ಮಡಿಕೇರಿ ಸೆ.30 : ಕೊಡಗು ಜಿಲ್ಲಾ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಒಕ್ಕೂಟದ ವತಿಯಿಂದ ಕುಶಾಲನಗರದಲ್ಲಿ ಜಿಲ್ಲಾ ಸಮಾವೇಶ ನಡೆಯಿತು.
ರೈತ ಸಹಕಾರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನುದಾನ ರಹಿತ ಶಾಲೆಗಳ ಶಿಕ್ಷಕರ ಕೊಡುಗೆ ಮತ್ತು ಶಾಲೆಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚರ್ಚಿಸಲಾಯಿತು.
ಒಕ್ಕೂಟದ ಅಧ್ಯಕ್ಷ ಕೋಳೇರ ಝರುಗಣಪತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾವೇಶದಲ್ಲಿ ಸಂಸದ ಪ್ರತಾಪ್‌ಸಿಂಹ, ವಿಧಾನ ಪರಿಷತ್ ಸದಸ್ಯರುಗಳಾದ ಎಂ.ಪಿ.ಸುಜಾಕುಶಾಲಪ್ಪ, ಎಸ್.ಎಲ್.ಬೋಜೆಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಭಾರ ಉಪನಿರ್ದೇಶಕರಾದ ಎ.ಸೌಮ್ಯ ಪೊನ್ನಪ್ಪ, ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೊಟ್ರಂಗಡ ತಿಮ್ಮಯ್ಯ, ಉಪಾಧ್ಯಕ್ಷ ಎಂ.ಟಿ.ದಾಮೋದರ್, ಕಾನೂನು ಸಲಹೆಗಾರ ಎಂ.ಎಸ್.ಪೂವಯ್ಯ, ಸದಸ್ಯರಾದ ಮಣಿ ಮಹಮ್ಮದ್, ಪಿ.ಎಂ.ಮೋಹನ್ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.









