Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರದ್ಧಾಭಕ್ತಿಯಿಂದ ಜರುಗಿದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರತಿಷ್ಠಾ ವರ್ಧಂತಿ ಮಹೋತ್ಸವ*
  • *ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*
  • *ಮೇ 6 ರಿಂದ 10ರವರೆಗೆ “ಕೊಡಗು ಕಪ್” ಜಮಾಅತ್ ಮಟ್ಟದ ಕ್ರಿಕೆಟ್ ಪಂದ್ಯಾವಳಿ*
  • *ಎಡಮ್ಯಾರ್ ಮಾಸಿಕ ಸ್ಮರಣಾರ್ಥ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪುಷ್ಪನಮನ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರ ವಿಜೇತ ತಂಡಗಳು*
  • *ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯದಲ್ಲಿ ವಾರ್ಷಿಕ ಪ್ರತಿಷ್ಠಾ ದಿನಾಚರಣೆ : ನೂತನವಾಗಿ ನವಗ್ರಹ ಪ್ರತಿಷ್ಠಾಪನೆ*
  • *ಭಯೋತ್ಪಾದಕ ಹೇಳಿಕೆ : ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕೊಡಗು ಬಿಜೆಪಿ ತೀವ್ರ ಅಸಮಾಧಾನ*
  • *ಕಾಂಗ್ರೆಸ್ ವಿರುದ್ಧ ಸುನ್ನಿ ಸಮನ್ವಯ ಸಮಿತಿ ಅಸಮಾಧಾನ : ಮುಸ್ಲಿಮರನ್ನು ಕಡೆಗಣಿಸದಂತೆ ಆಗ್ರಹ*
  • *ಅಕ್ಕಪಡೆಯಿಂದ ಮಡಿಕೇರಿಯ ವಿವಿಧೆಡೆ ತುರ್ತು ಸಹಾಯವಾಣಿಗಳ ಕುರಿತು ಜಾಗೃತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ : ಪ್ರಾಣತ್ಯಾಗ ಮಾಡಿದ ಅರಣ್ಯ ಸಿಬ್ಬಂದಿಗಳಿಗೆ ಗೌರವ ಅರ್ಪಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ : ಪ್ರಾಣತ್ಯಾಗ ಮಾಡಿದ ಅರಣ್ಯ ಸಿಬ್ಬಂದಿಗಳಿಗೆ ಗೌರವ ಅರ್ಪಣೆ*

