Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
  • *ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*
  • *ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*
  • *ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*
  • *’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*
  • *ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*
  • *ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *
  • *ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*
  • *ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ : ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಪಾದಯಾತ್ರೆ ಆರಂಭಿಸಿದ ಸಿಎನ್‌ಸಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ : ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಪಾದಯಾತ್ರೆ ಆರಂಭಿಸಿದ ಸಿಎನ್‌ಸಿ*

ಸೆಪ್ಟೆಂಬರ್ 15, 20235 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.15 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ಸಂವಿಧಾನದತ್ತವಾದ 9 ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಜನ್ಮದಿನವಾದ ಇಂದು ತೀರ್ಥಕ್ಷೇತ್ರ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಪಾದಯಾತ್ರೆಯನ್ನು ಆರಂಭಿಸಿತು.
ಕೊಡಗು ಜಿಲ್ಲೆಯ ವಿವಿಧೆಡೆ ಐದು ಹಂತಗಳಲ್ಲಿ ಪಾದಯಾತ್ರೆ ನಡೆಯಲಿದೆ. ಶುಕ್ರವಾರ ಬೆಳಗ್ಗೆ ತಲಕಾವೇರಿಯಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಯೋಗಕ್ಷೇಮಕ್ಕಾಗಿ ವಿಶೇಷ ಪೂಜೆ ಸಲ್ಲಿಸಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ಪ್ರಾರ್ಥನೆ ಸಲ್ಲಿಸಿದರು. ನಂತರ ಕೊಡವ ಲ್ಯಾಂಡ್ ಪರ ಘೋಷಣೆಯೊಂದಿಗೆ ಪಾದಯಾತ್ರೆ ಆರಂಭಗೊಂಡಿತು.
