Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಸೆಪ್ಟೆಂಬರ್ 9, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಹುಬ್ಬಳ್ಳಿ ಸೆ.9 : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು.

ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ : ಜೆಡಿಎಸ್ , ಬಿಜೆಪಿಯ ಬಿ ಟೀಂ ಎಂಬುದು ಸತ್ಯವಾಗುತ್ತಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ನಾನು ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಹೇಳಿದಾಗ ಅವರು ನನ್ನ ಮೇಲೆ ಸಿಟ್ಟಾಗಿದ್ದರು. ಜನತಾ ದಳ ಜಾತ್ಯಾತೀತ ಎಂದು ಹೆಸರಿಟ್ಟುಕೊಂಡಿರುವ ಪಕ್ಷ ಕೋಮುವಾದಿಗಳ ಜೊತೆ ಒಂದಾಗಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಯಾವ ಕಾರಣಕ್ಕೂ ಬೇರೆ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ ಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆ ಸೇರಿಕೊಳ್ಳುತ್ತಿರುವುದಾಗಿ ಶಾಸಕ ಜಿ.ಟಿ.ದೇವೇಗೌಡರು ಹೇಳಿರುವುದು, ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ ಎಂದು ತೋರಿಸುತ್ತದೆ. ಅಧಿಕಾರಕ್ಕಾಗಿ ಯಾವುದೇ ಕ್ರಮಕ್ಕೆ ಸಿದ್ಧ ಎಂಬುದನ್ನು ಅವರು ತೋರಿಸಿದ್ದಾರೆ ಎಂದು ತಿಳಿಸಿದರು.

ರೈತರ ತೊಂದರೆಯನ್ನು ನೀಗಿಸಲು ವಿದ್ಯುತ್ ಸರಬರಾಜಿಗೆ ಕ್ರಮ :  ರೈತರು ವಿದ್ಯುತ್ ಸರಬರಾಜಿನ ವ್ಯತ್ಯಯಕ್ಕಾಗಿ ಹೋರಾಟ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಆಗಸ್ಟ್ ತಿಂಗಳಲ್ಲಿ ಸರಿಯಾಗಿ ಮಳೆಯಾಗಿಲ್ಲ, ಬೇಸಿಗೆಯಲ್ಲಿ ಪಂಪಸೆಟ್ ಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಬೇಕು. ಇದರಿಂದ ವಿದ್ಯುತ್ ನ ಹೆಚ್ಚಿನ ಪ್ರಮಾಣದಲ್ಲಿ ಬಳಕೆಯಾಗಿದೆ. ರೈತರ ತೊಂದರೆಯನ್ನು ನೀಗಿಸಲು, ವಿದ್ಯುತ್ ನ್ನು ಹೊರಗಿನಿಂದ ಖರೀದಿಸಿ ವಿದ್ಯುತ್ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಜಿ20 ಸಭೆಗೆ ವಿರೋಧಪಕ್ಷದ ನಾಯಕರನ್ನು ಆಹ್ವಾನಿಸದಿರುವುದು ತಪ್ಪು : ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಸಭೆಗೆ ಕಾಂಗ್ರೆಸ್ ನ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸದಿರುವ ಬಗ್ಗೆ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆಯವರು ಅಧಿಕೃತವಾಗಿ ರಾಜ್ಯಸಭೆಯ ವಿರೋಧಪಕ್ಷದ ನಾಯಕರಾಗಿದ್ದು, ಅವರನ್ನು ಜಿ20 ಸಭೆ ಆಹ್ವಾನಿಸದಿರುವುದು ತಪ್ಪು ಎಂದು ತಿಳಿಸಿದರು.

ಪರಿಹಾರ ಮಾರ್ಗಸೂಚಿ ಪರಿಷ್ಕರಣೆಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ : ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಇದುವರೆಗೆ ಯಾವುದೇ ಉತ್ತರ ಬಂದಿರುವುದಿಲ್ಲ. ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ. ಆದರೆ ಕೇಂದ್ರ ಸರ್ಕಾರದಿಂದಲೂ ಸಕಾಲದಲ್ಲಿ ನೆರವು ಬರಬೇಕಿದೆ ಎಂದರು.

ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿಯಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿಗಳಾಗಬೇಕೆಂದು ಪಕ್ಷದ ಅಭಿಮಾನಿಗಳು ಆಶಿಸುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಪ್ರಧಾನಿಗಳಾಗಬಹುದು. ಅವರ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ . ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಿಂದ ನೇರವಾಗಿ ಪ್ರಧಾನಮಂತ್ರಿಗಳಾದರು. ನನಗೆ ರಾಷ್ಟ್ರ ರಾಜಕಾರಣದಲ್ಲಿ ಯಾವುದೇ ಆಸಕ್ತಿಯಿಲ್ಲ ಎಂದು ತಿಳಿಸಿದರು.

