Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಂಗ್ರೆಸ್ ವಿರುದ್ಧ ಸುನ್ನಿ ಸಮನ್ವಯ ಸಮಿತಿ ಅಸಮಾಧಾನ : ಮುಸ್ಲಿಮರನ್ನು ಕಡೆಗಣಿಸದಂತೆ ಆಗ್ರಹ*
  • *ಅಕ್ಕಪಡೆಯಿಂದ ಮಡಿಕೇರಿಯ ವಿವಿಧೆಡೆ ತುರ್ತು ಸಹಾಯವಾಣಿಗಳ ಕುರಿತು ಜಾಗೃತಿ*
  • *ಚಿಕ್ಕತ್ತೂರುವಿನಲ್ಲಿ ಹುಲಿ ಮಿತ್ರ ಕ್ರಿಕೆಟ್ ಪಂದ್ಯಾವಳಿ : ದುಬಾರೆ ಟೈಗರ್‌ ತಂಡ ಪ್ರಥಮ*
  • *ಕೊಡಗು ಸೈನಿಕ ಶಾಲೆಯಲ್ಲಿ ದಕ್ಷಿಣ ವಲಯದ ಅಂತರ ಗುಂಪು ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ಗೆಲುವು ಸಾಧಿಸಿದ ತಂಡಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರಂದು ನಡೆಯುವ ಪಂದ್ಯಗಳು*
  • *ಲೇಖಕ ಅನಂತರಾಜ ಗೌಡ ನಿಧನ*
  • *ವಿದ್ಯುತ್ ದರ ಏರಿಕೆ : ರಾಜ್ಯ ಸರಕಾರದ ವಿರುದ್ಧ ವಿರಾಜಪೇಟೆ ಬಿಜೆಪಿ ಅಸಮಾಧಾನ*
  • *ವಿಕಾಸ್ ಜನತಾ ಸೇವಾ ಟ್ರಸ್ಟ್ ನ ನೂತನ ವ್ಯವಸ್ಥಾಪನಾ ಸಮಿತಿ ರಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೌರಿ-ಗಣೇಶ ಹಬ್ಬ ಆಚರಣೆ : ನಿಯಮ ಪಾಲಿಸಿ, ಜಿಲ್ಲಾಡಳಿತ ಜತೆ ಸಹಕರಿಸಲು ಜಿ.ಪಂ.ಸಿಇಒ ವರ್ಣಿತ್ ನೇಗಿ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೌರಿ-ಗಣೇಶ ಹಬ್ಬ ಆಚರಣೆ : ನಿಯಮ ಪಾಲಿಸಿ, ಜಿಲ್ಲಾಡಳಿತ ಜತೆ ಸಹಕರಿಸಲು ಜಿ.ಪಂ.ಸಿಇಒ ವರ್ಣಿತ್ ನೇಗಿ ಮನವಿ*

ಸೆಪ್ಟೆಂಬರ್ 14, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.14 : ಗೌರಿ-ಗಣೇಶ ಹಬ್ಬ ಆಚರಣೆ ಸಂಬಂಧ ಅಗತ್ಯ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ಎಲ್ಲರೂ ಜಿಲ್ಲಾಡಳಿತದ ಜೊತೆ ಸಹಕರಿಸುವಂತೆ ವರ್ಣಿತ್ ನೇಗಿ ಅವರು ಕೋರಿದರು.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಗೌರಿ-ಗಣೇಶ ಹಬ್ಬ ಆಚರಿಸುವ ಸಂಬಂಧ ಹಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅದನ್ನು ಪಾಲಿಸುವಂತೆ ಜಿ.ಪಂ.ಸಿಇಒ  ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ,  ಮಾತನಾಡಿ ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಆ ನಿಟ್ಟಿನಲ್ಲಿ ಕಾನೂನು ಮತ್ತು ನಿಯಮಗಳನ್ನು ಚಾಚು ತಪ್ಪದೆ ಪಾಲಿಸಬೇಕು. ಏನಾದರೂ ಸಮಸ್ಯೆಗಳು ಇದ್ದಲ್ಲಿ ಗಮನಕ್ಕೆ ತರುವಂತೆ ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಡಿಕೇರಿ ನಗರದ ಚೇತನ್,  ನಗರದ ಗೌರಿ ಕೆರೆಯಲ್ಲಿ ಹೂಳು ತುಂಬಿದ್ದು, ಹೂಳು ತೆಗೆಯಬೇಕಿದೆ. ಜೊತೆಗೆ ಸ್ವಚ್ಚತಾ ಕಾರ್ಯ ಆಗಬೇಕು. ವಿದ್ಯುತ್ ವ್ಯವಸ್ಥೆ ಮಾಡಬೇಕು. ಹದಗೆಟ್ಟಿರುವ ರಸ್ತೆಯನ್ನು ಸರಿಪಡಿಸಬೇಕು ಎಂದು  ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಸ್ಥಳೀಯ ಸಂಸ್ಥೆಗಳು ಕಾರ್ಯನಿರ್ವಹಿಸಲಿವೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.
ನಗರಸಭೆ ಸದಸ್ಯರಾದ ಅರುಣ್ ಶೆಟ್ಟಿ ಅವರು ಮಾತನಾಡಿ ಗೌರಿ-ಗಣೇಶ ವಿಸರ್ಜನೆ ಸಂದರ್ಭದಲ್ಲಿ ನಗರದ ಗಣಪತಿ ಬೀದಿಯಿಂದ ಮಹದೇವ ಪೇಟೆ ಮತ್ತು ಬನ್ನಿ ಮಂಟಪದವರೆಗೆ ಸಂಚಾರ ದಟ್ಟಣೆಯನ್ನು ನಿಯಂತ್ರಣ ಮಾಡಬೇಕು ಎಂದು ಕೋರಿದರು.

