Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ದೇಸಿ ಜಗಲಿ ಕಥಾ ಕಮ್ಮಟ : ಓದುಗರ ಸಂಖ್ಯೆ ಹೆಚ್ಚಾಗಬೇಕು : ವೀರಕ ಪುತ್ರ ಶ್ರೀನಿವಾಸ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ದೇಸಿ ಜಗಲಿ ಕಥಾ ಕಮ್ಮಟ : ಓದುಗರ ಸಂಖ್ಯೆ ಹೆಚ್ಚಾಗಬೇಕು : ವೀರಕ ಪುತ್ರ ಶ್ರೀನಿವಾಸ್*

ಅಕ್ಟೋಬರ್ 7, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.7 : ಕನ್ನಡದ ಮೂಲ ನೆಲೆಯಾಗಿರುವ ಕರ್ನಾಟಕದಲ್ಲಿ ಕನ್ನಡ ಪುಸ್ತಕಗಳು ಬೇಡಿಕೆ ಹೆಚ್ಚುವುದರ ಜೊತೆಗೆ ಓದುಗರ ಸಂಖ್ಯೆಯೂ ಅಧಿಕವಾಗಬೇಕು ಎಂದು ಬೆಂಗಳೂರು ವೀರಲೋಕ ಪ್ರಕಾಶನದ ಅಧ್ಯಕ್ಷರಾದ ವೀರಕ ಪುತ್ರ ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ವೀರಲೋಕ ಪ್ರಕಾಶನ, ಕರ್ನಾಟಕ ಜಾನಪದ ಪರಿಷತ್ ಕೊಡಗು ಘಟಕ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾಗಿರುವ ದೇಸಿ ಜಗಲಿ ಕಥಾ ಕಮ್ಮಟವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಏಳು ಕೋಟಿ ಕನ್ನಡಿಗರಿದ್ದಾರೆ, ಆದರೆ ಐವತ್ತು ಕನ್ನಡ ಪುಸ್ತಕಗಳನ್ನು ಕೊಂಡು ಓದುವಂತಾಗಬೇಕು ಕನ್ನಡ ಸಾಹಿತ್ಯ ಹಾಗೂ ಸಾಹಿತಿಗಳಿಗೆ ಸೂಕ್ತ ಪ್ರೋತ್ಸಾಹ ದೊರೆಯಬೇಕು ಎಂದರು.
ವೀರಲೋಕ ಪ್ರಕಾಶನ ಕನ್ನಡ ಬರಹಗಾರರ ಪುಸ್ತಕಗಳನ್ನು ಹೊರತರಲು ಮುಂದಾಗುವುದರೊಂದಿಗೆ ಪುಸ್ತಕಗಳಿಗೆ ಸೂಕ್ತ ಮಾರುಕಟ್ಟೆ ದೊರೆಯುವಂತೆ ಮಾಡಲು ತೊಡಗಿಸಿಕೊಳ್ಳಲಾಗಿದ್ದು, ಕನ್ನಡ ಬರಹಗಾರರನ್ನೂ ಮೇಲೆತ್ತುವ ಪ್ರಯತ್ನಕ್ಕೆ ಮುಂದಾಗಲಾಗಿದೆ ಎಂದು ಶ್ರೀನಿವಾಸ್ ಅವರು ತಿಳಿಸಿದರು.
ಈ ದಿಸೆಯಲ್ಲಿ ಬೆಂಗಳೂರಿನಲ್ಲಿ 300 ಕಡೆಗಳಲ್ಲಿ ಪುಸ್ತಕ ಮಾರಾಟ ಕೇಂದ್ರಗಳನ್ನು ತೆರೆಯಲಾಗಿದೆ, ಮೊಬೈಲ್ ಮೂಲಕ ಜನರಿಗೆ ವಿವಿಧ ಉತ್ಪನ್ನಗಳ ಮಾಹಿತಿ ನೀಡುವಂತೆ ಕನ್ನಡ ಪುಸ್ತಕಗಳ ಬಗ್ಗೆಯೂ ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಿದರು.
