Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ : ವಿದ್ಯಾರ್ಥಿಗಳು ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ಚರಿತ್ರೆಯನ್ನು ತಿಳಿದುಕೊಳ್ಳಿ : ಛಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ : ವಿದ್ಯಾರ್ಥಿಗಳು ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ಚರಿತ್ರೆಯನ್ನು ತಿಳಿದುಕೊಳ್ಳಿ : ಛಾಯ*

ಅಕ್ಟೋಬರ್ 6, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಅ.6 : ಅಮರಸುಳ್ಯ ದಂಗೆಯ ಮೂಲಕ ಕೊಡಗಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ವಿರುದ್ಧ ಧ್ವನಿ ಎತ್ತಿ ಹೋರಾಡುವ ಮೂಲಕ ಭಾರತ ಸ್ವಾತಂತ್ರ್ಯ ಹೋರಾಟಕ್ಕೆ ಅಡಿಪಾಯ ಹಾಕಿದರು ಎಂದು ಸಂತ ಜೊಸೇಫರ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಛಾಯ ಹೇಳಿದರು.
ಜಿಲ್ಲಾ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ಸಂತಜೊಸೇಫರ ಪದವಿ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಗಂಗಾಧರ್‍ಶೇಟ್ ಸುಲೋಚನಾ ಬಾಯಿ ಸ್ಮಾರಕ ದತ್ತಿ ಉಪನ್ಯಾಸ “ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ನೆನಪು” ವಿಷಯದಲ್ಲಿ ಮಾತನಾಡಿದರು.
1852 ಭಾರತದ ಇತಿಹಾಸದಲ್ಲಿ ಮಹತ್ವದ ವರ್ಷ, ಮೊದಲ ಭಾರತ ಸ್ವಾತಂತ್ರ್ಯ ಸಂಗ್ರಾಮವಾಗಿತ್ತು. ಬ್ರಿಟಿಷರು ಅದನ್ನು ದಂಗೆ ಎಂದೇ ಕರೆದರು. ಅದಕ್ಕಿಂತ ಮೊದಲು 1834ರಲ್ಲಿ ಬ್ರಿಟಿಷರ ವಿರುದ್ಧ ಕೊಡಗಿನಲ್ಲಿ ಅಮರಸುಳ್ಯ ದಂಗೆ ನಡೆಯಿತು. ಕೆದಂಬಾಡಿ ರಾಮೇಗೌಡ, ಗುಡ್ಡೆಮನೆ ಅಪ್ಪಯ್ಯಗೌಡ ಅವರ ನೇತೃತ್ವದಲ್ಲಿ ಹೋರಾಟ ನಡೆಯಿತು. ಬ್ರಿಟಿಷರು ರೈತರ ಹೋರಾಟವನ್ನು ದರೋಡೆ, ಸುಲಿಗೆ ಎಂದು ಕರೆದು ರಾಮೇಗೌಡ, ಅಪ್ಪಯ್ಯಗೌಡರನ್ನು ಮಡಿಕೇರಿಯಲ್ಲಿ ಗಲ್ಲಿಗೇರಿಸಿದರು. ಹೋರಾಟಗಾರರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಯಿತು.
1835ರಲ್ಲಿ ರೈತರೆಲ್ಲ ಒಟ್ಟು ಸೇರಿ ರೈತಸೇನೆಯನ್ನು ಕಟ್ಟಿಕೊಂಡು, ಆಯುಧಗಳನ್ನು ಸಂಗ್ರಹಿಸಿಕೊಂಡು ಬ್ರಿಟಿಷರ ವಿರುದ್ಧ ಯುದ್ದಕ್ಕೆ ಮುಂದಾದರು. ಬ್ರಿಟಿಷರ ಕಚೇರಿಗಳಿಗೆ ಬೆಂಕಿ ಹಚ್ಚಯಿತು. ಪ್ರಾರಂಭದಲ್ಲಿ ರೈತಸೇನೆಗೆ ಜಯಸಿಕ್ಕಿದ್ದರೂ, ನಂತರ ಮಂಗಳೂರಿನಲ್ಲಿ ಬ್ರಿಟಿಷರು ಸುಸಜ್ಜಿತ ಯುದ್ದ ಸಾಮಾಗ್ರಿಗಳನ್ನು ಉಪಯೋಗಿಸಿಕೊಂಡು 1015 ರೈತ ಹೋರಾಟಗಾರರನ್ನು ಬಂಧಿಸಿದರು. ಅನೇಕರನ್ನು ಕೊಂದರು ಎಂದು ವಿಷಾಧ ವ್ಯಕ್ತಪಡಿಸಿದರು.