ಯುವ ಒಕ್ಕೂಟದ ಅಧ್ಯಕ್ಷರಾದ ಪಿ.ಪಿ.ಸುಕುಮಾರ್ ಮಾತನಾಡಿ ಹಾಕತ್ತೂರು ಬಳಿಯ ತೊಂಬತ್ತುಮನೆಯ ಭಜನಾ ಮಂದಿರ ಬಳಿ ವಿದ್ಯುತ್ ಮಾರ್ಗ ಹಾದು ಹೋಗಿದ್ದು, ವಿದ್ಯುತ್ ತಂತಿ ತಾಗುವಂತಿದೆ. ಇದನ್ನು ಸರಿಪಡಿಸಬೇಕು ಎಂದರು.
ಸಿದ್ದಾಪುರದ ಪ್ರಮುಖರೊಬ್ಬರು ಗೌರಿ-ಗಣೇಶ ವಿಸರ್ಜನೆ ಸಂದರ್ಭದಲ್ಲಿ ಲೈಟಿಂಗ್ ವ್ಯವಸ್ಥೆ ಮಾಡುವಂತಾಗಬೇಕು ಎಂದು ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ.ಸಿಇಒ ಅವರು ಸ್ಥಳೀಯವಾಗಿ ಕೆಲವು ಕಾಮಗಾರಿಗಳು ಆಗಬೇಕಿದ್ದಲ್ಲಿ, ಸ್ಥಳೀಯ ಗ್ರಾ.ಪಂ., ಪುರಸಭೆ, ಪಟ್ಟಣ ಪಂಚಾಯಿತಿ, ನಗರಸಭೆ ಗಮನಕ್ಕೆ ತರುವಂತೆ ಸಲಹೆ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ ಗೌರಿ ಗಣೇಶ ಹಬ್ಬ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಅತೀ ಮುಖ್ಯವಾಗಿದೆ. ವೇಗವಾಗಿ ವಾಹನ ಚಲಾಯಿಸುವುದು ಸೇರಿದಂತೆ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ಮಾಡಬಾರದು ಎಂದು ಸಲಹೆ ಮಾಡಿದರು.
ಬ್ಯಾನರ್ ಮತ್ತು ಪೋಸ್ಟರ್ ಅಳವಡಿಸಲು ಸ್ಥಳೀಯ ಸಂಸ್ಥೆ ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕು. ಧ್ವನಿವರ್ಧಕ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್ ನಿಯಮಗಳನ್ನು ಪಾಲಿಸಬೇಕು. ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕ ಬಳಸಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರೊಬ್ಬರು ಗೌರಿ-ಗಣೇಶ ವಿಸರ್ಜನೆ ಸಂದರ್ಭದಲ್ಲಿ ಪೊಲೀಸರು ಬೇಗ ಹೊರಡಿ, ಬೇಗ ಹೊರಡಿ ಎಂದು ಹೇಳುತ್ತಾರೆ. ಸಂಘಟಕರು ಇದರಿಂದ ಕಿರಿಕಿರಿ ಆಗುತ್ತದೆ ಎಂದರು.
ಇದಕ್ಕೆ ಧ್ವನಿಗೂಡಿಸಿ ಮಾತನಾಡಿದ ಚೇತನ್ ಅವರು ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತದೆ. ಆದರೆ ಪೊಲೀಸ್ ಇಲಾಖೆಯವರು 5 ಲಕ್ಷ ರೂ.ಬಾಂಡ್‍ನ್ನು ಬರೆಸಿಕೊಳ್ಳುವುದು ಏಕೆ ಎಂದು ಪ್ರಶ್ನಿಸಿದರು.
ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಯಮವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು  ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪಿ.ಪಿ.ಸುಕುಮಾರ್ ಅವರು ಧ್ವನಿವರ್ಧಕ ಬಳಕೆ ಸಂಬಂಧಿಸಿದಂತೆ ನಿಯಮವನ್ನು ಸರಳೀಕರಣ ಮಾಡಬೇಕು ಎಂದು ಕೋರಿದರು.
