Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ : ಮೂಲಭೂತ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ : ಮೂಲಭೂತ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಸೂಚನೆ*

ಅಕ್ಟೋಬರ್ 9, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.9 : ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ನೀಡಿರುವ ಸಲಹೆಗಳನ್ನು ಪರಿಗಣಿಸಿ, ಪರಿಶಿಷ್ಟರು ವಾಸಿಸುವ ಗ್ರಾಮಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು ತ್ವರಿತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೆಂಕಟ ರಾಜಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡ(ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಸಮಸ್ಯೆಗಳ ತ್ವರಿತ ಇತ್ಯರ್ಥಕ್ಕೆ ಇಲಾಖೆಗಳು ಆದ್ಯತೆ ನೀಡಬೇಕು ಮತ್ತು ಸಕಾಲದಲ್ಲಿ ಸ್ಪಂದಿಸಬೇಕು ಎಂದರು.
ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಎಚ್.ಎಸ್.ಮುತ್ತಪ್ಪ ಅವರು ಐಗೂರು ಸೇರಿದಂತೆ ಹಲವು ಗ್ರಾಮಗಳಲ್ಲಿ ಪರಿಶಿಷ್ಟರು ವಾಸಿಸುವ ಗ್ರಾಮಗಳಿಗೆ ಕುಡಿಯುವ ನೀರು ಸಂಪರ್ಕ, ತಡೆಗೋಡೆ ನಿರ್ಮಾಣ, ಹೀಗೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಿದೆ ಎಂದು ಕೋರಿದರು.
ಮತ್ತೊಬ್ಬ ಸಮಿತಿ ಸದಸ್ಯರಾದ ಪಳನಿ ಪ್ರಕಾಶ್ ಅವರು ಮಾತನಾಡಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ವಾಸಮಾಡುವ ಪರಿಶಿಷ್ಟರಿಗೆ ಭೂಮಿ ಸಂಬಂಧ ನಿವೇಶನ ಹಕ್ಕು ಪತ್ರ ಇಲ್ಲದವರಿಗೆ ನಿವೇಶನ ಹಕ್ಕುಪತ್ರ ನೀಡುವಂತಾಗಬೇಕು. ಇದರಿಂದ ಕುಡಿಯುವ ನೀರು, ವಿದ್ಯುತ್, ರಸ್ತೆ, ಅಂಗನವಾಡಿ ಮತ್ತಿತರ ಮೂಲ ಸೌಲಭ್ಯ ಪಡೆಯಲು ಸಾಧ್ಯ. ಇಂತಹ ಬಡಾವಣೆಗಳನ್ನು ಗುರುತಿಸಿ ನಿವೇಶನ ಹಕ್ಕು ಪತ್ರ ನೀಡುವಂತಾಗಬೇಕು ಎಂದು ಅವರು ಮನವಿ ಮಾಡಿದರು.
94ಸಿ ಮತ್ತು 94ಸಿಸಿರಡಿ ಹಾಗೂ ನಮೂನೆ 57 ರಡಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಿ, ಆರ್‍ಟಿಸಿ ವಿತರಿಸುವಂತಾಗಬೇಕು ಎಂದು ಪಳನಿ ಪ್ರಕಾಶ್ ಅವರು ಕೋರಿದರು.
ಮತ್ತೊಬ್ಬ ಸಮಿತಿ ಸದಸ್ಯರಾದ ಜಾಯ್ಸ್ ಮೆನೇಜಸ್ ಅವರು ಮಾತನಾಡಿ ಬಾಳೆಗುಂಡಿಯಲ್ಲಿ 95 ಕುಟುಂಬಗಳು ವಾಸಮಾಡುತ್ತಿದ್ದು, ಈ ಕುಟುಂಬಗಳಿಗೆ ಪಡಿತರ ಚೀಟಿ ಒದಗಿಸುವಂತಾಗಬೇಕು ಎಂದರು.
ಸದಸ್ಯರಾದ ಪಿ.ಪಿ.ಸುಕುಮಾರ್ ಅವರು ಮಾತನಾಡಿ ಪರಿಶಿಷ್ಟ ಕುಟುಂಬಗಳಿಗೆ ಹಲವು ಮೂಲಸೌಲಭ್ಯಗಳು ದೊರೆಯಬೇಕಿದ್ದು, ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಯಬೇಕು ಎಂದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ ಜಿಲ್ಲೆಯ ವಿವಿಧ ಗ್ರಾ.ಪಂ.ವ್ಯಾಪ್ತಿಗಳಲ್ಲಿ ನಿವೇಶನ ಹಾಗೂ ವಸತಿ ರಹಿತರಿಗೆ ನಿವೇಶನ ಹಾಗೂ ವಸತಿ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲಾಗುವುದು. ಆ ನಿಟ್ಟಿನಲ್ಲಿ ಆಯಾಯ ಗ್ರಾ.ಪಂ. ವ್ಯಾಪ್ತಿಗೆ ಪಟ್ಟಿ ನೀಡುವಂತಾಗಬೇಕು ಎಂದು ಸಲಹೆ ನೀಡಿದರು.
