Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಅಧಿಕಾರಿಗಳು ಎಚ್ಚರದಿಂದ ಕರ್ತವ್ಯ ನಿರ್ವಹಿಸಿ : ಲೋಕಾಯುಕ್ತ ಎಸ್‌ಪಿ ಸುರೇಶ್ ಬಾಬು ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಅಧಿಕಾರಿಗಳು ಎಚ್ಚರದಿಂದ ಕರ್ತವ್ಯ ನಿರ್ವಹಿಸಿ : ಲೋಕಾಯುಕ್ತ ಎಸ್‌ಪಿ ಸುರೇಶ್ ಬಾಬು ಸಲಹೆ*

ಅಕ್ಟೋಬರ್ 14, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.14 : ಲೋಕಾಯುಕ್ತಕ್ಕೆ ದೂರು ಬಾರದಂತೆ ಅಧಿಕಾರಿಗಳು ಎಚ್ಚರದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಲೋಕಾಯುಕ್ತ ಎಸ್‌ಪಿ ಸುರೇಶ್ ಬಾಬು ಅವರು ಸಲಹೆ ಮಾಡಿದ್ದಾರೆ.
ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ದೂರು ಅರ್ಜಿ ಸ್ವೀಕರಿಸಿ ಸಮಸ್ಯೆಗಳನ್ನು ಆಲಿಸಿದ ಬಳಿಕ ಅವರು ಮಾತನಾಡಿದರು.
ಲೋಕಾಯುಕ್ತಕ್ಕೆ ದೂರು ಬಂದು ವಿಚಾರಣೆ ಆರಂಭಿಸಿದರೆ ಅಲೆಯಬೇಕಾಗುತ್ತದೆ. ಆದ್ದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತುಂಬಾ ಎಚ್ಚರವಹಿಸಬೇಕು. ಆದ್ದರಿಂದ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಾರ್ವಜನಿಕ ಸೇವೆಯನ್ನು ಸರ್ಕಾರದ ಸೇವೆ ಎಂದು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಸಾರ್ವಜನಿಕರು ಕಚೇರಿಗೆ ಆಗಮಿಸಿದಾಗ ಅವರ ಕುಂದುಕೊರತೆಯನ್ನು ಸಮಾದಾನದಿಂದ ಆಲಿಸಬೇಕು. ಕಚೇರಿಗೆ ಬಂದವರನ್ನು ಕೂರಿಸಿ ಮಾತನಾಡಬೇಕು ಎಂದು ಸುರೇಶ್ ಬಾಬು ಅವರು ಸಲಹೆ ಮಾಡಿದರು.
ಸರ್ಕಾರಿ ಸೇವೆಗೆ ಸೇರಿದವರು ಸಾರ್ವಜನಿಕರ ಕರ್ತವ್ಯ ನಿರ್ವಹಿಸಲು ಬಂದಿರುವುದು ಎಂಬುದನ್ನು ಅರಿತುಕೊಳ್ಳಬೇಕು. ಸಾರ್ವಜನಿಕರ ಮನವಿಗೆ ಸ್ಪಂದಿಸಬೇಕು. ತಮ್ಮ ವ್ಯಾಪ್ತಿಯಲ್ಲಿ ಕೆಲಸ ಆಗದಿದ್ದಲ್ಲಿ ಹಿಂಬರಹವನ್ನಾದರೂ ನೀಡಬೇಕು ಎಂದು ಹೇಳಿದರು.
ಜನರ ನಿರೀಕ್ಷೆಯನ್ನು ಅಲ್ಪಸ್ವಲ್ಪವನ್ನಾದರೂ ಈಡೇರಿಸಿದರೆ ಆತ್ಮತೃಪ್ತಿ ಉಂಟಾಗುತ್ತದೆ. ಆ ನಿಟ್ಟಿನಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯ ನಿರ್ವಹಿಸುವಂತೆ ಲೋಕಾಯುಕ್ತ ಎಸ್‌ಪಿ ಸುರೇಶ್ ಬಾಬು ಅವರು ವಿವರಿಸಿದರು.
