ಸಿದ್ದಾಪುರ ಸೆ.25 : ಪ್ರತಿಭಾ ಕಾರಂಜಿ ಕಲೋತ್ಸವದಲ್ಲಿ ವಿದ್ಯಾರ್ಥಿಗಳು ಕ್ರೀಡೆ, ಕಲಾ ಸಾಹಿತ್ಯ ಅಭಿಮಾನದಿಂದ ತಮ್ಮದೇಯಾದ ಪ್ರತಿಭೆ ಅನಾವರಣಗೊಳಿಸುವ ಮೂಲಕ ಪ್ರತಿಭಾನ್ವಿತರಾಗಿ ಸಮಾಜದಲ್ಲಿ ಗುರುತಿಸಿಕೊಂಡು ಮುನ್ನಡೆದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಜಿ.ಪಂ ಮಾಜಿ ಸದಸ್ಯ ಮುಕೂಂಡ ವಿಜು ಸುಬ್ರಮಣಿ ಸಲಹೆ ನೀಡಿದರು.
ಪಾಲಿಬೆಟ್ಟ ಲೂರ್ಡ್ಸ್ ಹಿಲ್ ಶಾಲೆಯ ಸಭಾಂಗಣದಲ್ಲಿ ನಡೆದ ಪ್ರತಿಭಾ ಕಾರಂಜಿ ಉದ್ಘಾಟನಾ
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚು ಹೊತ್ತು ನೀಡುತ್ತಿದ್ದು, ಶಿಕ್ಷಣ ಇಲಾಖೆಯ ಮೂಲಕ ಯೋಜನೆಗಳನ್ನ ಸದ್ಬಳಕೆ ಮಾಡಿಕೊಂಡು ಸಾಧಿಸುವ ಛಲದೊಂದಿಗೆ ತಮ್ಮ ಕಲೆ ಪ್ರತಿಭೆಯನ್ನ ಪ್ರದರ್ಶಿಸುವ ಮೂಲಕ ಪ್ರತಿಭಾನ್ವಿತರಾಗಿ ಗುರುತಿಸಿಕೊಂಡಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು.
ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್ ಮಾತನಾಡಿ, ಶಿಕ್ಷಣ ಇಲಾಖೆಯಿಂದ ಮಕ್ಕಳ ಭವಿಷ್ಯ ರೂಪಿಸಲು ಹಲವಾರು ಯೋಜನೆಗಳು, ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ. ಪಾಲಿಬೆಟ್ಟ ಕ್ಲಸ್ಟರ್ ವ್ಯಾಪ್ತಿಯ 10ಕ್ಕೂ ಹೆಚ್ಚು ವಿವಿಧ ಶಾಲೆಯ ನೂರಾರು ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಕಲೋತ್ಸವದಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಗಮನ ಸೆಳೆದಿದ್ದಾರೆ.
ಶಾಲಾ ಶಿಕ್ಷಕರುಗಳು ವಿದ್ಯಾರ್ಥಿಗಳಿಗೆ ಕಲಾ ಕ್ರೀಡೆ ಪ್ರತಿಭೆಯನ್ನ ಪ್ರದರ್ಶಿಸಲು ಹೆಚ್ಚಿನ ಶ್ರಮವಹಿಸಿ ಮಕ್ಕಳ ಭವಿಷ್ಯ ರೂಪಿಸುವುದರೊಂದಿಗೆ ಪ್ರತಿಭಾನ್ವಿತರಾಗಿ ಮುಖ್ಯ ವಾಹಿನಿಗೆ ತರಲು
ಮುಂದಾಗುತ್ತಿರುವುದು ಶ್ಲಾಘನೆ ಎಂದರು.
ಪ್ರತಿಭಾ ಕಾರಂಜಿಯಲ್ಲಿ ಗಮನ ಸೆಳೆದ ವಿದ್ಯಾರ್ಥಿಗಳ ಛದ್ಮವೇಷ, ಗಾಯನ, ಸಾಮೂಹಿಕ ನೃತ್ಯ, ಕವಾಲಿ, ಜನಪದ ನೃತ್ಯ, ಗಜಲ್, ಚಿತ್ರಕಲೆ, ಕಥೆ, ಭಾಷಣ, ಭಕ್ತಿಗೀತೆ, ಜನ ಪದ ಗೀತೆ, ರಂಗೋಲಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದವರ ಗಮನ ಸೆಳೆಯಿತು.
ಲೂರ್ಡ್ಸ್ ಹಿಲ್ ಶಾಲಾ ವ್ಯವಸ್ಥಾಪಕರಾದ ಸಿಸ್ಟರ್ ಮೆಲನಿ ಅಧ್ಯಕ್ಷತೆ ವಹಿಸಿದ್ದರು.
ಪಾಲಿಬೆಟ್ಟ ಕ್ಲಸ್ಟರ್ ಅಧಿಕಾರಿ ಕರುಂಬಯ್ಯ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ
ಪಾಲಿಬೆಟ್ಟ ಗ್ರಾ.ಪಂ ಉಪಾಧ್ಯಕ್ಷೆ ರೇಖಾ ಗಣಪತಿ, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯ ಅಜೀತ್ ಕರುಂಬಯ್ಯ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಸಂತ್ , ಸಮಾಜ ಸೇವಕ ಡಾ ಎ.ಸಿ.ಗಣಪತಿ,
ವಿರಾಜಪೇಟೆ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಂದ್ರ, ಲೂರ್ಡ್ಸ್ ಹಿಲ್ ಶಾಲಾ ಮುಖ್ಯೋಪಾಧ್ಯರಾದ ಸಿಟ್ಟರ್ ಐರಿಸ್, ಪ್ಲೂರಟ್, ಎಸ್ಸಿ ಎಸ್.ಟಿ. ನೌಕರರ ಸಮನ್ವಯಾ ಸಮಿತಿ ಅಧ್ಯಕ್ಷ ಮಹೇಶ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯಕುಮಾರ್, ಪ್ರೌಡ ಶಾಲಾ ಶಿಕ್ಷಕರ ಸಂಘದ ಸದಸ್ಯರಾದ ಮೀರಾ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ
ಗೀತಾಂಜಲಿ, ವಾಮನ, ಪುಷ್ಪ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಮುರಗನ್, ಅನೀತಾ, ಸವೀತ, ರಾಧಾ, ರವಿ, ವೆಂಕಟೇಶ್, ಸುಷ, ಪ್ರವೀಣ್, ದಿವ್ಯ, ಕೇಶವಮೂರ್ತಿ ಸೇರಿದಂತೆ ಮತ್ತಿತರರು ಹಾಜರಿದ್ದರು.