ಸೆಪ್ಟೆಂಬರ್ 11, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.11 : ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯು ನಗರದ ಅರಣ್ಯ ಭವನದಲ್ಲಿ ಸೋಮವಾರ ನಡೆಯಿತು. ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತು ಸಂರಕ್ಷಿಸುವ ಸಂದರ್ಭದಲ್ಲಿ ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಏರ್ ಮಾರ್ಷಲ್ (ನಿವೃತ್ತ) ಕೆ.ಸಿ.ಕಾರ್ಯಪ್ಪ, ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ತ್ರಿಪಾಠಿ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು, ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ, ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎಂ.ಶರಣಬಸಪ್ಪ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಸ್.ಚAಗಪ್ಪ ಇತರರು ಅರಣ್ಯ ಹುತಾತ್ಮ ಸ್ಮಾರಕಕ್ಕೆ ಹೂಗುಚ್ಛ ಸಮರ್ಪಿಸಿ, ಗೌರವ ಸಲ್ಲಿಸಿದರು.
ಏರ್ ಮಾರ್ಷಲ್ (ನಿವೃತ್ತ) ಕೆ.ಸಿ.ಕಾರ್ಯಪ್ಪ ಅವರು ಮಾತನಾಡಿ ಮಾನವ ಮತ್ತು ವನ್ಯಜೀವಿ ಸಂಘರ್ಷವನ್ನು ತಡೆಯಬೇಕಿದೆ ಎಂದರು.
ಅರಣ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವುದು ಸವಾಲಿನ ಕೆಲಸವಾಗಿದೆ. ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುವವರಿಗೆ ಆರೋಗ್ಯ ಸೇವೆ ಸೇರಿದಂತೆ ಕಲ್ಯಾಣ ಸೇವೆಗಳು ತಲುಪಬೇಕು ಎಂದರು.
ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವುದು ಕಠಿಣವಾಗಿದ್ದು, ಎಲ್ಲಾ ಹಂತದ ಸಿಬ್ಬಂದಿಗಳು ತಮ್ಮ ಹಾಗೂ ಸಾರ್ವಜನಿಕರ ಸುರಕ್ಷತೆ ಕಡೆಗೂ ಗಮನಹರಿಸಬೇಕಿದೆ ಎಂದು ಸಲಹೆ ಮಾಡಿದರು.
ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ ಅರಣ್ಯವಿದ್ದಲ್ಲಿ ಉತ್ತಮ ಪರಿಸರ ಉಳಿಯಲು ಸಾಧ್ಯ. ಒಳ್ಳೆಯ ಪರಿಸರ ಇದ್ದಲ್ಲಿ ಮಳೆ-ಬೆಳೆ ಕಾಣಲು ಸಾಧ್ಯ ಎಂದು ಹೇಳಿದರು.
ಅರಣ್ಯ ಇಲಾಖೆಯ ಸಿಬ್ಬಂದಿಗಳು ದೇಶದ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ಮಾಡಿದ ತ್ಯಾಗ ಮತ್ತು ಬಲಿದಾನಗಳ ಸ್ಮರಣೆಗಾಗಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ದೇಶಾದ್ಯಂತ ಆಚರಿಸಲಾಗುತ್ತದೆ ಎಂದರು.
ಅರಣ್ಯ ಹುತಾತ್ಮರ ದಿನಾಚರಣೆಯ ಪಕ್ಷಿನೋಟ ಮತ್ತು ಅರಣ್ಯ ಹುತಾತ್ಮರ ಸ್ಮರಣೆಯನ್ನು ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ ಅವರು ಓದಿದರು.