ಕನ್ನಡ ಸಾಹಿತ್ಯದ ಬೆಳವಣಿಗೆಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕಥಾ ಕಮ್ಮಟಗಳನ್ನು ಆಯೋಜಿಸಲಾಗುತ್ತಿದ್ದು, ಕೊಡಗಿನಲ್ಲಿ ಆಯೋಜನೆಗೊಂಡಿರುವ ಈ ಕಥಾ ಕಮ್ಮಟ 15 ನೇ ಕಾರ್ಯಕ್ರಮವಾಗಿದೆ ಎಂದು ಅವರು ಮಾಹಿತಿ ನೀಡಿದರು. ಮಕ್ಕಳು ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದ ಶ್ರೀನಿವಾಸ್ ಪುಸ್ತಕಗಳನ್ನು ಓದುವುದರಿಂದ ಬದುಕಿನಲ್ಲಿ ಬದಲಾವಣೆ ಸಾಧ್ಯ ಎಂದು ನುಡಿದರು.
ಲೇಖಕ, ಚಿಂತಕರಾದ ಡಾ.ಮೋಹನ್ ಪಾಳೇಗಾರ್ ಮಾತನಾಡಿ ಪ್ರಸ್ತುತ ಕಾಲ ಘಟ್ಟದಲ್ಲಿ ಮಕ್ಕಳಲ್ಲಿ ಏಕಾಗ್ರತೆ ಎಂಬುದು ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಏಕಾಗ್ರತೆಯನ್ನು ಕಲಿಸುವ ನಿಟ್ಟಿನಲ್ಲಿ ಇಂತಹ ಕಮ್ಮಟಗಳು ಸಹಕಾರಿಯಾಗಲಿವೆ ಎಂದರು.
ನಿರಂತರವಾಗಿ ಬರೆಯುವುದರಿಂದ ಬರವಣಿಗೆ ಉತ್ತಮಗೊಳ್ಳುತ್ತದೆ ಎಂದು ನುಡಿದ ಅವರು ನಿರಂತರವಾಗಿ ಓದುವುದರಿಂದ ಜ್ಞಾನ ವೃದ್ಧಿ ಸಾಧ್ಯವಾಗುತ್ತದೆ. ಜಾನಪದ ಬದುಕಿನ ಅವಿಭಾಜ್ಯ ಅಂಗವಾಗಿದ್ದು ಅದನ್ನು ಎಂದಿಗೂ ಬಿಡಬಾರದು. ಜಾನಪದವನ್ನು ಮರೆತರೆ ಬದುಕು ನಶ್ವರವಾದಂತೆ ಎಂದು ಎಚ್ಚರಿಸಿದ ಮೋಹನ್ ಪಾಳೇಗಾರ್ ಮರೆಯಾಗುತ್ತಿರುವ ಸಂಸ್ಕೃತಿ ಸಂಪ್ರದಾಯದ ಬಗ್ಗೆ ಜಾಗೃತಿ ಮೂಡಿಸಿ; ಉಳಿಸಿ ಬೆಳೆಸಲು ಇಂತಹ ಕಮ್ಮಟಗಳ ಆಗಾಗ ಜರುಗಬೇಕು ಎಂದರು.
ವೀರಲೋಕ ಪ್ರಕಾಶನದ ಕೊಡಗು ಜಿಲ್ಲಾ ಯೋಜನಾ ಸಂಘಟಕರಾದ ಬಿ.ಜಿ.ಅನಂತಶಯನ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಮನಸಾರೆ ಪ್ರತಿಯೊಬ್ಬರು ಓದುವ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು. ಕನ್ನಡ ಪುಸ್ತಕಗಳನ್ನು ಓದುವ ಮೂಲಕ ಕನ್ನಡ ಭಾಷೆ ಬೆಳವಣಿಗೆಗೆ ಪಣ ತೊಡಬೇಕೆಂದು ನುಡಿದರು.