ತಲಕಾವೇರಿ (ತಾವುನಾಡ್), ದೇವಟ್ ಪರಂಬ್ (ದೇಶ ಮಂದ್), ಮಚ್ಚುರೋಡೆ ಮಂದ್ (ಬಲ್ಲತ್ ನಾಡ್) ಮತ್ತು ಬೇಂಗ್ ನಾಡ್ ಮಂದ್ (ಚೇರಂಬಾಣೆ) ಯಲ್ಲಿ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಪಾದಯಾತ್ರೆಯ ಉದ್ದೇಶದ ಕುರಿತು ಮಾತನಾಡಿದರು.
ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಬೇಡಿಕೆ ಈಡೇರುವವರೆಗೆ ಸಂವಿಧಾನದ ಚೌಕಟ್ಟಿನಡಿ ಸಿಎನ್‌ಸಿ ಸಂಘಟನೆ ಶಾಂತಿಯುತ ಹೋರಾಟವನ್ನು ಮುಂದುವರೆಸಲಿದೆ. ತಲಕಾವೇರಿಯಿಂದ ಆರಂಭಗೊಂಡಿರುವ ಈ ಪಾದಯಾತ್ರೆ 5 ಹಂತಗಳಲ್ಲಿ ನಡೆಯಲಿದ್ದು, ಮಾರ್ಗದುದ್ದಕ್ಕೂ ಕೊಡವರನ್ನು ಭೇಟಿ ಮಾಡಲಾಗುವುದು. ಪ್ರತಿ ನಾಡ ಮಂದ್‌ಗಳಲ್ಲಿ ಸಭೆ ನಡೆಸಿ ಜನಜಾಗೃತಿ ಮೂಡಿಸುವುದರೊಂದಿಗೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.
ಸಿಎನ್‌ಸಿಯ 9 ಬೇಡಿಕೆಗಳ ಕುರಿತು ಪಾದಯಾತ್ರೆ ಸಂದರ್ಭ ಜನಜಾಗೃತಿ ಮೂಡಿಸಿ ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ಹೇಳಿದರು.
ಭೌಗೋಳಿಕ-ರಾಜಕೀಯ ಸ್ವಾಯತ್ತತೆಯು ಯುಎನ್/ವಿಶ್ವ ರಾಷ್ಟ್ರ ಸಂಸ್ಥೆ ಚಾರ್ಟರ್‌ನಲ್ಲಿ ಪ್ರತಿಪಾದಿಸಲ್ಪಟ್ಟ ನಿರ್ದಿಷ್ಟ ಪ್ರದೇಶದ ಪ್ರಾಚೀನ ಸೂಕ್ಷ್ಮ ರೇಸ್ ಅನ್ನು ರಕ್ಷಿಸಲು, ಉತ್ತೇಜಿಸಲು ಮತ್ತು ಪುನರುಜ್ಜೀವನಗೊಳಿಸಲು ಮೂಲಭೂತ ನೀತಿಯಾಗಿ ಸಾಂವಿಧಾನಿಕ ವ್ಯವಸ್ಥೆಯಾಗಿದೆ.
2002 ರಲ್ಲಿ ಕೊಡವರಿಗೆ ಸ್ವಾಯತ್ತ ಪರಿಷತ್ತನ್ನು ರಚಿಸಲು ಭಾರತದ ಸಿಎನ್‌ಸಿಯ ಮನವಿ ಮೇರೆಗೆ ಸಂವಿಧಾನ ಪರಿಶೀಲನಾ ಆಯೋಗ ಶಿಫಾರಸು ಮಾಡಿದೆ. ಆನಂದ್ ಶರ್ಮಾ ಸಮಿತಿಯ ವರದಿಯು ಸ್ವಾಯತ್ತ ಪ್ರದೇಶಗಳು ಮತ್ತು ಅದರ ಕೌನ್ಸಿಲ್‌ಗಳಿಗೆ ಹೆಚ್ಚಿನ ಅಧಿಕಾರ ನೀಡಲು ತಿಳಿಸಿದೆ.