ಜೋಧುಪುರ್‌ನ ಮಹಾರಾಜ ಅಭಯ್‌ಸಿಂಗ್‌ನ ಸೈನಿಕರು ಕೇಜರ್ಲಿ ಪ್ರಾಂತ್ಯದಲ್ಲಿ ಬೆಳೆದಿದ್ದ ಮರಗಳನ್ನು, ರಾಜನ ಹೊಸ ಅರಮನೆಗೆ ಅವಶ್ಯವಿದ್ದ ಕಾರಣ, ಕಡಿಯಲು ವಿರೋದಿಸಿದ ಬಿಷ್ಣೋಯಿ ಸಮುದಾಯದ ಒಟ್ಟು 363 ಸಂಖ್ಯೆಯ ಪುರುಷ, ಮಹಿಳೆ ಮತ್ತು ಮಕ್ಕಳನ್ನು 1730 ರ ಸೆಪ್ಟೆಂಬರ್, 11 ರಂದು ಕೊಲ್ಲಲಾಯಿತು. ಮರಗಳ ಸಂರಕ್ಷಣೆಗಾಗಿ ಬಲಿದಾನ ಹೊಂದಿದ ಬಿಷ್ಣೋಯಿಗಳ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಲು ಭಾರತ ಸರ್ಕಾರ ಈ ದಿನವನ್ನು ‘ರಾಷ್ಟ್ರೀಯ ಅರಣ್ಯ ಹುತಾತ್ಮ ದಿನ’ ಎಂದು ಘೋಷಿಸಿದೆ.
ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿ ಸರ್ವೋಚ್ಛ ತ್ಯಾಗವನ್ನು ಮಾಡಿ ಸಮರ್ಪಣಾ ಮನೋಭಾವದ ಹಲವಾರು ಅರಣ್ಯ ಅಧಿಕಾರಿಗಳ ಹೆಸರುಗಳು ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಇಂದಿಗೂ ಹಚ್ಚ ಹಸಿರಾಗಿದೆ. ಇವರ ಅಸಾಧಾರಣ ಪ್ರಯತ್ನಗಳು, ಧೈರ್ಯಶೀಲ ಕಾರ್ಯಗಳು ಮತ್ತು ಸರ್ವೋಚ್ಛ ತ್ಯಾಗಗಳು, ಅಪಾಯಕ್ಕೆ ಒಳಗಾದ, ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸಿ ಕಾಪಾಡಲು ಮುಂದಿನ ಪೀಳಿಗೆಗೆ ಸ್ಪೂರ್ತಿದಾಯಕವಾಗಿದೆ.
ಇಂತಹ ಆದರ್ಶ ವ್ಯಕ್ತಿಗಳಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ದಿವಂಗತ ಪಿ.ಶ್ರೀನಿವಾಸ್ ಭಾ.ಅ.ಸೇ. ಅವರು ಕೂಡ ಒಬ್ಬರು. ‘ಕಾಡಿಗಾಗಿ ಜನನ, ಕಾಡಿಗಾಗಿ ಜೀವನ, ಕಾಡಿಗಾಗಿ ಮರಣ’ ಎಂಬುದನ್ನೇ ತತ್ವಗಳನ್ನಾಗಿ ಇಟ್ಟುಕೊಂಡಿದ್ದ ಕರ್ನಾಟಕ ಅರಣ್ಯ ಇಲಾಖೆಯ ‘ವೀರ ಅಭಿಮನ್ಯು’ ಎಂದೇ ಕರೆಯಬಹುದಾದ ದಿವಂಗತ ಪಿ.ಶ್ರೀನಿವಾಸ್ ಅವರು ದಂತಚೋರ ಮತ್ತು ಕುಖ್ಯಾತ ಶ್ರೀಗಂಧ ಚೋರ, ಕಳ್ಳಸಾಗಾಣಿಕೆದಾರ, ಕಾಡುಗಳ್ಳ ವೀರಪ್ಪನ್‌ನ ನಯವಂಚನೆಯ ಚಕ್ರವ್ಯೂಹದಲ್ಲಿ ಸಿಲುಕಿ 1991 ರ ನವೆಂಬರ್, 10 ರಂದು ವಿಧಿವಶರಾದರು.
ದಿವಂಗತ ಪಿ.ಶ್ರೀನಿವಾಸ್ ಇವರ ಕಾರ್ಯದಕ್ಷತೆಯನ್ನು ಮೆಚ್ಚಿ ಭಾರತ ಸರ್ಕಾರವು ಇವರಿಗೆ ‘ಕೀರ್ತಿಚಕ್ರ’ ಎಂಬ ಶೌರ್ಯ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಿ ಗೌರವಿಸಿದೆ. ಹಾಗೂ ವೀರಪ್ಪನ್‌ನ ವಂಚನೆಯಿoದ ಹುತಾತ್ಮರಾದ ಕೊಳ್ಳೆಗಾಲದ ಅರಣ್ಯ ರಕ್ಷಕರಾದ ಬಿ.ಸಿ.ಮೋಹನಯ್ಯ ಅವರ ತ್ಯಾಗವನ್ನು ಈ ಸಂದರ್ಭದಲ್ಲಿ ಸ್ಮರಿಸಬೇಕಿದೆ. ಹಾಗೆಯೇ ಶಿರಸಿಯ ಮರಗಳ್ಳರ ಕ್ರೌರ್ಯಕ್ಕೆ ಬಲಿಯಾದ ವಲಯ ಅರಣ್ಯಾಧಿಕಾರಿ ಅರವಿಂದ್ ಹೆಗೆಡೆ ಅವರ ಶೌರ್ಯ ಕೂಡ ಸ್ಮರಣೀಯವಾಗಿದೆ ಎಂದು ಎ.ಟಿ.ಪೂವಯ್ಯ ಅವರು ಓದಿದರು.
ಅರಣ್ಯ ಇಲಾಖೆಯ ಸಿದ್ದಲಿಂಗಪ್ಪ ಅವರು ಪೆರೇಡ್ ನಡೆಸಿಕೊಟ್ಟರು. ಪೊಲೀಸ್ ಇಲಾಖೆಯ ಸಿದ್ದೇಶ್ ಮತ್ತು ತಂಡದವರು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ಪಾಲ್ಗೊಂಡು ಗೌರವ ಸಲ್ಲಿಸಿದರು. ವಲಯ ಅರಣ್ಯ ಸಂರಕ್ಷಣಾಧಿಕಾರಿ ಗಾನಶ್ರೀ ನಿರೂಪಿಸಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರದ್ಧಾಭಕ್ತಿಯಿಂದ ಜರುಗಿದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರತಿಷ್ಠಾ ವರ್ಧಂತಿ ಮಹೋತ್ಸವ*

