Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
  • *ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
  • *ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*
  • *ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ನಾ.ಡಿಸೋಜ ಸಾಹಿತ್ಯದ ಕುರಿತು ದತ್ತಿ ಉಪನ್ಯಾಸ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ನಾ.ಡಿಸೋಜ ಸಾಹಿತ್ಯದ ಕುರಿತು ದತ್ತಿ ಉಪನ್ಯಾಸ*

ಅಕ್ಟೋಬರ್ 2, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.2 :  ಸಾಹಿತಿ ನಾ ಡಿಸೋಜ ಅವರ ಸಾಹಿತ್ಯ ಜೈಮಿನ ಭಾರತದ ಅಶ್ವಮೇಧ ಯಜ್ಞದ ಕುದುರೆಯಂತೆ. ಕುದುರೆ ಚಲಿಸಿದಂತೆ ಕಥೆಗಳು ನಿಲ್ಲುತ್ತದೆ. ಕುದುರೆ ನಿಂತರೆ ಕಥೆಗಳು ಚಲಿಸಲಾರಂಭಿಸುತ್ತದೆ‌. ಅದೇ ರೀತಿಯಲ್ಲಿ ನಾ. ಡಿಸೋಜ ಅವರ ಕಾದಂಬರಿಗಳಲ್ಲಿ ಅಣೆಕಟ್ಟು, ಒಡ್ಡುಗಳ ಕಾರಣದಿಂದ ನೀರು ನಿಂತರೆ ಒಂದೊಂದು ಕಥೆಗಳು ಹುಟ್ಟಿಕೊಳ್ಳುತ್ತವೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಉಪನ್ಯಾಸಕ  ಡಾ. ಕೆ. ಹೆಚ್.ಮುಸ್ತಾಫ  ಅಭಿಪ್ರಾಯಪಟ್ಟರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಡಾ. ನಾ.ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಉಪನ್ಯಾಸ ಮತ್ತು ಕಥಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡ ಸಂದರ್ಭದಲ್ಲಿ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಡಾ. ನಾ ಡಿಸೋಜ ಅವರ ಸಾಹಿತ್ಯದ ಕುರಿತು ದತ್ತಿ ಉಪನ್ಯಾಸ ನೀಡಿದ ಅವರು ನಾ. ಡಿಸೋಜ ಅವರ ಸಾಹಿತ್ಯದಲ್ಲಿ ಕಾಣುವ ದಟ್ಟ ಜೀವನಾನುಭವ, ಪ್ರಕೃತಿಯ ನಿರೂಪಣೆಗೆ ಅವರ ಬಾಲ್ಯಕಾಲದ ಪರಿಸರ ಹೇಗೆ ಕಾರಣವಾಯಿತು ಎಂಬುದನ್ನು ಚರ್ಚಿಸಿದರು.

ನಾ.ಡಿಸೋಜ ಅವರ ಕಥನ ಮಾದರಿಗಳಲ್ಲಿ ಕಾಣುವ ಸಮುದಾಯ ವಿಮರ್ಶೆಯ ಮಾದರಿಗಳನ್ನು ಸುಣ್ಣ ಬಳಿದ ಸಮಾಧಿಗಳು, ನೆಲೆ, ಬಣ್ಣ ಮುಂತಾದ ಕೃತಿಗಳನ್ನು ಆಧಾರವಾಗಿಟ್ಟುಕೊಂಡು ಚರ್ಚಿಸಿದರು.

