Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಭೆ : ಅ.16 ರಿಂದ 24ರ ವರೆಗೆ ಗಾಂಧಿ ಮೈದಾನದಲ್ಲಿ ವೈವಿಧ್ಯಮಯ ಕಾರ್ಯಕ್ರಮ : ಅಧಿಕಾರಿಗಳು ಕೈಜೋಡಿಸಲು ಜಿಲ್ಲಾಧಿಕಾರಿ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಭೆ : ಅ.16 ರಿಂದ 24ರ ವರೆಗೆ ಗಾಂಧಿ ಮೈದಾನದಲ್ಲಿ ವೈವಿಧ್ಯಮಯ ಕಾರ್ಯಕ್ರಮ : ಅಧಿಕಾರಿಗಳು ಕೈಜೋಡಿಸಲು ಜಿಲ್ಲಾಧಿಕಾರಿ ಸೂಚನೆ*

ಅಕ್ಟೋಬರ್ 6, 20234 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.6 : ವಿವಿಧ ಇಲಾಖೆಗಳ ಅಧಿಕಾರಿಗಳು ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಮಿತಿಗಳೊಂದಿಗೆ ಕೈಜೋಡಿಸುವ ಮೂಲಕ ಅತ್ಯಂತ ವ್ಯವಸ್ಥಿತವಾಗಿ ಯಶಸ್ವಿ ದಸರಾ ಆಚರಣೆಗೆ ಸಹಕಾರ ನೀಡುವಂತೆ ಕೊಡಗು ಜಿಲ್ಲಾಧಿಕಾರಿ ವೆಂಕಟ ರಾಜಾ ಅವರು ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ವೇದಿಕೆಯ ಭದ್ರತೆಯನ್ನು ಪಿ.ಡಬ್ಲ್ಯೂ.ಡಿ ಇಲಾಖೆ ಅಧಿಕಾರಿಗಳು ಗಮನಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕು ಎಂದು ಸೂಚಿಸಿದರು.

ಅಗ್ನಿ ಶಾಮಕ ಇಲಾಖೆ ಅಧಿಕಾರಿಗಳು ಕೂಡ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಸೂಕ್ತ ಸಿದ್ದತೆ ಮಾಡಬೇಕೆಂದು ಅವರು ಸೂಚಿಸಿದರು. ಕಾರ್ಯಕ್ರಮ ವ್ಯಾಪ್ತಿಯ 100-200 ಮೀಟರ್ ವ್ಯಾಪ್ತಿಯಲ್ಲಿ ಅಗ್ನಿಶಾಮಕ ದಳವನ್ನು ನಿಯೋಜಿಸುವಂತೆ ಅವರು ಸಲಹೆ ನೀಡಿದರು.

ದಸರಾ ದಿನಗಳಲ್ಲಿ ನಿರಂತರ ವಿದ್ಯುತ್ ಪೂರೈಸಲು ಸೆಸ್ಕ್ ಇಲಾಖೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ವೇದಿಕೆಯಲ್ಲಿ ಅಲಂಕಾರಿಕ ಹೂ ಕುಂಡ ವ್ಯವಸ್ಥೆಗೆ ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ ಅವರು ವೇದಿಕೆಯ ಬಳಿ ವೈದ್ಯಾಧಿಕಾರಿಗಳನ್ನು ನಿಯೋಜಿಸಬೇಕು. ಆಂಬುಲೆನ್ಸ್ ವಾಹನ ಸಿದ್ದವಿರಬೇಕು. ಮಡಿಕೇರಿ ಮತ್ತು ಗೋಣಿಕೊಪ್ಪ ಸರ್ಕಾರಿ ಆಸ್ಪತ್ರೆಗಳಲ್ಲಿ 24 ಗಂಟೆ ವೈದ್ಯರು ಸಿದ್ಧರಿರಬೇಕು ಎಂದು ನಿರ್ದೇಶನ ನೀಡಿದರು.

ಮಡಿಕೇರಿ, ಗೋಣಿಕೊಪ್ಪ ನಗರದ ಎಲ್ಲಾ ಭಾಗಗಳಲ್ಲಿಯೂ ಹೆಚ್ಚಿನ ಪೊಲೀಸ್ ನಿಯೋಜನೆ ಮಾಡುವಂತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗೆ ಜಿಲ್ಲಾಧಿಕಾರಿ ಅವರು ತಿಳಿಸಿದರು.