ವಿಶ್ವಪ್ರಸಿದ್ಧ ಅರ್ಥಶಾಸ್ತ್ರಜ್ಞ ಮತ್ತು ಮಾಜಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಡಾ ಸುಬ್ರಮಣಿಯನ್ ಸ್ವಾಮಿ ಅವರು ನಮ್ಮ ಸಂವಿಧಾನದ ಆರ್ಟಿಕಲ್ 244 R/w 6 ಮತ್ತು 8 ನೇ ಶೆಡ್ಯೂಲ್ ಅಡಿಯಲ್ಲಿ ಕೌನ್ಸಿಲ್ ಅನ್ನು ಸ್ಥಾಪಿಸುವ ಮೂಲಕ ಕೊಡವರಿಗೆ ಸ್ವಾಯತ್ತ ಪ್ರದೇಶವನ್ನು ರಚಿಸುವುದಕ್ಕಾಗಿ ನಮ್ಮ ಸಮಗ್ರ ಸಬಲೀಕರಣಕ್ಕಾಗಿ WP No-7769/2023 (PIL) ಅನ್ನು ಸಲ್ಲಿಸಿದರು.
ಸಿಎನ್‌ಸಿ ಮೂಲಕ ಜನರ ಆಕಾಂಕ್ಷೆಗಳನ್ನು ಪ್ರತಿಧ್ವನಿಸಲು, ಮೂಲೆ ಮೂಲೆಗಳಲ್ಲಿ ಯುಎನ್/ವಿಶ್ವ ರಾಷ್ಟ್ರ ಸಂಸ್ಥೆ ಚಾರ್ಟರ್‌ನಲ್ಲಿ ಪ್ರತಿಪಾದಿಸಿರುವ ಸಾರ್ವತ್ರಿಕ ಕಾನೂನಿನ ಪ್ರಕಾರ ಮತ್ತು ಭಾರತದ ಸಂವಿಧಾನದ ಅಡಿಯಲ್ಲಿ ಸ್ವಯಂ ಆಡಳಿತ ಹಾಗೂ ಸ್ವಯಂ ನಿರ್ಣಯದ ಹಕ್ಕುಗಳನ್ನು ಸ್ಥಾಪಿಸಲು ಆರ್ಟಿಕಲ್ 32 ಅನ್ನು ಈ ಮೂಲಕ ಪ್ರಚಾರ ಮಾಡುತ್ತಿದ್ದೇವೆ. ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಯತ್ತತೆಯೂ ಕರ್ನಾಟಕದ ಸ್ವಾಧೀನದ ಅಡಿಯಲ್ಲಿ ಭಾರತದ ಸಾರ್ವಭೌಮತ್ವಕ್ಕೆ ಪೂರಕವಾಗಿರುತ್ತದೆ ಎಂದು ನಾಚಪ್ಪ ಹೇಳಿದರು.
ಕೊಡವರ ಸ್ವಯಂ ಶಾಸನದ ಜನ್ಮ ಭೂಮಿಯನ್ನು ಕಾಯ್ದೆ ಬದ್ದವಾಗಿ ಸ್ಥಿರೀಕರಣಗೊಳಿಸಲು ಭೌಗೋಳಿಕ ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯ ಹಕ್ಕು ಸಂವಿಧಾನದ ವಿಧಿ 244 R/w 6 ಮತ್ತು 8ನೇ ಶೆಡ್ಯೂಲ್ ಅಡಿಯಲ್ಲಿ ಕರ್ನಾಟಕದ ಸ್ವಾಧೀನದೊಳಗೆ ಆಂತರಿಕ-ರಾಜಕೀಯ ಸ್ವ- ನಿರ್ಣಯದ ಹಕ್ಕನ್ನು ಕೊಡವರಿಗೆ ಸಂಯೋಜಿಸುವ ಮೂಲಕ ಭಾರತದ ಸಂವಿಧಾನ ಪರಿಶೀಲನಾ ಆಯೋಗವು ಶಿಫಾರಸು ಮಾಡಿರುವ ವರದಿಯನ್ವಯ ಕೊಡವ ಲ್ಯಾಂಡ್ ಸ್ವಯಂ ಶಾಸನದ ಜನ್ಮ ಭೂಮಿಯನ್ನು ರಚಿಸಬೇಕು.
