Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡಿಗೆ ಡಯಟ್ ನಲ್ಲಿ ಗಮನ ಸೆಳೆದ ವಿಜ್ಞಾನ ನಾಟಕ ಪ್ರದರ್ಶನ :  ವಿಜ್ಞಾನ ಮನುಷ್ಯನ ಬದುಕಿನ ಅವಿಭಾಜ್ಯ ಅಂಗ :  ಡಯಟ್ ಪ್ರಾಂಶುಪಾಲ ಚಂದ್ರಕಾಂತ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡಿಗೆ ಡಯಟ್ ನಲ್ಲಿ ಗಮನ ಸೆಳೆದ ವಿಜ್ಞಾನ ನಾಟಕ ಪ್ರದರ್ಶನ :  ವಿಜ್ಞಾನ ಮನುಷ್ಯನ ಬದುಕಿನ ಅವಿಭಾಜ್ಯ ಅಂಗ :  ಡಯಟ್ ಪ್ರಾಂಶುಪಾಲ ಚಂದ್ರಕಾಂತ್*

ಸೆಪ್ಟೆಂಬರ್ 28, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಸೆ.28 : ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ( ಡಿ.ಎಸ್.ಇ.ಆರ್.ಟಿ.) ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ “ಮಾನವಕುಲದ ಪ್ರಯೋಜನಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ” ಎಂಬ ಕೇಂದ್ರ ವಿಷಯದಡಿ  ಸೆ.27 ರಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯಲ್ಲಿ‌ ಏರ್ಪಡಿಸಿದ್ದ  ಮೈಸೂರು ವಿಭಾಗಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ನಾಟಕ ಪ್ರದರ್ಶಿಸಿ ಗಮನ ಸೆಳೆದರು.
ವಿಜ್ಞಾನ ನಾಟಕ ಸ್ಪರ್ಧೆ ಉದ್ಘಾಟಿಸಿದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ( ಅಭಿವೃದ್ಧಿ ) ರೂ ಆದ
ಡಯಟ್ ನ‌ ಪ್ರಾಂಶುಪಾಲ ಎಂ.ಚಂದ್ರಕಾಂತ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ಇಂತಹ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ವಿಜ್ಞಾನ ಮನುಷ್ಯನ ಬದುಕಿನ ಅವಿಭಾಜ್ಯ ಅಂಗವಾಗಿದೆ.
ಲೋಕ ಶಿಕ್ಷ ಣದ ಸಂದೇಶವನ್ನು ಸಮಾಜಕ್ಕೆ ರವಾನಿಸುವ ಪ್ರಭಾವಿ ಮಾಧ್ಯಮವಾಗಿ ನಾಟಕಕಲೆ ಮಹತ್ವ ಪಡೆದುಕೊಂಡಿದೆ ಎಂದರು.
ಕಲೆ ಮತ್ತು ವಿಜ್ಞಾನದ ನಡುವೆ ನಿಕಟವಾದ ಸಂಬಂಧವಿದ್ದು, ವಿದ್ಯಾರ್ಥಿಗಳಿಗೆ ಆಯೋಜಿಸಿರುವ ವಿಜ್ಞಾನ ನಾಟಕ ಸ್ಪರ್ಧೆ ವಿದ್ಯಾರ್ಥಿಗಳಿಗೆ ಜ್ಞಾನದ ಪ್ರಭೆಯನ್ನು ಹೆಚ್ಚಿಸುವಲ್ಲಿ ಪರಿಣಾಮಕಾರಿ ಪಾತ್ರ ವಹಿಸುತ್ತದೆ ಎಂದು ಚಂದ್ರಕಾಂತ್ ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ನಾಟಕ ಸ್ಪರ್ಧೆಯ ನೋಡಲ್ ಅಧಿಕಾರಿ ಕೆ.ಜಿ.ನೀಲಕಂಠಪ್ಪ ಮಾತನಾಡಿ, “ಮಾನವಕುಲದ ಪ್ರಯೋಜನಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ” ಎಂಬ ಕೇಂದ್ರ ವಿಷಯದಡಿ ಐದು ಉಪ ವಿಷಯಗಳಿಗೆ ನಾಟಕ ಸ್ಪರ್ಧೆ ಏರ್ಪಡಿಸಲಾಗಿದೆ ಎಂದರು.
ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ, ಜ್ಞಾನ ಹೆಚ್ಚಿಸಲು ಸರಕಾರ ವಿಜ್ಞಾನ ನಾಟಕ ಸ್ಪರ್ಧೆ ಏರ್ಪಡಿಸಲಾಗಿದೆ ಎಂದರು.
ಕೂಡುಮಂಗಳೂರು ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು ಸಹಕಾರಿಯಾಗಿದೆ.
ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಗೆಗೆ ಹಾಗೂ ಸಮಾಜದಲ್ಲಿ ಬೇರೂರಿರುವ ಮೌಢ್ಯ, ಕಂದಾಚಾರ ನಿವಾರಣೆಗೆ ಇಂತಹ ಸ್ಪರ್ಧೆಗಳು ಸಹಕಾರಿಯಾಗಿವೆ ಎಂದರು.

