Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆಯಲ್ಲಿ ‘ಜನತಾ ದರ್ಶನ’ : ವಿಜ್ಞಾನ ಉಪ ಪ್ರಾದೇಶಿಕ ಕೇಂದ್ರ ನಿರ್ಮಾಣಕ್ಕೆ ಮತ್ತಷ್ಟು ಅನುದಾನ : ಸಚಿವ ಭೋಸರಾಜು ಭರವಸೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆಯಲ್ಲಿ ‘ಜನತಾ ದರ್ಶನ’ : ವಿಜ್ಞಾನ ಉಪ ಪ್ರಾದೇಶಿಕ ಕೇಂದ್ರ ನಿರ್ಮಾಣಕ್ಕೆ ಮತ್ತಷ್ಟು ಅನುದಾನ : ಸಚಿವ ಭೋಸರಾಜು ಭರವಸೆ*

ಅಕ್ಟೋಬರ್ 16, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.16 : ಮಡಿಕೇರಿ ತಾಲ್ಲೂಕಿನ ಕರ್ಣಂಗೇರಿ ಬಳಿ ಗುರುತಿಸಲಾಗಿರುವ 7 ಎಕರೆ ಜಾಗದಲ್ಲಿ ‘ವಿಜ್ಞಾನ ಉಪ ಪ್ರಾದೇಶಿಕ ಕೇಂದ್ರ’ ನಿರ್ಮಾಣಕ್ಕೆ ಎಲ್ಲಾ ಸಿದ್ಧತೆಗಳು ನಡೆದಿದೆ. ಈಗಾಗಲೇ 3 ಕೋಟಿ ರೂ. ಬಿಡುಗಡೆಯಾಗಿದ್ದು, ಇನ್ನಷ್ಟು ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಭರವಸೆ ನೀಡಿದ್ದಾರೆ.
ಸೋಮವಾರಪೇಟೆಯ ಕೊಡವ ಸಮಾಜದಲ್ಲಿ ಸೋಮವಾರ ನಡೆದ ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನ.1 ರಂದು ವಿಜ್ಞಾನ ಉಪ ಪ್ರಾದೇಶಿಕ ಕೇಂದ್ರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗುವುದು ಎಂದರು.
ಸರ್ಕಾರ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗೆ ಹೆಚ್ಚಿನ ಅನುದಾನ ನಿಗದಿ ಮಾಡಿದೆ. ಆ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದು ಸಚಿವರು ವಿವರಿಸಿದರು.
ಆಡಳಿತವನ್ನು ಜನರ ಬಳಿಗೆ ತೆಗೆದುಕೊಂಡು ಹೋಗಬೇಕು ಎಂಬ ಉದ್ದೇಶದಿಂದ ಸರ್ಕಾರ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಅವಕಾಶವನ್ನು ಸಾರ್ವಜನಿಕರು ಬಳಸಿಕೊಳ್ಳಬೇಕು. ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಂತಾಗಬೇಕು ಎಂದು ಸಚಿವರು ಸಲಹೆ ಮಾಡಿದರು.
ಸರ್ಕಾರ ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತವಾಗಿ ವಿದ್ಯುತ್ ನೀಡುತ್ತಿದ್ದು, 1.35 ಲಕ್ಷ ಕುಟುಂಬಗಳಿಗೆ, 6.65 ಕೋಟಿ ರೂ. ವೆಚ್ಚ ಮಾಡಿದೆ. ಶಕ್ತಿ ಯೋಜನೆಯಡಿ ಬಸ್ ಉಚಿತವಾಗಿ ಪ್ರಯಾಣಕ್ಕೆ 1.8 ಕೋಟಿ ರೂ. ಭರಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 7 ಕೋಟಿ ರೂ. ಭರಿಸಲಾಗಿದೆ. ಹಾಗೆಯೇ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿ ಜೊತೆಗೆ ಹೆಚ್ಚುವರಿ 5 ಕೆ.ಜಿ. ಅಕ್ಕಿ ಬದಲಿಗೆ 4.68 ಕೋಟಿ ರೂ. ವೆಚ್ಚ ಮಾಡಲಾಗಿದೆ. ಒಟ್ಟಾರೆ ಗ್ಯಾರಂಟಿ ಯೋಜನೆಯಿಂದ ಮಧ್ಯವರ್ತಿಗಳಿಲ್ಲದೆ ಸೌಲಭ್ಯಗಳನ್ನು ಬಡಜನರಿಗೆ ತಲುಪಿಸಲಾಗುತ್ತಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ವಿವರಿಸಿದರು.
ಸಮಾಜದಲ್ಲಿ ಕಟ್ಟಕಡೆಯ ಜನರು ಸಹ ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂಬುದೇ ಸರ್ಕಾರದ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಸರ್ಕಾರ ಬಡವರ ಕೆಲಸ ಮಾಡುತ್ತಿದೆ ಎಂದು ಸಚಿವರು ನುಡಿದರು.
ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಕಂದಾಯ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿ ಸಾರ್ವಜನಿಕರಿಗೆ ಆಗಬೇಕಿರುವ ಕೆಲಸಗಳು ಸಾಕಷ್ಟು ಇದ್ದು, ಅವುಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಹೇಳಿದರು.
ಕಂದಾಯ ಮತ್ತು ಭೂ ದಾಖಲೆಗಳ ಇಲಾಖೆಗಳು ಸಾರ್ವಜನಿಕರಿಗೆ ಹತ್ತಿರವಾದ ಇಲಾಖೆಗಳಾಗಿದ್ದು, ಗ್ರಾಮೀಣ ಬಡ ಜನರ ಕಲ್ಯಾಣಕ್ಕೆ ಮತ್ತಷ್ಟು ಸ್ಪಂದಿಸುವಂತಾಗಬೇಕು ಎಂದು ತಿಳಿಸಿದರು.
ಸೆಸ್ಕ್ ಇಲಾಖೆ ವ್ಯಾಪ್ತಿಯಲ್ಲಿ ಸಿಬ್ಬಂದಿಗಳ ಕೊರತೆಯಿದ್ದು, ಸಿಬ್ಬಂದಿಗಳನ್ನು ನಿಯೋಜಿಸುವಂತಾಗಬೇಕು. ಹಾಗೆಯೇ ಕೃಷಿ ಪಂಪ್‍ಸೆಟ್‍ಗಳ 10 ಎಚ್‍ಪಿವರೆಗೆ ಉಚಿತ ವಿದ್ಯುತ್ ಕಲ್ಪಿಸಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.
ಕೊಡಗು ಜಿಲ್ಲೆಯ ಹಲವು ಭಾಗಗಳಲ್ಲಿ ಇಲ್ಲಿನ ಬಡವರು ಮನೆ ನಿರ್ಮಾಣ ಮಾಡಿಕೊಂಡು ವಾಸ ಮಾಡುತ್ತಿದ್ದಾರೆ. ಇವರನ್ನು ತೆರವುಗೊಳಿಸಲು ಅರಣ್ಯ ಇಲಾಖೆಯವರು ಮುಂದಾಗುತ್ತಾರೆ. ಇದು ಸರಿಯೇ ಎಂಬುದನ್ನು ಯೋಚಿಸಬೇಕು. ಆದ್ದರಿಂದ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಬಡವರಿಗೆ ಆಶ್ರಯ ಕಲ್ಪಿಸಬೇಕು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಸೋಮವಾರಪೇಟೆಯಲ್ಲಿ ಹಾಕಿ ಟರ್ಫ್ ಮೈದಾನದ ಕಾಮಗಾರಿ ಪೂರ್ಣಗೊಳ್ಳಲು ಕ್ರೀಡಾ ಸಚಿವರು 50 ಲಕ್ಷ ರೂ. ಬಿಡುಗಡೆ ಮಾಡಿದ್ದು, ಉತ್ತಮ ಟರ್ಫ್ ಮೈದಾನ ಮಾಡಲಾಗುವುದು ಎಂದು ಮಂತರ್ ಗೌಡ ಅವರು ಹೇಳಿದರು.
ಸಾರ್ವಜನಿಕರ ಕೆಲಸದಲ್ಲಿ ವೇಗವನ್ನು ಹೆಚ್ಚಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕು ಎಂದು ಸಲಹೆ ಮಾಡಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಸಾರ್ವಜನಿಕರಿಂದ ಬರುವ ದೂರುಗಳಿಗೆ ತ್ವರಿತಗತಿಯಲ್ಲಿ ನಿಯಮಾನುಸಾರ ಪರಿಹರಿಸಲಾಗುವುದು. ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸುವಲ್ಲಿ ಶ್ರಮಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ತಹಶೀಲ್ದಾರ್ ಎಸ್.ಎನ್.ನರಗುಂದ, ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ, ವಿವಿಧ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು ಇದ್ದರು.
ಸೋಮವಾರಪೇಟೆಯಲ್ಲಿ ಸೋಮವಾರ ನಡೆದ ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಸುಮಾರು 181 ಅರ್ಜಿಗಳು ಸಲ್ಲಿಕೆಯಾದವು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಐಟಿಡಿಪಿ, ಆಹಾರ ಮತ್ತು ನಾಗರಿಕ ಸರಬರಾಜು, ಅರಣ್ಯ ಇಲಾಖೆ, ಕೃಷಿ, ತೋಟಗಾರಿಕೆ, ಪಶುಪಾಲನೆ ಹೀಗೆ ವಿವಿಧ ಇಲಾಖೆಗಳಿಂದ ವಸ್ತು ಪ್ರದರ್ಶನ ಏರ್ಪಡಿಸಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದು ವಿಶೇಷವಾಗಿತ್ತು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.