Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಿಫಾ ವೈರಸ್ : ಅಗತ್ಯ ಮುನ್ನೆಚ್ಚರ ವಹಿಸಲು ಡಾ.ಸತೀಶ್ ಕುಮಾರ್ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಿಫಾ ವೈರಸ್ : ಅಗತ್ಯ ಮುನ್ನೆಚ್ಚರ ವಹಿಸಲು ಡಾ.ಸತೀಶ್ ಕುಮಾರ್ ಮನವಿ*

ಸೆಪ್ಟೆಂಬರ್ 13, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.13 : ಇದೀಗ ನಿಫಾ ವೈರಸ್ ಕೇರಳ ರಾಜ್ಯದಲ್ಲಿ ವರದಿಯಾದ ಹಿನ್ನಲೆಯಲ್ಲಿ ಗಡಿ ಜಿಲ್ಲೆಯಾದ ಕೊಡಗು ಜಿಲ್ಲೆಯಲ್ಲೂ ಕೂಡ ಕಟ್ಟೆಚ್ಚರ ವಹಿಸುವಂತೆ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಸತೀಶ್ ಕುಮಾರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
‘ನಿಫಾ’ ವೈರಸ್ ಕಾಯಿಲೆಯು 1998 ಮತ್ತು 1999 ನೇ ಇಸವಿಯಲ್ಲಿ, ಮಲೇಷಿಯಾ ಮತ್ತು ಸಿಂಗಪೂರ ದೇಶಗಳಲ್ಲಿನ ಮನೆಯಲ್ಲಿ ಸಾಕಿರುವ ಹಂದಿಗಳಲ್ಲಿ ಪತ್ತೆಯಾಗಿದೆ. ಮಲೇಷಿಯಾ ದೇಶದ ನಿಫಾ ಗ್ರಾಮದಲ್ಲಿ ಈ ವೈರಸ್ ಪ್ರಭೇದವನ್ನು ಪ್ರಪ್ರಥಮವಾಗಿ ಕಂಡು ಹಿಡಿಯಲಾಗಿದೆ. ಮನೆಯಲ್ಲಿ ಸಾಕುವ ನಾಯಿ, ಬೆಕ್ಕು, ಮೇಕೆ, ಕುದುರೆ ಮತ್ತು ಕೆಲವು ಸಂದರ್ಭದಲ್ಲಿ ಕುರಿಗಳಿಗಳೂ ಸಹ ಸೋಂಕಿಗೆ ತುತ್ತಾಗುವ ಸಂಭವವಿರುತ್ತದೆ.
ಈ ಕಾಯಿಲೆಯು 2001 ರಲ್ಲಿ ಪಶ್ಚಿಮ ಬಂಗಾಳದ ಸಿಲಿಗುರಿ ಗ್ರಾಮದಲ್ಲಿ ಈ ಮೊದಲು ಕಾಣಿಸಿಕೊಂಡಿತ್ತು ಅಲ್ಲದೆ ನೆರೆಯ ಬಾಂಗ್ಲಾ ದೇಶದಲ್ಲಿ 2003, 2004, 2005, 2007 ಹಾಗೂ 2008 ರಲ್ಲಿ ಕಾಣಿಸಿಕೊಂಡಿತ್ತು. ಒಟ್ಟಾರೆ ಮಲೇಷಿಯಾ, ಸಿಂಗಪೂರ್ ಬಾಂಗ್ಲಾದೇಶ ಮತ್ತು ಭಾರತದಲ್ಲಿ ಈವರೆಗೆ 477 ಖಚಿತ ಪ್ರಕರಣಗಳು ವರದಿಯಾಗಿದೆ.
ಅವುಗಳಲ್ಲಿ 248 ಸಾವುಗಳು ಸಂಭವಿಸಿದೆ. 2018 ರಲ್ಲಿ ಕೇರಳದಲ್ಲಿ 14 ಖಚಿತ ನಿಫಾ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ 11 ಸಾವುಗಳು ಸಂಭವಿಸಿದೆ. 2021 ಕೇರಳ ರಾಜ್ಯದಲ್ಲಿ ಒಂದು ನಿಫಾ ವೈರಸ್ ರೋಗದ ಪ್ರಕರಣ ವರದಿಯಾಗಿದೆ. ಆ ದಿಸೆಯಲ್ಲಿ 2023 ರಲ್ಲಿ 04 ಸಂಶಯಾಸ್ಪದ ನಿಫಾ ವೈರಸ್ ರೋಗದ ಪ್ರಕರಣಗಳು ಕಂಡುಬಂದಿದೆ.