ಕೊಡಗಿನ ಆದಿಮಸಂಜಾತ ಕೊಡವ ಜನಾಂಗವನ್ನು ನಮ್ಮ ಸಂವಿಧಾನದ ಶೆಡ್ಯೂಲ್ ಪಟ್ಟಿಯಲ್ಲಿ ಸೇರಿಸಬೇಕು. ಸಂವಿಧಾನದಲ್ಲಿ ರೇಸ್/ಮೂಲ ವಂಶಸ್ಥ ಜನಾಂಗಕ್ಕೆ ಯಾವುದೇ ವಿಶೇಷ ಪರಿಚ್ಛೇದಗಳ ಷರತ್ತು ಇಲ್ಲದಿರುವುದರಿಂದ ಕೊಡವರನ್ನು ಎಸ್.ಟಿ ಪಟ್ಟಿಗೆ ಸೇರಿಸುವುದು ವರ್ತಮಾನದ ಅನಿವಾರ್ಯ ಅವಶ್ಯಕತೆಯಾಗಿದೆ. ಆದ್ದರಿಂದ ಕರ್ನಾಟಕದ ಗೌರವಾನ್ವಿತ ಉಚ್ಚ ನ್ಯಾಯಾಲಯದ ಆದೇಶದಂತೆ, ಕೊಡವ ಜನಾಂಗದ ನ್ಯಾಯಯುತ, ಸೂಕ್ಷ್ಮ, ಸಮಗ್ರ ಕುಲಶಾಸ್ತ್ರ ಅಧ್ಯಯನ ಆರಂಭಿಸಬೇಕು.
. ಕೊಡವ ಕಸ್ಟಮರಿ ಜನಾಂಗೀಯ ‘ಸಂಸ್ಕಾರ ಗನ್’ ಹಕ್ಕುಗಳನ್ನು ಸಿಖ್ಖರ “ಕಿರ್ಪಾನ್” ಗೆ ಸಮಾನವಾಗಿ ನಮ್ಮ ಸಂವಿಧಾನದ 25 ಮತ್ತು 26ನೇ ವಿಧಿಗಳ ಅಡಿಯಲ್ಲಿ ಕೊಡವರ “ಧಾರ್ಮಿಕ ಸಂಸ್ಕಾರ”ವೆಂದು ರಕ್ಷಿಸಬೇಕು.
ಮಾತೃ ಭಾಷೆ ಕೊಡವ ತಕ್ಕ್ ಅನ್ನು 8ನೇ ಶೆಡ್ಯೂಲ್‌ಗೆ ಸೇರಿಸುವುದು. ನಮ್ಮ ಸಂವಿಧಾನದ 347, 350, 350ಎ ಮತ್ತು 350ಬಿ ವಿಧಿಗಳ ಅಡಿಯಲ್ಲಿ ಪಠ್ಯಕ್ರಮ ಮತ್ತು ಆಡಳಿತದಲ್ಲಿ ಕೊಡವ ತಕ್ಕ್ ಅನ್ನು ಪರಿಚಯಿಸಬೇಕು. ಕೊಡವ ತಕ್ಕ್ ಅನ್ನು ರಾಜ್ಯದ 3ನೇ ಆಡಳಿತ ಭಾಷೆಯನ್ನಾಗಿ ಪರಿಗಣಿಸಬೇಕು.
ಕೊಡವ ಜಾನಪದ ಪರಂಪರೆಯನ್ನು ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಯಲ್ಲಿ ಸೇರಿಸಬೇಕು. ಕೊಡವ ಜಾನಪದ ಪರಂಪರೆಯನ್ನು ಜೀವಂತಗೊಳಿಸಲು, ವಿಶ್ವ ಕೊಡವಾಲಜಿ (ಕೊಡವ ಶಾಸ್ತçದ ಜಾಗತಿಕ ಸಂಶೋಧನಾ ಅಧ್ಯಯನ ಕೇಂದ್ರ) ಸಂಶೋಧನಾ ಕೇಂದ್ರ ಮತ್ತು ಕೊಡವ ಸುಧಾರಿತ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲು ಸರ್ಕಾರವು ನಮಗೆ ಭೂಮಿಯನ್ನು ನೀಡಬೇಕು.
ಜೀವನದಿ ಕಾವೇರಿಗೆ “ಕಾನೂನು ವ್ಯಕ್ತಿ ಸ್ಥಿತಿಯೊಂದಿಗೆ ಜೀವಂತ ಘಟಕವನ್ನು ನೀಡಬೇಕು. ಕಾವೇರಿಯು ವೇದ ಕಾಲದ 7 ಪವಿತ್ರ ನದಿಗಳಲ್ಲಿ ಒಂದಾಗಿದೆ. ಜಲದೇವತೆ ಕಾವೇರಿಯ ಜನ್ಮಸ್ಥಳವನ್ನು ಸರ್ಕಾರವು ಪೂಜ್ಯ ಭಾವನೆಯಿಂದ ಗೌರವಿಸಬೇಕು. ಯಹೂದಿ ಜನರ ಮೌಂಟ್ ಮೊರೈಯಾ ದೇವನೆಲೆ ಮಾದರಿಯಲ್ಲಿ ಕೊಡವ ಜನಾಂಗದ ಪವಿತ್ರ ತೀರ್ಥಯಾತ್ರ ಕೇಂದ್ರವಾಗಿ ತಲಕಾವೇರಿಯನ್ನು ಪರಿಗಣಿಸಬೇಕು.