ಉತ್ತರ ಕನ್ನಡ ಮತ್ತು ಶಿವಮೊಗ್ಗ ಪ್ರದೇಶಗಳಲ್ಲಿ ನಡೆದ ರೈತಚಳವಳಿ, ಸಮಾಜವಾದಿ ತಾತ್ವಿಕತೆಯ ನವಿರನ್ನು ಅವರ ಶಾಂತವೇರಿ ಗೋಪಾಲಗೌಡ, ಕೊಳಗ, ತಿರುಗೋಡಿನ ರೈತ ಮಕ್ಕಳು, ಮಂಜಿನಕಾನು ಕೃತಿಗಳ ಮೂಲಕ ವಿಶ್ಲೇಷಣೆಗೆ ಒಳಪಡಿಸಿದರು. ಎಡ ಬಲವೆಂಬ ಸೈದ್ಧಾಂತಿಕ ನಿರೂಪಣೆಗಳನ್ನು ಬದಿಗೊತ್ತಿ ಸಮನ್ವಯತೆಯ ಹಾದಿಯನ್ನು ನಾ. ಡಿಸೋಜ ಅವರು ತಮ್ಮ ಬದುಕು ಮತ್ತು ಬರೆಹದಲ್ಲಿ ಸಾಧಿಸಿ ತೋರಿಸಿದರು. ಅವರ ಸಾಹಿತ್ಯ ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿಯ ಆಕರಗಳೆಂದು ಅವರನ್ನು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಓದಬೇಕು ಎಂದು ಡಾ. ಮುಸ್ತಾಫ ನುಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಾತನಾಡಿದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಎಂ.ಪಿ.ಪ್ರೊ. ಕೃಷ್ಣ  ಡಾ. ನಾ. ಡಿಸೋಜ ಅವರ ಸಾಹಿತ್ಯ ಸೃಷ್ಟಿಯ ಪರಿಚಯಾತ್ಮಕ ನೆಲೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್ ವಹಿಸಿಕೊಂಡು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯ ಪರಿಷತ್ತಿನ ಚಟುವಟಿಕೆಯಲ್ಲಿ ಭಾಗವಹಿಸಬೇಕು.

ನಾ. ಡಿಸೋಜ ಅವರ ಮಕ್ಕಳ ಸಾಹಿತ್ಯಕ್ಕೆ ಸಂಬಂಧಿಸಿದ ಕೃತಿಗಳನ್ನು ಹೆಚ್ಚು ಹೆಚ್ಚು ಓದಬೇಕು. ಆ ಮೂಲಕ ಜೀವಪರವಾದ ನಿಲುವುಗಳನ್ನು ಪ್ರತಿಪಾದಿಸುವ ಉತ್ತಮ ಪ್ರಜೆಗಳಾಗಬೇಕು. ಸಾಹಿತ್ಯ, ಸಂಸ್ಕೃತಿಗಳು ಬದುಕಿನ ರಹದಾರಿ ರೂಪಿಸುವ ಮಹತ್ತರವಾದ ಕಾರ್ಯವನ್ನು ಮಾಡುತ್ತದೆ‌. ಆದ್ದರಿಂದ ಸಾಹಿತ್ಯಕ ಒಲವನ್ನು ನಮ್ಮಲ್ಲಿ ವೃದ್ಧಿಸಿಕೊಳ್ಳದೆ ಮನುಷ್ಯಪರವಾಗಿ, ಜೀವಪರವಾಗಿರಲು ಸಾಧ್ಯವಿಲ್ಲ ಎಂದು  ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕೊಡಗಿನ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಡೆಸಿದ ಕಥಾಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು‌.

ಬಹುಮಾನಿತರ ಪಟ್ಟಿಯನ್ನು ಓದಿ ವಿದ್ಯಾರ್ಥಿಗಳು ಸಾಹಿತ್ಯ ಸೃಷ್ಟಿಯಲ್ಲಿ ಮತ್ತಷ್ಟು ತೊಡಗಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್ ಕಿವಿಮಾತು ಹೇಳಿದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧಿಕಾರಿ ಎಸ್.ಎಸ್.ಸಂಪತ್ ಕುಮಾರ್ ಹಾಗೂ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ಕಾರ್ಯಕ್ರಮವನ್ನು ದ್ವಿತೀಯ ಕನ್ನಡ ಐಚ್ಛಿಕ ವಿದ್ಯಾರ್ಥಿಗಳಾದ  ತೇಜ ಮತ್ತು ಅಶ್ಮಿತ ನಿರೂಪಿಸಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಉಪನ್ಯಾಸಕ  ಡಾ. ಎನ್.ವಿ. ಕರುಣಾಕರ  ಸ್ವಾಗತಿಸಿದರು. ಕನ್ನಡ ವಿಭಾಗದ ಉಪನ್ಯಾಸಕ  ಮುಖೇಶ್, ರಾಜೀವ್  ಉಪಸ್ಥಿತರಿದ್ದರು. ಎನ್ ಎಸ್ ಎಸ್, ಎನ್ ಸಿ ಸಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.15 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ…

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*

ಮಾರ್ಚ್ 13, 2026

*ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*

ಮಾರ್ಚ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.