Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*‘ಗಾಂಧೀಜಿ ಸ್ಮಾರಕ ಉದ್ಯಾನವನ’ಕ್ಕೆ ಭೂಮಿಪೂಜೆ : ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಲು ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*‘ಗಾಂಧೀಜಿ ಸ್ಮಾರಕ ಉದ್ಯಾನವನ’ಕ್ಕೆ ಭೂಮಿಪೂಜೆ : ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಲು ಸಲಹೆ*

ಅಕ್ಟೋಬರ್ 17, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.17 : ನಗರದ ಗಾಂಧಿ ಮೈದಾನದ ಸಮೀಪ ಸುಮಾರು 1.60 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ‘ಗಾಂಧೀಜಿ ಸ್ಮಾರಕ ಉದ್ಯಾನವನ’ಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಶಂಕುಸ್ಥಾಪನೆ ನೆರವೇರಿಸಿದರು.
ಸರ್ವೋದಯ ಸಮಿತಿಯ ಸಹಯೋಗದಲ್ಲಿ ಜಿಲ್ಲಾಡಳಿತ, ಜಿ.ಪಂ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸ್ಮಾರಕ ಉದ್ಯಾನವನಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.
ಈ ಸಂದರ್ಭ ಮಾತನಾಡಿದ ಸಚಿವರು, ಇಡೀ ವಿಶ್ವಕ್ಕೆ ಮಾದರಿಯಾದ ಮಹಾತ್ಮಾ ಗಾಂಧೀಜಿಯವರ ಸ್ಮಾರಕ ಉದ್ಯಾನವನವನ್ನು ಒಳಗೊಂಡ ಭವನ ಕಾಲ ಮಿತಿಯಲ್ಲಿ ಪೂರ್ಣಗೊಳ್ಳಬೇಕು. ಆ ಮೂಲಕ ಗಾಂಧೀಜಿಯವರ ತತ್ತ್ವ ಸಿದ್ಧಾಂತಗಳು ಜನರಿಗೆ ನಿರಂತರವಾಗಿ ಪ್ರೇರಣೆಯನ್ನು ನಿಡುವಂತಾಗಬೇಕು. ಉದ್ದೇಶಿತ ಕಾರ್ಯಯೋಜನೆ ಜಿಲ್ಲಾಧಿಕಾರಿಗಳ ಜವಾಬ್ದಾರಿಯಲ್ಲಿ ನಡೆಯಲಿದೆ. ಜನಪ್ರತಿನಿಧಿಗಳೆಲ್ಲ ಒಟ್ಟಾಗಿ ಒಮ್ಮತದಿಂದ ಯೋಜನೆಯನ್ನು ಕಾರ್ಯಗತಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ತಿಳಿಸಿದರು.
ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರು ಮಾತನಾಡಿ, ದೆಹಲಿಯ ‘ರಾಜ್ ಘಾಟ್’ ಮಾದರಿಯಲ್ಲಿ ಮಹಾತ್ಮಾ ಗಾಂಧೀಜಿಯವರ ಸ್ಮಾರಕ ಉದ್ಯಾನವನ ನಿರ್ಮಾಣವಾಗಬೇಕಾಗಿದೆ. ಈ ಹಿಂದೆ ಗಾಂಧಿ ಸ್ಮಾರಕ ಉದ್ಯಾನವನ ನಿರ್ಮಾಣಕ್ಕೆ ಸುಮಾರು 1.60 ಕೋಟಿ ವೆಚ್ಚದ ಕಾರ್ಯಯೋಜನೆಯನ್ನು ರೂಪಿಸಲಾಗಿತ್ತು. ಇಂದು ಶಂಕುಸ್ಥಾಪನೆ ನೆರವೇರಿದ್ದು, ಕಾಮಗಾರಿ ಆರಂಭದ ಬಳಿಕ ಯಾವುದೇ ಕಾರಣಕ್ಕು ಅದು ಅರ್ಧಕ್ಕೆ ನಿಲ್ಲುವಂತಾಗಬಾರದು ಎಂದರು.
