Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
  • *ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*
  • *ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*
  • *ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*
  • *’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*
  • *ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*
  • *ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *
  • *ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*
  • *ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂವಿಧಾನ ಪೀಠಿಕೆ ವಾಚನ : ವಿಶ್ವದಲ್ಲಿಯೇ ಮಾದರಿ ಸಂವಿಧಾನ ನಮ್ಮದು : ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಂವಿಧಾನ ಪೀಠಿಕೆ ವಾಚನ : ವಿಶ್ವದಲ್ಲಿಯೇ ಮಾದರಿ ಸಂವಿಧಾನ ನಮ್ಮದು : ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ*

ಸೆಪ್ಟೆಂಬರ್ 15, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.15 : ಇಡೀ ವಿಶ್ವದಲ್ಲಿಯೇ ಮಾದರಿ ಸಂವಿಧಾನವನ್ನು ಹೊಂದಿರುವ ಭಾರತವು ಏಕತೆ ಮತ್ತು ಭ್ರಾತೃತ್ವವನ್ನು ಸಾರಿದೆ. ಸಮಾನತೆ, ಸಾರ್ವಭೌಮ, ಸಮಾಜವಾದಿ, ಜಾತ್ಯಾತೀತ ಹಾಗೂ ಪ್ರಜಾಸತ್ತಾತ್ಮಕ ಗಣರಾಜ್ಯವನ್ನು ಹೊಂದಿದೆ ಎಂದು ನಗರಸಭಾ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಶುಕ್ರವಾರ ನಡೆದ ‘ಸಂವಿಧಾನ ಪೀಠಿಕೆ ವಾಚನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಂವಿಧಾನ ಪೀಠಿಕೆ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು ಒಳಗೊಂಡಿದ್ದು, ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವತಂತ್ರವನ್ನು ಸಂವಿಧಾನದ ಪೀಠಿಕೆಯಲ್ಲಿ ಪ್ರಸ್ತಾಪಿಸಲಾಗಿದೆ ಎಂದರು.
ಭಾರತೀಯ ಪ್ರಜೆಗಳಾದ ಎಲ್ಲರಿಗೂ ಸಮಾನ ಸ್ಥಾನಮಾನ ಮತ್ತು ಅವಕಾಶಗಳು ದೊರೆಯುವಂತೆ ಮಾಡುವುದು ಸಂವಿಧಾನದ ಆಶಯವಾಗಿದೆ. ವ್ಯಕ್ತಿ ಗೌರವ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲಿ ಭ್ರಾತೃತ್ವ ಭಾವನೆಯನ್ನು ಮೂಡಿಸುವುದಕ್ಕೆ ದೃಢಸಂಕಲ್ಪ ಮಾಡಬೇಕಿದೆ ಎಂದು ಅನಿತಾ ಪೂವಯ್ಯ ಅವರು ವಿವರಿಸಿದರು.
ಭಾರತ ಸಂವಿಧಾನ ಸಭೆಯಲ್ಲಿ ನಮಗೆ ನಾವೇ ಅರ್ಪಿಸಿಕೊಂಡು ಅಂಗೀಕರಿಸಿ ಶಾಸನವಾಗಿ ವಿಧಿಸಿಕೊಂಡಿದ್ದೇವೆ. ಆ ನಿಟ್ಟಿನಲ್ಲಿ ಪ್ರಜಾಪ್ರಭುತ್ವ ಬಲಪಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ವಿಶ್ವದಲ್ಲಿಯೇ ಮಾದರಿಯಾದ ಅತ್ಯುತ್ತಮ ಸಂವಿಧಾನವನ್ನು ಭಾರತೀಯರಿಗೆ ನೀಡಿದ್ದಾರೆ ಎಂದು ಅನಿತಾ ಪೂವಯ್ಯ ಅವರು ಹೇಳಿದರು.