ನಗರಸಭಾ ಅಧ್ಯಕ್ಷೆ ಮತ್ತು ದಸರಾ ಸಮಿತಿ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಮಾತನಾಡಿ ಸಾಂಸ್ಕೃತಿಕ, ಕ್ರೀಡಾ, ಯುವ ದಸರಾ, ಮಹಿಳಾ ಮತ್ತು ಮಕ್ಕಳ ದಸರಾವನ್ನು ವ್ಯವಸ್ಥಿತವಾಗಿ ನಡೆಸಲಾಗುವುದು ಎಂದರಲ್ಲದೆ ಮಡಿಕೇರಿ ನಗರದ ಅನೇಕ ಭಾಗಗಳಲ್ಲಿ ಹೆಚ್ಚಿನ ಸಿ.ಸಿ.ಕ್ಯಾಮೆರಾ ಅಳವಡಿಸಲು ಮನವಿ ಮಾಡಿದರು.

ಈ ಬಾರಿ ಸರಕಾರ ಇದುವರೆಗೆ ದಸರಾಕ್ಕೆ ರೂ. 75 ಲಕ್ಷಕ್ಕೆ ಬಜೆಟ್‍ನ್ನು ನೀಡಿದೆ. ಇರುವ ಹಣದಲ್ಲಿಯೇ ವ್ಯವಸ್ಥಿತ ದಸರಾವನ್ನು ನಡೆಸಲಾಗುತ್ತದೆ. ಹೆಚ್ಚಿನ ಅನುದಾನವನ್ನು ಸರ್ಕಾರದಿಂದ ನಿರೀಕ್ಷೆ ಮಾಡಲಾಗಿದೆ ಎಂದರು. ದಸರಾ ಪ್ರಯುಕ್ತ ನಗರದಲ್ಲಿ 10 ದಿನಗಳ ಕಾಲವೂ ವಿದ್ಯುತ್ ದೀಪಾಲಂಕಾರ ಮಾಡಲಾಗುವುದು ಎಂದರು.

ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವುದರಿಂದ ವಾಹನ ದಟ್ಟಣೆ ಹೆಚ್ಚಾಗುವುದು. ಆದ್ದರಿಂದ ಹೊಸ ಖಾಸಗಿ ಬಸ್ ನಿಲ್ದಾಣದ ಹತ್ತಿರ ಪಾರ್ಕಿಂಗ್ ವ್ಯವಸ್ಥೆ ಮಾಡುವಂತೆ ಅನಿತಾ ಪೂವಯ್ಯ ಕೋರಿದರು.

ದಸರಾ ಸಮಿತಿ ಗೌರವ ಅಧ್ಯಕ್ಷರಾದ ಜಿ.ಚಿದ್ವಿಲಾಸ್ ಅವರು ಮಾತನಾಡಿ ಸಹಸ್ರಾರು ಮಂದಿ ಪ್ರವಾಸಿಗರು ಆಗಮಿಸುವುದರಿಂದ ತುರ್ತು ಸಹಾಯವಾಣಿಯನ್ನು ಅಗತ್ಯತೆ ಬಗ್ಗೆ ಮನವರಿಕೆ ಮಾಡಿದರು. ರಾಜಸೀಟುನ್ನು ರಾತ್ರಿ ಪೂರ್ತಿ ದಸರಾ ದಿನ ತೆರೆಯುವ ಮೂಲಕ ಪ್ರವಾಸಿ ದಟ್ಟಣೆ ಕಡಿಮೆ ಮಾಡಬಹುದು ಎಂದು ಅವರು ಸಲಹೆ ನೀಡಿದರು.

ದಶ ಮಂಟಪಗಳ ತೀರ್ಪುಗಾರರಿಗೆ ಮುಂಜಾಗ್ರತ ಕ್ರಮವಾಗಿ ಭದ್ರತಾ ವ್ಯವಸ್ಥೆಯನ್ನು ನೀಡಬೇಕು. ಹಾಗೆಯೇ ತೀರ್ಪುಗಾರರನ್ನು ಕರೆತರಲು ವ್ಯವಸ್ಥಿತವಾಗಿ ಯೋಜನೆ ರೂಪಿಸಬೇಕು ಎಂದರು. ನಗರದ ಅಲ್ಲಲ್ಲಿ ಮೊಬೈಲ್ ಶೌಚಾಲಯಗಳನ್ನು ನಿರ್ಮಿಸಬೇಕು. ಹಾಗೆಯೇ ತಾತ್ಕಾಲಿಕ ಅಂಗಡಿಗಳನ್ನು ಹಾಕುವ ವ್ಯಾಪಾರಿಗಳಿಂದ ಶುಲ್ಕ ವಸೂಲಿ ಮಾಡಬಾರದು ಎಂದು ಚಿದ್ವಿಲಾಸ್ ಅವರು ಕೋರಿದರು.

ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಮಡಿಕೇರಿ ದಸರಾ ಕುರಿತು ಪ್ರಚಾರ ಮಾಡಬೇಕು. ಪ್ರವಾಸೋದ್ಯಮ ಇಲಾಖೆ ವತಿಯಿಂದ ಜಿಲ್ಲಾ ಗಡಿಭಾಗದಲ್ಲಿ ಮತ್ತು ಮಡಿಕೇರಿಗೆ ಬರುವ ಮಾರ್ಗದಲ್ಲಿ ಸ್ವಾಗತ ಫಲಕ ಅಳವಡಿಸಬೇಕು ಎಂದು ಚಿದ್ವಿಲಾಸ್ ಅವರು ಸಲಹೆ ನೀಡಿದರು.

::: ವೈವಿಧ್ಯಮಯ ಕಾರ್ಯಕ್ರಮ ::: ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾದ ಅನಿಲ್ ಎಚ್.ಟಿ ಮಾತನಾಡಿ, ಅಕ್ಟೋಬರ್ 16 ರಿಂದ 24ರ ವರೆಗೆ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ನೀಡಲು ಸಾಂಸ್ಕೃತಿಕ ಸಮಿತಿ ಸಿದ್ಧವಾಗಿದೆ. ಈಗಾಗಲೇ ಕಲಾವಿದರು ಮತ್ತು ಕಲಾತಂಡಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಅಕ್ಟೋಬರ್ 16ರಂದು ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಾಸಕರ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟಿಸಲಿದ್ದಾರೆ.

ಅಕ್ಟೋಬರ್ 19 ರಂದು ಜಾನಪದ ದಸರಾ, 20 ರಂದು ಮಕ್ಕಳ ದಸರಾ, 22ರಂದು ಮಹಿಳಾ ದಸರಾ ಕೂಡ ಜರುಗಲಿದೆ.

ಕೊಡಗು ಮತ್ತು ಹೊರ ಜಿಲ್ಲೆಯ 40ಕ್ಕೂ ಅಧಿಕ ಕಲಾತಂಡಗಳು ಈ ಬಾರಿ ಮಡಿಕೇರಿ ದಸರಾದಲ್ಲಿ ಕಾರ್ಯಕ್ರಮ ನೀಡಲಿದ್ದಾರೆ. ದಸರಾ ಸಮಿತಿ ನೀಡಿದ ಅನುದಾನಕ್ಕೆ ಸರಿಯಾಗಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದರು.

ಶಾಸಕ ಡಾ. ಮಂತರ್ ಗೌಡ ಅವರ ಮುತುವರ್ಜಿಯಲ್ಲಿ ಮಹಿಳಾ ದಸರಕ್ಕೆ ಕರ್ನಾಟಕದ ಹೆಸರಾಂತ ಗಾಯಕರು ಕಾರ್ಯಕ್ರಮ ನೀಡಲು ಆಗಮಿಸುವ ಸಾಧ್ಯತೆ ಇದೆ. ಶಾಸಕರ ಸಲಹೆಯಂತೆ ವಿಜಯದಶಮಿ ದಿನ ಖ್ಯಾತ ಟೆನ್ನಿಸ್ ತಾರೆ ಕೊಡಗಿನ ರೋಹನ್ ಬೋಪಣ್ಣ ಅವರನ್ನು ಸನ್ಮಾನಿಸಲಾಗುತ್ತದೆ ಎಂದು ಅನಿಲ್ ಮಾಹಿತಿ ನೀಡಿದರು.

ದಸರಾ ಸಮಿತಿ ಅಧ್ಯಕ್ಷೆ ಅನಿತಾ ಪೂವಯ್ಯ ಮತ್ತು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ ನೀಡಿದ ಸಲಹೆ ನೀಡಿದ ಮೇರೆಗೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬರುವ ಪ್ರೇಕ್ಷಕರಿಗೆ ಕಾಫಿ ಮಂಡಳಿಯಿಂದ ಬಿಸಿ ಕಾಫಿ ವಿತರಿಸುವ ಬಗ್ಗೆ ತಾನು ಕಾಫಿ ಮಂಡಳಿ ಕಾರ್ಯದರ್ಶಿ ಡಾ. ಜಗದೀಶ್ ಅವರೊಂದಿಗೆ ಮಾತನಾಡುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದರು.

