Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಫ್‍ಎಂಕೆಎಂಸಿ ಕಾಲೇಜಿನ ಪೋಷಕ ಶಿಕ್ಷಕ ಸಂಘ ಪುನರ್ ರಚನೆ : ಕಾಲೇಜಿನ ಉಳಿವಿಗೆ ಪೋಷಕರು ಶಿಕ್ಷಕರು ಒಂದಾಗಿ ಮುನ್ನಡೆಯಬೇಕು : ಕೆ.ಪಿ.ಮಾಥ್ಯೂ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಫ್‍ಎಂಕೆಎಂಸಿ ಕಾಲೇಜಿನ ಪೋಷಕ ಶಿಕ್ಷಕ ಸಂಘ ಪುನರ್ ರಚನೆ : ಕಾಲೇಜಿನ ಉಳಿವಿಗೆ ಪೋಷಕರು ಶಿಕ್ಷಕರು ಒಂದಾಗಿ ಮುನ್ನಡೆಯಬೇಕು : ಕೆ.ಪಿ.ಮಾಥ್ಯೂ*

ಅಕ್ಟೋಬರ್ 12, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.12 : ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜನ್ನು ಉಳಿಸಿಕೊಳ್ಳಬೇಕಾಗಿದೆ. ಅದಕ್ಕಾಗಿ ಪೋಷಕರು ಶಿಕ್ಷಕರು ಒಂದಾಗಿ ಮುನ್ನಡೆಯಬೇಕು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಪೋಷಕ ಶಿಕ್ಷಕರ ಸಂಘದ ಅಧ್ಯಕ ಕೆ.ಪಿ.ಮಾಥ್ಯೂ ಅಭಿಪ್ರಾಯಪಟ್ಟರು.

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪೋಷಕ ಶಿಕ್ಷಕರ ಸಂಘದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕಾಲೇಜು ಸಮಾಜಕ್ಕೆ ಮಹನೀಯ ಸಾಧಕರನ್ನು ಕೊಡುಗೆಯಾಗಿ ನೀಡಿದೆ. ಚಾರಿತ್ರಿಕವಾಗಿ ಕಾಲೇಜಿಗೆ ಮಹತ್ತರವಾದ ಸ್ಥಾನಮಾನ ಇದೆ. ಆ ಹಾದಿಯನ್ನು ಕಾಲೇಜಿನ ಚರಿತ್ರೆಗೆ ಕುಂದುಬರದಂತೆ ವಿದ್ಯಾರ್ಥಿಗಳ ಮತ್ತು ಅಧ್ಯಾಪಕರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ನಾವುಗಳು ರೂಪುರೇಷೆ ಕೈಗೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ಬಿ.ರಾಘವ, ಕಾಲೇಜಿಗೆ 75 ವರ್ಷಗಳ ಸುದೀರ್ಘ ಇತಿಹಾಸ ಇದೆ. ಮುಂದಿನ ವರ್ಷ ಕಾಲೇಜು ತನ್ನ 75 ವರ್ಷಗಳ ಸಂಭ್ರಮಾಚರಣೆಗೆ ಸಿದ್ಧವಾಗುತ್ತಿದೆ. ಕಾಲೇಜು ಶೈಕ್ಷಣಿಕವಾಗಿ ಮಹೋನ್ನತವಾದ ಸಾಧನೆಯನ್ನು ತನ್ನ ಚರಿತ್ರೆಯ ಪುಟದಲ್ಲಿ ದಾಖಲಿಸಿದೆ. ಈ ಬಾರಿ ಅತೀ ಹೆಚ್ಚು ವಿದ್ಯಾರ್ಥಿಗಳು ಕಾಲೇಜಿಗೆ ಪ್ರವೇಶಾತಿ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ಶಿಸ್ತು ಪಾಲನೆಯ ಹಿನ್ನೆಲೆಯಿಂದ ಮತ್ತು ವಿದ್ಯಾರ್ಥಿಗಳು ಕೆಟ್ಟ ಹಾದಿ ತುಳಿಯದಂತೆ ನೋಡಿಕೊಳ್ಳುವ ಉದ್ದೇಶದಿಂದ ಕಾಲೇಜಿನಲ್ಲಿ ಶಿಸ್ತಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ. ಈ ಶಿಸ್ತುಪಾಲನೆಯನ್ನು ವಿದ್ಯಾರ್ಥಿಗಳು ಸ್ವ ಇಚ್ಛೆಯಿಂದ ಪಾಲಿಸುವ ಮೂಲಕ ವ್ಯವಸ್ಥೆಯನ್ನು ಒಪ್ಪಿಕೊಂಡಿದ್ದಾರೆ. ಎಂಥಹ ವಿಷಮ ಪರಿಸ್ಥಿಯಲ್ಲೂ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವುದೇ ನಮ್ಮೆಲ್ಲರ ಹೊಣೆ ಎಂದು ಅಭಿಪ್ರಾಯಪಟ್ಟರು.

ಕಾಲೇಜಿಗೆ ವಿದ್ಯಾರ್ಥಿಗಳು ಮೊಬೈಲ್ ತರದಂತೆ ನೋಡಿಕೊಳ್ಳವುದಾಗಿಯೂ, ಕಾಲೇಜಿನಲ್ಲಿ ಮೊಬೈಲ್ ಬಳಸದಂತೆ ಕಟ್ಟು ನಿಟ್ಟಾಗಿ ಕ್ರಮಕೈಗೊಳ್ಳುವಂತೆಯೂ ಪೋಷಕರಾದ ಮಂಜುನಾಥ್, ಪುಟ್ಟ ಸ್ವಾಮಿ ಸೇರಿದಂತೆ ಇತರ ಪೋಷಕರು ಅಭಿಪ್ರಾಯ ವ್ಯಕ್ತಪಡಿಸಿದರು.