ಸಭೆಯ ಆರಂಭದಲ್ಲಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಬಣ್ಣ ರಹಿತ ಮಣ್ಣಿನ ಗಣೇಶ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ. ನಂತರ ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಸ್ಥಳಗಳಲ್ಲಿಯೇ ಮೂರ್ತಿ ವಿಸರ್ಜಿಸಬೇಕು.
ನಗರ ಪಟ್ಟಣಗಳಲ್ಲಿ ಅನಧಿಕೃತ ಪ್ಲೆಕ್ಸ್, ಪ್ಲಾಸ್ಟಿಕ್ ಬ್ಯಾನರ್‍ಗಳನ್ನು ಅಳವಡಿಸಲು ಅನುಮತಿ ಪಡೆಯಬೇಕು. ಸಾರ್ವಜನಿಕವಾಗಿ ಗಣೇಶ ವಿಗ್ರಹಗಳನ್ನು ಇಡಲು ಇಚ್ಚಿಸುವ ಸಮಿತಿಯವರು ಉತ್ಸವ ಆಚರಿಸಲು ಬೇಕಾಗುವ ಪೂರ್ವ ತಯಾರಿಗೆ ಸಂಬಂಧಿಸಿದಂತೆ, ಧ್ವನಿವರ್ಧಕಗಳಿಗೆ ಸಂಬಂಧಿಸಿದಂತೆ ಹಾಗೂ ಇತರೆ ಪರವಾನಗಿಗಳಿಗೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರಗಳಿಂದ ಅನುಮೋದನೆ ಪಡೆಯುವುದು ಕಡ್ಡಾಯವಾಗಿದೆ ಎಂದು ಹೆಚ್ಚುವರಿ ಜಿಲ್ಲಧಿಕಾರಿ ಅವರು ತಿಳಿಸಿದರು.
ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಗಣೇಶ ಪೆಂಡಾಲ್‍ಗಳಲ್ಲಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳಾದ ಬಲೂನ್‍ಗಳು, ಬಲೂನ್‍ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್‍ಗಳು, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್‍ಗಳು, ಪ್ಲಾಸ್ಟಿಕ್ ಐಸ್‍ಕ್ರೀಮ್ ಸ್ಟಿಕ್‍ಗಳು, ಅಲಂಕಾರಕ್ಕಾಗಿ ಬಳಸುವ ಪಾಲಿಸ್ಟೈರೀನ್(ಥರ್ಮೊಕೋಲ್) ಬಳಸದಂತೆ ನಿಗಾವಹಿಸುವುದು.
ಎಲ್ಲಾ ರೀತಿಯ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‍ಗಳು (ಕಾಂಪೋಸ್ಟೇಬಲ್, ಬಯೋ ಡಿಗ್ರಿಡೇಬಲ್ ಇತರೆ) ಪ್ಲಾಸ್ಟಿಕ್ ಧ್ವಜಗಳು, ಅಂಟಿಕೊಳ್ಳುವ ಫಿಲ್ಮ್‍ಗಳು, ಡೈನಿಂಗ್ ಟೇಬಲ್‍ನಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆಗಳು, ಸ್ಟ್ರಾಗಳು, ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳು, ಪ್ಲಾಸ್ಟಿಕ್ ಪ್ಲೇಟ್‍ಗಳು, ಪ್ಲಾಸ್ಟಿಕ್ ಕಪ್‍ಗಳು ಮತ್ತು ಲೋಟಗಳು, ಪೋರ್ಕ್, ಚಮಚ, ಚಾಕುಗಳು, ಪ್ಲಾಸ್ಟಿಕ್ ಟ್ರೇಗಳು, ಸ್ವೀಟ್ ಬಾಕ್ಸ್‍ಗಳು, ಆಮಂತ್ರಣ ಪತ್ರಗಳು, ಸ್ವೀಟ್ ಪ್ಯಾಕೆಟ್‍ಗಳ ಸುತ್ತ ಸುತ್ತುವ ಪದರ ಅಥವಾ ಪ್ಯಾಕಿಂಗ್ ಫಿಲ್ಮ್‍ಗಳು ಮತ್ತು ಪ್ಲಾಸ್ಟಿಕ್ ಸ್ಟಿಕರ್‍ಗಳನ್ನು ಬಳಸದಂತೆ ಕ್ರಮವಹಿಸುವುದು ಎಂದು ತಿಳಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾಂಗ್ರೆಸ್ ವಿರುದ್ಧ ಸುನ್ನಿ ಸಮನ್ವಯ ಸಮಿತಿ ಅಸಮಾಧಾನ : ಮುಸ್ಲಿಮರನ್ನು ಕಡೆಗಣಿಸದಂತೆ ಆಗ್ರಹ*

