Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಗೋ-ಗ್ರೀನ್ ಅಭಿಯಾನ : ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ ಅಭಿಯಾನಕ್ಕೆ ಚಾಲನೆ*
ಇತ್ತೀಚಿನ ಸುದ್ದಿಗಳು

*ಗೋ-ಗ್ರೀನ್ ಅಭಿಯಾನ : ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ ಅಭಿಯಾನಕ್ಕೆ ಚಾಲನೆ*

September 16, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಸೆ.16 : ಸೆ.18 ರಂದು ನಡೆಯಲಿರುವ ಗೌರಿ- ಗಣೇಶ ಹಬ್ಬದ ಸಂದರ್ಭದಲ್ಲಿ ಯಾರೂ ಕೂಡ ಮಾಲಿನ್ಯಕಾರಿ ಪಿ.ಓ.ಪಿ.ಹಾಗೂ ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಿ ಪರಿಸರ ಸ್ನೇಹಿ, ಮಣ್ಣಿನ ಗಣೇಶ ಮೂರ್ತಿ ಬಳಕೆ ಮಾಡುವ ಮೂಲಕ ಜಲಮಾಲಿನ್ಯ ತಡೆದು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಕೆ.ಎಂ.ಸತೀಶ್ ಕುಮಾರ್ ಹೇಳಿದರು.
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಮಡಿಕೇರಿ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ, ರಾಷ್ಟ್ರೀಯ ಸೇವಾ ಯೋಜನೆ ಘಟಕ( ಎನ್‍ಎಸ್‍ಎಸ್)ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ ಮಡಿಕೇರಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಇಕೋ ಕ್ಲಬ್ ನ ಆಶ್ರಯದಲ್ಲಿ “ನಮ್ಮ ನಡೆ ಹಸಿರೆಡೆಗೆ” ಅಭಿಯಾನ: 2024 ದಡಿ (ಗೋ ಗ್ರೀನ್ ಕ್ಯಾಂಪೈನ್) ಶನಿವಾರ ಏರ್ಪಡಿಸಿದ್ದ ಕೊಡಗು ಜಿಲ್ಲಾಮಟ್ಟದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ ಅಭಿಯಾನ:2023 ದಲ್ಲಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಕುರಿತ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.
ಗಣೇಶ ಚತುರ್ಥಿಯನ್ನು ಶಬ್ದ, ವಾಯು ಹಾಗೂ ಜಲ ಮಾಲಿನ್ಯ ರಹಿತವಾಗಿ ಆಚರಿಸಲು ದೃಢ ಸಂಕಲ್ಪ ತೊಡಬೇಕು’ ಈ ದಿಸೆಯಲ್ಲಿ ಕೊಡಗಿನಲ್ಲಿ ಸರ್ಕಾರದೊಂದಿಗೆ ಎಲ್ಲಾ ಇಲಾಖೆ ಹಾಗೂ ಸಂಘ ಸಂಸ್ಥೆಗಳು ಕೈಜೋಡಿಸಿ ಇಂತಹ ಪರಿಸರ ಪೂರಕ ಜಾಗೃತಿ ಆಂದೋಲನ ಮಾದರಿಯಾದುದು ಎಂದರು.
ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ, ತಯಾರಿಸಿದ ಗಣೇಶ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದರು.
ಕೊಡಗಿನಲ್ಲಿ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ಪರಿಸರ ಸ್ನೇಹಿ ಗಣೇಶೋತ್ಸವವನ್ನು ಸಂಘಟಿಸುತ್ತಾ ಬರುತ್ತಿರುವುದು ರಾಜ್ಯಕ್ಕೆ ಮಾದರಿಯಾಗಿದೆ. ಇದಕ್ಕೆ ಕಾರಣರಾದ ಪರಿಸರ ಸಂಘಟನೆಯ ಪ್ರಮುಖರು ಮತ್ತು ಸಂಗಡಿಗರು ಜತೆಗೂಡಿ ವಿದ್ಯಾರ್ಥಿಗಳು ಹಾಗೂ ಸಮುದಾಯದಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯವಾದುದು ಎಂದರು.
ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಮಹತ್ವ ಕುರಿತು ಮಾಹಿತಿ ನೀಡಿದ ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್‍ನ ಘಟಕದ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಗಣೇಶ ಚತುರ್ಥಿ ಸಂದರ್ಭದಲ್ಲಿ ಮಾಲಿನ್ಯ ರಹಿತ ಹಾಗೂ ರಾಸಾಯನಿಕ ಮುಕ್ತ ಪರಿಸರ ಪೂರಕ ಮಣ್ಣಿನ ಗಣೇಶ ಮೂರ್ತಿಯನ್ನು ಮಾತ್ರ ಬಳಕೆ ಮಾಡುವ ಕುರಿತು ಶಾಲಾ- ಕಾಲೇಜು ಹಾಗೂ ನಾಗರಿಕರಲ್ಲಿ ಜನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಜಿಲ್ಲಾಡಳಿತ, ಶಿಕ್ಷಣ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಹಕಾರದೊಂದಿಗೆ ಕಳೆದ 12 ವರ್ಷಗಳಿಂದ ನಿರಂತರವಾಗಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಹಾಗೂ ಮಣ್ಣಿನ ಗಣೇಶ ಮೂರ್ತಿಗಳನ್ನು ತಯಾರಿಸುವ ಮೂಲಕ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸಲಾಗುತ್ತಿದೆ ಎಂದು ತಿಳಿಸಿದರು.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ ಹಾಗೂ ಡಿಡಿಪಿಐ ಸೌಮ್ಯ ಪೊನ್ನಪ್ಪ ಬಹುಮಾನ ವಿತರಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ ಅಧಿಕಾರಿ ಡಾ.ಎಂ.ಎನ್.ಪ್ರಕಾಶ್, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸ್ಥಾನಿಕ ಆಯುಕ್ತ ಎಚ್.ಆರ್.ಮುತ್ತಪ್ಪ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಪದಾಧಿಕಾರಿ ಎಂ.ಡೈಸಿ, ಸಂಸ್ಥೆಯ ಉಪ ಪ್ರಾಂಶುಪಾಲರಾದ ಕೆ.ವಿ.ಶಶಿಕಲಾ, ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಐ.ಜೆ.ಜೆನೆಟ್, ಶಿಕ್ಷಕಿಯರಾದ ಸೌಮ್ಯಲತಾ, ಐರಿನ್ ಉಷಾ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಮಕ್ಕಳು ಸ್ವತಃ ಮಣ್ಣಿನಿಂದ ಮತ್ತು ಅಕ್ಕಿಹಿಟ್ಟು ಹಾಗೂ ಗೋಧಿ ಹಿಟ್ಟಿನಿಂದ ತಯಾರಿಸಿ ಪ್ರದರ್ಶಿಸಿದ್ದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳು ಪ್ರೇಕ್ಷಕರ ಗಮನ ಸೆಳೆದವು.

Share. Facebook Twitter Pinterest LinkedIn Tumblr Email WhatsApp
Previous Article*ಮೈಸೂರಿನಲ್ಲಿ ವಿಶ್ವ ಕಿವುಡರ ದಿನಾಚರಣೆ : ಕೊಡಗು ಜಿಲ್ಲಾ ಕಿವುಡರ ಸಂಘದ ಪದಾಧಿಕಾರಿಗಳು ಭಾಗಿ*
Next Article *ಕೊಡಗು ಜಿಲ್ಲಾ ಮಹಾಬೋಧಿ ಪತ್ತಿನ ಸಹಕಾರ ಸಂಘಕ್ಕೆ ರೂ.76,206 ಲಾಭ : ಸೆ.17 ರಂದು ಮಹಾಸಭೆ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.