Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು, ಅಧಿಕಾರಿಗಳು Not Reachable ಆಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು, ಅಧಿಕಾರಿಗಳು Not Reachable ಆಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ*

ಸೆಪ್ಟೆಂಬರ್ 12, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಸೆ.12: ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು. ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಅಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ವಾಸವಿದ್ದು, ಜನರ ಸೇವೆಗೆ ಲಭ್ಯರಿರಬೇಕು. ಅಧಿಕಾರಿಗಳು ಕಚೇರಿಯಲ್ಲಿರಬೇಕು, ಇಲ್ಲ ಪ್ರವಾಸದಲ್ಲಿರಬೇಕು. ಮನೆಯಲ್ಲಿ ಕುಳಿತು ಕೆಲಸ ಮಾಡಬಾರದು. Work from home ಗೆ ಅವಕಾಶವಿಲ್ಲ. ಇದರಿಂದ ಜನರಿಗೆ ತೊಂದರೆಯಾಗುವುದನ್ನು ಸರ್ಕಾರ ಸಹಿಸುವುದಿಲ್ಲ.

ಹಾಗೆಯೇ ಅಧಿಕಾರಿಗಳು ದೂರವಾಣಿ ಕರೆಗೆ ಸಿಗುವುದಿಲ್ಲ ಎಂಬ ದೂರುಗಳೂ ಸಾರ್ವಜನಿಕರು, ಶಾಸಕರು ಮತ್ತು ಮಂತ್ರಿಗಳಿಂದ ಇವೆ. ಇದು ಒಳ್ಳೆಯದಲ್ಲ. ಮುಖ್ಯಮಂತ್ರಿ ಕಚೇರಿಯಿಂದ ಇರಲಿ, ಸಚಿವರಿರಲಿ, ಶಾಸಕರಿರಲಿ, ಜನಸಾಮಾನ್ಯರಿರಲಿ ಅವರ ಕರೆಗಳಿಗೆ ಸ್ಪಂದಿಸಬೇಕು. ಯಾವುದೇ ಪಕ್ಷದ ಶಾಸಕರುಗಳಿರಲಿ ಪ್ರೋಟೋಕಾಲ್ ಚಾಚೂ ತಪ್ಪದೆ ಪಾಲಿಸಬೇಕು ಎನ್ನುವ ಸೂಚನೆ ನೀಡಿದರು.

ಅಧಿಕಾರಿಗಳಿಗೆ ಹೃದಯ ಸರಿಯಾಗಿ ಕೆಲಸ ಮಾಡಬೇಕು. ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು. ನಿಮ್ಮ ನಿರ್ಲಕ್ಷ್ಯ ಮತ್ತು ಉಡಾಫೆತನದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದರೆ ನಾವು ಸುಮ್ಮನೆ ಕೈರುವುದಿಲ್ಲ ಎಂದು ಎಚ್ಚರಿಸಿದರು.