ಬಳಿಕ ಸಫಾಯಿ ಕರ್ಮಚಾರಿ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳನ್ನು ಖಾಯಂ ಮಾಡುವ ನಿಟ್ಟಿನಲ್ಲಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
ಈ ಬಗ್ಗೆ ಮಾತನಾಡಿದ ಸಮಿತಿ ಸದಸ್ಯರಾದ ರಂಗಸ್ವಾಮಿ ಅವರು ಸಫಾಯಿ ಕರ್ಮಚಾರಿಗಳಿಗೆ ಕನಿಷ್ಠ ವೇತನ ನೀಡಬೇಕು. ಜೊತೆಗೆ 20-30 ವರ್ಷಗಳಿಂದ ಗ್ರಾ.ಪಂ.ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳನ್ನು ಖಾಯಂ ಮಾಡಬೇಕು. ನಿವೇಶನ ರಹಿತರಿಗೆ ನಿವೇಶನ ನೀಡುವುದು. ಜೊತೆಗೆ ಮನೆ ನಿರ್ಮಿಸಬೇಕು ಎಂದು ಅವರು ಕೋರಿದರು.
ಸಫಾಯಿ ಕರ್ಮಚಾರಿಗಳಿಗೆ ಸಮಾನ ಕ್ಷೇತ್ರಕ್ಕೆ ಸಮಾನ ವೇತನ ನೀಡುವಂತಾಗಬೇಕು. ಸಫಾಯಿ ಕರ್ಮಚಾರಿಗಳು ಸೇರಿದಂತೆ ಎಲ್ಲರಿಗೂ ಆರೋಗ್ಯ ತಪಾಸಣೆ ಕೈಗೊಳ್ಳಬೇಕು ಎಂದು ಪಳನಿ ಪ್ರಕಾಶ್ ಅವರು ಗಮನ ಸೆಳೆದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಮ್ಯಾನ್ಯುವಲ್ ಸ್ಕ್ಯಾವೆಂಜರ್ಸ್ ಸಂಬಂಧಿಸಿದಂತೆ ಮಾಹಿತಿ ನೀಡಿ ಜಿಲ್ಲೆಯಲ್ಲಿ ಸಫಾಯಿ ಕರ್ಮಚಾರಿಗಳಿಗೆ ಪುನರ್‍ವಸತಿ ಕಲ್ಪಿಸಬೇಕಿದೆ. ಗುರುತಿನ ಚೀಟಿ ನೀಡುವುದು, ಶಾಲಾ-ಕಾಲೇಜು ಪ್ರವೇಶಕ್ಕೆ ಉಚಿತ ಅವಕಾಶ ಕಲ್ಪಿಸುವುದು, ಶಿಷ್ಯವೇತನ ಪಾವತಿಸುವುದು, ಸಫಾಯಿ ಕರ್ಮಚಾರಿ ಕುಟುಖಬದ ಮಕ್ಕಳ ವಿದ್ಯಾಭ್ಯಾಸ ಸಂಬಂಧ ಪ್ರವೇಶ ಪರೀಕ್ಷೆ ಇಲ್ಲದೆ ವಸತಿ ಶಾಲೆಗಳ ಪ್ರವೇಶಕ್ಕೆ ಅವಕಾಶ ಮಾಡುವುದು. ಗ್ರಾಮೀಣ ಪ್ರದೇಶದಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮತ್ತು ಪಟ್ಟಣ/ ಪುರಸಭೆ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿ ಆವಾಜ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅವಕಾಶ ಮಾಡುವುದು. ಮತ್ತಿತರ ಕಾರ್ಯಕ್ರಮಗಳನ್ನು ಆದ್ಯತೆ ಮೇಲೆ ಒದಗಿಸಬೇಕಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಸಫಾಯಿ ಕರ್ಮಚಾರಿಗಳಿಗೆ ಕಾನೂನು ನೆರವು ನೀಡುವುದರ ಜೊತೆಗೆ, ಮುಖ್ಯವಾಹಿನಿಗೆ ತರಲು ಪ್ರಯತ್ನಿಸಬೇಕಿದೆ ಎಂದು ಹೇಳಿದರು. ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.