ಡಯಟ್ ಸಂಸ್ಥೆಯ ಪೂರ್ವ ಸೇವಾ ತರಬೇತಿ ವಿಭಾಗದ ಮುಖ್ಯಸ್ಥ ಎಂ.ಕೃಷ್ಣಪ್ಪ, ಸಂಸ್ಥೆಯ
ಉಪನ್ಯಾಸಕರಾದ ವಿ.ವಿಜಯ್, ಕೆ.ಎಸ್.ನಳಿನಾಕ್ಷಿ, ಲತಾ, ಗಾಯಿತ್ರಿ, ಗೀತಾ ಇದ್ದರು. ತೀರ್ಪುಗಾರರರಾಗಿ ಕಡಗದಾಳು ಸರ್ಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಎಚ್.ಎನ್.ಭಾರತಿ ಹಾಗೂ ಮಡಿಕೇರಿ ಸರ್ಕಾರಿ ಜೂನಿಯರ್ ಕಾಲೇಜಿನ ನಾಟಕ ಶಿಕ್ಷಕ ಪ್ರವೀಣ್ ಪಾಲ್ಗೊಂಡಿದ್ದರು.

ನಾಟಕ ಪ್ರದರ್ಶನ: ನಾಟಕ ಸ್ಪರ್ಧೆಯಲ್ಲಿ “ಮಾನವಕುಲದ ಪ್ರಯೋಜನಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ” ಎಂಬ ಕೇಂದ್ರ ವಿಷಯದಡಿ ಅದ್ಭುತ ಆಹಾರವಾಗಿ ಸಿರಿಧಾನ್ಯಗಳು, ಆಹಾರ ಭದ್ರತೆ, ನಿತ್ಯ ಜೀವನದಲ್ಲಿ ಆಧುನಿಕ ತಂತ್ರಜ್ಞಾನ, ಆರೋಗ್ಯ ರಕ್ಷಣೆಯಲ್ಲಿ ಪ್ರಸ್ತುತ ಪ್ರಗತಿಗಳು ಸಮಾಜದಲ್ಲಿನ ಮೂಢನಂಬಿಕೆಗಳು ಎಂಬ ವಿಷಯಗಳ ಕುರಿತು ವಿದ್ಯಾರ್ಥಿಗಳು ನಾಟಕ ಪ್ರದರ್ಶಿಸಿದರು.

ಸ್ಪರ್ಧೆಯಲ್ಲಿ ಕೊಡಗು ಜಿಲ್ಲೆ ಸೇರಿದಂತೆ ರಾಮನಗರ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಂದ ತಲಾ‌ ಒಂದೊಂದು ತಂಡದ ಸ್ಪರ್ಧಿಗಳು ಭಾಗವಹಿಸಿದ್ದರು. ಮಕ್ಕಳ ನಾಟಕ ಸ್ಪರ್ಧೆಯು ಗಮನ ಸೆಳೆಯಿತು.

ಮಾನವಕುಲದ ಪ್ರಯೋಜನಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಎಂಬ ಕೇಂದ್ರ ವಿಷಯದಡಿ ಅದ್ಭುತ ಆಹಾರವಾಗಿ ಸಿರಿಧಾನ್ಯಗಳು, ಆಹಾರ ಭದ್ರತೆ, ನಿತ್ಯ ಜೀವನದಲ್ಲಿ ಆಧುನಿಕ ತಂತ್ರಜ್ಞಾನ, ಆರೋಗ್ಯ ರಕ್ಷಣೆಯಲ್ಲಿ ಪ್ರಸ್ತುತ ಪ್ರಗತಿಗಳು ಹಾಗೂ ಸಮಾಜದಲ್ಲಿನ ಮೂಢನಂಬಿಕೆಗಳು ಎಂಬ ವಿಷಯಗಳ ಕುರಿತು ವಿದ್ಯಾರ್ಥಿಗಳು ನಾಟಕ ಪ್ರದರ್ಶಿಸಿ ಪ್ರೇಕ್ಷಕರ ಗಮನ ಸೆಳೆದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.