Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಜ್ಯಮಟ್ಟದ ಹಾಕಿ ಪಂದ್ಯಾವಳಿಗೆ ವರ್ಣ ರಂಜಿತ ತೆರೆ : ಕೊಡಗಿನ ಎರಡು ತಂಡಗಳು ರಾಷ್ಟ್ರೀಯ ಹಾಕಿ ಟೂರ್ನಿಗೆ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಜ್ಯಮಟ್ಟದ ಹಾಕಿ ಪಂದ್ಯಾವಳಿಗೆ ವರ್ಣ ರಂಜಿತ ತೆರೆ : ಕೊಡಗಿನ ಎರಡು ತಂಡಗಳು ರಾಷ್ಟ್ರೀಯ ಹಾಕಿ ಟೂರ್ನಿಗೆ ಆಯ್ಕೆ*

ಅಕ್ಟೋಬರ್ 11, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕೂಡಿಗೆ ಅ.11:   ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಉತ್ತರ ಕೊಡಗಿನ ಕೂಡಿಗೆ ಸರ್ಕಾರಿ ಕ್ರೀಡಾಶಾಲೆಯಲ್ಲಿ ಮೂರು ದಿನಗಳ ಕಾಲ ನಡೆದ ಶಾಲಾ ಮಕ್ಕಳ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಗೆ  ವರ್ಣ ರಂಜಿತ ತೆರೆಬಿತ್ತು.
ಸುತ್ತಲೂ ಹಸಿರು ಪರಿಸರದಿಂದ ಕಂಗೊಳಿಸುತ್ತಿದ್ದ ಹಾಕಿ ಟರ್ಫ್ ಮೈದಾನದಲ್ಲಿ ರಾಜ್ಯಮಟ್ಟದ ಟೂರ್ನಿಯಿಂದ ರಾಷ್ಟ್ರೀಯ ಟೂರ್ನಿಗೆ ಆಯ್ಕೆಗೊಂಡ ಕ್ರೀಡಾಳುಗಳ ಸಂಭ್ರಮ ಮುಗಿಲು ಮುಟ್ಟುತ್ತಿತ್ತು.

ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿ ಮಾತನಾಡಿದ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಎಸ್.ಪಲ್ಲೇದ್,  ಹಾಕಿಯ ತವರಾದ ಕೊಡಗಿನಲ್ಲಿ ಹಾಕಿ ಕ್ರೀಡೆಗೆ ಕ್ರೀಡಾಭಿಮಾನಿಗಳು
ನೀಡುತ್ತಿರುವ ಪ್ರೋತ್ಸಾಹ ಅನನ್ಯವಾದುದು.
ಕೊಡಗಿನಲ್ಲಿ ಕಲೆ, ಸಾಂಸ್ಕೃತಿಕ ಪರಂಪರೆಯೊಂದಿಗೆ ಹಾಕಿ ಕ್ರೀಡೆ ಕೂಡ ಸಂಸ್ಕೃತಿಯ ಪ್ರತೀಕವಾಗಿದೆ ಎಂದರು.
ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಜಿಲ್ಲೆಯಲ್ಲಿ ನಡೆಯಲಿರುವ ರಾಷ್ಟ್ರೀಯ 17 ವಯೋಮಾನದ ಬಾಲಕಿಯರ ಹಾಕಿ ಟೂರ್ನಿಯ ಯಶಸ್ವಿ ಸಂಘಟನೆಗೆ ಎಲ್ಲರ ಪ್ರೋತ್ಸಾಹ ಅಗತ್ಯವಿದೆ ಎಂದು ಡಾ ಸದಾಶಿವಯ್ಯ ಪಲ್ಲೇದ್ ಹೇಳಿದರು.
ಮೂರು ದಿನಗಳ ಕಾಲ ಹಾಕಿ ಟೂರ್ನಿ ಯಶಸ್ವಿಯಾಗಿ ನಡೆಯಲು ಸಹಕರಿಸಿದವರಿಗೆಲ್ಲ ಡಾ.ಸದಾಶಿವಯ್ಯ ಕೃತಜ್ಞತೆ ಸಲ್ಲಿಸಿದರು.
ಅಧ್ಯಕ್ಷತೆ ವಹಿಸಿದ್ದ ಕ್ರೀಡಾಶಾಲೆಯ ಮುಖ್ಯ ಶಿಕ್ಷಕ ಬಿ.ಟಿ.ದೇವಕುಮಾರ್ ಮಾತನಾಡಿ, ಕೊಡಗಿನಲ್ಲಿ ಹಾಕಿ ಕ್ರೀಡೆ ಸೇರಿದಂತೆ ಎಲ್ಲಾ ಕ್ರೀಡೆಗಳಿಗೂ ನಿರಂತರವಾಗಿ ಪ್ರೋತ್ಸಾಹ ನೀಡಲಾಗುತ್ತಿದೆ. ಕ್ರೀಡೆಯಲ್ಲಿ ಸೋಲು- ಗೆಲುವು ಮುಖ್ಯವಲ್ಲ, ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಕ್ರೀಡಾ ಸ್ಪೂರ್ತಿ ಬೆಳೆಸಿಕೊಳ್ಳುವುದು ಮುಖ್ಯ ಎಂದರು.
ಟೂರ್ನಿಯಲ್ಲಿ ವಿಜೇತಗೊಂಡ ತಂಡಗಳಿಗೆ ಟ್ರೋಫಿ ವಿತರಿಸಿದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ
ಪೊನ್ನಚ್ಚನ ಶ್ರೀನಿವಾಸ್  ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಪಂದ್ಯಾವಳಿಯಲ್ಲಿ  ವಿಜೇತಗೊಂಡ ಕ್ರೀಡಾಳುಗಳಿಗೆ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಬಿ.ಟಿ.ಪೂರ್ಣೇಶ್ ಹಾಗೂ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ವಿಜೇತ ಪದಕಗಳನ್ನು ವಿತರಿಸಿದರು.
ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಎಂ.ಎಲ್.ಸುಕುಮಾರಿ, ರಾಜ್ಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಂಟಿ ಕಾರ್ಯದರ್ಶಿ ಎನ್.ಎಲ್. ಸುರೇಶ್ ಕುಮಾರ್ ಕ್ರೀಡಾಪಟುಗಳಿಗೆ ಪ್ರಶಸ್ತಿ ಪತ್ರ ವಿತರಿಸಿದರು.
ಕ್ರೀಡಾಶಾಲೆಯ ತರಬೇತುದಾರರಾದ ಎ.ಸಿ.ದಿನಮಣಿ, ಟೂರ್ನಿಯ ತಾಂತ್ರಿಕ ವಿಭಾಗದ ಅಧಿಕಾರಿಗಳಾಗಿ ಕೆ.ಎಚ್.ಗಣೇಶ್ ಕುಮಾರ್, ಪಿ.ಇ.ನಂದ, ಎನ್.ಎಲ್.ಸುರೇಶ್ ಕುಮಾರ್, ದೈಹಿಕ ಶಿಕ್ಷಣ ಶಿಕ್ಷಕರಾದ
ಬಿ.ಎಲ್.ಸಂದೇಶ್, ಎನ್.ಡಿ.ಸೋಮಶೇಖರ್, ಎಚ್.ಎನ್.ರತೀಶ್, ಗಾನದ ಗಣಪತಿ, ನಾಗೇಶ್ ಈಶ್ವರ್, ದೇವಾನಂದ್, ಕೆ.ಎಚ್.ಗಾಯಿತ್ರಿ, ಶ್ರೀಕಲಾ, ಕೆ.ವಿಜಯಲಕ್ಷ್ಮಿ, ಜಿ.ಎಸ್.ಶೈಲಾ, ಎನ್.ಆಶಾ, ಸಿ.ಕೆ.ಭಾರತಿ,
ಕಲಾವಿದ ಬರ್ಮಣ್ಣ ಬೆಟ್ಟಗೇರಿ  ಇತರರು ಇದ್ದರು.