ಕೊಡಗು ಜಿಲ್ಲೆಯಲ್ಲಿ ಸೈನಿಕರ ಸಂಖ್ಯೆ ಹೆಚ್ಚಿದ್ದಾರೆ. ಸೈನಿಕರ ಕೆಲಸವನ್ನು ಆದ್ಯತೆ ಮೇಲೆ ನಿರ್ವಹಿಸಬೇಕು ಎಂದು ಲೋಕಾಯುಕ್ತ ಎಸ್‌ಪಿ ಅವರು ಸಲಹೆ ನೀಡಿದರು.
ಲೋಕಾಯುಕ್ತ ಡಿವೈಎಸ್‌ಪಿ ಪವನ್ ಕುಮಾರ್ ಅವರು ಮಾತನಾಡಿ ಲೋಕಾಯುಕ್ತ ಸಭೆಗೆ ಎಲ್ಲಾ ಹಂತದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ತಳ ಮಟ್ಟದ ಸಿಬ್ಬಂದಿಗಳನ್ನು ಕಳುಹಿಸಿಕೊಟ್ಟು ಸುಮ್ಮನಿರಬಾರದು ಎಂದು ತಾಕೀತು ಮಾಡಿದರು.
ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಲೋಕೇಶ್ ಅವರು ಮಾತನಾಡಿ ಕಚೇರಿಗೆ ಯಾರೇ ಬಂದರು ಸಹ ಸಂದರ್ಶಕರ ಹೆಸರು, ಮಾಹಿತಿಯನ್ನು ಬರೆಸಿಕೊಳ್ಳಬೇಕು. ಕಚೇರಿ ಕಾರ್ಯನಿರ್ವಹಣೆಯನ್ನು ಸರಿಯಾಗಿ ಜತನ ಮಾಡಬೇಕು ಎಂದು ಅವರು ತಿಳಿಸಿದರು.
ಶುಕ್ರವಾರ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಸಾರ್ವಜನಿಕರ ದೂರು ಅರ್ಜಿ ಸ್ವೀಕಾರ ಸಂದರ್ಭದಲ್ಲಿ ಖಾತೆ ಬದಲಾವಣೆ, ಸರ್ವೇ ಮಾಡುವುದು, ಮತ್ತಿತರ ಅರ್ಜಿಗಳು ಸಲ್ಲಿಕೆಯಾದವು. ಈ ಸಂದರ್ಭದಲ್ಲಿ ಎಂ.ಬಿ.ದೇವಯ್ಯ ಅವರು ಗೋಮಾಳ ಸರ್ವೇ ಮಾಡಿಸಬೇಕು ಎಂದು ಲೋಕಾಯುಕ್ತ ಎಸ್‌ಪಿ ಅವರಿಗೆ ಮನವಿ ಮಾಡಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಸಾರ್ವಜನಿಕರಿಂದ 12 ಅರ್ಜಿಗಳು ಸ್ವೀಕೃತವಾಗಿದ್ದು, ಅರ್ಜಿಗಳನ್ನು ಪರಿಶೀಲಿಸಿ 2 ಅರ್ಜಿದಾರರಿಗೆ ಲೋಕಾಯುಕ್ತ ಸಂಸ್ಥೆಯ ನಮೂನೆ 1 ಮತ್ತು 2 ನ್ನು ನೀಡಲಾಯಿತು. ಉಳಿದಂತೆ 10 ಅರ್ಜಿಗಳಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಹಾಜರಿದ್ದ ತಹಶೀಲ್ದಾರ್, ಸರ್ವೆ ಇಲಾಖೆ, ತಾಲೂಕು ಪಂಚಾಯಿತಿ, ಅರಣ್ಯ ಇಲಾಖೆ, ಪಿಡಬ್ಲ್ಯೂಡಿ ಇಲಾಖೆ, ಪೋಲಿಸ್ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯ, ಅಗ್ನಿಶಾಮಕ ಇಲಾಖೆ ಗ್ರಾಮಾಂತರ ಪೊಲೀಸ್ ಇಲಾಖೆಯ ಸಮ್ಮುಖದಲ್ಲಿ ಅರ್ಜಿಯನ್ನು ವಿಚಾರಣೆ ಮಾಡಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.