ನಿಪಾ ವೈರಸ್‍ಜ್ವರದ ರೋಗ ಲಕ್ಷಣಗಳು : ಜ್ವರ, ತಲೆ ನೋವು, ವಾಂತಿ, ತಲೆ ಸುತ್ತುವಿಕೆ ಬರುವುದು. ಪ್ರಜ್ಞಾಹೀನತೆಗೆ ಒಳಗಾಗುವುದು. ಅತೀಯಾದ ಜ್ವರ ಮೆದುಳಿಗೆ ವ್ಯಾಪಿಸುವುದು. ಮಾತುಗಳಲ್ಲಿ ತೊದಲುವಿಕೆ ಹಾಗೂ ಅಪಸ್ವರದ ಲಕ್ಷಣಗಳು ಕಾಣಿಸಿಕೊಳ್ಳುವುದು. ಕೆಲವು ಬಾರಿ ಸೂಕ್ತ ಚಿಕಿತ್ಸೆ ಲಭಿಸದಿದ್ದರೆ ಸಾವು ಸಂಭವಿಸಬಹುದು. ಸೊಂಕಿತ ದಿನದಿಂದ 4 ರಿಂದ 18 ದಿನಗಳಲ್ಲಿ ನಿಪಾ ವೈರಸ್ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.
ನಿಪಾ ವೈರಸ್ ಜ್ವರ ಹರಡುವ ವಿಧಾನ : ಸೋಂಕಿತ ಬಾವಲಿಗಳ ನೇರ ಸಂಪರ್ಕದಿಂದ ಹಾಗೂ ಬಾವಲಿಗಳು ಬಿಸಾಡಿದ ಹಣ್ಣು ಹಂಪಲುಗಳನ್ನು ಸೇವಿಸುವುದರ ಮೂಲಕ ಇತರ ಪ್ರಾಣಿಗಳಿಗೆ ಹರಡುತ್ತದೆ. ಸೋಂಕಿತ ಪ್ರಾಣಿಗಳಿಂದ ಇತರೆ ಪ್ರಾಣಿಗಳಿಗೆ ಮಲ, ಮೂತ್ರ, ಜೊಲ್ಲು ಮತ್ತು ರಕ್ತ ಇವುಗಳ ನೇರ ಸಂಪರ್ಕದಿಂದ ಹರಡುತ್ತದೆ. ಸೋಂಕಿತ ಬಾವಲಿಗಳು ಕಚ್ಚಿದ ಹಣ್ಣುಗಳನ್ನು ಸೇವಿಸುವುದರಿಂದ ಮನುಷ್ಯರಿಗೆ ಹರಡುತ್ತದೆ. ಸೋಂಕಿತ ಮನುಷ್ಯನ ಮಲ, ಮೂತ್ರ, ಜೊಲ್ಲು ಮತ್ತು ರಕ್ತ ಇವುಗಳ ನೇರ ಸಂಪರ್ಕದಿಂದ ಆರೋಗ್ಯವಂತ ಮನುಷ್ಯರಿಗೆ ಹರಡುತ್ತದೆ.
ರೋಗ ನಿರ್ಧಾರ ಮಾಡುವ ವಿಧಾನ: ಸೊಂಕಿತ ವ್ಯಕ್ತಿಯ ಗಂಟಲಿನ ದ್ರವಗಳ ಮಾದರಿಯನ್ನು ಪಡೆದು, ಪ್ರಯೋಗಾಲಯದಲ್ಲಿ ಪರೀಕ್ಷಿಸಿ ದೃಢಪಡಿಸಬಹುದು. ಪ್ರಸ್ತುತ ಈ ಪರೀಕ್ಷೆಯನ್ನು ರಾಷ್ಟ್ರೀಯ ವೈರಾಣು ಸಂಸ್ಥೆ (NIV)ಪುಣೆ ಇಲ್ಲಿ ನಡೆಸಲಾಗುತ್ತದೆ.
ಮುಂಜಾಗ್ರತಾ ಕ್ರಮಗಳು  : ಯಾವುದೇ ರೀತಿಯ ಜ್ವರ ಕಂಡು ಬಂದಲ್ಲಿ ಉದಾಸೀನ ಮಾಡದೇ ಹಾಗೂ ನಿಪಾ ವೈರಸ್ ಲಕ್ಷಗಳಿರುವ ಜ್ವರಕಂಡು ಬಂದಲ್ಲಿ ತಕ್ಷಣ ವೈದ್ಯರ ಸಲಹೆ ಪಡೆಯುವುದು.
