Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ 69ನೇ ವನ್ಯಜೀವಿ ಸಪ್ತಾಹ ಸಮಾರೋಪ  : ಅರಣ್ಯ, ವನ್ಯಜೀವಿಗಳ ಸಂರಕ್ಷಣೆ ಎಲ್ಲರ ಹೊಣೆ : ಜಿ.ಪಂ ಸಿಇಓ ವರ್ಣಿತ್ ನೇಗಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ 69ನೇ ವನ್ಯಜೀವಿ ಸಪ್ತಾಹ ಸಮಾರೋಪ  : ಅರಣ್ಯ, ವನ್ಯಜೀವಿಗಳ ಸಂರಕ್ಷಣೆ ಎಲ್ಲರ ಹೊಣೆ : ಜಿ.ಪಂ ಸಿಇಓ ವರ್ಣಿತ್ ನೇಗಿ*

ಅಕ್ಟೋಬರ್ 7, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, ಅ.7 : ಪರಿಸರ ಸಮತೋಲನ ಕಾಪಾಡಲು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಬಹಳ ಅಗತ್ಯವಾಗಿದ್ದು, ಜೀವ ಸಂಕುಲ ವ್ಯವಸ್ಥೆಯಲ್ಲಿ ವನ್ಯಜೀವಿಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವರ್ಣಿತ್ ನೇಗಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕರ್ನಾಟಕ ಅರಣ್ಯ ಇಲಾಖೆಯ ಕೊಡಗು ಅರಣ್ಯ ವೃತ್ತ ಹಾಗೂ ಮಡಿಕೇರಿ ವನ್ಯಜೀವಿ ವಿಭಾಗದ ವತಿಯಿಂದ  ನಗರದ ಪೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕ, ಕಾಲೇಜಿನ ಎನ್.ಸಿ.ಸಿ.,ಘಟಕದ ಸಂಯುಕ್ತಾಶ್ರಯದಲ್ಲಿ “ವನ್ಯಜೀವಿಗಳ ಸಂರಕ್ಷಣೆಗಾಗಿ ಪಾಲುಗಾರಿಕೆ” ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಂಡಿದ್ದ 69ನೇ ವನ್ಯಜೀವಿ ಸಪ್ತಾಹ : 2023 ದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು,
ಪ್ರತಿಯೊಬ್ಬರೂ ಅರಣ್ಯ ಹಾಗೂ ವನ್ಯಜೀವಿಗಳನ್ನು ಸಂರಕ್ಷಿಸುವುದರೊoದಿಗೆ ಜೀವ ವೈವಿಧ್ಯವನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗಾಗಿ ಉತ್ತಮ ಪರಿಸರವನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.
ವನ್ಯಜೀವಿಗಳು ಮತ್ತು ಮಾನವನ ನಡುವೆ ಉಂಟಾಗುತ್ತಿರುವ ಸಂಘರ್ಷವನನ್ನು ತಡೆಯುವ ಮೂಲಕ‌ ವನ್ಯಜೀವಿಗಳ ಸಂರಕ್ಷಣೆಗೆ ಪಣ ತೊಡಬೇಕಿದೆ ಎಂದರು.
ಅರಣ್ಯ ಇಲಾಖೆಯು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ವಹಿಸಿರುವ ವಿಶೇಷ ಕಾಳಜಿಯನ್ನು ಶ್ಲಾಘನೀಯವಾದುದು. ಈ ದಿಸೆಯಲ್ಲಿ ನಾವೆಲ್ಲರೂ ಸೇರಿ ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸೋಣ ಎಂದು ಸಿಇಓ ವರ್ಣಿತ್ ನೇಗಿ ಮನವಿ ಮಾಡಿದರು.
