Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಅನೈತಿಕ ಪೊಲೀಸ್ ಗಿರಿ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ : ಸದ್ಯದಲ್ಲೇ ಕ್ರೈಸ್ತ ಅಭಿವೃದ್ಧಿ ನಿಗಮ‌ ಸ್ಥಾಪನೆ* 
ಇತ್ತೀಚಿನ ಸುದ್ದಿಗಳು ಕರ್ನಾಟಕ

ಅನೈತಿಕ ಪೊಲೀಸ್ ಗಿರಿ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ : ಸದ್ಯದಲ್ಲೇ ಕ್ರೈಸ್ತ ಅಭಿವೃದ್ಧಿ ನಿಗಮ‌ ಸ್ಥಾಪನೆ* 

ಸೆಪ್ಟೆಂಬರ್ 8, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಬೆಂಗಳೂರು ಸೆ 8 : ಸೇಂಟ್ ಮೇರಿಯಮ್ಮನವರ ಬೆಸಿಲಿಕಾ ಚರ್ಚ್ ಅತ್ಯಂತ ದೊಡ್ಡ ಭಾವೈಕ್ಯತಾ ಕೇಂದ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ ನಲ್ಲಿ ತಾಯಿ ಮೇರಿ ಜಯಂತೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಬೆಸಿಲಿಕಾ ಪ್ರಾರ್ಥನಾ ಮಂದಿರಕ್ಕೆ ಎಲ್ಲಾ ಜಾತಿ, ಧರ್ಮದವರು ಬರುತ್ತಾರೆ. ಹೀಗಾಗಿ ಇದೊಂದು ಭಾವೈಕ್ಯತಾ ಕೇಂದ್ರವಾಗಿ ರೂಪುಗೊಂಡಿದೆ. ಹೀಗಾಗಿ ನಾನು ಈ ಜಯಂತೋತ್ಸವಕ್ಕೆ ಮತ್ತು ಹಬ್ಬಕ್ಕೆ ಪ್ರತೀ ವರ್ಷ ತಪ್ಪದೆ ಹಾಜರಾಗುತ್ತೇನೆ. ಇದು ನನಗೆ ಬಹಳ ಖುಷಿಯ ಸಂಗತಿ ಎಂದರು.
ಭಾರತವೇ ಒಂದು ಭಾವೈಕ್ಯ ಕೇಂದ್ರ. ಇಲ್ಲಿ ಜಾತಿ-ಧರ್ಮದ ಹೆಸರಿನಲ್ಲಿ ಮನುಷ್ಯ ದ್ವೇಷಕ್ಕೆ ಜಾಗ ಇಲ್ಲ. ಕೆಲವರು ಮನುಷ್ಯ ದ್ವೇಷವನ್ನೇ ಸಂಸ್ಕೃತಿಯನ್ನಾಗಿ ಆಚರಿಸಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ವಾತಾವರಣ ಹರಡಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಭಾರತದ ಭಾವೈಕ್ಯತಾ ಪರಂಪರೆಯನ್ನು ಕಾಪಾಡಲು ಬದ್ದವಾಗಿದೆ ಎಂದರು.
ಯಾವ ಧರ್ಮವೂ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಆದರೆ ಕೆಲವು ಕಪಟಿಗಳು ಧರ್ಮದ ಹೆಸರಿನಲ್ಲಿ ಮನುಷ್ಯರನ್ನು , ಸಮಾಜವನ್ನು ವಿಭಜಿಸುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಇಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ. ಅನೈತಿಕ ಪೊಲೀಸ್ ಗಿರಿ ನೆಪದಲ್ಲಿ ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಅವರಿಗೆ ತಕ್ಕ ಕಾನೂನಿನ ಶಾಸ್ತಿ ಆಗಲಿದೆ ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದರು.
ಕ್ರೈಸ್ತ ಸಮುದಾಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅಪಾರ ಪ್ರಗತಿ ಸಾಧಿಸಿ ನಾಡಿಗೆ ಸೇವೆ ಸಲ್ಲಿಸಿರುವುದಕ್ಕೆ ಮೆಚ್ಚುಗೆ ಸೂಚಿಸಿದರು.
ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ಸೇಂಟ್ ಮೇರೀಸ್ ನಿಲ್ದಾಣ ಎಂದು ಹೆಸರಿಡಬೇಕು ಎನ್ನುವುದೂ ಸೇರಿ ಸಮುದಾಯದ ಮುಖಂಡರು ಮುಂದಿಟ್ಟಿರುವ ಮೂರು ಬೇಡಿಕೆಗಳ ಬಗ್ಗೆ ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಆರ್ಚ್ ಬಿಷಪ್ ಪರಮಪೂಜ್ಯ ಡಾ.ಪೀಟರ್ ಮಚಾದೋ ಸೇರಿ ಹಲವು ಧರ್ಮಗುರುಗಳು ಉಪಸ್ಥಿತರಿದ್ದರು.
::: ಸದ್ಯದಲ್ಲೇ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ :::
ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ನಾವು ಬಜೆಟ್ ನಲ್ಲೇ ಘೋಷಿಸಿದ್ಸೇವೆ. ಇದಕ್ಕಾಗಿ ನೂರು ಕೋಟಿ ರೂಪಾಯಿಗಳನ್ನು ಮೀಸಲಿಟ್ಟು ಆದಷ್ಟು ಬೇಗ ನಿಗಮ ಸ್ಥಾಪಿಸಿ ಅದಕ್ಕೆ ಅರ್ಹ ಅಧ್ಯಕ್ಷರನ್ನು ನೇಮಿಸಲಾಗುವುದು ಎಂದು ಭರವಸೆ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 26, 2026