ಪೋಷಕ  ಸುನಿಲ್ ಕುಮಾರ್ ಮಾತನಾಡಿ, ಎನ್‍ಇಪಿ ಯಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆ ಅನುಭವಿಸುವಂತಾಯಿತು. ಸದರಿ ವಿಶ್ವವಿದ್ಯಾನಿಲಯದ ಈ ಗೊಂದಲದ ಬಗ್ಗೆ, ಎನ್ ಇ ಪಿ, ಎಸ್ ಇ ಪಿ ಶೈಕ್ಷಣಿಕ ಕ್ರಮದ ಬಗ್ಗೆ ಸರ್ಕಾರಗಳು ಮೌನವಹಿಸದೆ ಸರಿಯಾದ ಮಾರ್ಗಸೂಚಿ ರೂಪಿಸಬೇಕು ಎಂದರು.

ಕಾಲೇಜು ರೂಪಿಸಿಕೊಂಡಿರುವ ಶಿಸ್ತುಪಾಲನಾ ಕಾನೂನುಗಳು ಹಾಗೇ ಮುಂದುವರೆಯಲಿ. ಆದರೆ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯನ್ನು ನೀಗಿಸುವ ಕಡೆಗೆ ಸರಕಾರ ಮತ್ತು ವಿಶ್ವವಿದ್ಯಾನಿಲಯ ಗಮನ ಹರಿಸಬೇಕು ಎಂದು ಪೋಷಕರಾದ ಕೆ.ಕೆ.ತಿಮ್ಮಣ್ಣ ಅಭಿಪ್ರಾಯ ಮುಂದಿಟ್ಟರು.

ಪೋಷಕರು  ಮುಂದಿಟ್ಟ ಎಲ್ಲಾ ಆಶೋತ್ತರಗಳನ್ನು ಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು.

2023-24ನೇ ಸಾಲಿನ ಪೋಷಕ ಶಿಕ್ಷಕ ಸಂಘವನ್ನು ಪುನರ್ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ಬಿ.ರಾಘವ, ಅಧ್ಯಕ್ಷರಾಗಿ ಕೆ.ಪಿ.ಮ್ಯಾಥ್ಯೂ ಸರ್ವಾನುಮತದಿಂದ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ಜಯಂತಿ ರೈ, ಕಾರ್ಯದರ್ಶಿಯಾಗಿ ಹಿಂದಿ ವಿಭಾಗದ ಮುಖ್ಯಸ್ಥ ಬಿ.ಹೆಚ್.ತಳವಾರ, ಉಪಕಾರ್ಯದರ್ಶಿಯಾಗಿ ಕೆ.ಕೆ.ತಿಮ್ಮಣ್ಣ, ಕೋಶಾಧಿಕಾರಿಯಾಗಿ ಡಾ. ಜೆ.ಜಿ.ಮಂಜುನಾಥ ಆಯ್ಕೆಯಾದರು.

ಪೋಷಕ  ಸದಸ್ಯರಾಗಿ ಪ್ರಕಾಶ್ ಪಿ.ಎ.ಸೀತಾ, ಜಲಜ, ಸುನೀಲ್ ಕುಮಾರ್, ಕೆ.ಎ.ಗೀತಾ, ಪೂರ್ಣಿಮಾ, ಬಿ.ಎಲ್.ರೈ, ಕೆ.ಎಸ್.ನರೇಂದ್ರ, ಕೆ.ಎಂ.ಗೋಕುಲ್, ಬಿ.ಟಿ.ರಮೇಶ್, ದೇವಯ್ಯ, ಹೆಚ್.ಎನ್.ಶ್ರೀಧರ್, ಮೇರಿ ಶೀಲ, ರಾಮಚಂದ್ರ, ಯಶೋಧ ನೇಮಕಗೊಂಡರು.

ಅಧ್ಯಾಪಕ ಸದಸ್ಯರಾಗಿ ಪ್ರೊ. ವಿಜಯಲತ, ಎಂ.ಎನ್.ರವಿಶಂಕರ್, ಕೆ.ಎಂ.ಪೂಣಚ್ಚ, ಡಾ.ಮಹದೇವಯ್ಯ, ಡಾ. ನಯನ ಕಶ್ಯಾಪ್, ಡಾ. ಎನ್.ವಿ. ಕರುಣಾಕರ ಆಯ್ಕೆಯಾದರು.

ಸಭೆಯನ್ನು ಡಾ. ಕೆ.ಹೆಚ್.ಮುಸ್ತಾಫ ನಿರೂಪಿಸಿರು. ತೃತೀಯ ವರ್ಷದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಡಾ.ಮಹದೇವಯ್ಯ ಸ್ವಾಗತಿಸಿ, ಹಿಂದಿ ವಿಭಾಗದ ಮುಖ್ಯಸ್ಥ ಬಿ.ಹೆಚ್.ತಳವಾರ ವಂದಿಸಿದರು.

ಗಣಕ ವಿಭಾಗದ ಪ್ರಾಧ್ಯಾಪಕ ಎಂ.ಎನ್.ರವಿಶಂಕರ್, ಆಂಗ್ಲ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಪೂಣಚ್ಚ, ಕನ್ನಡ ವಿಭಾಗದ ಡಾ. ಎನ್.ವಿ.ಕರುಣಾಕರ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.