ಮಡಿಕೇರಿ ದಸರಾ ದಶಮಂಟಪ ಸಮಿತಿ ಅಧ್ಯಕ್ಷರಾದ ಮಂಜುನಾಥ್ ಮಾತನಾಡಿ ದಶಮಂಟಪದ ಅನುದಾನ ದಸರಾ ಆರಂಭಕ್ಕೆ ಮುನ್ನವೇ ಸಿಗಬೇಕು ಎಂದು ಜಿಲ್ಲಾಧಿಕಾರಿಯೊಂದಿಗೆ ಕೋರಿದರು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದರು.

ದಸರಾ ಸಮಿತಿ ಪದಾಧಿಕಾರಿ ಎಂ.ಬಿ.ದೇವಯ್ಯ ಮಾತನಾಡಿ ತ್ವರಿತ ಗತಿಯಲ್ಲಿ ರಸ್ತೆ ಕಾಮಗಾರಿ ನಡೆಯಬೇಕು. ರಸ್ತೆ ಬದಿಯಲ್ಲಿನ ಕಾಡನ್ನು ಆದಷ್ಟು ಬೇಗ ತೆರವುಗೊಳಿಸಬೇಕು ಎಂದರು. ಪ್ರಮುಖರಾದ ಕೆ.ಎಸ್ ರಮೇಶ್, ಅಬ್ದುಲ್ ರಜಾಕ್. ಅರುಣ್ ಶೆಟ್ಟಿ ಎ.ಸಿ.ದೇವಯ್ಯ, ವೇದಿಕೆ ಸಮಿತಿ ಅಧ್ಯಕ್ಷರಾದ ಕನ್ನಂಡ ಕವಿತಾ, ಬೈ.ಶ್ರೀ.ಪ್ರಕಾಶ್ ಮಾತನಾಡಿ ದಸರಾಕ್ಕೆ ಬೇಕಾಗುವಂತಹ ವಸ್ತುಗಳನ್ನು ತರಲು ಅನುಮತಿ ನೀಡಬೇಕು. ಕ್ರೀಡಾ ಸಮಿತಿಗೆ ಮೈದಾನವನ್ನು ಉಚಿತವಾಗಿ ನೀಡಬೇಕು. ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು ಇದರ ಬಗ್ಗೆ ಗಮನಹರಿಸಬೇಕು ಎಂದು ಕೋರಿದರು.

ಮಡಿಕೇರಿ ನಗರದ ಪ್ರತಿಯೊಂದು ಅಂಗಡಿಗಳಲ್ಲಿಯೂ ಕಸದ ಬುಟ್ಟಿಯನ್ನು ಇರಿಸಲು ಸೂಚಿಸಬೇಕು. ದಶಮಂಟಪ ಪರಿಶೀಲನೆಗೆ ಪಿಡಬ್ಲ್ಯೂಡಿ ಇಲಾಖೆಯನ್ನು ನಿಯೋಜಿಸಬೇಕು ಎಂದು ದಸರಾ ಸಮಿತಿ ಪ್ರಮುಖ ಸದಸ್ಯರು ಮನವಿ ಮಾಡಿಕೊಂಡರು.

ಉಪ ಪೊಲೀಸ್ ವರಿಷ್ಠಾಧಿಕಾರಿ ಕೆ.ಸುಂದರರಾಜ್, ಮಡಿಕೇರಿ ದಸರಾ ಸಮಿತಿ ಕಾರ್ಯಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ, ಗೋಣಿಕೊಪ್ಪ ದಸರಾ ಸಮಿತಿ ಕಾರ್ಯಧ್ಯಕ್ಷರಾದ ಪ್ರಮೋದ್, ಪೊಲೀಸ್ ಅಧಿಕಾರಿ ಮೇದಪ್ಪ, ಮಡಿಕೇರಿ ನಗರಸಭೆ ಪೌರಾಯುಕ್ತರಾದ ವಿಜಯ್ ಸೇರಿದಂತೆ ಪ್ರಮುಖರು ಹಲವು ಸಲಹೆಗಳನ್ನು ನೀಡಿದರು.

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾವನ್ನು ಪ್ರತಿವರ್ಷದಂತೆ ಈ ವರ್ಷವೂ ವ್ಯವಸ್ಥಿತವಾಗಿ ಯಶಸ್ವಿಯಾಗಿ ಆಚರಿಸಲು ಜಿಲ್ಲಾಡಳಿತ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಜಿಲ್ಲಾಧಿಕಾರಿ ಅವರು ಈ ಸಂದರ್ಭ ತಿಳಿಸಿದರು.  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದಲ್ಲಿ…

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.