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 25, 2026

ಪುತ್ತರಿರ ಐನ್ ಮನೆಯಲ್ಲಿ ಸಂಪ್ರದಾಯಬದ್ಧ ಪುತ್ತರಿ ಸಂಭ್ರಮ

ನವೆಂಬರ್ 25, 2026

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಟ್ಟಳ್ಳಿ ನ.25 NEWS DESK : ಚೆಟ್ಟಳ್ಳಿ ಸಮೀಪದ ಶ್ರೀಮಂಗಲದ ಪುರಾತನ ಶ್ರೀ ಭಗವತಿ ದೇವಾಲಯದಲ್ಲಿ ಕೊಡಗಿನ ಪುತ್ತರಿ ಹಬ್ಬದ…

ಪುತ್ತರಿರ ಐನ್ ಮನೆಯಲ್ಲಿ ಸಂಪ್ರದಾಯಬದ್ಧ ಪುತ್ತರಿ ಸಂಭ್ರಮ

ನವೆಂಬರ್ 25, 2026

ಕಂಡಂಗಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶಾರದಾ ಪೂಜೆ

ನವೆಂಬರ್ 25, 2026

ಕುಶಾಲನಗರದಲ್ಲಿ 192ನೇ ಕಾವೇರಿ ಮಹಾ ಆರತಿ : ಕಾವೇರಿ ನದಿ ಕಲುಷಿತವಾಗದಂತೆ ಜಾಗೃತಿ ವಹಿಸಿ : ಹನುಮಂತಪ್ಪ ಅಂಗಡಿ

ನವೆಂಬರ್ 25, 2026

ವೃದ್ಧಾಶ್ರಮದ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

ನವೆಂಬರ್ 25, 2026

ನಾಡಿನಾದ್ಯಂತ ಸಂಭ್ರಮದ ಪುತ್ತರಿ (ಹುತ್ತರಿ) ಆಚರಣೆ : ಧಾನ್ಯಲಕ್ಷ್ಮಿಗೆ ವಿಶೇಷ ಪೂಜೆ : ದೇವಾಲಯಗಳಲ್ಲಿ ಕದಿರು ವಿತರಣೆ

ನವೆಂಬರ್ 25, 2026

ಕದನೂರು ಗ್ರಾಮದಲ್ಲಿ ಸಿಎನ್‌ಸಿ ವತಿಯಿಂದ 33ನೇ ವರ್ಷದ ಪುತ್ತರಿ ನಮ್ಮೆ ಆಚರಣೆ

ನವೆಂಬರ್ 25, 2026

ಜ್ಞಾನಗಂಗಾ ವಸತಿ ಶಾಲೆಯ ಪ್ರಾಂಶುಪಾಲೆ ಜೆ.ಎ.ಸಂಜನಾಗೆ ಅತ್ಯುತ್ತಮ ಪ್ರಾಂಶುಪಾಲೆ ಪ್ರಶಸ್ತಿ

ನವೆಂಬರ್ 24, 2026

ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರೇಡ್-1 ಪ್ರಾಂಶುಪಾಲರಾಗಿ ಡಾ.ಶೋಭಾ ಎಂ.ಎಸ್. ಅಧಿಕಾರ ಸ್ವೀಕಾರ

ನವೆಂಬರ್ 24, 2026

ನ.30 ರಂದು ಮೈಸೂರು ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳ

ನವೆಂಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.