆ: ಸಂವಿಧಾನದ ಪೀಠಿಕೆಯಲ್ಲಿರುವ ಪ್ರತಿಯೊಂದು ಪದಗಳು, ವಾಕ್ಯ ಬಹಳಷ್ಟು ಮುಖ್ಯವಾಗಿದ್ದು, ಪ್ರತಿಯೊಂದಕ್ಕೂ ವಿಶೇಷ ಅರ್ಥವಿದೆ, ಇದರ ಮಹತ್ವವನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕಿದೆ. ಹೀಗಾಗಿ ಸೆ.15 ರಂದು ಬೆಳಗ್ಗೆ 10 ಗಂಟೆಗೆ ಎಲ್ಲರೂ ಸಂವಿಧಾನದ ಪೀಠಿಕೆಯಾದ, “ಭಾರತದ ಪ್ರಜೆಗಳಾದ ನಾವು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ, ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಅದರ ಸಮಸ್ತ ನಾಗರಿಕರಿಗೆ: ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ: ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ್ಯ: ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ, ಅವರಲ್ಲಿ ಭ್ರಾತೃತ್ವಭಾವನೆಯನ್ನು ವೃದ್ಧಿಗೊಳಿಸಲು ಶ್ರದ್ಧಾಪೂರ್ವಕವಾಗಿ ಸಂಕಲ್ಪ ಮಾಡಿದವರಾಗಿ: ನಮ್ಮ ಸಂವಿಧಾನ ಸಭೆಯಲ್ಲಿ 1949, ನವೆಂಬರ್ 26 ರಂದು ಸಂವಿಧಾನವನ್ನು ಅಂಗೀಕರಿಸಿ, ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ” ಎಂಬುದಾಗಿ ಓದಿ ಪ್ರತಿಯೊಬ್ಬರೂ ಪ್ರತಿಜ್ಞಾ ವಿಧಿ ಸ್ವೀಕರಿಸಬೇಕು.
ಸಂವಿಧಾನ ಪೀಠಿಕೆ ಓದುವ ಉದ್ದೇಶ: ಸಂವಿಧಾನವು ಡಾ.ಅಂಬೇಡ್ಕರ್ ಅವರು ನಮಗೆ ನೀಡಿರುವ ಜ್ಞಾನ ದೀವಿಗೆ, ಸಮಾನತೆಯ ದೀವಿಗೆಯಾಗಿದೆ. ಹೀಗಾಗಿ ಸಂವಿಧಾನದ ಪೀಠಿಕೆ ಓದುವುದು ಮಹತ್ವವಾದ ಉದ್ದೇಶ ಹೊಂದಿದ್ದು, ಇದು ವಿದ್ಯಾರ್ಥಿಗಳು ತಮ್ಮ ರಾಷ್ಟ್ರ ನಿರ್ಮಿಸಿರುವ ಮೂಲಭೂತ ತತ್ವಗಳು, ಮೌಲ್ಯಗಳನ್ನು ಅರ್ಥ ಮಾಡಿಕೊಳ್ಳಲು ಸಹಾಯ ಮಾಡುತ್ತದೆ.
ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದಂತಹ ಪರಿಕಲ್ಪನೆ ಒಳಗೊಂಡಿದೆ. ಆದರ್ಶಗಳನ್ನು ವಿದ್ಯಾರ್ಥಿಗಳಿಗೆ ನೆನಪಿಸುವ ಮೂಲಕ ದೇಶಭಕ್ತಿಯ ಭಾವನೆ ಮತ್ತು ಒಬ್ಬರ ದೇಶಕ್ಕೆ ಬಾಂಧವ್ಯ ಬೆಳೆಸುತ್ತದೆ. ನಾಗರಿಕರಾಗಿ ಅವರ ಹಕ್ಕುಗಳು, ಜವಾಬ್ದಾರಿಗಳನ್ನು ಅರಿಯಲು ಸಹಕಾರಿಯಾಗಲಿದೆ. ರಾಷ್ಟ್ರದ ಏಕತೆ ಮತ್ತು ವೈವಿಧ್ಯತೆಯನ್ನು ಸಂವಿಧಾನದ ಪೀಠಿಕೆ ಒತ್ತಿ ಹೇಳುತ್ತದೆ, ಹೀಗಾಗಿ ಶಾಲೆಯ ಪ್ರಾರ್ಥನೆಯ ಸಮಯದಲ್ಲಿ ಅದನ್ನು ಓದುವುದು, ವೈವಿಧ್ಯಮಯ ಹಿನ್ನೆಲೆಯ ವಿದ್ಯಾರ್ಥಿಗಳಲ್ಲಿ ಏಕತೆ ಮತ್ತು ಒಳಗೊಳ್ಳುವಿಕೆಯ ಪ್ರಜ್ಞೆ ಹುಟ್ಟುಹಾಕಲು ಸಹಾಯ ಮಾಡುತ್ತದೆ. ಸಂವಿಧಾನ ಪೀಠಿಕೆ ಓದುವುದರಿಂದ ವಿದ್ಯಾರ್ಥಿಗಳಲ್ಲಿ ನ್ಯಾಯ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದಂತಹ ಮೌಲ್ಯಗಳನ್ನು ತುಂಬಲು ಉತ್ತಜಿಸುತ್ತದೆ. ದೇಶದ ತಿಳುವಳಿಕೆಯುಳ್ಳ ಮತ್ತು ಜವಾಬ್ದಾರಿಯುತ ನಾಗರಿಕರನ್ನಾಗಿ ತಯಾರಿಸಲು ಸಹಾಯ ಮಾಡುತ್ತದೆ. ಹೀಗಾಗಿ ಇದನ್ನು ಅತ್ಯಂತ ಅರ್ಥಪೂರ್ಣವಾಗಿ ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಸಹಕರಿಸುವಂತೆ ಶೇಖರ್ ಕೋರಿದರು. ವಿಡಿಯೊ ಸಂವಾದದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.