ಮಡಿಕೇರಿ ಸೆ.13 : ಕರ್ನಾಟಕ ಲೋಕಾಯುಕ್ತ ಮಡಿಕೇರಿ ಕಚೇರಿಯ ಡಿವೈಎಸ್‍ಪಿ ಎಂ.ಎಸ್.ಪವನ್ ಕುಮಾರ್ ಅವರು ಕುಶಾಲನಗರ ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಕುಂದುಕೊರತೆ ಆಲಿಸಿದರು.
ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 1, ಕುಶಾಲನಗರ ಪುರಸಭೆಗೆ ಸಂಬಂಧಿಸಿದಂತೆ 2, ಗ್ರಾ.ಪಂ.ಸಂಬಂಧಿಸಿದಂತೆ 2, ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ 1 ದೂರು ಅರ್ಜಿಗಳು ಸ್ವೀಕೃತವಾಗಿದ್ದು, ಸಂಬಂಧಪಟ್ಟ ಇಲಾಖೆಗೆ ಅರ್ಜಿಗಳನ್ನು ವಿಲೇವಾರಿ ಮಾಡಿ ವರದಿ ನೀಡುವಂತೆ ನಿರ್ದೇಶನ ನೀಡಲಾಗಿದೆ ಎಂದು ಲೋಕಾಯುಕ್ತ ಡಿವೈಎಸ್‍ಪಿ ತಿಳಿಸಿದ್ದಾರೆ.







