Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಗಮನ ಸೆಳೆದ ಶಾಪಿಂಗ್ ಉತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸ್ವ ಉದ್ಯೋಗ ಸಹಕಾರಿ : ವೀಣಾ ಅಚ್ಚಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಗಮನ ಸೆಳೆದ ಶಾಪಿಂಗ್ ಉತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸ್ವ ಉದ್ಯೋಗ ಸಹಕಾರಿ : ವೀಣಾ ಅಚ್ಚಯ್ಯ*

ಅಕ್ಟೋಬರ್ 8, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.8 : ನಗರದ ಕಾವೇರಿ ಹಾಲ್ ಸಭಾಂಗಣದಲ್ಲಿ ನಡೆದ ಶಾಪಿಂಗ್ ಉತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಗುರುತಿಸಿಕೊಂಡಿದ್ದು, ಅವರನ್ನು ಪ್ರೋತ್ಸಾಹಿಸುವ ಕಾರ್ಯ ಮಾಡುತ್ತಿರುವುದು ಹೆಮ್ಮೆಯ ವಿಚಾರ ಎಂದರು.
ಮಹಿಳೆಯರಿಗೆ ಹಾಗೂ ಮನೆಗೆ ಅಗತ್ಯವಾದ ವಸ್ತುಗಳನ್ನು ಗ್ರಾಹಕರಿಗೆ ನೆರವಾಗಿ ತಲುಪಿಸುವ ನಿಟ್ಟಿನಲ್ಲಿ ಶಾಪಿಂಗ್ ಉತ್ಸವವನ್ನು ಆಯೋಜಿಸಿದ್ದು, ವಿವಿಧ ಪರಿಕಾರಗಳನ್ನು ಮಾರಾಟ ಮಾಡುವುದರ ಜೊತೆಗೆ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವುದರೊಂದಿಗೆ ಜನರಿಗೆ ಉತ್ತಮ ವಾತಾವರಣವನ್ನು ಸೃಷ್ಟಿ ಮಾಡುವ ಸಲುವಾಗಿ ಹಲವು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗಿದೆ. ಗ್ರಾಹಕರು ಸ್ಥಳೀಯ ಮಹಿಳೆಯರಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಅವರ ಆರ್ಥಿಕ ಸಬಲೀಕರಣವನ್ನು ಪುನರ್‍ಚೇತನ ಗೊಳಿಸಲು ಮುಂದಾಗಬೇಕೆಂದು ಕರೆ ನೀಡಿದರು.
ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ ಮಾತನಾಡಿ, ಮಹಿಳೆಯರು ಸ್ವಾವಲಂಭಿ ಜೀವನವನ್ನು ನಡೆಸಲು ಇಂತಹ ಮೇಳಗಳು ಸಹಕಾರಿಯಾಗಿದ್ದು, ಇಂತಹ ಕಾರ್ಯಕ್ರಮಗಳಿಂದ ಮಹಿಳೆಯರಿಗೆ ಉತ್ತಮ ಅವಕಾಶ ದೊರೆತಂತಾಗುತ್ತದೆ ಎಂದರು.
ಗ್ರಾಹಕರು ಹೆಚ್ಚಾದಾಗ ಮಾತ್ರ ಉದ್ಯಮಿಗಳು ಬೆಳೆಯಲು ಸಾಧ್ಯ. ಆದ್ದರಿಂದ ಇಂತಹ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಹೆಚ್ಚಿನ ಪ್ರೋತ್ಸಾಹ ನೀಡುವ ಮೂಲಕ ಮಹಿಳೆಯರ ಆರ್ಥಿಕ ಬೆಳವಣಿಗೆಗೆ ಸಹಕಾರ ನೀಡಬೇಕು ಎಂದ ಅವರು, ಸಣ್ಣ ಉದ್ಯಮ ನಡೆಸಲು ಸರ್ಕಾರದಿಂದ ಮಹಿಳೆಯರಿಗೆ ಅನೇಕ ಸೌಲಭ್ಯಗಳಿದ್ದು, ಅವುಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಮಡಿಕೇರಿ ಕೊಡವ ಸಮಾಜದ ಪೊಮ್ಮಕ್ಕಡ ಒಕ್ಕೂಟದ ಅಧ್ಯಕ್ಷೆ ಕನ್ನಂಡ ಕವಿತಾ ಬೊಳ್ಳಪ್ಪ ಮಾತನಾಡಿ, ಕಾರ್ಯಕ್ರಮದ ಆಯೋಜಕರು ಮಹಿಳಾ ಉದ್ಯಾಮಿಗಳಿಗೆ ವೇದಿಕೆಯನ್ನು ಕಲ್ಪಿಸಿದ್ದು, ಸಣ್ಣ ಮಕ್ಕಳ ಪ್ರತಿಭೆಳನ್ನು ಅನಾವಣಕ್ಕೆ ಅವಕಾಶ ಕಲ್ಪಿಸಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮ ಮತ್ತಷ್ಟ ನಡೆಸುವಂತಾಗಲಿ ಎಂದು ಹಾರೈಸಿದರು.
ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಮತ್ತು ನಟ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಪಾಲ್ಗೊಳ್ಗೊಂಡಿದ್ದರು. ಕಾರ್ಯಕ್ರಮವನ್ನು ಡೀನಾ ಪರ್ಲಕೋಟಿ ಹಾಗೂ ಮಂಡೇಟಿರ ಪ್ರಿಷ ಪೂವಮ್ಮ ನಿರೂಪಿಸಿದರು.
ಗಮನ ಸೆಳೆದ ಅಲಂಕಾರಿಕ ವಸ್ತುಗಳು :: ಆಯೋಜಕರಾದ ಯಮುನಾ ಅಯ್ಯಪ್ಪ ಹಾಗೂ ಅಂಜು ಸುಬ್ರಮಣಿ ನೇತೃತ್ವದಲ್ಲಿ ನಡೆದ ಶಾಪಿಂಗ್ ಉತ್ಸವದಲ್ಲಿ ಸಿದ್ಧ ಉಡುಪುಗಳು, ಸೀರೆಗಳು, ವಿಶೇಷ ಕಲಾಕೃತಿಗಳು, ಅನುಕರಣೆ ಆಭರಣಗಳು, ಕಲಾ ವಸ್ತುಗಳು, ಗೊಂಬೆಗಳು, ಉಲನ್ ವಸ್ತುಗಳು ಎಂಬ್ರೈಡಿಂಗ್ ಕಾರಪೇಟ್, ಡ್ರೆಸ್ ಮೆಟೀರಿಯಲ್, ತಿಂಡಿ ತಿನಿಸುಗಳು, ಅಲಂಕಾರಿಕ ಹೂಗಳು, ಹೂವು ಗಿಡಗಳು, ಮತ್ತಿತರೆ ಆಕರ್ಷಣೀಯ ಕಲಾತ್ಮಕ ವಸ್ತುಗಳು ಸಾರ್ವಜನಿಕರು ಗಮನ ಸೆಳೆಯಿತು.
ಸುಮಾರು 50ಕ್ಕಿಂತ ಹೆಚ್ಚು ಮಳಿಗೆಗಳನ್ನು ತೆರೆಯಲಾಗಿತ್ತು.

ಕಾರ್ಯಕ್ರಮದಲ್ಲಿ ಬೆಂಗಳೂರಿನ ಶಿವಮ್ ಐಕೇರ್ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಶಿಬಿರ ನಡೆಯಿತು. ಇದೇ ಸಂದರ್ಭ ನೊಂದಾಯಿಸಿಕೊಂಡ ಎಲ್ಲಾ ವಯೋಮಿತಿಯವರಿಗೆ ಫ್ರಿ ಸೈಲ್ ನೃತ್ಯ ಸ್ಪರ್ಧೆ ಹಾಗೂ ಮಕ್ಕಳಿಗೆ ಮ್ಯಾಜಿಕ್ ಶೋ ನಡೆಯಿತು. ನೃತ್ಯ ಸ್ಪರ್ಧೆಯ ತೀರ್ಪುಗಾರರಾಗಿ ನೃತ್ಯ ಸಂಯೋಜಕರಾದ ಪಿ.ಎನ್.ದಿನೇಶ್, ಮಹೇಶ್ ಕಾರ್ಯನಿರ್ವಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.