Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಯುವ ಜನೋತ್ಸವ ಅಂಗವಾಗಿ ಜಿಲ್ಲಾ ಮಟ್ಟದ ಮ್ಯಾರಥಾನ್ : ವಿಜೇತರಿಗೆ ಬಹುಮಾನ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಯುವ ಜನೋತ್ಸವ ಅಂಗವಾಗಿ ಜಿಲ್ಲಾ ಮಟ್ಟದ ಮ್ಯಾರಥಾನ್ : ವಿಜೇತರಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 21, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.21 : ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ರೋಟರಿ ವುಡ್ಸ್ ಹಾಗೂ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಸಹಯೋಗದೊಂದಿಗೆ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮದ ಅಂಗವಾಗಿ ಮ್ಯಾರಾಥಾನ್ ಸ್ಪರ್ಧೆಯು(5 ಕಿ.ಮೀ) ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ದೊರೆಯಿತು.
ಮ್ಯಾರಾಥಾನ್ ಸ್ಪರ್ಧೆಯನ್ನು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಉದ್ಘಾಟಿಸಿದರು. ಪ್ರಸಕ್ತ(2023-24) ಸಾಲಿನ ಯುವಜನೋತ್ಸವ-ಕಾರ್ಯಕ್ರಮದ ಅಂಗವಾಗಿ (ರೆಡ್ ರಿಬ್ಬನ್ ಓಟ, ಹೆಚ್‍ಐವಿ/ಏಡ್ಸ್ ನಿಯಂತ್ರಣಕ್ಕಾಗಿ ಯುವಕರು) ಎಚ್‍ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಾಥಾನ್ ಸ್ಪರ್ಧೆ ಹಮ್ಮಿಕೊಳ್ಳುವಂತೆ, ಕರ್ನಾಟಕ ಏಡ್ಸ್ ನಿಯಂತ್ರಣ ಸಂಸ್ಥೆ ವತಿಯಿಂದ ಏರ್ಪಡಿಸಲಾಗಿದೆ ಎಂದರು.
ಎಚ್‍ಐವಿ/ಏಡ್ಸ್ ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ಉಚಿತ ರಾಷ್ಟ್ರೀಯ ಸಹಾಯವಾಣಿ 1097, ಎಚ್‍ಐವಿ/ಎಡ್ಸ್ (ತಡೆಗಟ್ಟುವಿಕೆ ಹಾಗೂ ನಿಯಂತ್ರಣ) ಕಾಯಿದೆ 2017 ಮತ್ತಿತರ ಕುರಿತು ಅರಿವು ಮೂಡಿಸುವುದು ಈ ಸ್ಪರ್ಧೆಯ ಮುಖ್ಯ ಉದ್ದೇಶವಾಗಿದೆ ಎಂದು ಅನಿತಾ ಪೂವಯ್ಯ ಹೇಳಿದರು.
ಮ್ಯಾರಾಥಾನ್ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ 17 ರಿಂದ 25 ವರ್ಷದ ಒಟ್ಟು 71 ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮ್ಯಾರಾಥಾನ್ ಸ್ಪರ್ಧೆಯು ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮಾನ್ಸ್ ಕಾಂಪೌಂಡ್, ಮಡಿಕೇರಿಯಿಂದ ಪ್ರಾರಂಭವಾಗಿ, ನಗರದ ಪ್ರಮುಖ ಬೀದಿಗಳಾದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತ, ಜನರಲ್ ತಿಮ್ಮಯ್ಯ ವೃತ್ತ, ಮುಖಾಂತರ ಹಾದು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ತಲುಪಿತು.
ಮ್ಯಾರಾಥಾನ್ ಸಂಚರಿಸುವ ಮಾರ್ಗದಲ್ಲಿ, ಆಟೋ ಪ್ರಚಾರದ ಮುಖಾಂತರ ಎಚ್.ಐ.ವಿ/ಎಡ್ಸ್ ಬಗ್ಗೆ ಅರಿವು ಮೂಡಿಸಲಾಯಿತು.
