ಮಡಿಕೇರಿ ಅ.5 : ಯು.ಎಸ್.ಎ.ಯ ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್‍ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ ಶೇ.2 ವಿಜ್ಞಾನಿಗಳ ಪಟ್ಟಿಯಲ್ಲಿ ಡಾ.ಜೆ.ಜಿ.ಮಂಜುನಾಥ ಅವರು ಸತತ ನಾಲ್ಕನೇ ಬಾರಿ ಸ್ಥಾನ ಪಡೆದಿರುತ್ತಾರೆ.
ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಜೆ.ಜಿ.ಮಂಜುನಾಥ ಅವರು “ಅನಲೈಟಿಕಲ್ ಮತ್ತು ಎನರ್ಜಿ” ವಿಷಯಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿರುವ ಸಂಶೋಧನಾ ಲೇಖನಗಳ ಆಧಾರದ ಮೇಲೆ ಇವರು 2023ರ ಸಾಲಿನ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ 4509ನೇ ಸ್ಥಾನವನ್ನು ಮತ್ತು ವಿಶ್ವದ ವೃತ್ತಿ ಜೀವಮಾನ ಸಾಧಕರ ಪಟ್ಟಿಯಲ್ಲಿ 89561 ನೇ ಸ್ಥಾನವನ್ನು ಪಡೆದಿರುತ್ತಾರೆ (ಸಂಯೋಜಿತ ಅಂಕಗಳ ಆಧಾರದ ಮೇಲೆ ಶ್ರೇಣಿ).
ಇವರ ಈ ಸಾಧನೆಯೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ಹೆಮ್ಮೆ ತಂದಿದೆ ಎಂದು ವಿ.ವಿಯ ಕುಲಪತಿಯವರು, ಕುಲಸಚಿವರು ಮತ್ತು ಕಾಲೇಜಿನ ಪ್ರಾಂಶುಪಾಲರು, ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ಸಮಸ್ತ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.







