Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಪ್ರಥಮ ದರ್ಜೆ ಕಾಲೇಜಿನ ಪಠ್ಯೇತರ ಮತ್ತು ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಪ್ರಥಮ ದರ್ಜೆ ಕಾಲೇಜಿನ ಪಠ್ಯೇತರ ಮತ್ತು ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ*

ಸೆಪ್ಟೆಂಬರ್ 21, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.21 : ಯುವ ಜನತೆ ದೇಶಕ್ಕೆ ಬೆನ್ನೆಲುಬು ಆಗಿದ್ದು, ಕ್ರೀಡೆ, ನೃತ್ಯ, ಸಂಗೀತ, ಸಾಹಿತ್ಯ ಮತ್ತಿತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಅಗತ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಿ.ಜೆ.ಜವರಪ್ಪ ತಿಳಿಸಿದರು.
ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಭಾಂಗಣದಲ್ಲಿ ಗುರುವಾರ ನಡೆದ ಸಾಂಸ್ಕೃತಿಕ ಕ್ರೀಡೆ, ಪಠ್ಯೇತರ ಮತ್ತು ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಓದಿನ ಜೊತೆಗೆ ಸಾಹಿತ್ಯ, ಸಂಗೀತ, ಕ್ರೀಡೆ, ಹೀಗೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಲ್ಲಿ ಸದಾ ಚಟುವಟಿಕೆಯಿಂದ ಇರಬಹುದು. ಇದರಿಂದ ಬೇರೆಡೆ ಗಮನ ಹೋಗುವುದಕ್ಕೆ ಸಾಧ್ಯವಾಗುವುದಿಲ್ಲ. ಆ ನಿಟ್ಟಿನಲ್ಲಿ ಲಭ್ಯವಿರುವ ಕಾಲಾವಕಾಶವನ್ನು ಸರಿಯಾಗಿ ಬಳಸಿಕೊಂಡು ಮುನ್ನಡೆಯಬೇಕು ಎಂದು ಡಿ.ಜೆ.ಜವರಪ್ಪ ಸಲಹೆ ಮಾಡಿದರು.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕರು ಹಾಗೂ ಲೇಖಕರಾದ ಡಾ.ಕೋರನ ಸರಸ್ವತಿ ಪ್ರಕಾಶ್ ಅವರು ಮಾತನಾಡಿ ಮೊಬೈಲ್ ಗೀಳನ್ನು ಬಿಟ್ಟು ಒಳ್ಳೆಯ ಪುಸ್ತಕ ಹೆಚ್ಚಾಗಿ ಓದಬೇಕು. ತಲೆಬಗ್ಗಿಸಿ ಪುಸ್ತಕ ಓದಿದರೆ ಮುಂದೊಂದು ದಿನ ತಲೆ ಎತ್ತುವಂತೆ ಮಾಡುತ್ತದೆ. ತಲೆ ಬಗ್ಗಿಸಿ ಮೊಬೈಲ್ ನೋಡುತ್ತಿದ್ದರೆ ಮೊಬೈಲ್ ನೋಡಿಯೇ ಜೀವನ ಕಳೆದು ಹೋಗುತ್ತದೆ. ಆದ್ದರಿಂದ ಪುಸ್ತಕ ಓದುವ ಹವ್ಯಾಸ ರೂಡಿಸಿಕೊಂಡರೆ ಮಾನಸಿಕ ನೆಮ್ಮದಿಯನ್ನು ಹೆಚ್ಚು ಸಂಪಾದಿಸಿಕೊಳ್ಳಬಹುದು. ವಿದ್ಯಾರ್ಥಿಗಳು ಮೊಬೈಲನ್ನು ದೂರ ಮಾಡಿ ಸಹಪಾಠಿಗಳೊಂದಿಗೆ ಬೆರೆಯಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಪತ್ರಕರ್ತರಾದ ಜಿ.ಆರ್.ಪ್ರಜ್ಞಾ   ಮಾತನಾಡಿ, ವೈಯಕ್ತಿಕ ಬದುಕಿನಲ್ಲಿ ಪಠ್ಯೇತರ ಚಟುವಟಿಕೆಗಳು ಬಹಳ ಮುಖ್ಯವಾಗಿದೆ. ವಿದ್ಯಾರ್ಥಿ ಜೀವನವನ್ನು ಸುಗಮವಾಗಿರಿಸಲು ಪಠ್ಯೇತರ ಚಟುವಟಿಕೆಗಳು ಸಹಕಾರಿಯಾಗಿದೆ ಎಂದರು.
ವಿದ್ಯಾರ್ಥಿಗಳು ಮನಸ್ಸಿನಲ್ಲಿ ಏಕಾಗ್ರತೆ, ಶ್ರದ್ಧೆ, ಭಕ್ತಿ, ಆತ್ಮವಿಶ್ವಾಸ ಇದ್ದರೆ ಯಾವ ವಿಷಯದಲ್ಲಿಯೂ ಯಾವ ಕ್ಷೇತ್ರದಲ್ಲಿಯೂ ಸಾಧನೆ ಮಾಡಬಹುದು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಡಾ.ಕೋರನ ಸರಸ್ವತಿ ಪ್ರಕಾಶ್ ಅವರು ರಚಿಸಿರುವ ಪತ್ತಾಯ, ನುಡಿದೀಪ, ಅರೆಭಾಷೆ ಗಾದೆಗಳು ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.
ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಕೆ.ಬಸವರಾಜು ಅವರು ಪತ್ತಾಯ, ನುಡಿದೀಪ, ಅರೆಭಾಷೆ ಗಾದೆಗಳು ಪುಸ್ತಕ ಪರಿಚಯ ಮಾಡಿದರು.
ಸಾಂಸ್ಕೃತಿಕ ಕಾರ್ಯಕ್ರಮ ಸಂಚಾಲಕರಾದ ಡಾ.ಡಿ.ಕನ್ನಿಕಾ, ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.