ಕಳಪೆ ಸಮವಸ್ತ್ರ ನೀಡಿದ ವಿರುದ್ಧ ಕ್ರಮ ಕೈಗೊಳ್ಳಲು ತೀರ್ಮಾನ : ಚುನಾವಣೇ ಸಂದರ್ಭದಲ್ಲಿ ಹಿಜಾಬ್, ಹಲಾಲ್ ಪ್ರಕರಣಗಳು, ಹಿಂದುತ್ವ, ಸನಾತನ ಧರ್ಮದ ಕುರಿತು ಚರ್ಚೆ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಜಾಬ್ ಹಲಾಲ್ ಪ್ರಕರಣಗಳು ನ್ಯಾಯಾಲಯದಲ್ಲಿದೆ., ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ಮಕ್ಕಳಿಗೆ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಲು ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳಪೆ ಬಟ್ಟೆ ನೀಡಿರುವುದಕ್ಕೆ ಪಾವತಿಯೂ ಆಗಿರುವುದರಿಂದ, ಸಂಬಂಧಪಟ್ಟವರನ್ನು ಇದಕ್ಕೆ ಜವಾಬ್ದಾರರನ್ನಾಗಿಸಬೇಕೆಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸಂಬಂಧಪಟ್ಟವರಿಂದ ಪಾವತಿಸಲಾಗದ ಮೊತ್ತವನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು.

Follow us Follow us
Share. WhatsApp Facebook Twitter Email Telegram Copy Link

Related Posts

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 26, 2026

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 25, 2026

ಪುತ್ತರಿರ ಐನ್ ಮನೆಯಲ್ಲಿ ಸಂಪ್ರದಾಯಬದ್ಧ ಪುತ್ತರಿ ಸಂಭ್ರಮ

ನವೆಂಬರ್ 25, 2026

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಟ್ಟಳ್ಳಿ ನ.25 NEWS DESK : ಚೆಟ್ಟಳ್ಳಿ ಸಮೀಪದ ಶ್ರೀಮಂಗಲದ ಪುರಾತನ ಶ್ರೀ ಭಗವತಿ ದೇವಾಲಯದಲ್ಲಿ ಕೊಡಗಿನ ಪುತ್ತರಿ ಹಬ್ಬದ…

ಪುತ್ತರಿರ ಐನ್ ಮನೆಯಲ್ಲಿ ಸಂಪ್ರದಾಯಬದ್ಧ ಪುತ್ತರಿ ಸಂಭ್ರಮ

ನವೆಂಬರ್ 25, 2026

ಕಂಡಂಗಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶಾರದಾ ಪೂಜೆ

ನವೆಂಬರ್ 25, 2026

ಕುಶಾಲನಗರದಲ್ಲಿ 192ನೇ ಕಾವೇರಿ ಮಹಾ ಆರತಿ : ಕಾವೇರಿ ನದಿ ಕಲುಷಿತವಾಗದಂತೆ ಜಾಗೃತಿ ವಹಿಸಿ : ಹನುಮಂತಪ್ಪ ಅಂಗಡಿ

ನವೆಂಬರ್ 25, 2026

ವೃದ್ಧಾಶ್ರಮದ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

ನವೆಂಬರ್ 25, 2026

ನಾಡಿನಾದ್ಯಂತ ಸಂಭ್ರಮದ ಪುತ್ತರಿ (ಹುತ್ತರಿ) ಆಚರಣೆ : ಧಾನ್ಯಲಕ್ಷ್ಮಿಗೆ ವಿಶೇಷ ಪೂಜೆ : ದೇವಾಲಯಗಳಲ್ಲಿ ಕದಿರು ವಿತರಣೆ

ನವೆಂಬರ್ 25, 2026

ಕದನೂರು ಗ್ರಾಮದಲ್ಲಿ ಸಿಎನ್‌ಸಿ ವತಿಯಿಂದ 33ನೇ ವರ್ಷದ ಪುತ್ತರಿ ನಮ್ಮೆ ಆಚರಣೆ

ನವೆಂಬರ್ 25, 2026

ಜ್ಞಾನಗಂಗಾ ವಸತಿ ಶಾಲೆಯ ಪ್ರಾಂಶುಪಾಲೆ ಜೆ.ಎ.ಸಂಜನಾಗೆ ಅತ್ಯುತ್ತಮ ಪ್ರಾಂಶುಪಾಲೆ ಪ್ರಶಸ್ತಿ

ನವೆಂಬರ್ 24, 2026

ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರೇಡ್-1 ಪ್ರಾಂಶುಪಾಲರಾಗಿ ಡಾ.ಶೋಭಾ ಎಂ.ಎಸ್. ಅಧಿಕಾರ ಸ್ವೀಕಾರ

ನವೆಂಬರ್ 24, 2026

ನ.30 ರಂದು ಮೈಸೂರು ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳ

ನವೆಂಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.