ಮಡಿಕೇರಿ ಸೆ.22 : ಹಾಕತ್ತೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಂದ್ರಿರ ತೇಜಸ್ ನಾಣಯ್ಯ ಹಾಗೂ ಉಪಾಧ್ಯಕ್ಷರಾಗಿ ಮಜ್ಞೀರ ಉಮೇಶ್ ಅಪ್ಪಣ್ಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ 13 ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 10 ಹಾಗೂ ಕಾಂಗ್ರೆಸ್ ಬೆಂಬಲಿತ ಮೂವರು ನಿರ್ದೇಶಕರಾಗಿ ಗೆಲುವು ಸಾಧಿಸಿದ್ದರು.