ಏಪ್ರಿಲ್ 21, 2026

*ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*

ಏಪ್ರಿಲ್ 21, 2026

*ಮೇ 6 ರಿಂದ 10ರವರೆಗೆ “ಕೊಡಗು ಕಪ್” ಜಮಾಅತ್ ಮಟ್ಟದ ಕ್ರಿಕೆಟ್ ಪಂದ್ಯಾವಳಿ*

ಏಪ್ರಿಲ್ 21, 2026

*ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*

ಏಪ್ರಿಲ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.21 NEWS DESK : ಕೊಡಗಿನಲ್ಲಿ ಕೃಷಿ, ಕಾಫಿ, ಏಲಕ್ಕಿ, ಕಾಳು ಮೆಣಸು ಸೇರಿದಂತೆ ಪ್ರಮುಖ ಕೖಷಿ ಇಂದು…

*ಮೇ 6 ರಿಂದ 10ರವರೆಗೆ “ಕೊಡಗು ಕಪ್” ಜಮಾಅತ್ ಮಟ್ಟದ ಕ್ರಿಕೆಟ್ ಪಂದ್ಯಾವಳಿ*

ಏಪ್ರಿಲ್ 21, 2026

*ಎಡಮ್ಯಾರ್ ಮಾಸಿಕ ಸ್ಮರಣಾರ್ಥ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪುಷ್ಪನಮನ*

ಏಪ್ರಿಲ್ 21, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 21, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರ ವಿಜೇತ ತಂಡಗಳು*

ಏಪ್ರಿಲ್ 21, 2026

*ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯದಲ್ಲಿ ವಾರ್ಷಿಕ ಪ್ರತಿಷ್ಠಾ ದಿನಾಚರಣೆ : ನೂತನವಾಗಿ ನವಗ್ರಹ ಪ್ರತಿಷ್ಠಾಪನೆ*

ಏಪ್ರಿಲ್ 21, 2026

*ಭಯೋತ್ಪಾದಕ ಹೇಳಿಕೆ : ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕೊಡಗು ಬಿಜೆಪಿ ತೀವ್ರ ಅಸಮಾಧಾನ*

ಏಪ್ರಿಲ್ 21, 2026

*ಕಾಂಗ್ರೆಸ್ ವಿರುದ್ಧ ಸುನ್ನಿ ಸಮನ್ವಯ ಸಮಿತಿ ಅಸಮಾಧಾನ : ಮುಸ್ಲಿಮರನ್ನು ಕಡೆಗಣಿಸದಂತೆ ಆಗ್ರಹ*

ಏಪ್ರಿಲ್ 21, 2026

*ಅಕ್ಕಪಡೆಯಿಂದ ಮಡಿಕೇರಿಯ ವಿವಿಧೆಡೆ ತುರ್ತು ಸಹಾಯವಾಣಿಗಳ ಕುರಿತು ಜಾಗೃತಿ*

ಏಪ್ರಿಲ್ 20, 2026

*ಚಿಕ್ಕತ್ತೂರುವಿನಲ್ಲಿ ಹುಲಿ ಮಿತ್ರ ಕ್ರಿಕೆಟ್ ಪಂದ್ಯಾವಳಿ : ದುಬಾರೆ ಟೈಗರ್‌ ತಂಡ ಪ್ರಥಮ*

ಏಪ್ರಿಲ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.