ಕಾಲೇಜಿನ ಪ್ರಾಂಶುಪಾಲರಾದ ವಿಜಯ ಅವರು ಮಾತನಾಡಿ ಬರೆಯುವ ಕಥೆಗಳು ಸಮಾಜಕ್ಕೆ ಬೆಳಕು ತೋರುವಂತಿರಬೇಕೆ ಹೊರತು ಸಮಾಜದ ಅಶಾಂತಿಗೆ ಕಾರಣವಾಗಬಾರದು ಎಂದು ಹೇಳಿದರು.
ಬರಹಗಾರರು ತರಬೇತುದಾರರಾದ ಪ್ರಭಾಕರ ಶಿಶಿಲ ಅವರು ಮಾತನಾಡಿ ಈ ಎಲ್ಲಾ ಸಂಸ್ಥೆಗಳು ಸೇರಿ ಕೊಡಗಿನಲ್ಲಿ ಪುಸ್ತಕ ಭಂಡಾರ ಆರಂಭಿಸುವಂತೆ ಸಲಹೆ ನೀಡಿದರು.
ಸಾಹಿತಿಗಳಾದ ಸ್ಮಿತಾ ಅಮೃತರಾಜ್ ಮಾತನಾಡಿ ಬದುಕನ್ನು ಪ್ರೀತಿಸಲು ಬರಹದಿಂದ ಮಾತ್ರ ಸಾಧ್ಯ ಎಂದರು. ಸುನೀತ ಲೋಕೇಶ್ ಮಾತನಾಡಿ ಬರವಣಿಗೆ ಮೂಲಕ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು. ಸಹನಾ ಕಾಂತಬೈಲು ಮಾತನಾಡಿ ಓದುವ ಹವ್ಯಾಸ ರೂಢಿಸಿಕೊಂಡರೆ ಬರವಣಿಗೆ ತಾನಾಗಿಯೆ ಉತ್ತಮಗೊಳ್ಳುತ್ತದೆ ಎಂದರು. ನೌಶಾದ್ ಮಾತನಾಡಿ ಮಕ್ಕಳು ಹೆಚ್ಚೆಚ್ಚು ಬರೆಯುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದರು.
ಜಾನಪದ ಪರಿಷತ್ ಕೊಡಗು ಘಟಕದ ಉಪಾಧ್ಯಕ್ಷರುಗಳಾದ ಶೋಭಾ ಸುಬ್ಬಯ್ಯ, ಅಂಬೆಕಲ್ ಕುಶಾಲಪ್ಪ, ರವೀಂದ್ರ ರೈ, ಕಾರ್ಯದರ್ಶಿ ಉಜ್ವಲ್ ರಂಜಿತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಎಚ್.ಟಿ. ಉಪಸ್ಥಿತರಿದ್ದರು. ಇದೇ ಸಂದರ್ಭ ಪ್ರಭಾಕರ ಶಿಶಿಲ ಹಾಗೂ ಮೋಹನ್ ಪಾಳೇಗಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಅಜಯ್‍ಸೂದ್ ಪ್ರಾರ್ಥಿಸಿ, ಕಥಾ ಕಮ್ಮಟ ಸಹ ಸಂಚಾಲಕಿ ರೇವತಿ ರಮೇಶ್ ನಿರೂಪಿಸಿ, ಕಥಾ ಕಮ್ಮಟ ಸಂಚಾಲಕ ಎಸ್.ಎಸ್. ಸಂಪತ್‍ಕುಮಾರ್ ಸ್ವಾಗತಿಸಿದರು. ರವೀಂದ್ರ ರೈ ವಂದಿಸಿದರು.
ದೇಸಿ ಜಗಲಿ ಕಥಾ ಕಮ್ಮಟ ಎರಡು ದಿನಗಳ ಕಾಲ ನಡೆಯಲಿದ್ದು ಬರಹಗಾರರು ಹಾಗೂ ತರಬೇತುದಾರರಾದ ಬಿ. ಪ್ರಭಾಕರ ಶಿಶಿಲ ಅವರು ತರಬೇತಿ ನೀಡಲಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.