Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ದಸರಾದಲ್ಲಿ ಕಂಗೊಳಿಸಲಿದೆ ಮರಳಿನ ಕಲಾಕೃತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ದಸರಾದಲ್ಲಿ ಕಂಗೊಳಿಸಲಿದೆ ಮರಳಿನ ಕಲಾಕೃತಿ*

ಅಕ್ಟೋಬರ್ 14, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.14 : ಮರಳನ್ನೇ ಮೂಲವಾಗಿರಿಸಿಕೊಂಡು ಅದ್ಭುತ ದೃಶ್ಯ ಕಾವ್ಯ ಸೃಷ್ಟಿಸುವ ಕರ್ನಾಟಕದ ಹೆಸರಾಂತ ಮರಳು ಕಲಾವಿದೆ ಎಂ.ಎನ್.ಗೌರಿ ಈ ಬಾರಿ ಮಡಿಕೇರಿ ದಸರಾದ ವಿಶೇಷ ಆಕರ್ಷಣೆಯಾಗಿ ಮರಳಿನಲ್ಲಿ ವನದೈವದ ಕಲಾಕೃತಿ ರೂಪಿಸಲಿದ್ದಾರೆ. ಮಡಿಕೇರಿ ದಸರಾ ಫೋಟೋ ಗ್ಯಾಲರಿ ಕೂಡ ದಸರಾ ಆಕರ್ಷಣೆಗಳಲ್ಲೊಂದಾಗಲಿದೆ.
ಮೈಸೂರಿನ ಚಾಮುಂಡಿ ಬೆಟ್ಟ ತಪ್ಪಲಿನಲ್ಲಿ ಕಳೆದ 5 ವರ್ಷಗಳಿಂದ ತನ್ನದೇ ಆದ ಮರಳು ಕಲಾ ಪ್ರದರ್ಶನ ಗ್ಯಾಲರಿ ಮೂಲಕ ಕರ್ನಾಟಕದ ಏಕೈಕ ಮರಳು ಕಲಾಗ್ಯಾಲರಿ ಹೊಂದಿರುವ ಎಂ.ಎನ್.ಗೌರಿ, ಈ ಸಂಗ್ರಹಾಲಯದಲ್ಲಿ ನೂರಾರು ಮರಳು ಕಲಾಕೃತಿಗಳನ್ನು ದಿನನಿತ್ಯ ಸಾವಿರಾರು ವೀಕ್ಷಕರ ನೋಟಕ್ಕೆ ಅವಕಾಶ ಕಲ್ಪಿಸಿದ್ದಾರೆ.
2013 ರಲ್ಲಿ ಒರಿಸ್ಸಾದಲ್ಲಿ ಆಯೋಜಿತವಾಗಿದ್ದ ಅಂತರರಾಷ್ಟ್ರೀಯ ಮರಳು ಕಲಾಕೃತಿ ಸ್ಪರ್ಧೆಯಲ್ಲಿ ವಿಶ್ವದ ಹಲವೆಡೆಗಳಿಂದ ಪಾಲ್ಗೊಂಡಿದ್ದ 27 ಕಲಾವಿದರಲ್ಲಿ ಭಾರತದ ಗೌರಿ ಏಕೈಕ ಮಹಿಳಾ ಕಲಾವಿದೆಯಾಗಿದ್ದರು. ಫೈನ್ ಆರ್ಟ್ಸನಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಗೌರಿ, ಮರಳು ಕಲೆಯತ್ತ ಒಲವು ತೋರಿದ್ದು ಈವರೆಗೂ ರಾಜ್ಯವ್ಯಾಪಿ ನೂರಾರು ಕಲಾಕೖತಿಗಳನ್ನು ಮರಳಿನಲ್ಲಿಯೇ ರೂಪಿಸಿದ್ದಾರೆ.
ಸೌದಿ ಅರೇಬಿಯಾದಲ್ಲಿ ಈ ವರ್ಷ ನಡೆದ ಕ್ಯಾಮೆಲ್ ಉತ್ಸವಕ್ಕೆ ಅಲ್ಲಿನ ಸರ್ಕಾರದ ಅತಿಥಿಯಾಗಿ ತೆರಳಿದ್ದ ಗೌರಿ ಅಲ್ಲಿಯೂ ಮರಳು ಕಲಾಕೃತಿ ರೂಪಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.
ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀ, ಡಾ.ಅಂಬೇಡ್ಕರ್, ನಾಲ್ವಡಿ ಕೃಷ್ಣರಾಜ ಒಡೆಯರ್, ಈಶ್ವರ, ಸೇರಿದಂತೆ ಹಲವಾರು ವಿಭಿನ್ನ ಮರಳು ಕಲಾಕೃತಿಯನ್ನು ರಚಿಸಿರುವ ಗೌರಿ ಈ ಬಾರಿ ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ಆಹ್ವಾನದ ಮೇರೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿನ ಗ್ಯಾಲರಿಯಲ್ಲಿ ವನ ವೈವ ಕುರಿತಂತೆ ಮರಳು ಕಲಾಕೃತಿ ರೂಪಿಸಲಿದ್ದಾರೆ ಎಂದು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ತಿಳಿಸಿದ್ದಾರೆ.
ಈ ಮರಳು ಕಲಾಕೃತಿಯನ್ನು ಅ. 16 ರಂದು ಸಂಜೆ 6 ಗಂಟೆಗೆ ಜಿಲ್ಲಾಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಹಾಗೂ ಶಾಸಕ ಡಾ.ಮಂಥರ್ ಗೌಡ ಉದ್ಘಾಟಿಸಲಿದ್ದಾರೆ.
ಮರಳು ಕಲಾಕೃತಿಯನ್ನು ಅ.16 ರಿಂದ 25 ರವರೆಗೆ ಪ್ರತಿ ನಿತ್ಯ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ವೀಕ್ಷಿಸಬಹುದಾಗಿದೆ.
ಈ ವರ್ಷ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಲು ನಗರದ ಗಾಂಧಿ ಮೈದಾನಕ್ಕೆ ಬರುವವರಿಗೆ ಮತ್ತೊಂದು ಆಕರ್ಷಣೆಯೂ ಸಜ್ಜಾಗಿದೆ. ಮಡಿಕೇರಿ ದಸರಾ 2023 ಎಂಬ ಫೋಟೋ ಪಾಯಿಂಟ್ ನ್ನು ದಸರಾ ಸಾಂಸ್ಕೖತಿಕ ಸಮಿತಿ ವತಿಯಿಂದ ರೂಪಿಸಲಾಗಿದ್ದು, ಹಿನ್ನಲೆಯಲ್ಲಿ ಕೊಡಗಿನ ನಿಸರ್ಗ ವೈಭವದ ಆಕರ್ಷಕ ಚಿತ್ರ ಕಂಗೊಳಿಸಲಿದೆ. ಈ ಪೋಟೋ ಗ್ಯಾಲರಿಯಲ್ಲಿ ನಿಂತು ಕಲಾಪ್ರೇಮಿಗಳು ಫೋಟೋಗಳನ್ನು ಕ್ಲಿಕ್ಕಿಸಿಕೊಳ್ಳುವ ಮೂಲಕ ಮಡಿಕೇರಿ ದಸರಾದ ನೆನಪನ್ನು ಸ್ಮರಣೀಯವಾಗಿಸಲು ಅವಕಾಶ ನೀಡಲಾಗಿದೆ ಎಂದು ಸಾಂಸ್ಕೖತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ತಿಳಿಸಿದ್ದು, ಫೋಟೋ ಗ್ಯಾಲರಿಯು ಅ.16 ರಂದು ಸಂಜೆ 6 ಗಂಟೆಗೆ ಉದ್ಘಾಟನೆಯಾಗಲಿದೆ. ಈ ರೀತಿ ತಾವು ತೆಗೆದ ಫೋಟೋಗಳನ್ನು ಮಡಿಕೇರಿ ದಸರಾ ಫೇಸ್ ಬುಕ್, ಇನ್ಸ್ ಟ್ರಾಗ್ರಾಂ ಮೂಲಕ ಪೋಸ್ಟ್ ಮಾಡಬಹುದು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.