ಸ್ವಾತಂತ್ರ ಹೋರಾಟಕ್ಕೆ ಧುಮುಕಿದ ಅನೇಕ ರೈತಾಪಿ ವೀರರು ತಮ್ಮ 40ನೇ ವಯಸ್ಸಿಗೆಲ್ಲಾ ಜೀವವನ್ನು ಕಳೆದುಕೊಂಡಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ಚರಿತ್ರೆಯನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಹೇಳಿದರು.
ಕ.ಸಾ.ಪ. ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಕೊಡಗಿನ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಅನೇಕ ವೀರರು ಪ್ರಾಣ ತ್ಯಾಗ ಮಾಡಿದ್ದಾರೆ. ಅಂತಹವರ ಹೋರಾಟದ ಫಲವಾಗಿ ಸ್ವಾತಂತ್ರ್ಯ ಅನುಭವಿಸುತ್ತಿದ್ದೇವೆ. ಸಾರಾಯಿ ವಿರುದ್ಧ ಹೋರಾಟ, ವಿದೇಶಿ ವಸ್ತುಗಳನ್ನು ತಿರಸ್ಕರಿಸಿ ಹೋರಾಟ, 1929ರಲ್ಲಿ ಮಡಿಕೇರಿ ಕೋಟೆಯಲ್ಲಿ ಬ್ರಿಟಿಷ್ ಧ್ವಜವನ್ನು ಕಿತ್ತೆಸೆದು ಸ್ವತಂತ್ರ್ಯದ ಕಹಳೆ ಮೊಳಗಿಸಿದರು. 1942ರ ಕ್ವಿಟ್ ಇಂಡಿಯಾ ಚಳುವಳಿ ಕೊಡಗಿನ ಉಗ್ರ ರೂಪವನ್ನೇ ತಾಳಿತ್ತು. 98 ಮಂದಿ ಸ್ವತಂತ್ರ್ಯ ಹೋರಾಟಗಾರರು ದೀರ್ಘಕಾಲದ ಜೈಲು ಶಿಕ್ಷೆಯನ್ನು ಅನುಭವಿಸಿದ್ದರು ಎಂದು ಹೇಳಿದರು.
ಕನ್ನಡಪರ ಕಾರ್ಯಕ್ರಮಗಳನ್ನು ನಡೆಸಲು ಹೆಚ್ಚಿನ ಆಸಕ್ತಿ ವಹಿಸುವ ಜಯವೀರಮಾತೆ ಚರ್ಚ್‍ನ ಧರ್ಮಗುರು ಎಂ.ರಾಯಪ್ಪ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕ.ಸಾ.ಪ.ತಾಲ್ಲೂಕು ಅಧ್ಯಕ್ಷ ಎಸ್.ಡಿ.ವಿಜೇತ, ಪದವಿ ಕಾಲೇಜಿನ ಪ್ರಾಂಶುಪಾಲ ಹರೀಶ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಹ್ಯಾರಿಮೋರಸ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಮಾರ್ಗರೆಟ್ ನೆವಿಲ್, ಕ.ಸಾ.ಪ.ಪದಾಧಿಕಾರಿಗಳಾದ ಎ.ಪಿ.ವೀರರಾಜು, ಸಿ.ಎಸ್.ನಾಗರಾಜ್, ಕೆ.ಪಿ.ದಿನೇಶ್, ಜೆ.ಸಿ.ಶೇಖರ್, ಎಂ.ಎ.ರುಬಿನಾ, ಶ್ರೀಧರ್ ಹೂವಲ್ಲಿ, ಜೋಕಿಂವಾಸ್, ಜ್ಯೋತಿ ಅರುಣ್ ಮತ್ತಿತರರು ಇದ್ದರು. ವಿದ್ಯಾರ್ಥಿನಿಯರಾದ ನಿರ್ಪಿತ ಸ್ವಾಗತಿಸಿ, ಪ್ರಜ್ಞಾ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.