ಮಡಿಕೇರಿ ಸೆ.12 : ಮಾಲ್ದಾರೆ ಭಾಗದಲ್ಲಿ ವನ್ಯಜೀವಿಗಳ ದಾಳಿ ಎಲ್ಲೆ ಮೀರಿದೆ. ಕಾಡಾನೆಗಳ ಹಿಂಡಿನ ಸಂಚಾರದ ನಡುವೆಯೇ ಹುಲಿ ಉಪಟಳವೂ ಹೆಚ್ಚಾಗಿದ್ದು, ಇಂದು ಹಸುವೊಂದು ಹುಲಿ ದಾಳಿಗೆ ಬಲಿಯಾಗಿದೆ.
ಕಾರ್ಮಿಕ ಸ್ವಾಮಿ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ಹಾಡಹಗಲೇ ಹುಲಿ ಬಲಿ ಪಡೆದಿದೆ. ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಅವರು ಸ್ಥಳ ಪರಿಶೀಲನೆ ನಡೆಸಿ ಸ್ವಾಮಿ ಅವರಿಂದ ಮಾಹಿತಿ ಪಡೆದರು.
ಹುಲಿ ಉಪಟಳದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.