ಖಾಸಗಿ ಲೇವಾದೇವಿದಾರರು-ಬ್ಯಾಂಕ್ ಗಳಿಂದ ರೈತರಿಗೆ ಕಿರುಕುಳ ಸಹಿಸಲ್ಲ :  ರಾಜ್ಯದಲ್ಲಿ 251 ರೈತರ ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, 174 ಪ್ರಕರಣಗಳಷ್ಟೇ ಇತ್ಯರ್ಥವಾಗಿದೆ. ಉಳಿದ ಪ್ರಕರಣಗಳನ್ನೂ ಶೀಘ್ರವೇ ವಿಲೇವಾರಿ ಮಾಡಿ, ಪರಿಹಾರ ವಿತರಿಸಬೇಕು. ಇದರಲ್ಲಿ ವಿಳಂಬ ಸರಿಯಲ್ಲ.
ಬರ ಘೋಷಣೆಯಾದ ನಂತರ ಖಾಸಗಿ ಲೇವಾದೇವಿದಾರರ ಮೇಲೆ ನಿಗಾ ಇಡಬೇಕು. ಬ್ಯಾಂಕುಗಳು ರೈತರಿಗೆ ಕಿರುಕುಳ ಕೊಡದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಅಧಿಕಾರಿಗಳಿಗೆ ಸೌಲಭ್ಯ ನೀಡುವುದು, ಜನರ ಸಮಸ್ಯೆಗೆ ಸ್ಪಂದಿಸಿ ಉತ್ತಮವಾಗಿ ಕೆಲಸ ಮಾಡಬೇಕೆಂಬ ಉದ್ದೇಶದಿಂದ. ನೀವು ಚೆನ್ನಾಗಿ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ. ಕೆಲಸ ಮಾಡದಿದ್ದರೆ ಕೆಟ್ಟ ಹೆಸರು ಬರುತ್ತದೆ. ಅದಕ್ಕೋಸ್ಕರ ನಿಮ್ಮ ಧೋರಣೆಯನ್ನು ಬದಲಾಯಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದರು.

ಆರೋಗ್ಯ ಇಲಾಖೆಯಲ್ಲಿ ವೈದ್ಯರು ಲಭ್ಯವಿರುವುದಿಲ್ಲ. ಅರೆ ವೈದ್ಯಕೀಯ ಸಿಬ್ಬಂದಿಯೇ ವೈದ್ಯರ ಪಾತ್ರ ನಿರ್ವಹಿಸುವುದು, ಔಷಧ ಪ್ರಿಸ್ಕ್ರಿಪ್ಷನ್‌ ಬರೆಯುವುದು ಇವೆಲ್ಲ ಆಗಬಾರದು. ವೈದ್ಯರು ತಮ್ಮ ಕೇಂದ್ರ ಸ್ಥಾನದಲ್ಲಿಯೇ ಇದ್ದುಕೊಂಡು ಜನರ ಕಷ್ಟಗಳಿಗೆ ಸ್ಪಂದಿಸಬೇಕು ಎನ್ನುವ ಸೂಚನೆ ನೀಡಿದರು.

ಸಿಎಂ ನೀಡಿದ ಇತರೆ ಸೂಚನೆಗಳು :  ಸ್ಮಶಾನಗಳಿಗೆ ಮತ್ತು ಖಬರ್‌ಸ್ತಾನ್‌ಗಳಿಗೆ ಕೂಡಲೇ ಜಾಗ ಒದಗಿಸಬೇಕು. ಶಾಲಾ ಕಟ್ಟಡ, ಅಂಗನವಾಡಿ, ಆರೋಗ್ಯ ಕೇಂದ್ರ ಸ್ಮಶಾನಗಳಿಗೆ ಜಾಗ ಕೂಡಲೇ ಗುರುತಿಸಿ ಕೊಡಬೇಕು,  ಸಾರ್ವಜನಿಕರಿಗೆ ಭೇಟಿ ಸಮಯ ನಿಗದಿ ಮಾಡಬೇಕು, ಕೇಂದ್ರ ಕಚೇರಿಯಲ್ಲಿರುವಾಗ ಸಾರ್ವಜನಿಕರಿಗೆ ಸಮಯ ನಿಗದಿ ಮಾಡಬೇಕು. ಆ ಸಮಯದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ, ಕೂಡಲೇ ಪರಿಹಾರ ಒದಗಿಸಬೇಕು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲೆಯ ಹಿರಿಯ ಅಧಿಕಾರಿಗಳು ಹಾಸ್ಟೆಲುಗಳು, ಆಸ್ಪತ್ರೆಗಳಿಗೆ ಭೇಟಿ ನೀಡಬೇಕು, ಜಿಲ್ಲಾಧಿಕಾರಿಗಳು ಅಧೀನ ಕಚೇರಿಗಳಿಗೆ ಭೇಟಿ ನೀಡಬೇಕು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.