Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್‌ ಎಚ್ಚರಿಕೆ*
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ಜನಾಗ್ರಹ ಚಳುವಳಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ಜನಾಗ್ರಹ ಚಳುವಳಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಅಕ್ಟೋಬರ್ 7, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.7 : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ರಾಜ್ಯದ ಅಸಂಘಟಿತ ಕಾರ್ಮಿಕರಿಗೆ ಘೋಷಿಸಿದ್ದ 6ನೇ ಗ್ಯಾರಂಟಿ ಯೋಜನೆಯನ್ನು ಜಾರಿಗೋಳಿಸಬೇಕೆಂದು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಜನಾಗ್ರಹ ಚಳುವಳಿ ನಡೆಸಿತು.
ಎಐಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ನೇತೃತ್ವದಲ್ಲಿ ನಗರದ ಕಳೆ ಖಾಸಗಿ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ಕಾರ್ಯಕರ್ತರು, ಘೋಷಣೆಗಳ ಮೂಲಕ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ಮೂಲಕ ಸಾಗಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ಅಸಂಘಟಿತ ಕಾರ್ಮಿಕರಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15,000 ರೂ.ಗಳು, ಸಹಾಯಕಿಯರಿಗೆ 10,000 ರೂ.ಗಳ ಗೌರವ ಧನ ಹೆಚ್ಚಿಸುವ ಕುರಿತು ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 8 ಸಾವಿರ ರೂ.ಗಳು, ಅಕ್ಷರ ದಾಸೋಹ ಬಿಸಿಯೂಟ ಕಾರ್ಯಕರ್ತೆಯರಿಗೆ ಮಾಸಿಕ 6,000ರೂ.ಗಳ ಗೌರವ ಧನ ಹೆಚ್ಚಿಸುವ ಕುರಿತು ಚುನಾವಣಾ ಸಂದರ್ಭದಲ್ಲಿ ಭರವಸೆಯನ್ನು ಈಡೇರಿಸುವಂತೆ ಆಗ್ರಹಿಸಿದರು.
ಕೊಡಗಿನ ಕಾರ್ಮಿಕರಿಗೆ, ಕಟ್ಟಡ ಕಾರ್ಮಿಕರಿಗೆ ಹಾಗೂ ದಲಿತರಿಗೆ ನಿವೇಶನ ಹಂಚಬೇಕು, ಮಾನವ ಹಾಗೂ ಕಾಡು ಪ್ರಾಣಿಗಳ ಸಂಘರ್ಷ ಶಾಸ್ವತವಾಗಿ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು, ಮರಳಿನ ಸಮಸ್ಯೆಯನ್ನು ಪರಿಹರಿಸಬೇಕು, ಕೊಡಗಿನ ಕಟ್ಟಡ ಕಾರ್ಮಿಕರನ್ನು ಖಾಸಗಿ ಆಸ್ಪತ್ರೆಗಳಲ್ಲಿ ನೋಂದಾಯಿಸಿಕೊಳ್ಳಲು ಅನುಮತಿ ನೀಡಬೇಕು, ಕಟ್ಟಡ ಹಾಗೂ ಇತರೆ ಕಾರ್ಮಿಕ ವರ್ಗದ ಮಕ್ಕಳಿಗೆ ಸರ್ಕಾರದಿಂದ ಸ್ಕಾಲರ್ಶಿಪ್ ಪಡೆಯಲು ಅವಕಾಶ ನೀಡಬೇಕು, ಕೊಡಗಿನ ಡಯಾಲಿಸಿಸ್‍ಗಾಗಿ ಕೇವಲ 20 ಹಾಸಿಗೆಗಳಿದ್ದು, ಅದನ್ನು 30ಕ್ಕೆ ಏರಿಕೆ ಮಾಡಬೇಕು, ಡಯಾಲಿಸಿಸ್ ನೌಕರರಿಗೆ ಸೌಲಭ್ಯಗಳನ್ನು ಕಲ್ಪಿಸಿ, ಸಮಯಕ್ಕೆ ಸರಿಯಾಗಿ ವೇತನ ನೀಡಬೇಕು ಎಂದು ಒತ್ತಾಯಿಸಿದರು.