1966 ರ ಹೆಲ್ಸಿಂಕಿ ನಿಯಮದ ಪ್ರಕಾರ ಕಾವೇರಿಯ ಪುಮುಖ ನೀರಿನ ಪಾಲನ್ನು ಕೊಡಗಿನಲ್ಲಿ ಬಳಸಿಕೊಳ್ಳಬೇಕು, ಕಾವೇರಿ ನೀರಿನ 740 ಟಿಎಂಸಿ ವಾರ್ಷಿಕ ಇಳುವರಿಯಲ್ಲಿ, ಕೊಡವ ನೆಲದ ಪಾಲು 200 ಟಿಎಂಸಿ ಗಿಂತ ಹೆಚ್ಚು ಆಗಿದೆ.
ನಾಲ್ನಾಡ್ ಅರಮನೆ ಮತ್ತು ಮಡಿಕೇರಿ ಕೋಟೆಯಲ್ಲಿನ ಅರಮನೆಯ ಸಂಚಿನಲ್ಲಿನ ಘಟಿಸಿದ ಅಮಾಯಕ ಕೊಡವರ ರಾಜಕೀಯ ಹತ್ಯೆಗಳ ನೆನಪಿನ ಸ್ಮಾರಕಗಳನ್ನು ಸ್ಥಾಪಿಸಬೇಕು. ಕೊಡವ ಶೌರ್ಯವನ್ನು ಪ್ರತಿಬಿಂಬಿಸುವ ಉಲುಗುಲಿ-ಸುಂಟಿಕೊಪ್ಪ ಮತ್ತು ಮುಳ್ಳುಸೋಗೆಯಲ್ಲಿ ಕೊಡವರ ಯುದ್ಧ ಸ್ಮಾರಕಗಳನ್ನು ಸ್ಥಾಪಿಸಬೇಕು. ದೇವಾಟ್ ಪರಂಟ್ ನಲ್ಲಿ ಅಂತರರಾಷ್ಟ್ರೀಯ ಕೊಡವ ನರಮೇಧದ ಸ್ಮಾರಕಗಳನ್ನು ನಮ್ಮ ಸಂವಿಧಾನದ 49 ವಿಧಿ ಅಡಿಯಲ್ಲಿ ಮತ್ತು 1964 ರ ವೆನಿಸ್ ಘೋಷಣೆ ಯಂತೆ ನಿರ್ಮಿಸಬೇಕು. ಈ ಎರಡೂ ದುರಂತಗಳನ್ನು ವಿಶ್ವ ರಾಷ್ಟ್ರ ಸಂಸ್ಥೆಯ (ಯು.ಎನ್.ಓ) ಹತ್ಯಾಕಾಂಡದ ಸ್ಮರಣಾರ್ಥ ಪಟ್ಟಿಯಲ್ಲಿ ಸೇರಿಸಬೇಕು. ದೇವಾಟ್ ಪರಂಟ್ ಪ್ರಾಚೀನ ಯುದ್ಧಭೂಮಿಯಾಗಿದೆ ಮತ್ತು ಇದು ಕೊಡವ ಜನಾಂಗದ ದೇಶ ಮಂದ್ ಆಗಿದೆ. ಪ್ರಾಚೀನ ಯುದ್ಧಭೂಮಿಗಳಾದ ಕುರುಕ್ಷೇತ್ರ, ಕಳಿಂಗ ಮತ್ತು ವಾಟರ್ಲ್ಲೂ ಗಳನ್ನು ಪಾರಂಪರಿಕ ತಾಣಗಳಾಗಿ ರಕ್ಷಿಸಿದ ಪರಿಯಲ್ಲೇ ಅವುಗಳಿಗೆ ಸಮಾನ ಪ್ರಾಮುಖ್ಯತೆಯಾಗಿ ಸಂರಕ್ಷಿಸಬೇಕು.
ಜನಸಂಖ್ಯಾ ಬದಲಾವಣೆಯನ್ನು/ಪಲ್ಲಟವನ್ನು ತಡೆಗಟ್ಟಲು, ನಮ್ಮ ಆನುವಂಶಿಕ ಸಮುದಾಯ ಆಸ್ತಿಗಳನ್ನು ಮತ್ತು ನಮ್ಮ ಆಧ್ಯಾತ್ಮಿಕ ಪಾರಮಾರ್ಥಿಕ ನೆಲೆಗಳಾದ ಮಂದ್, ದೇವಕಾಡ್, ತೂಟ್‌ಂಗಲ, ಕ್ಯಾಕೊಳ ಗಳನ್ನು ರಕ್ಷಿಸಬೇಕು. ಕೊಡವರ ಜನ್ಮ ಭೂಮಿಯಲ್ಲಿ ನಮ್ಮ ಐತಿಹಾಸಿಕ ನಿರಂತರತೆಗೆ ಶಾಸನಬದ್ಧ ಅನುಮೋದನೆಗಾಗಿ, ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ ಮತ್ತು ಮಿಜೋರಾಂನ ಮಾದರಿಯಲ್ಲಿ ಇನ್ನರ್ ಲೈನ್ ರ‍್ಮಿಟ್ ಅನ್ನು ನೀಡಬೇಕು.