ಅಗತ್ಯ ಅನುದಾನಕ್ಕಾಗಿ ತಕ್ಷಣವೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ, ತಿಂಗಳ ಒಳಗಾಗಿ ಅಗತ್ಯ ಹಣವನ್ನು ಜಿಲ್ಲಾಧಿಕಾರಿಗಳ ಖಾತೆಗೆ ಒದಗಿಸಬೇಕು. ಕೊಡವ ಹೆರಿಟೇಜ್ ಸೇರಿದಂತೆ ಜಿಲ್ಲೆಯಲ್ಲಿ ಹಲ ಕಾಮಗಾರಿಗಳು ಅರ್ಧಕ್ಕೆ ನಿಂತ ಉದಾಹರಣೆ ನೀಡಿದ ಅವರು, ಗಾಂಧಿ ಸ್ಮಾರಕ ನಿರ್ಮಾಣದಲ್ಲಿ ಇದು ನಡೆಯಕೂಡದೆಂದು ಹೇಳಿದರು.
ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಗಾಂಧೀಜಿ ಸ್ಮಾರಕ ನಿರ್ಮಾಣಕ್ಕೆ ತನ್ನ ಶಾಸಕರ ನಿಧಿಯಿಂದ ಅಗತ್ಯ ನೆರವನ್ನು ಒದಗಿಸುತ್ತೇನೆ. ಇದೇ ರೀತಿ ಶಾಸಕರು, ಸಂಸದರು, ಎಂಎಲ್‍ಸಿ, ನಗರಸಭೆ ತಮ್ಮ ನೆರವನ್ನು ಒದಗಿಸಿದಲ್ಲಿ ಸುಮಾರು 50 ಲಕ್ಷ ರೂ. ಸಂಗ್ರಹವಾಗುತ್ತದೆ. ಮುಖ್ಯಮಂತ್ರ್ರಿಗಳನ್ನು ಭೇಟಿಯಾಗಿ ಇನ್ನುಳಿದ ಮೊತ್ತಕ್ಕೆ ಅಗತ್ಯ ಸಹಕಾರವನ್ನು ಪಡೆಯುವ ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ಭಾರತದ ಸ್ವಾತಂತ್ರ್ಯಕ್ಕೆ ಅತ್ಯಪೂರ್ವವಾದ ಕೊಡುಗೆ ನೀಡಿದ ಮಹಾತ್ಮಾ ಗಾಂಧೀಜಿ ಅವರ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ನೆರವನ್ನು ತಾನು ಒದಗಿಸುತ್ತೇನೆ. ಎಲ್ಲರ ಸಹಕಾರದೊಂದಿಗೆ ಯೋಜನೆ ಪೂರ್ಣವಾಗಬೇಕೆಂದು ಆಶಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸರ್ವೋದಯ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ್, 1934 ರ ಫೆ.21 ರಿಂದ ಮೂರು ದಿನಗಳ ಕಾಲ ಕೊಡಗಿಗೆ ಭೇಟಿ ನೀಡಿದ್ದ ಮಹಾತ್ಮಾ ಗಾಂಧೀಜಿಯವರು, ಈಗ ಇರುವ ಗಾಂಧಿ ಮಂಟಪದ ದಿಬ್ಬದಲ್ಲಿ ಭಾಷಣ ಮಾಡಿದ್ದರು. ಹಿಂದೆ ಇದನ್ನು ‘ಗಾಂಧಿ ಗುಡ್ಡ’ವೆಂದು ಕರೆಯುತ್ತಿದ್ದರು ಎಂದರು.