ಇಡೀ ವಿಶ್ವದಲ್ಲಿಯೇ ಅತೀ ದೊಡ್ಡ ಪ್ರಜಾಪ್ರಭುತ್ವವನ್ನು ರಾಷ್ಟ್ರ ಒಳಗೊಂಡಿದ್ದು, ಪ್ರಜೆಗಳ ಆಳ್ವಿಕೆ ಪ್ರಜಾಪ್ರಭುತ್ವದಲ್ಲಿ ಕಾಣಬಹುದಾಗಿದೆ. ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಪಾಲಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಅದನ್ನು ಅರಿತುಕೊಂಡು ಸಂವಿಧಾನ ಉಳಿಸಬೇಕು. ಎಲ್ಲರಿಗೂ ಸಮಾನ ಅವಕಾಶಗಳು ದೊರೆಯಬೇಕು. ಅವುಗಳನ್ನು ಬಳಸಿಕೊಂಡು ಪ್ರತಿಯೊಬ್ಬರೂ ಉತ್ತಮ ಬದುಕು ನಡೆಸುವಂತಾಗಬೇಕು ಎಂದರು.
ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳು ಇದ್ದು, ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕಿದೆ. ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗಗಳು ಸಂವಿಧಾನ ಅಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತವೆ ಎಂದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ ಭಾರತ ರಾಷ್ಟ್ರದಲ್ಲಿ ಸಂವಿಧಾನವೇ ಪ್ರತಿಯೊಬ್ಬರಿಗೂ ಜೀವಾಳವಾಗಿದೆ. ಸಂವಿಧಾನವಿಲ್ಲದೆ ಜೀವನ ಇಲ್ಲ ಎಂದರು.
ಸಂವಿಧಾನದಿಂದ ಹಲವು ಕಾನೂನು ಸೌಲಭ್ಯಗಳು ಪ್ರತಿಯೊಬ್ಬರಿಗೂ ತಲುಪಲಿವೆ. ಆ ದಿಸೆಯಲ್ಲಿ ಭಾರತೀಯ ಪ್ರಜೆಗಳಿಗೆ ತಮ್ಮ ಹಕ್ಕುಗಳನ್ನು ಪಡೆಯುವುದರ ಜೊತೆಗೆ ಕರ್ತವ್ಯಗಳನ್ನು ಪಾಲಿಸಬೇಕು ಎಂದು ಕರೆ ನೀಡಿದರು.
ಹೆಚ್ವುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ, ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಅದರ ಸಮಸ್ತ ನಾಗರಿಕರಿಗೆ: ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ: ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ್ಯ: ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ, ಅವರಲ್ಲಿ ಭ್ರಾತೃತ್ವಭಾವನೆಯನ್ನು ವೃದ್ಧಿಗೊಳಿಸಲು ಶ್ರದ್ಧಾಪೂರ್ವಕವಾಗಿ ಸಂಕಲ್ಪ ಮಾಡಿದವರಾಗಿ: ನಮ್ಮ ಸಂವಿಧಾನ ಸಭೆಯಲ್ಲಿ 1949, ನವೆಂಬರ್ 26 ರಂದು ಸಂವಿಧಾನವನ್ನು ಅಂಗೀಕರಿಸಿ, ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ” ಎಂದು ಸಂವಿಧಾನ ಪೀಠಿಕೆಯನ್ನು ವಾಚಿಸಿದರು.
ಇದೊಂದು ಗಿನ್ನಿಸ್ ದಾಖಲೆಯಾಗಿದೆ. ಪ್ರತಿಯೊಬ್ಬರ ಬದುಕು ಹಸನಾಗಲು ಸಂವಿಧಾನವೇ ಮೂಲ ಎಂಬುದನ್ನು ಅರಿತುಕೊಳ್ಳಬೇಕು. ಎಲ್ಲಾ ವರ್ಗದ ಜನರಿಗೂ ಸಂವಿಧಾನವು ಸಮಾನ ಅವಕಾಶ ಕಲ್ಪಿಸಿದೆ. ಸಂವಿಧಾನದ ಪೀಠಿಕೆಯೇ ಆತ್ಮ ಮತ್ತು ಹೃದಯವಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು.
ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯವನ್ನು ಪಾಲಿಸಬೇಕು. ರಾಜ್ಯ ನಿರ್ದೇಶಕ ತತ್ವಗಳನ್ನು ತಿಳಿದುಕೊಳ್ಳಬೇಕು. ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯವನ್ನು ಅರ್ಥಮಾಡಿಕೊಳ್ಳಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ 54 ಸಾವಿರ ಗುರಿಯಲ್ಲಿ 2.80 ಲಕ್ಷ ಜನರು ಹೆಸರು ನೋಂದಣಿ ಮಾಡಿ ಸಂವಿಧಾನ ಪೀಠಿಕೆ ವಾಚನಕ್ಕೆ ಅಭೂತ ಪೂರ್ವ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಭೆಯ ಆರಂಭದಲ್ಲಿ ಸಂವಿಧಾನ ಪೀಠಿಕೆ ಹಾಗೂ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಗಣ್ಯರು ನೆರವೇರಿಸಿದರು. ಸಂವಿಧಾನ ಪೀಠಿಕೆಯ ಭಾವಚಿತ್ರವನ್ನು ಗಣ್ಯರಿಗೆ ಹಸ್ತಾಂತರ ಮಾಡಲಾಯಿತು.
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸತೀಶ್, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಮುನೀರ್ ಅಹಮ್ಮದ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್, ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ಬಿಸಿಎಂ ಇಲಾಖೆ ಅಧಿಕಾರಿ ಮಂಜುನಾಥ್, ತಹಶೀಲ್ದಾರ್ ಪ್ರವೀಣ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ದಿವಾಕರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಸೌಮ್ಯ ಪೊನ್ನಪ್ಪ, ಪೌರಾಯುಕ್ತರಾದ ವಿಜಯ್, ಪಶುಪಾಲನೆ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ, ಕೈಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ರಘು, ನಬಾರ್ಡ್ ವ್ಯವಸ್ಥಾಪಕರಾದ ಗಂಗಾಧರ ನಾಯಕ್, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು, ಇತರರು ಇದ್ದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿನಿಧಿಗಳು ನಾಡಗೀತೆ ಮತ್ತು ರಾಷ್ಟ್ರಗೀತೆ ಹಾಡಿದರು. ರಮೇಶ್ ನಿರೂಪಿಸಿ, ವಂದಿಸಿದರು. ‘ಸಂವಿಧಾನ ಪೀಠಿಕೆ ವಾಚನ’ ರಾಜ್ಯ ಮಟ್ಟದ ಕಾರ್ಯಕ್ರಮ ವೀಕ್ಷಣೆಗೆ ವರ್ಚುವಲ್ ಮೂಲಕ ಅವಕಾಶ ಮಾಡಲಾಗಿತ್ತು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಮಾ:೦೪: ವಿದ್ಯಾರ್ಥಿ ಜೀವನವು ಹಲವು ಒತ್ತಡಗಳಿಂದ ನಿರ್ಮಾಣವಾಗುತ್ತಿದೆ ಎನ್ನುವುದು ಸುಳ್ಳು.ಕಲಿಕೆ ಮತ್ತು ಸಾಮಾಜಿಕ ಚಿಂತನೆಯನ್ನು ಸಮಾನವಾಗಿ…

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*

ಮಾರ್ಚ್ 4, 2026

*ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*

ಮಾರ್ಚ್ 4, 2026

*’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*

ಮಾರ್ಚ್ 4, 2026

*ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*

ಮಾರ್ಚ್ 4, 2026

*ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *

ಮಾರ್ಚ್ 4, 2026

*ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*

ಮಾರ್ಚ್ 4, 2026

*ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*

ಮಾರ್ಚ್ 4, 2026

*ವಲಸೆ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.