ಹೊಸ ಸಂಸತ್ತಿನಲ್ಲಿ ಕೊಡವ ಪ್ರಾತಿನಿಧ್ಯವನ್ನು ನೀಡಬೇಕು. ಕೇಂದ್ರ ವಿಸ್ತಾ” 9 ಡಿಸೆಂಬರ್ 1946 ರಿಂದ 24 ಜನವರಿ 1950 ರವರೆಗೆ, ಕೊಡವ ಜನಾಂಗದ ಸದಸ್ಯರು ಭಾರತದ ಸಂವಿಧಾನ ಸಭೆಯಲ್ಲಿ ಕೂರ್ಗ್/ ಕೊಡವ ಪ್ರಾಂತ್ಯವನ್ನು ಪ್ರತಿನಿಧಿಸಿದ್ದರು ಎಂದು ನಾಚಪ್ಪ ಪ್ರತಿಪಾದಿಸಿದರು.
ಪುಲ್ಲೇರ ಸ್ವಾತಿ ಕಾಳಪ್ಪ, ಪಟ್ಟಮಾಡ ಲಲಿತ ಗಣಪತಿ, ಚೋಳಪಂಡ ಜ್ಯೋತಿ ನಾಣಯ್ಯ, ನಂದಿನೆರವಂಡ ನಿಶ ಅಚ್ಚಯ್ಯ, ನಂದಿನೆರವಂಡ ಕೃಪ, ಅರೆಯಡ ಕವಿತಾ ಗಿರೀಶ್, ಕಲಿಯಂಡ ದೀನ ಪ್ರಕಾಶ್, ಕರವಂಡ ಸರಸು, ಪಟ್ಟಮಾಡ ಸೀತಮ್ಮ, ಮಂದಪಂಡ ಸೀತವ್ವ ಮುತ್ತಣ್ಣ, ಮಂದಪಂಡ ಹರಿಣಿ, ಪಟ್ಟಮಾಡ ಸುನೀತ, ಪಟ್ಟಮಾಡ ರಾಣಿ ಕುಶಾಲಪ್ಪ, ಪಟ್ಟಮಾಡ ನಾಯನ, ಪಟ್ಟಮಾಡ ವನಿತ, ಕಲ್ಮಡಂಡ ರೀಟ, ಕಲ್ಮಡಂಡ ಬಬಿತ
ಕಲಿಯಂಡ ಪ್ರಕಾಶ್, ಮಂದಪಂಡ ಮನೋಜ್, ಪಟ್ಟಮಾಡ ಕುಶ, ಅಳಮಂಡ ಜೈ, ಅಳಮಂಡ ನೆಹರು, ಬಾಚರಣಿಯಂಡ ಚಿಪ್ಪಣ್ಣ, ಕಾಂಡೇರ ಸುರೇಶ್, ಅಜ್ಜಿಕುಟ್ಟಿರ ಲೋಕೇಶ್, ಪುಲ್ಲೇರ ಕಾಳಪ್ಪ, ನಂದಿನೆರವಂಡ ವಿಜು, ನಂದಿನೆರವಂಡ ಬೋಪಣ್ಣ ಮಂದಪಂಡ ಸೂರಾಜ್, ಮಂದಪಂಡ ಅಯ್ಯಣ್ಣ, ಅಪ್ಪೆಂಗಡ ಮಾಲೆ, ಕಿರಿಯಮಾಡ ಶರೀನ್, ಪರ್ವಂಗಡ ನವೀನ್, ಚೋಳಪಂಡ ನಾಣಯ್ಯ, ಅರೆಯಾಡ ಗಿರೀಶ್, ಕೂಪದಿರ ಸಾಬು, ಪುಟ್ಟಿಚಂಡ ಡಾನ್ ದೇವಯ್ಯ, ಮಣವಟ್ಟೀಟ್ಟಿರ ಚಿಣ್ಣಪ್ಪ, ಮಣೊಟ್ಟಿರ ನಂದ, ಅಪ್ಪಚ್ಚಿರ ರಮ್ಮಿ ನಾಣಯ್ಯ, ಕಾಟುಮಣಿಯಂಡ ಉಮೇಶ್, ಪುದಿಯೊಕ್ಕಡ ಕಾಶಿ, ಕೇಕಡ ವಿಠಲ, ಕೇಕಡ ಚಿಣ್ಣಿ, ತೆಲಪಂಡ ಮಂದಣ್ಣ, ಬೊಳ್ಳರ್ಪಂಡ ಚಂಗಪ್ಪ, ಬಾಚರಣಿಯಂಡ ಹ್ಯಾರಿ, ಪಟ್ಟಮಾಡ ಅಶೋಕ್, ಮಣೊಟ್ಟಿರ ಸ್ವರೂಪ್, ಬೇಪಡಿಯಂಡ ದಿನು, ಬೇಪಡಿಯಂಡ ಬಿದ್ದಪ್ಪ, ಕೊಟ್ಟುಕತ್ತಿರ ಸಾಬು, ಕೊಟ್ಟುಕತ್ತಿರ ಬಾಬಿ, ಕಾಡಂಡ ಅಪ್ಪಸ್ವಾಮಿ, ಬಾಚರಣಿಯಂಡ ದಿನೇಶ್, ಅಪ್ಪಚಟ್ಟೋಳಂಡ ಮನು ಮುತ್ತಪ್ಪ, ಪರದಂಡ ಸುಬ್ರಮಣಿ, ತೆಲಪಂಡ ರತ್ತು