ರೋಗಿಗಳ ಜೊತೆ ಕಾರ್ಯನಿರ್ವಹಿಸುವ ಸಿಬ್ಬಂದಿ ಮಾಸ್ಕ್, ಕೈಕವಚ ಧರಿಸುವುದು ಮುಂತಾದ ವೈಯಕ್ತಿಕ ಸ್ವಚ್ಛತೆಗೆ ಹೆಚ್ಚು ಗಮನ ಕೊಡುವುದು. ಯಾವುದೇ ಪ್ರಾಣಿ ಪಕ್ಷಿಗಳು ಕಚ್ಚಿದ ಹಾಗೂ ಮಳೆಗಾಳಿಯಿಂದ ಬಿದ್ದಿರುವ ಹಣ್ಣುಗಳನ್ನು ಸೇವಿಸಬಾರದು ಬೀದಿ ಬದಿಗಳಲ್ಲಿ ಕತ್ತರಿಸಿ ಮಾರುವ ಹಣ್ಣು ಹಂಪಲುಗಳನ್ನು ಸೇವಿಸಬಾರದು. ನೀರಾ ಇಳಿಸುವವರು ವೈಯಕ್ತಿಕ ಸ್ವಚ್ಛತೆ ಕಾಪಾಡುವುದು ಹಾಗೂ ಸರಿಯಾಗಿ ಕೈ ಕಾಲುಗಳನ್ನು ಸೋಪಿನಿಂದ ತೊಳೆಯುವುದು. ಶುಚಿಗೊಳಿಸದ ಕೈಗಳಿಂದ ಕಣ್ಣು ಮತ್ತು ಮೂಗುಗಳನ್ನು ಉಜ್ಜಬಾರದು. ಕಚ್ಚಾ ಖರ್ಜೂರಗಳನ್ನು ಸೇವಿಸದಿರುವುದು. ಸಂಸ್ಕರಿಸಿಲ್ಲದೇ ಯಾವುದೇ ‘ಡ್ರೈ ಪ್ರೂಟ್’ ಗಳನ್ನು ಉಪಯೋಗಿಸದಿರುವುದು. ಸಂಸ್ಕರಿಸಿಲ್ಲದ `Fresh palm dates fruit juice’ ಗಳನ್ನುಉಪಯೋಗಿಸದಿರುವುದು.
ಹಂದಿ ಸಾಕಾಣಿಕಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಯಾವುದೇ ರೀತಿಯ ಗಾಯ ಅಥವಾ ಸೊಂಕಿಗೆ ಒಳಗಾಗಿದ್ದಲ್ಲಿ ಸೂಕ್ತ ಚಿಕಿತ್ಸೆಗೆ ಒಳಪಡುವುದು. ಸೊಂಕಿತ ಮತ್ತು ಕಾಯಿಲೆಯ ಹಂದಿಗಳನ್ನು ನೇರ ಸಂಪರ್ಕಿಸದಿರುವುದು. ಬಾವಲಿಗಳ ಹೆಚ್ಚಿರುವ ಪ್ರದೇಶಗಳಲ್ಲಿ ಸಂಗ್ರಹಣೆ ಮಾಡುವ ಶೇಂದಿ ಮತ್ತು ಪಾನೀಯಗಳನ್ನು ಸೇವಿಸದಿರುವುದು. ಬಾವಲಿಗಳು ಹೆಚ್ಚಿರುವ ಪ್ರದೇಶಗಳಲ್ಲಿರುವ ತೆರೆದ ಬಾವಿಯ ನೀರನ್ನು ಶುದ್ದೀಕರಿಸಿ ಸೇವಿಸುವುದು ಹಾಗೂ ಬಾವಿಗಳನ್ನು ಬಲೆಗಳಿಂದ ಮುಚ್ಚಿ ಬಾವಲಿಗಳು ಒಳ ಪ್ರವೇಶಿಸದಂತೆ ನೋಡಿಕೊಳ್ಳುವುದು.
ಕೊಡಗು ಜಿಲ್ಲೆಯ ನೆರೆರಾಜ್ಯ ಕೇರಳಕ್ಕೆ ಹೊಂದಿಕೊಂಡಿರುವುದರಿಂದ ಜಿಲ್ಲೆಯಲ್ಲಿ ತೀವ್ರಾ ನಿಗಾವಣೆ ಮತ್ತು ಸಕ್ರಿಯ ಸಮೀಕ್ಷೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಈ ವೈರಸ್‍ಜ್ವರವು ನೇರ ಸಂಪರ್ಕದಿಂದ ಹರಡುವುದರಿಂದ ಸೊಂಕಿತ ವ್ಯಕ್ತಿ ಮತ್ತು ಪ್ರಾಣಿಗಳಿಂದ (ನಾಯಿ, ಬೆಕ್ಕು, ಮೇಕೆ, ಕುದುರೆ ಮತ್ತು ಕೆಲವು ಸಂದರ್ಭದಲ್ಲಿ ಕುರಿಗಳು) ದೂರವಿರುವುದು ಸೂಕ್ತವಾಗಿದೆ ಅಲ್ಲದೆ ಸಾರ್ವಜನಿಕರು ಅತಂಕಕ್ಕೆ ಒಳಗಾಗುವ ಅವಶ್ಯಕತೆ ಇರುವುದಿಲ್ಲ. ಯಾವುದೇ ಜ್ವರವಿರಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಸತೀಶ್ ಕುಮಾರ್ ಕೋರಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.