ಏಪ್ರಿಲ್ 21, 2026

*ಅಕ್ಕಪಡೆಯಿಂದ ಮಡಿಕೇರಿಯ ವಿವಿಧೆಡೆ ತುರ್ತು ಸಹಾಯವಾಣಿಗಳ ಕುರಿತು ಜಾಗೃತಿ*

ಏಪ್ರಿಲ್ 20, 2026

*ಚಿಕ್ಕತ್ತೂರುವಿನಲ್ಲಿ ಹುಲಿ ಮಿತ್ರ ಕ್ರಿಕೆಟ್ ಪಂದ್ಯಾವಳಿ : ದುಬಾರೆ ಟೈಗರ್‌ ತಂಡ ಪ್ರಥಮ*

ಏಪ್ರಿಲ್ 20, 2026

*ಅಕ್ಕಪಡೆಯಿಂದ ಮಡಿಕೇರಿಯ ವಿವಿಧೆಡೆ ತುರ್ತು ಸಹಾಯವಾಣಿಗಳ ಕುರಿತು ಜಾಗೃತಿ*

ಏಪ್ರಿಲ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.20 NEWS DESK : ಅಕ್ಕಪಡೆ ವತಿಯಿಂದ ಮಡಿಕೇರಿಯ ವಿವಿಧೆಡೆ ತುರ್ತು ಸಹಾಯವಾಣಿಯ ಕುರಿತು ಅರಿವು ಮೂಡಿಸಲಾಯಿತು. ಅಕ್ಕಪಡೆ…

*ಚಿಕ್ಕತ್ತೂರುವಿನಲ್ಲಿ ಹುಲಿ ಮಿತ್ರ ಕ್ರಿಕೆಟ್ ಪಂದ್ಯಾವಳಿ : ದುಬಾರೆ ಟೈಗರ್‌ ತಂಡ ಪ್ರಥಮ*

ಏಪ್ರಿಲ್ 20, 2026

*ಕೊಡಗು ಸೈನಿಕ ಶಾಲೆಯಲ್ಲಿ ದಕ್ಷಿಣ ವಲಯದ ಅಂತರ ಗುಂಪು ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಏಪ್ರಿಲ್ 20, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 20, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 20, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 20, 2026

*ಲೇಖಕ ಅನಂತರಾಜ ಗೌಡ ನಿಧನ*

ಏಪ್ರಿಲ್ 20, 2026

*ವಿದ್ಯುತ್ ದರ ಏರಿಕೆ : ರಾಜ್ಯ ಸರಕಾರದ ವಿರುದ್ಧ ವಿರಾಜಪೇಟೆ ಬಿಜೆಪಿ ಅಸಮಾಧಾನ*

ಏಪ್ರಿಲ್ 20, 2026

*ವಿಕಾಸ್ ಜನತಾ ಸೇವಾ ಟ್ರಸ್ಟ್ ನ ನೂತನ ವ್ಯವಸ್ಥಾಪನಾ ಸಮಿತಿ ರಚನೆ*

ಏಪ್ರಿಲ್ 20, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.