ನಂಜಪ್ಪ, ಪಟ್ಟಮಾಡ ಉದಯ್, ಪಟ್ಟಮಾಡ ಸುಂದರ್ ಮುತ್ತಣ್ಣ, ಪಟ್ಟಮಾಡ ವಿಶು, ಮಂದಪಂಡ ಅರಸು, ಬಾಚಮಂಡ ರಾಜ ಪೂವಣ್ಣ, ಚಿಯಕ್‌ಪೂವಂಡ ರಂಜು, ಬೊಪರ್ತಂಡ ಕಿಶೋರ್, ಕಲ್ಮಡಂಡ ಮೊಣ್ಣಪ್ಪ, ಕಲ್ಮಡಂಡ ವಾಸು, ಕೇಕಡ ಪಳಂಗಪ್ಪ, ಕೇಕಡ ನಾಣಯ್ಯ, ಕೇಕಡ ದೊರೆಮಣಿ, ಬಾಚಿನಾಡಂಡ ಗಿರಿ, ಮಂದಪಂಡ ದೀಪಕ್, ಕೇಕಡ ಸುಬ್ಬಯ್ಯ, ಕೇಕಡ ಮೊಣ್ಣಪ್ಪ, ಬೈರಾಜಂಡ ದರ್ಶನ್, ಬಾಚಿನಾಡಂಡ ರಿಶಾಂತ್ ಬೋಪಣ್ಣ, ಮುಡುವಂಡ ಧ್ಯಾನ್ ಬೋಪಣ್ಣ, ಪಳೆಂಗಟ್ಟಿರ ಅಶೋಕ್, ಬೊಟ್ಟೊಳಂಡ ಮಿಟ್ಟು ಪೂಣಚ್ಚ, ಚಿಯಬೇರ ಶಶಿ ಸೋಮಣ್ಣ, ಕೇಕಡ ಸುಬ್ಬಯ್ಯ, ಪುಲ್ಲೇರ ಕಾಳಪ್ಪ, ಮಂದಪಂಡ ನಾಣಯ್ಯ, ಪಿ.ಡಿ.ಪೊನ್ನಪ, ಕೂಪದಿರ ಸಾಬು ಮತ್ತಿತರರು ಪಾದಯಾತ್ರೆ ಸಂದರ್ಭ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಮಾ:೦೪: ವಿದ್ಯಾರ್ಥಿ ಜೀವನವು ಹಲವು ಒತ್ತಡಗಳಿಂದ ನಿರ್ಮಾಣವಾಗುತ್ತಿದೆ ಎನ್ನುವುದು ಸುಳ್ಳು.ಕಲಿಕೆ ಮತ್ತು ಸಾಮಾಜಿಕ ಚಿಂತನೆಯನ್ನು ಸಮಾನವಾಗಿ…

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*

ಮಾರ್ಚ್ 4, 2026

*ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*

ಮಾರ್ಚ್ 4, 2026

*’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*

ಮಾರ್ಚ್ 4, 2026

*ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*

ಮಾರ್ಚ್ 4, 2026

*ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *

ಮಾರ್ಚ್ 4, 2026

*ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*

ಮಾರ್ಚ್ 4, 2026

*ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*

ಮಾರ್ಚ್ 4, 2026

*ವಲಸೆ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.