ಮಡಿಕೇರಿ ಅ.5 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟವು ಅ.7 ರಂದು ಬೆಳಗ್ಗೆ 10 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.