ವನ್ಯಜೀವಿ ಸಪ್ತಾಹದ ಉದ್ದೇಶ ಹಾಗೂ “ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ಸಮುದಾಯದ ಸಹಭಾಗಿತ್ವ” ಕುರಿತು ಮಾಹಿತಿ ನೀಡಿ ಮಾತನಾಡಿದ ಮಡಿಕೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಶಿವರಾಮ್ ಬಾಬು ಪರಿಸರದಲ್ಲಿ ಜೇನುನೊಣಗಳ ಪಾತ್ರ ಅತಿ ಮುಖ್ಯವಾಗಿದ್ದು, ಇವುಗಳು
ಆಹಾರ ಸರಪಳಿ ಮತ್ತು ಪರಿಸರ ವ್ಯವಸ್ಥೆಯ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿವೆ. ಜೇನುನೊಣವಾಗಲೀ, ಯಾವುದೇ ಜೀವ ಸಂಕುಲವಿಲ್ಲದೇ ನಮ್ಮ ಪರಿಸರ ವ್ಯವಸ್ಥೆಯನ್ನು ಊಹಿಸಲು ಕಷ್ಟಸಾಧ್ಯ. ಆದ್ದರಿಂದ, ಪ್ರತಿಯೊಬ್ಬರೂ ಪರಿಸರದಲ್ಲಿ ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆಗಾಗಿ ಅರಣ್ಯ ಇಲಾಖೆಯೊಂದಿಗೆ ಕೈ ಜೋಡಿಸುವ ಮೂಲಕ ಪರಿಸರ ಸಂರಕ್ಷಣೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಮಾತನಾಡಿ, ಅರಣ್ಯಕ್ಕೆ ನಾವು ಯಾವುದೇ ಹಾನಿಯನ್ನು ಉಂಟುಮಾಡದೇ ಸಸ್ಯ ಹಾಗೂ ಪ್ರಾಣಿ ಸಂಕುಲದ ಸಂರಕ್ಷಣೆ ಮೂಲಕ ವನ್ಯಜೀವಿಗಳ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಅರಣ್ಯ ಸಂರಕ್ಷಣೆಗೆ ಅರಣ್ಯ ಇಲಾಖೆಯವರು ಹೆಚ್ಚಿನ ಜವಾಬ್ದಾರಿಯಿಂದ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯವಾದುದು.
ನಾವೆಲ್ಲರೂ ಅವರೊಂದಿಗೆ ಕೈಜೋಡಿಸಿ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಸಹಕರಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.
ವನ್ಯಜೀವಿಗಳ ಸಂರಕ್ಷಣೆಯ ಮಹತ್ವದ ಕುರಿತು ಮಾಹಿತಿ ನೀಡಿದ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ ಬಿ.ರಾಘವ ಮಾತನಾಡಿ, ಅರಣ್ಯ ಮತ್ತು ಜೀವಿ ಸಂಕುಲದ ಉಳಿವು ನಮ್ಮೆಲ್ಲರ ಉಳಿವು. ಹಾಗಾಗಿ, ನಾವೆಲ್ಲರೂ ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸುವ ಮೂಲಕ ಉತ್ತಮ ಭವಿಷ್ಯಕ್ಕಾಗಿ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಬದ್ಧರಾಗಬೇಕು ಎಂದರು.

ಮುಂದಿನ ಪೀಳಿಗೆಗಾಗಿ ನಾವು ಅಳಿವಿನಂಚಿನಲ್ಲಿರುವ ಜೀವ ಪ್ರಭೇದಗಳನ್ನು ಸಂರಕ್ಷಿಸುವ ಮೂಲಕ ಅರಣ್ಯ ಮತ್ತು ವನ್ಯಜೀವಿಗಳನ್ನು ಸಂರಕ್ಷಿಸುವುದು ನಮ್ಮ ಆದ್ಯ ಕರ್ತವ್ಯ ಆಗಿದೆ ಎಂದರು.
ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ (ಕರಾವಿಪ) ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ, ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್, ಅಮೂಲ್ಯ ಸಸ್ಯ ಮತ್ತು ಪ್ರಾಣಿ ಸಂಪತ್ತು ಹೊಂದಿರುವ ಪಶ್ಚಿಮಘಟ್ಟ ಸಂರಕ್ಷಣೆ ಹಾಗೂ ವನ್ಯಜೀವಿಗಳ ಸಂರಕ್ಷಣೆಗಾಗಿ ನಾವು ಪಣ ತೊಡಬೇಕಿದೆ ಎಂದರು.
ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ಜಿಲ್ಲೆಯ ಶಾಲಾ – ಕಾಲೇಜುಗಳಲ್ಲಿ ಇಕೋ ಕ್ಲಬ್‌, ಎನ್.ಸಿ.ಸಿ., ಎನ್.ಎಸ್.ಎಸ್.ಘಟಕಗಳ ವಿದ್ಯಾರ್ಥಿಗಳ ಮೂಲಕ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಜನಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ (ಎಸಿಎಫ್) ಶ್ರೀನಿವಾಸ್ ನಾಯಕ್, ಎ.ಎ.ಗೋಪಾಲ್, ಪುಷ್ಪಗಿರಿ ವನ್ಯಜೀವಿ ವಲಯ ಅರಣ್ಯಾಧಿಕಾರಿ ಜೆ.ಅನನ್ಯಕುಮಾರ್, ತಲಕಾವೇರಿ ವನ್ಯಜೀವಿ ವಲಯ ಅರಣ್ಯಾಧಿಕಾರಿ ಕೆ.ಕೊಟ್ರೇಶ್, ಆರ್ ಎಫ್ ಓ ಕೆ.ಎಂ. ಮರಿಸ್ವಾಮಿ, ಕಛೇರಿಯ ಮೇಲ್ವಿಚಾರಕಿ ಜೆ.ಸಿ. ಕಾಂತಮತಿ, ಡಿಆರ್ ಎಫ್ ಓ ಗಳಾದ ಡಿ ಆರ್ ಎಫ್ ಓ ಅನಿಲ್ ಡಿಸೋಜ, ಎಂ.ಗಣೇಶ್, ಎನ್.ಎಲ್.ಚೇತನ್, ಆನಂದ್, ಶ್ರೀಧರ್, ಸಿಬ್ಬಂದಿ ಯೋಗೇಶ್, ಇಲಾಖೆಯ ವಿವಿಧ ಹಂತದ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು. ಶಿಕ್ಷಕಿ ಎಸ್.ಡಿ.ಅನಿತಾ ಕಾರ್ಯಕ್ರಮ ನಿರೂಪಿಸಿದರು.
ಇದೇ ವೇಳೆ ವನ್ಯಜೀವಿ ವಿಭಾಗದಲ್ಲಿ ಉತ್ತಮ ಸೇವೆ ಸಲ್ಲಿಸಿದ ಎಂಟು ಮಂದಿ ಅರಣ್ಯ ವೀಕ್ಷಕರನ್ನು ಸನ್ಮಾನಿಸಿ ಗೌರವಿಸಿ ಅಭಿನಂದನಾ ಪತ್ರ ನೀಡಲಾಯಿತು.  ವನ್ಯಜೀವಿ ಸಪ್ತಾಹದ ಅಂಗವಾಗಿ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತಗೊಂಡ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ನಗರದ ಎಫ್ ಎಂ ಸಿ ಕಾಲೇಜಿನ ಎನ್.ಸಿ.ಸಿ.ಕೆಡೆಟ್ ಗಳು, ವಿದ್ಯಾರ್ಥಿಗಳು, ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್.ಘಟಕದ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಉಪನ್ಯಾಸಕ ವೃಂದ ಮತ್ತು
ವಿದ್ಯಾರ್ಥಿಗಳು, ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ವನ್ಯಜೀವಿ ಸಪ್ತಾಹ : 2023 ರ ಜನಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ , ಎನ್ನೆಸ್ಸೆಸ್ ಘಟಕಗಳು, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ (ಕರಾವಿಪ) ಕೊಡಗು ಜಿಲ್ಲಾ ಸಮಿತಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆ ಸೇರಿದಂತೆ ವಿವಿಧ ಸಂಘಟನೆಗಳು ಭಾಗವಹಿಸಿ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಜಾಗೃತಿ ಮೂಡಿಸಿದವು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.