ಬೆಂಗಳೂರಿನ ಕ್ರೀಡಾಪ್ರೇಮಿ ಕೆ.ಎಸ್. ಹರೀಶ್ ಪ್ರಾರ್ಥಿಸಿದರು. ಕೂಡಿಗೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮಕ್ಕಳು ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಿದರು.

ಕೊಡಗಿನ ಎರಡು ತಂಡಗಳು ಆಯ್ಕೆ : ಮೂರು ದಿನಗಳ ಕಾಲ ನಡೆದ ಹಾಕಿ ಟೂರ್ನಿಯ ಅಂತಿಮ ಪಂದ್ಯಾಟದಲ್ಲಿ ಕೊಡಗು ಜಿಲ್ಲೆಯ ಕಿರಿಯ ಬಾಲಕರು ಮತ್ತು ಹಿರಿಯ ಬಾಲಕಿಯರ ವಿಭಾಗದ ಎರಡು ತಂಡಗಳು ರಾಷ್ಟ್ರೀಯ ಹಾಕಿ ಟೂರ್ನಿಗೆ ಆಯ್ಕೆಗೊಂಡಿರುವುದು ಜಿಲ್ಲೆಯ ಹಾಕಿ ಕ್ರೀಡಾಭಿಮಾನಿಗಳಿಗೆ ಸಂತಸ ತಂದಿತು.
14 ವಯೋಮಾನದ ಬಾಲಕರ ಹಾಕಿ ಟೂರ್ನಿಯಲ್ಲಿ ಮೈಸೂರು ವಿಭಾಗದಿಂದ ಗೋಣಿಕೊಪ್ಪ ಲಯನ್ಸ್ ಶಾಲಾ ತಂಡದ ಬಾಲಕರು ಹಾಗೂ 17 ವಯೋಮಾನದ ಬಾಲಕಿಯರ ಹಾಕಿ ಟೂರ್ನಿಯಲ್ಲಿ ಮೈಸೂರು ವಿಭಾಗದಿಂದ ಮಡಿಕೇರಿ ನಗರದ ಸರ್ಕಾರಿ ಪಿಯೂ ಕಾಲೇಜಿನ‌ ಪ್ರೌಢಶಾಲಾ ಬಾಲಕಿಯರ ತಂಡವು ರಾಷ್ಟ್ರೀಯ ಹಾಕಿ ಟೂರ್ನಿಗೆ ಆಯ್ಕೆಗೊಂಡಿರುವುದು ಹಾಕಿ ಕ್ರೀಡೆಯ ತವರೆನಿಸಿದ ಕೊಡಗು ಜಿಲ್ಲೆಗೆ ಹೆಮ್ಮೆ ತಂದಿದೆ ಎಂದು ಕ್ರೀಡಾಭಿಮಾನಿಗಳು ಈ ಸಂದರ್ಭದಲ್ಲಿ ಸಂತಸ ವ್ಯಕ್ತಪಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.