ಕೊಡಗಿನ ಆಸ್ಪತ್ರೆಗಳಲ್ಲಿ ಕಿಡ್ನಿ, ಹೃದಯ ಸಂಬಂಧಿ ವೈಫಲ್ಯದಿಂದ ಸಾವನ್ನಪ್ಪುವವರ ಸಂಖ್ಯೆ ಅಧಿಕವಿದ್ದು, ತಕ್ಷಣವೇ ನುರಿತ ವೈದ್ಯರನ್ನು ನೇಮಕ ಮಾಡಬೇಕು, ಕೃಷಿ ಕಾಯಿದೆ, ಎಪಿಎಂಸಿ ಕಾಯಿದೆಗಳನ್ನು ರದ್ದುಗೊಳಿಸಬೇಕು, ರೈತರ ಮೇಲೆ ದಾಖಲಾಗಿರುವ ರಾಜಕೀಯ ಪ್ರೇರಿತ ಮೊಕದ್ದಮೆಗಳನ್ನು ವಾಪಸ್ಸು ಪಡೆಯಬೇಕು, ಫ್ಯಾಕ್ಟರಿ ಕಾಯಿದೆಗೆ ತಂದಿದ್ದ ಕೆಸಲದ ಅವಧಿಯನ್ನು ಹಿಂದಿನಂತೆ 8 ಗಂಟೆಗೆ ಮಿತಗೊಳಿಸವೇಕು, ರಾತ್ರಿ ಪಾಳಿಯಲ್ಲಿ ಮಹಿಳೆಯರನ್ನು ದುಡಿಸುವ ಕಾನೂನು ತಿದ್ದುಪಡಿಯನ್ನು ಹಿಂಪಡೆಯಬೇಕು, ಕಟ್ಟಡ ಕಾರ್ಮಿಕರ ಮನೆ ನಿರ್ಮಾಣಕ್ಕೆ ರೂ.5 ಲಕ್ಷ ಸಹಾಯಧನ ನೀಡಬೇಕು, ಅತಿಥಿ ಶಿಕ್ಷಕರು ಮತ್ತು ಉಪಾನ್ಯಾಸಕರನ್ನು ಖಾಯಂ ಗೊಳಿಸಬೇಕು ಸೂಕ್ತ ಯೋಜನೆ ರೂಪಿಸಬೇಕು, ವರ್ಷಕ್ಕೆ 2500 ಸರ್ಕಾರಿ ಶಾಲೆಗಳನ್ನು ಸ್ಮಾರ್ಟ್ ಶಾಲೆಗಳನ್ನಾಗಿ ಉನ್ನತೀಕರಿಸಬೇಕು, ಖಾಲಿ ಇರುವ ಶಿಕ್ಷಕರ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಬೇಕು, ರಾಜ್ಯದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಸಿಪಿಐ ರಾಜ್ಯ ಸಮಿತಿ ಸದಸ್ಯ ಧರ್ಮರಾಜ್, ಜಿಲ್ಲಾ ಕಾರ್ಯದರ್ಶಿ ಕೆ.ವಿ.ಸುನಿಲ್, ಡಿ.ಆರ್.ಎಂ ಅಧ್ಯಕ್ಷ ರಮೇಶ್ ಮಾಯಮುಡಿ, ಎ.ಐ.ಟಿ.ಯು.ಸಿ.ಉಪಾಧ್ಯಕ್ಷೆ ಎನ್.ಮಣಿ, ಕಟ್ಟಡ ಕಾರ್ಮಿಕ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಎಂ.ಎ.ಕೃಷ್ಣ, ಸಿಪಿಐ ಸೋಮವಾರಪೇಟೆ ತಾಲೂಕು ಕಾರ್ಯದರ್ಶಿ ಎಸ್.ಹೆಚ್. ಶಬಾನ, ವಿದ್ಯಾರ್ಥಿ ಸಂಘದ ಅಧ್ಯಕ್ಷ ರಫಿಕ್ ನಲಗುಂದ ಪ್ರಮುಖರಾದ ಶಾಂತಿ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಬೇಡಿಕೆಯ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್‌ ಎಚ್ಚರಿಕೆ*

ಸೆಪ್ಟೆಂಬರ್ 2, 2026

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು ಸೆ.1 NEWS DESK : ಮೂರ್ನಾಡು ಸಹಕಾರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ 102ನೇ ವಾರ್ಷಿಕ  ಕೈಲ್ ಪೊಳ್ದ್  ಹಬ್ಬದ…

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.