ಮ್ಯಾರಥಾನ್ ಸ್ಪರ್ಧೆ ಬಾಲಕರ ವಿಭಾಗ: ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗೌತಮ್ ಎಸ್.(ಪ್ರಥಮ), ಸೋಮವಾರಪೇಟೆ ಸರ್ಕಾರಿ ಪ್ರಥಮ ದರ್ಜೆ ಬಿಟಿಸಿಜಿ ಕಾಲೇಜಿನ ಗಗನ್ ವೈ.ಪಿ(ದ್ವಿತೀಯ), ಗೋಣಿಕೊಪ್ಪ ಕಾವೇರಿ ಕಾಲೇಜಿನ ಗೌತಮ್ ಪಿ.ಸಿ (ತೃತೀಯ), ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತಾಜುದ್ದೀನ್ ಪಿ.ಯು., ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬಿಎಸ್ಸಿ ನರ್ಸಿಂಗ್‍ನ ಕಿರಣ್ ಮಾಡರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿ ಸಿದ್ದಾಪ್ರಭು ಹಾಗೂ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪಿ.ಜಿ.ಶರಣು ಸಮಾಧಾನಕರ ಬಹುಮಾನ ಪಡೆದಿದ್ದಾರೆ.
ಬಾಲಕಿಯರ ವಿಭಾಗದಲ್ಲಿ ಪೊನ್ನಂಪೇಟೆ ಕೂರ್ಗ್ ಇನ್ಸ್‍ಟ್ಯೂಟ್ ಆಪ್ ಟೆಕ್ನಾಲಜಿಯ ಚೋಂದಮ್ಮ ಕೆ.ಟಿ. (ಪ್ರಥಮ), ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತ್ರಿಶಾ ಕೆ.(ದ್ವಿತೀಯ), ಮಡಿಕೇರಿ ಎಫ್‍ಎಂಕೆಎಂಸಿ ಭೂಮಿಕಾ ಕೆ.ಆರ್. (ತೃತೀಯ), ಹಾಗೂ ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಭವಾನಿ ಎಸ್., ವಿರಾಜಪೇಟೆ ಕಾವೇರಿ ಕಾಲೇಜಿನ ದೇಚಮ್ಮ ಸಿ.ಸಿ., ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ಯಾರಾ ಮೆಡಿಕಲ್‍ನ ಮೇಘನಾ ಮುತ್ತಮ್ಮ ಸಮಾದಾನಕರ ಬಹುಮಾನ ಪಡೆದಿದ್ದಾರೆ.
ಜಾಥಾದಲ್ಲಿ ವಿವಿಧ ಕಾಲೇಜುಗಳಿಂದ ಒಟ್ಟು 71 ವಿದ್ಯಾರ್ಥಿಗಳು ಭಾಗವಹಿಸಿ, ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದ ವಿದ್ಯಾರ್ಥಿಗಳಾದ ಗೌತಮ್.ಎಸ್ ಮತ್ತು ಚೋಂದಮ್ಮ ಕೆ.ಟಿ ಅವರು ಸೆಪ್ಟೆಂಬರ್, 22 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಮ್ಯಾರಥಾನ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ವಿಜೇತರು ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಸ್ಮಯಿ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಆನಂದ್, ಮಡಿಕೇರಿ ರೋಟರಿ ವುಡ್ಸ್‍ನ ಅಧ್ಯಕ್ಷರಾದ ವಸಂತ್ ಕುಮಾರ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ರವೀಂದ್ರ ರೈ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ತರಬೇತುದಾರರಾದ ಅಂಥೋನಿ ಡಿಸೋಜ, ಮಹಾಬಲ, ಬಿಂದ್ಯಾ ಹಾಗೂ ವಿವಿಧ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.