ಮಹಾತ್ಮರ ನಿಧನದ ಬಳಿಕ ಅವರ ಚಿತಾಭಸ್ಮವನ್ನು ಸ್ವಾತಂತ್ರ್ಯ ಹೋರಾಟಗಾರ ಕೊಳ್ಳಿಮಾಡ ದೇವಯ್ಯ ಅವರು ಕೊಡಗಿಗೆ ತೆಗೆದುಕೊಂಡು ಬಂದಿದ್ದು, ಅದರಲ್ಲಿ ಒಂದು ಭಾಗವನ್ನು ಕಾವೇರಿಯಲ್ಲಿ ವಿಸರ್ಜಿಸಿ, ಉಳಿದ ಚಿತಾ ಭಸ್ಮವನ್ನು ಕಳೆದ 65 ವರ್ಷಗಳಿಂದ ಜಿಲ್ಲಾ ಖಜಾನೆಯಲ್ಲಿರಿಸಿ ಸಂರಕ್ಷಿಸಿಕೊಂಡು ಬರಲಾಗುತ್ತಿದೆ.
ಇಷ್ಟು ವರ್ಷಗಳ ಕಾಲ ಸರ್ವೋಯದಯ ಸಮಿತಿ ಮಹಾತ್ಮರ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬರುತ್ತಿದೆ. ಹಿಂದೆ ಜಿಲ್ಲಾಧಿಕಾರಿಗಳಾಗಿದ್ದ ಬಲದೇವಕೃಷ್ಣ ಅವರ ಅವಧಿಯಲ್ಲಿ ಗಾಂಧೀ ಸ್ಮಾರಕ ಉದ್ಯಾನವನ ನಿರ್ಮಾಣಕ್ಕೆ ಪ್ರಯತ್ನಿಸಲಾಗಿತ್ತು. ನಂತರದ ಅವಧಿಯಲ್ಲಿ ಅಂದಿನ ಮುಖ್ಯ ಮಂತ್ರಿ ಯಡಿಯೂರಪ್ಪ ಅವರು 50 ಲಕ್ಷ ರೂ.ಗಳನ್ನು ಇದಕ್ಕಾಗಿ ಒಗಿಸಿದ್ದನ್ನು ಸ್ಮರಿಸಿದರಲ್ಲದೆ, ಈ ಮೊತ್ತ ಭವನ ನಿರ್ಮಾಣದ ಸಲುವಾಗಿ ನಿರ್ಮಿತಿ ಕೇಂದ್ರಕ್ಕೆ ನೀಡಲಾಗಿದೆ.
ಭವನ ನಿರ್ಮಾಣಕ್ಕೆ ಅನುಕೂಲವಾಗುವಂತೆ ಕಂದಾಯ ಇಲಾಖೆ ವಶದಲ್ಲಿದ್ದ ಗಾಂಧಿ ಮಂಟಪ ಜಾಗವನ್ನು ಹಿಂದಿನ ಜಿಲ್ಲಾಧಿಕಾರಿ ಸತೀಶ್ ಅವರ ಅವಧಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಶಕ್ಕೆ ನೀಡಲಾಗಿದೆ. ಉದ್ದೇಶಿತ ಸ್ಮಾರಕ ಆದಷ್ಟು ಶೀಘ್ರ ಕಾರ್ಯಗತಗೊಳ್ಳಲೆಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೆಂಕಟರಾಜ್, ಎಸ್‍ಪಿ ಕೆ. ರಾಮರಾಜನ್, ಸಿಇಒ ವರ್ಣಿತ್ ನೇಗಿ, ಸರ್ವೋದಯ ಸಮಿತಿ ಅಧ್ಯಕ್ಷ ಕುಶಾಲಪ್ಪ ಅಂಬೆಕಲ್, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಪ್ರಮುಖರಾದ ನವೀನ್ ಅಂಬೆಕಲ್ಲು, ಸಿದ್ದರಾಜು, ಕಾನೆಹಿತ್ಲು ಮೊಣ್ಣಪ್ಪ, ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ, ಬಿ.ವೈ.ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು. ಸರ್ವೋದಯ ಸಮಿತಿಯ ಎಸ್.ಐ.ಮುನೀರ್ ಅಹಮ್ಮದ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.