ಮಡಿಕೇರಿ ಅ.9 : ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಡಿಕೇರಿಯಲ್ಲಿ ನಡೆದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ವಿದ್ಯಾರ್ಥಿಗಳಾದ ಎಸ್.ಸಂಜಯ್ ಶಾಟ್ ಪುಟ್ ನಲ್ಲಿ ಪ್ರಥಮ, ಹ್ಯಾಮರ್ ಥ್ರೋ ದ್ವಿತೀಯ, ಸಿ.ಆರ್. ಕೌಶಿಕ್ ಕುಮಾರ್ ಲಾಂಗ್ ಜಂಪ್ ನಲ್ಲಿ ಪ್ರಥಮ, ಟ್ರಿಪಲ್ ಜಂಪ್ ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರೌಢಶಾಲಾ ಬಾಲಕರ ರಿಲೇ ಸ್ಪರ್ಧೆಯಲ್ಲಿ ರಿಲೇ ತಂಡದಲ್ಲಿ ಕೌಶಿಕ್ ಕುಮಾರ್, ಲಿಖಿತ್ ಕುಮಾರ್, ಎ.ವಿ.ವಿಕಾಸ್, ಎಸ್.ಸಂಜಯ್ ಪ್ರಥಮ ಸ್ಥಾನ ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಪ್ರಾಂಶುಪಾಲ ಲೋಕೇಶ್ ಮತ್ತು ನಿಲಯ ಪಾಲಕ ಕೆ.ಕೆ.ದೀಪಕ್, ದೈಹಿಕ ಶಿಕ್ಷಣ ಶಿಕ್ಷಕ ಕೆ.ಪಿ.ಪವನ್ ಸಾಗರ್ ಹಾಗೂ ಬೋಧಕ ಬೋದಕೇತರ ಸಿಬ್ಬಂದಿಗಳು ಮುಂದಿನ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಶುಭ ಹಾರೈಸಿದ್ದಾರೆ.







