Advertisement
9:52 AM Sunday 3-December 2023

*ಹೆಬ್ಬಾಲೆಯಲ್ಲಿ ಶ್ರೀ ಕಾವೇರಿ ವಿದ್ಯಾರ್ಥಿ ಸಂಘ ಉದ್ಘಾಟನೆ : ವಿದ್ಯಾರ್ಥಿಗಳು ಓದು ಬರಹ ಕಡೆ ಗಮನಹರಿಸಿ : ಡಾ.ಸೀನಪ್ಪ*

21/09/2023

ಮಡಿಕೇರಿ ಸೆ.21 : ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ಕಾವೇರಿ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವನ್ನು ಕೊಡಗು ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ಸೀನಪ್ಪ ಉದ್ಘಾಟಿಸಿದರು.
ವಿದ್ಯಾರ್ಥಿ ದೆಸೆಯಲ್ಲಿ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳುವುದು ಅತ್ಯಂತ ಅವಶ್ಯಕವಾಗಿದೆ. ಶಿಕ್ಷಣ ಕೇವಲ ಸರ್ಕಾರಿ ನೌಕರಿ ಪಡೆಯುವುದಷ್ಟೇ ಅಲ್ಲದೆ ವಿದ್ಯಾರ್ಥಿಗಳು ಉತ್ತಮ ಪ್ರಜೆಯಾಗಿ ಸಮಾಜದಲ್ಲಿ ಸ್ವಾವಲಂಬಿಗಳಾಗಿ ಬದುಕುವುದಕ್ಕೆ ಶಿಕ್ಷಣ ಅತ್ಯಂತ ಅವಶ್ಯಕವಾಗಿದೆ. 10 ನೇ ತರಗತಿ ಹಾಗೂ ದ್ವಿತೀಯ ಪಿಯುಸಿಯ ನಂತರ ವಿದ್ಯಾರ್ಥಿಗಳಿಗೆ ಹಲವು ವೃತ್ತಿಪರ ಶಿಕ್ಷಣ ತರಬೇತಿಗಳಿದ್ದು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದುಕೊಳ್ಳಬೇಕು ಎಂದರು.
ವಿಶೇಷವಾಗಿ ಹೆಣ್ಣು ಮಕ್ಕಳು ಉತ್ತಮ ಸಾಧಕರಾಗಿ ಸಮಾಜಕ್ಕೆ ಹಾಗೂ ಶಾಲೆಗೆ ಕೀರ್ತಿಯನ್ನು ತಂದು ಕೊಡಿ ಎಂದು ಹೇಳಿದರು.
ಶ್ರೀ ಬನಶಂಕರಿ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಹಾಗೂ ಕುಶಾಲನಗರ ಪಾಲಿಟೆಕ್ನಿಕ್ ಕಾಲೇಜು ನಿವೃತ್ತ ಪ್ರಾಂಶುಪಾಲರಾದ ಎಚ್.ವಿ.ಶಿವಪ್ಪ ಅವರು ಮಾತನಾಡಿ ಈ ಸಂಸ್ಥೆಯು ನಮಗೆ ಬದುಕು ಕಟ್ಟಿಕೊಳ್ಳಲು ಬುನಾದಿ ಹಾಕಿಕೊಟ್ಟಿದೆ. ಈ ಶಾಲೆಯಲ್ಲಿ ಓದಿದ ಹಲವಾರು ಹಿರಿಯ ವಿದ್ಯಾರ್ಥಿಗಳು ದೇಶ-ವಿದೇಶಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಾಗಾಗಿ ವಿದ್ಯಾರ್ಥಿಗಳು ಅಂತಹ ಮಹಾನ್ ವ್ಯಕ್ತಿಗಳ ಸಾಲಿಗೆ ಸೇರಬೇಕು. ಮುಂದಿನ ಭವಿಷ್ಯವನ್ನು ಭದ್ರವಾಗಿ ನಿರ್ಮಿಸಿಕೊಳ್ಳಬೇಕು ಎಂದರು.
ಶಾಲೆಗೆ ತನ್ನದೇ ಆದ ಇತಿಹಾಸ ಇದೆ. ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ನಿಮ್ಮೆಲ್ಲರ ಕರ್ತವ್ಯವಾಗಿದೆ. ವಿದ್ಯಾರ್ಥಿ ದಿಸೆಯಲ್ಲಿಯೇ ನಾಯಕತ್ವದ ಗುಣವನ್ನು ಬಳಸಿಕೊಂಡು ಸಮಾಜಕ್ಕೆ ಉತ್ತಮ ಪ್ರಜೆಯಾಗಿ ರೂಪಗೊಳ್ಳುವುದು. ಈ ವಿದ್ಯಾರ್ಥಿ ಸಂಘದ ಆಶಯವಾಗಿರುತ್ತದೆ ಎಂದು ವಿದ್ಯಾರ್ಥಿಗಳಿಗೆ ಪೆÇ್ರೀತ್ಸಾಹದ ಮಾತುಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಆಡಳಿತ ಮಂಡಳಿ ಅಧ್ಯಕ್ಷರಾದ ಎಚ್.ಎಲ್.ರಮೇಶ್ ಅವರು ವಿದ್ಯಾರ್ಥಿಗಳ ಬಹುಮುಖ ಪ್ರತಿಭೆಯನ್ನು ಪ್ರದರ್ಶನಗೊಳಿಸಲು ಇಂತಹ ವಿದ್ಯಾರ್ಥಿ ಸಂಘಗಳು ಅತ್ಯಂತ ಅವಶ್ಯಕವಾಗಿರುತ್ತದೆ. ಇದರ ಸದುಪಯೋಗವನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಪಡೆಯಬೇಕು ಎಂದು ನುಡಿದರು.
ಹಿರಿಯ ವಿದ್ಯಾರ್ಥಿ ಸಂಘದ ಕೋಶಾಧಿಕಾರಿಗಳಾದ ಉಮೇಶ್ ಭಟ್ ಕೆ.ವಿ.ಅವರು, ಸಂಸ್ಥೆ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ನಾಗೇಂದ್ರ, ಹೆಬ್ಬಾಲೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಅರುಣ ಕುಮಾರಿ, ಗ್ರಾ.ಪಂ. ಸದಸ್ಯರಾದ ಚಂದ್ರಶೇಖರ್ ಜೋಗಿ ಅವರು ಮಾತನಾಡಿದರು.

ಕೊಡಗು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಗಗನ್, ಉಪನ್ಯಾಸಕರಾದ ಗೌತಮಿ ಮುಖ್ಯೋಪಾಧ್ಯಾಯರಾದ ಬಸವರಾಜಶೆಟ್ಟಿ, ಬೋಜೇಗೌಡ, ಅನಂತಕುಮಾರ್, ಮಂಜುನಾಥ್ ಉಪಸ್ಥಿತರಿದ್ದರು.
ಸಿ.ಡಿ.ಲೋಕೇಶ್ ಹಾಗೂ ಶ್ವೇತ ನಿರೂಪಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಎಂ.ಕೆ.ವಿಜಯ್‍ಕುಮಾರ್ ಸ್ವಾಗತಿಸಿದರು. ಎನ್. ವೆಂಕಟ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಿ.ಕವಿತಾ ವಂದಿಸಿದರು.